BigTv News
June 1, 2026
Breaking News
ಶಿರ್ವ: ಕಲೋಟ್ಟು ಸೇತುವೆ ಕೆಳಗಡೆ ಹರಿಯುವ ಪಾಪನಾಶಿನಿ ಹೊಳೆಯಲ್ಲಿ ಹಸುವೊಂದನ್ನು ಕಡಿದು, ಅದರ ಅವಶೇಷಗಳನ್ನು ಎಸೆದು ವಿಕೃತಿ ಮೆರೆದಿರುವುದು ಸೋಮವಾರ ಬೆಳಕಿಗೆ ಬಂದಿದೆ. ಕಲೋಟ್ಟು ಸೇತುವೆಯ ಕೆಳಗಿನ ಪಾಪನಾಶಿನಿ ಹೊಳೆಯ ನೀರಿನಲ್ಲಿ ಜಾನುವಾರಿನ ತಲೆಬುರುಡೆ ಹಾಗೂ ಕಾಲುಗಳು ಬಿದ್ದಿರುವ ಬಗ್ಗೆ ಶಿರ್ವ ಪೊಲೀಸರಿಗೆ ವಾಹಿತಿ ಲಭಿಸಿತ್ತು. ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಕೃತ್ಯ ದೃಢಪಟ್ಟಿದೆ. ನೀರಿನಲ್ಲಿದ್ದ ಅವಶೇಷಗಳನ್ನು ಪರಿಶೀಲಿಸಿದಾಗ, ಸೇತುವೆಯ ದಕ್ಷಿಣ ಭಾಗದ ನೀರಿನಲ್ಲಿ ಚರ್ಮವಿಲ್ಲದ, ಹಲ್ಲುಗಳು ಮತ್ತು …
Read More »
BigTv News
June 1, 2026
Breaking News
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನ ಕೆರೆಯಲ್ಲಿ ಕಳ್ಳತನದ ಶಂಕೆ ಮೇರೆಗೆ ವ್ಯಕ್ತಿಯೊಬ್ಬನನ್ನು ಹಗ್ಗದಿಂದ ಕಟ್ಟಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ನಿವಾಸಿ ಯತೀಶ್ ಗೌಡ (32) ಮೃತ ಯುವಕನಾಗಿದ್ದು, ಕಳೆದ ಎರಡು ತಿಂಗಳಿಂದ ಮನೆ ಬಿಟ್ಟು ಹೋಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸ್ಥಳೀಯ ಕೆಲವರು ಯತೀಶ್ ಅವರನ್ನು ಕಳ್ಳನೆಂದು ಶಂಕಿಸಿ ಹಗ್ಗದಿಂದ ಕಟ್ಟಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತೀವ್ರ …
Read More »
BigTv News
June 1, 2026
Breaking News
ಐಪಿಎಲ್ 2026ರ ಫೈನಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್ ಆಗುತ್ತಿದ್ದಂತೆಯೇ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಮಧ್ಯರಾತ್ರಿ ರಸ್ತೆಗಿಳಿದ ನೂರಾರು ಅಭಿಮಾನಿಗಳು ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಪರಿಣಾಮ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸಂಭ್ರಮಾಚರಣೆ ವೇಳೆ ಪರಿಸ್ಥಿತಿ ಹದಗೆಟ್ಟು, ಕೆಲವು ದುಷ್ಕರ್ಮಿಗಳು ರಸ್ತೆಬದಿಯಲ್ಲಿ ನಿಂತಿದ್ದ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಿಂದ ಬಸ್‌ನ ಹಲವು ಕಿಟಕಿಗಳ ಗಾಜುಗಳು ಪುಡಿಯಾಗಿದ್ದು, ಪ್ರಯಾಣಿಕರು ಆತಂಕಕ್ಕೊಳಗಾದರು. ಮಾಹಿತಿ …
Read More »
BigTv News
June 1, 2026
Breaking News
ಚಿಕ್ಕಬಳ್ಳಾಪುರದಲ್ಲಿ ಖಾಸಗಿ ವಿಡಿಯೋಗಳ ವಿಚಾರವಾಗಿ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿದ್ದ ಮಹಿಳೆಯೊಬ್ಬಳು ಸಹೋದರ ಸಂಬಂಧಿಯ ಜೊತೆ ಸೇರಿ ತನ್ನ ಅತ್ತಿಗೆ ಪುಷ್ಪಲತಾಳನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಭವ್ಯಾ ಹಾಗೂ ಲೋಹಿತ್ ಅಲಿಯಾಸ್ ಲುಲ್ಲು ವಿರುದ್ಧ ಪ್ರಕರಣ ದಾಖಲಾಗಿದೆ. ಲೋಹಿತ್, ಭವ್ಯಾಳ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಬಳಸಿಕೊಂಡು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಈಗಾಗಲೇ ಲಕ್ಷಾಂತರ ರೂಪಾಯಿ ನೀಡಿದ್ದರೂ ಕಿರುಕುಳ ಮುಂದುವರಿದ ಹಿನ್ನೆಲೆಯಲ್ಲಿ, ಅತ್ತಿಗೆಯ ಚಿನ್ನಾಭರಣ ಕಳವು ಮಾಡಲು …
Read More »
BigTv News
June 1, 2026
Breaking News
ರಾಮನಗರ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಪತ್ನಿಯ ಮೇಲಿನ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿ ನಾಗಮ್ಮ (42) ಅವರನ್ನು ಮಚ್ಚಿನಿಂದ ಹತ್ಯೆ ಮಾಡಿದ ಘಟನೆ ನಡೆದಿದೆ. ಆರೋಪಿ ಕಣಿ ಮಾದಯ್ಯ (50) ಬಳಿಕ ಸ್ವತಃ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮಾದಯ್ಯ ಪತ್ನಿಯ ಚರಿತ್ರೆ ಬಗ್ಗೆ ಅನುಮಾನ ಪಡುತ್ತಿದ್ದ ಹಿನ್ನೆಲೆಯಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಾಗಮ್ಮ ಈ ಹಿಂದೆ ಮಹಿಳಾ ಠಾಣೆಯಲ್ಲೂ ದೂರು …
Read More »
BigTv News
June 1, 2026
Breaking News
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ. ಸಿಬಿಐ ಅರ್ಜಿಯ ಮೇರೆಗೆ ವಿಶೇಷ ನ್ಯಾಯಮೂರ್ತಿ ಅಜಯ್ ಗುಪ್ತಾ ಈ ಆದೇಶ ನೀಡಿದ್ದಾರೆ. ಆರೋಪಿಗಳಾದ ಮನೀಷ್ ಸಂಜಯ್ ಹವಾಲ್ದಾರ್, ಡಾ. ಮನೋಜ್ ಶಿರೂರೆ ಹಾಗೂ ತೇಜಸ್ ಹರ್ಷದ್‌ಕುಮಾರ್ ಶಾ ಅವರು ಪ್ರಶ್ನೆ ಪತ್ರಿಕೆಯನ್ನು ಅಕ್ರಮವಾಗಿ ಹಣಕ್ಕಾಗಿ ಹಂಚಿಕೆ ಮಾಡಿದ್ದರೆಂದು ಸಿಬಿಐ ಆರೋಪಿಸಿದೆ. ಪ್ರಕರಣದಲ್ಲಿ ಇದುವರೆಗೆ …
Read More »
BigTv News
June 1, 2026
Breaking News
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿ ಆಯುಷ್ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಆಯುಷ್ ಕುಟುಂಬ ಸದಸ್ಯರೊಂದಿಗೆ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಬಂದಿದ್ದನು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ಕುಟುಂಬದವರು ಊಟದ ಸಿದ್ಧತೆಯಲ್ಲಿ ನಿರತರಾಗಿದ್ದರು. ಈ ವೇಳೆ ಆಯುಷ್ ಮತ್ತೊಬ್ಬ ಬಾಲಕನೊಂದಿಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದಾನೆ. …
Read More »
BigTv News
June 1, 2026
Breaking News
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್, 80 ಬಡಗಬೆಟ್ಟು ಗ್ರಾಮದ ನೇತಾಜಿನಗರ ನಿವಾಸಿ ಗಣೇಶ್(32) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ನೀಡಿದ ವರದಿಯ ಮೇರೆಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಆರೋಪಿ ಗಣೇಶ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜೂ.1ರಂದು ಆದೇಶ ಹೊರಡಿಸಿದ್ದಾರೆ. ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ …
Read More »
BigTv News
June 1, 2026
Breaking News
ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಾಗಮ್ಮ (42) ಮೃತಪಟ್ಟವರು. ಆರೋಪಿ ಕಣಿ ಮಾದಯ್ಯ (52) ಕೃತ್ಯದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿ ನಡುವೆ ಈ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಭಾನುವಾರ ಬೆಳಿಗ್ಗೆ ಮಾತಿನ ಚಕಮಕಿ ನಡೆದ ವೇಳೆ ಕೋಪಗೊಂಡ ಮಾದಯ್ಯ, ಮನೆಯಲ್ಲಿದ್ದ ಮಚ್ಚಿನಿಂದ …
Read More »
BigTv News
June 1, 2026
Breaking News
ಕುಷ್ಟಗಿ: ತಾಲೂಕಿನ ಕಡೆಕೊಪ್ಪ ಬ್ರಿಡ್ಜ್ ಸಮೀಪದ ಪಾನ್‌ಬೀಡಾ ಅಂಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ದಂಪತಿಯನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ದಿಲ್ವಾಘಸಿಂಗ್ ಮೇಹರ್ ಸಿಂಗ್ (55) ಹಾಗೂ ಅವರ ಪತ್ನಿ ರವೀಂದ್ರಕೌರ್ (51) ಎಂದು ಗುರುತಿಸಲಾಗಿದೆ.ಇವರು ಪ್ರಸ್ತುತ ಕಡೆಕೊಪ್ಪ ಕ್ರಾಸ್ ಸಮೀಪ ವಾಸವಾಗಿದ್ದರು. ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ …
Read More »