Breaking News

Breaking News

ತಡರಾತ್ರಿ ರೌಡಿಶೀಟರ್ ಅಟ್ಟಾಡಿಸಿ 20ಕ್ಕೂ ಹೆಚ್ಚು ಬಾರಿ ಇರಿದು ಬರ್ಬರ ಹತ್ಯೆ

ಬೆಂಗಳೂರು: ರೌಡಿಶೀಟರ್ ನನ್ನು ಅಟ್ಟಾಡಿಸಿ 20ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದ ಜನತಾ ಕಾಲೋನಿ ಬಳಿ ತಡರಾತ್ರಿ ನಡೆದಿದೆ.ಸೂಲಿಬೆಲೆಯ ಖಲೀಂಉಲ್ಲಾಖಾನ್(35) ಕೊಲೆಯಾದ ರೌಡಿಶೀಟರ್. ಆತ ರಾತ್ರಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಅಪರಿಚಿತರ ಗುಂಪು ದಾಳಿ ಮಾಡಿದೆ. ಖಲೀಂನನ್ನು ಅಟ್ಟಾಡಿಸಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೇಹದ ಭಾಗಗಳಿಗೆ 20ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆಗೈದ …

Read More »

ಇನ್‌ಸ್ಟಾಗ್ರಾಮ್ ಸ್ನೇಹದಿಂದ ಉಗ್ರರ ಜಾಲಕ್ಕೆ? ಮುಂಬೈ ಉದ್ಯಮಿ ಹತ್ಯೆ ಸಂಚು ಆರೋಪದಲ್ಲಿ ಇಬ್ಬರ ಬಂಧನ

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಜಮೀರ್ ಖಾನ್ ಮತ್ತು ತುಮಕೂರಿನ ಅಲ್ಲಾಭಕ್ಷಿ ಬಂಧಿತರು. ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶದಲ್ಲಿದ್ದ ಉಗ್ರ ಸಂಪರ್ಕಗಳಿಗೆ ಇವರು ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಪಾಕಿಸ್ತಾನ ಮೂಲದ ಶಂಕಿತ ಹ್ಯಾಂಡ್ಲರ್‌ಗಳ ಸಂಪರ್ಕಕ್ಕೆ ಬಂದಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಉದ್ದೇಶದ ಸಂಚಿನಲ್ಲಿ ಭಾಗಿಯಾಗಿದ್ದರೆಂಬ ಆರೋಪ ಕೇಳಿಬಂದಿದೆ. ಮುಂಬೈನ ಉದ್ಯಮಿಯೊಬ್ಬರ ಮೇಲೆ …

Read More »

ಮದುವೆ ಆಗೋದಾಗಿ ನಂಬಿಸಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೋರ್ವಳು ಯುವಕನಿಂದ 35 ಲಕ್ಷ ರೂ. ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅನಿಲ್ ಎಂಬ ಯುವಕ ನೀಡಿದ ದೂರಿನ ಮೇರೆಗೆ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾದ ಲಕ್ಷ್ಮೀ ಎಂಬ ಯುವತಿ, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಅನಿಲ್‌ನಿಂದ ಹಂತ ಹಂತವಾಗಿ 35 ಲಕ್ಷ ರೂ. ಹೂಡಿಕೆ …

Read More »

ಆನ್‌ಲೈನ್‌ ಗೇಮ್ ಆಡದಂತೆ ಬುದ್ದಿ ಹೇಳಿದ್ದಕ್ಕೆ ಅಕ್ಕ, ಅಪ್ಪನನ್ನು ಇರಿದು‌ ಕೊಂದ ಯುವಕ!

ಗಂಗಾವತಿ: ಆನ್‌ಲೈನ್ ಗೇಮ್ ಚಟದಿಂದ ಮನೆಯಲ್ಲಿ ನಡೆದ ಮಾತಿನ ಚಕಮಕಿ ದುರಂತಕ್ಕೆ ತಿರುಗಿ, ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ನಡೆದಿದೆ. ವೆಂಕಟನಾಯ್ಡು (45) ಮತ್ತು ಪ್ರಗತಿ (19) ಮೃತಪಟ್ಟಿದ್ದು, ತಾಯಿ ಸೌಜನ್ಯ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಬೈಲ್‌ನಲ್ಲಿ ಗೇಮ್ ಆಡದಂತೆ ಬುದ್ಧಿಮಾತು ಹೇಳಿದ್ದಕ್ಕೆ ಸಾಯಿ ವೆಂಕಟಮಣಿ (18) ಆಕ್ರೋಶಗೊಂಡು ಈ ಕೃತ್ಯ …

Read More »

ಹಲವು ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಗಂಭೀರ: ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ..!

ಸುಮ್ಮನೆ ಗಾಡಿ ಹಿಡಿದು ಜನರಿಗೆ ಕಿರುಕುಳ ಬೇಡ..! ಈಗಲಾದರೂ ದಂಡದ ಬದಲು ಟ್ರಾಫಿಕ್ ಕ್ಲಿಯರ್ ಮಾಡುವುದನ್ನು ಕಲಿತಾರಾ ಟ್ರಾಫಿಕ್ ಪೊಲೀಸರು..? ಬೆಂಗಳೂರು: ರಾಜ್ಯದ ನೂತನ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ, Priyank Kharge ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.. ಸಭೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಸೈಬರ್ ಕ್ರೈಂ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ …

Read More »

ಪೊಲೀಸರ ಸೋಗಿನಲ್ಲಿ ಮಾಂಗಲ್ಯ ಸರ ಕಳ್ಳತನ

ಕನಕಪುರ: ಪೊಲೀಸರ ಸೋಗಿನಲ್ಲಿ ಮಹಿಳೆಯ 43 ಗ್ರಾಂ ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ. ಕಸಬಾ ಹೋಬಳಿ ಶ್ರೀನಿವಾಸನಹಳ್ಳಿ ಗ್ರಾಮದ ಮುನಿಸಿದ್ದೇಗೌಡ ಪತ್ನಿ ಗೌರಮ್ಮ ಎಂಬುವರು ಮಾಂಗಲ್ಯ ಸರ ಕಳೆದುಕೊಂಡಿದ್ದಾರೆ. ಬಳೆ ಚೆನ್ನವಲಸೆ ಗ್ರಾಮದಲ್ಲಿ ನಡೆಯುತ್ತಿದ್ದ ಊರ ಹಬ್ಬಕ್ಕೆ ಹೋಗಲೆಂದು ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಕಳ್ಳತನ ಮಾಡಲಾಗಿದೆ. ಗೌರಮ್ಮ ಅವರು ತಮ್ಮ ಪರಿಚಯದ ಅರುಣ್ ಎಂಬುವರ ಬೈಕ್‌ನಲ್ಲಿ ಬಸ್ ನಿಲ್ದಾಣಕ್ಕೆ ಬಂದಿದ್ದಾರೆ. ಚಾಮುಂಡೇಶ್ವರಿ …

Read More »

ಕೇರಳಂ: ಪೊಲೀಸರ ತಪಾಸಣೆ ವೇಳೆ ಕುಕ್ಕರ್‌ನಲ್ಲಿ ಗಾಂಜಾ ಅಡಗಿಸಿಟ್ಟವನ ಬಂಧನ

ಮಾದಕವಸ್ತು ನಿಗ್ರಹ ಕಾರ್ಯಾಚರಣೆ ಕುಕ್ಕರ್‌ನಲ್ಲಿ ಗಾಂಜಾ ಅಡಗಿಸಿಟ್ಟ ವ್ಯಕ್ತಿಯನ್ನು ಶನಿವಾರ ಕುನ್ನಂಕುಲಂ ಪ್ರದೇಶದಲ್ಲಿ ಬಂಧಿಸಲಾಗಿದೆ. ಶನಿವಾರ ಮಧ್ಯಾಹ್ನ ಕುನ್ನಂಕುಲಂ ಸಮೀಪದ ಅಡುಪುಟ್ಟಿಯ ಬಿನೇಶ್(40)ರವರ ಮನೆಯಲ್ಲಿ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿನೇಶ್‌ರವರ ಮನೆಯಲ್ಲಿ ಗಾಂಜಾ ಸಂಗ್ರಹಿಸಲಾಗಿದೆ ಎಂಬ ಸುಳಿವು ದೊರೆತ ನಂತರ ಕುನ್ನಂಕುಲಂ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ಮನೆ ಬರುವುದನ್ನು ಅರಿತ ಬಿನೇಶ್, ಒಲೆ ಮೇಲೆ ಅನ್ನ ಬೇಯಿಸುತ್ತಿದ್ದ ಕುಕ್ಕರ್‌ನಲ್ಲಿ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿದ್ದ ಮಾದಕವಸ್ತುವನ್ನು ಇರಿಸಿದ್ದಾರೆ …

Read More »

ಬೈಲಹೊಂಗಲ: ಅಕ್ರಮ ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ: ಓರ್ವ ಬಂಧನ

ಬೈಲಹೊಂಗಲ: ತಾಲೂಕಿನ ಆನಿಗೊಳ ಗ್ರಾಮದ ಬಸ್ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪಿಐ ಪ್ರಮೋದ ಯಲಿಗಾರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಗ್ರಾಮದ ರಾಮಲಿಂಗ ಮಡಿವಾಳಪ್ಪ ಮಾಡಮಗೇರಿ (59) ಎಂದು ಗುರುತಿಸಲಾಗಿದೆ. ಆರೋಪಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಓಸಿ ಅಂಕಿ-ಸಂಖ್ಯೆಗಳನ್ನು ಬರೆಯಿಸಿಕೊಂಡು, ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬೆ-ಕಲ್ಯಾಣ ಮಟಕಾ ಅಂಕಿ-ಸಂಖ್ಯೆಗಳ ಆಧಾರದಲ್ಲಿ ಜೂಜಾಟ ನಡೆಯುತ್ತಿದ್ದ ವೇಳೆ …

Read More »

ಹಿರಿಯೂರು: ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ

ಹಿರಿಯೂರಿನ ಭಾಗ್ಯಲಕ್ಷ್ಮಿ ಜ್ಯುವೆಲರ್ಸ್ ಅಂಡ್ ಬ್ಯಾಂಕರ್ಸ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹5.76 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪ್ರವೀಣ್ ಕುಮಾರ್ ಸಿ.ಆರ್ (33) ಎಂದು ಗುರುತಿಸಲಾಗಿದ್ದು, ಕಳವು ಮಾಡಿದ ಆಭರಣಗಳನ್ನು ಚಳ್ಳಕೆರೆಯ ಜ್ಯುವೆಲರ್ಸ್ ಅಂಗಡಿಗೆ ಮಾರಾಟ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನ ಮಾಹಿತಿಯ ಮೇರೆಗೆ ಪೊಲೀಸರು ಕಳುವಾದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಭೇದಿಸಿದ ಹಿರಿಯೂರು ನಗರ ಠಾಣೆ ಪೊಲೀಸರ …

Read More »

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬಸ್ – 17 ಪ್ರಯಾಣಿಕರು ಅಪಾಯದಿಂದ ಪಾರು

ಶಿವಮೊಗ್ಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಬಳಿಯ ಹುಲಿಕಲ್ ಘಾಟ್‌ನಲ್ಲಿ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ 17 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಪ್ರಯಾಣಿಕರನ್ನ ಚಾಲಕ ಹಾಗೂ ನಿರ್ವಾಹಕ ಕೆಳಗಿಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಶಿವಮೊಗ್ಗದ ಹುಲಿಕಲ್‌ನಿಂದ ಉಡುಪಿಗೆ ತೆರಳುತ್ತಿತ್ತು. ಹುಲಿಕಲ್ ಘಾಟ್ ಕುಸಿತದ ನಂತರ …

Read More »