Breaking News

Breaking News

ಹಿರಿಯೂರು: ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ

ಹಿರಿಯೂರಿನ ಭಾಗ್ಯಲಕ್ಷ್ಮಿ ಜ್ಯುವೆಲರ್ಸ್ ಅಂಡ್ ಬ್ಯಾಂಕರ್ಸ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹5.76 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪ್ರವೀಣ್ ಕುಮಾರ್ ಸಿ.ಆರ್ (33) ಎಂದು ಗುರುತಿಸಲಾಗಿದ್ದು, ಕಳವು ಮಾಡಿದ ಆಭರಣಗಳನ್ನು ಚಳ್ಳಕೆರೆಯ ಜ್ಯುವೆಲರ್ಸ್ ಅಂಗಡಿಗೆ ಮಾರಾಟ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನ ಮಾಹಿತಿಯ ಮೇರೆಗೆ ಪೊಲೀಸರು ಕಳುವಾದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಭೇದಿಸಿದ ಹಿರಿಯೂರು ನಗರ ಠಾಣೆ ಪೊಲೀಸರ …

Read More »

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬಸ್ – 17 ಪ್ರಯಾಣಿಕರು ಅಪಾಯದಿಂದ ಪಾರು

ಶಿವಮೊಗ್ಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಬಳಿಯ ಹುಲಿಕಲ್ ಘಾಟ್‌ನಲ್ಲಿ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ 17 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಪ್ರಯಾಣಿಕರನ್ನ ಚಾಲಕ ಹಾಗೂ ನಿರ್ವಾಹಕ ಕೆಳಗಿಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಶಿವಮೊಗ್ಗದ ಹುಲಿಕಲ್‌ನಿಂದ ಉಡುಪಿಗೆ ತೆರಳುತ್ತಿತ್ತು. ಹುಲಿಕಲ್ ಘಾಟ್ ಕುಸಿತದ ನಂತರ …

Read More »

ಲಂಚ ಪಡೆಯುವಾಗ `ಲೋಕಾ’ ದಾಳಿ – ಹಣದ ಜೊತೆಗೆ ಇಬ್ಬರ ಬಂಧನ

ವಿಜಯಪುರ: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಇಬ್ಬರು ಅಧಿಕಾರಿಗಳನ್ನು ಹಣದ ಜೊತೆಗೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ.ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ. ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂ.ಗೆ ಹಾಗೂ …

Read More »

ಕಲಬುರಗಿಯ ಸರ್ಕಾರಿ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನ, ಲಾಕರ್ ಎತ್ತಲಾಗದೇ ಬಿಟ್ಟೋಡಿದ ಕಳ್ಳರು!

ಆಳಂದ ಪಟ್ಟಣದ ಅಂಚೆ ಕಚೇರಿ ಹಾಗೂ ಎಪಿಎಂಸಿ ಆಡಳಿತ ಕಚೇರಿಯಲ್ಲಿ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದ್ದು, ಲಕ್ಷಾಂತರ ರೂಪಾಯಿ ನಗದು ಅದೃಷ್ಟವಶಾತ್ ಕಳ್ಳರ ಕೈಗೆ ಸಿಗದೆ ಉಳಿದಿದೆ. ಅಂಚೆ ಕಚೇರಿಯಲ್ಲಿದ್ದ ಸುಮಾರು 5 ಲಕ್ಷ ರೂಪಾಯಿ ಹಣವಿದ್ದ ಖಜಾನೆ ಪೆಟ್ಟಿಗೆಯನ್ನು ಕಳ್ಳರು ಹೊರಗೆ ಎಳೆದೊಯ್ದರೂ, ಅದರ ಭಾರದಿಂದ ಅರ್ಧದಾರಿಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕಳ್ಳರು ಕಚೇರಿಯ ದಾಖಲೆ ಪತ್ರಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದು, ಪಕ್ಕದ ಎಪಿಎಂಸಿ ಕಚೇರಿಯ ಬೀಗ ಮುರಿದು ಅಲ್ಲಿಯೂ ಶೋಧ ನಡೆಸಿದ್ದಾರೆ. …

Read More »

ಹುಲಿಕಲ್ ಘಾಟಿಯಲ್ಲಿ ಬೆಂಕಿ ಅವಘಡ: ಖಾಸಗಿ ಬಸ್ ಸಂಪೂರ್ಣ ಭಸ್ಮ

ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ. ಆದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಬಸ್‌ನಿಂದ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು …

Read More »

ಆರ್.ಟಿ.ಒ ಹೆಸರಲ್ಲಿ ವಾಟ್ಸಾಪ್ ಸಂದೇಶ, 5.63 ಲಕ್ಷ ರೂ. ವಂಚನೆ

ಕಾರ್ಕಳ: ಆರ್.ಟಿ.ಒ ಹೆಸರಿನಲ್ಲಿ ಬಂದ ಲಿಂಕ್ ಓಪನ್ ಮಾಡಿದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 5,63,117 ರೂ. ಹಣವನ್ನು ಸೈಬರ್ ವಂಚಕರು ದೋಚಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ವಾಸುದೇವ ಅವರ ವಾಟ್ಸಾಪ್‌ಗೆ ಆರ್.ಟಿ.ಒ ಪಿಡಿಎಫ್‌ ಮಾದರಿಯ ಸಂದೇಶ ಬಂದಿದ್ದು, ಅದನ್ನು ಓಪನ್ ಮಾಡಲು ಪ್ರಯತ್ನಿಸಿದಾಗ ಅದು ತೆರೆದುಕೊಂಡಿರಲಿಲ್ಲ. ಅದರ ಬೆನ್ನಲ್ಲೇ ಅವರ ಮೊಬೈಲ್‌ಗೆ ಸರಣಿ ಒಟಿಪಿಗಳು ಬಂದಿದ್ದು, ತದನಂತರ ಅವರ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 5,63,117 ರೂ. …

Read More »

ಸೂಪರ್ ಮಾರ್ಕೆಟ್ ಗೆ ನುಗ್ಗಿದ ಕಳ್ಳರು – ಕ್ಯಾಶಿಯರ್ ನ್ನು ಬೆದರಿಸಿ ದರೋಡೆ!

ಬೆಂಗಳೂರು ನಗರದ ಬನ್ನೇರಘಟ್ಟ ರಸ್ತೆಯ ಅರಕೆರೆಯಲ್ಲಿರುವ ಸೂಪರ್ ಮಾರ್ಕೆಟ್‌ನಲ್ಲಿ ನಿನ್ನೆ ರಾತ್ರಿ ಭೀಕರ ದರೋಡೆ ನಡೆದಿದೆ. ಗ್ರಾಹಕರಂತೆ ಅಂಗಡಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಮೊದಲು ಕಳ್ಳತನಕ್ಕೆ ಯತ್ನಿಸಿದ್ದು, ಪ್ರಶ್ನಿಸಿದ ಕ್ಯಾಶಿಯರ್‌ಗೆ ಮಾರಕಾಸ್ತ್ರಗಳಿಂದ ಬೆದರಿಕೆ ಹಾಕಿ ಕ್ಯಾಶ್ ಬಾಕ್ಸ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ಕಳ್ಳರನ್ನು ತಡೆಯಲು ಬಂದ ಸಿಬ್ಬಂದಿಯ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಗಲಾಟೆಯ ಸದ್ದು ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ದರೋಡೆಕೋರರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕರು ಒಬ್ಬ …

Read More »

ಬೆಂಗಳೂರಲ್ಲಿ ಘೋರಕೃತ್ಯ : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳ ಬರ್ಬರ ಹತ್ಯೆಗೈದ ತಾಯಿ!

ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಆರು ವರ್ಷದ ಮಗಳನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಗು ಮೃತಪಟ್ಟ ಮೂರು ತಿಂಗಳ ಬಳಿಕ ಪ್ರಕರಣ ದಾಖಲಾಗಿದ್ದು, ವೆನಿಲಾ ಎಂಬ ಬಾಲಕಿ ಸಾವಿನ ಕುರಿತು ತನಿಖೆ ನಡೆಯುತ್ತಿದೆ. ಮೃತ ಬಾಲಕಿಯ ತಂದೆ ಪ್ರವೀಣ್ ನೀಡಿದ ದೂರಿನ ಆಧಾರದಲ್ಲಿ ಪತ್ನಿ ಪ್ರಿಯಾಂಕಾ ಹಾಗೂ ಆಕೆಯ ಪ್ರಿಯಕರ ಮೋಹನ್ ವಿರುದ್ಧ ಪ್ರಕರಣ …

Read More »

ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆಪ್ತನ ಹತ್ಯೆ ಕೃತ್ಯ: ಮತ್ತಿಬ್ಬರ ಬಂಧನ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಅಪ್ತರಾಗಿದ್ದ ಚಂದ್ರನಾಥ ರಥ್ ಹತ್ಯೆ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಶುಕ್ರವಾರ ತಿಳಿಸಿದೆ. ವಿಕಾಸ್‌ ಮಿಶ್ರಾ ಮತ್ತು ಗೋಲು ಸಿಂಗ್ ಬಂಧಿತರು. ಇವರನ್ನು ಕ್ರಮವಾಗಿ ಉತ್ತರ ಪ್ರದೇಶದ ಲಖನೌ ಮತ್ತು ಬಲಿಯಾದಲ್ಲಿ ಬಂಧಿಸಲಾಯಿತು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಪ್ರಕರಣದ ಮತ್ತೊಬ್ಬ ಆರೋಪಿ ಜ್ಞಾನೇಂದ್ರ ಪ್ರತಾಪ್‌ ಸಿಂಗ್ ಅಲಿಯಾಸ್ ಮೋನು, ಬಲಿಯಾದಲ್ಲಿ ಕೋರ್ಟ್‌ಗೆ …

Read More »

ಕರ್ನಾಟಕದಲ್ಲಿ ಬಾಂಬ್ ಸ್ಫೋಟಕ್ಕೆ ಐಸಿಸ್ ಉಗ್ರರ ಸ್ಕೆಚ್ – ಪಾಕ್ ಲಿಂಕ್ ಇದ್ದ ಇಬ್ಬರ ಬಂಧನ!

ದೇಶಾದ್ಯಂತ ಬಾಂಬ್ ಸ್ಫೋಟ ನಡೆಸಲು ಸಂಚು ರೂಪಿಸುತ್ತಿದ್ದರೆಂಬ ಶಂಕೆಯ ಮೇರೆಗೆ ತುಮಕೂರು ಮೂಲದ ಅಲ್ಲಾಬಕ್ಷು (24) ಹಾಗೂ ದಾವಣಗೆರೆಯ ಜಮೀರ್ ಖಾನ್ (22) ಅವರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರೂ ರೈಲ್ವೆ ನಿಲ್ದಾಣದ ಬಳಿ ಸಿಕ್ಕಿಬಿದ್ದಿದ್ದಾರೆ. ತನಿಖೆ ವೇಳೆ ಪಾಕಿಸ್ತಾನ ಮೂಲದ ‘ರಾಣಾ’ ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸ್‌ಆಪ್ ಮೂಲಕ ಯುವಕರನ್ನು ಸಂಪರ್ಕಿಸಿ ದೇಶವಿರೋಧಿ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಮಾಹಿತಿ …

Read More »