BigTv News
May 29, 2026
Breaking News
ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬ್ರಿಡ್ಜ್, ಶ್ರೀನಿವಾಸ ಡಾಬಾ ಮುಂಭಾಗದಲ್ಲಿ ಗುರುವಾರ ರಾತ್ರಿ ಸುಮಾರು 9:45 ರ ವೇಳೆಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಳ್ಳಕೆರೆ ಮೂಲದ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಅದೇ ರಸ್ತೆಯಲ್ಲಿ ನಿಂತಿದ್ದ …
Read More »
BigTv News
May 29, 2026
Breaking News
ಬೆಂಗಳೂರು ನಗರದಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ಯುವತಿಯ ಮೋಹದ ಬಲೆಗೆ ಬಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು 1.66 ಕೋಟಿ ರೂ. ವಂಚನೆಗೆ ಒಳಗಾದ ಘಟನೆ ಬೆಳಕಿಗೆ ಬಂದಿದೆ. ಮದುವೆಯ ಆಮಿಷವೊಡ್ಡಿ ಶೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ಸೈಬರ್ ವಂಚಕಿ ಹಣ ಪಡೆದು ಪರಾರಿಯಾಗಿದ್ದಾಳೆ. ‘ಟಾಂಟಾಂ’ ಡೇಟಿಂಗ್ ಆಯಪ್‌ನಲ್ಲಿ ಪರಿಚಯವಾದ ‘ರಿಯಾ ಅಗರ್ವಾಲ್’ ಎಂಬ ಯುವತಿ, ಟೆಕ್ಕಿಯೊಂದಿಗೆ ಸ್ನೇಹ ಬೆಳೆಸಿ ಬಳಿಕ ವಾಟ್ಸ್ಯಾಪ್ ಹಾಗೂ ಟೆಲಿಗ್ರಾಂ ಮೂಲಕ ಸಂಪರ್ಕದಲ್ಲಿದ್ದಳು. ನಂತರ …
Read More »
BigTv News
May 29, 2026
Breaking News
ಹುಬ್ಬಳ್ಳಿ: ವಿವಿಧ ಕಂಪನಿಗಳ ಸ್ಟಾಕ್‌ಗಳನ್ನು ಖರೀದಿಸಿ ಮತ್ತು ಅವುಗಳನ್ನು ಮಾರಾಟ ಮಾಡಿ ಹೆಚ್ಚು ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿದ ಅಪರಿಚಿತರು, ನಗರದ ಪ್ರವೀಣ ಕಲಮನಿ ಎಂಬುವರಿಗೆ ₹21.01 ಲಕ್ಷ ವಂಚಿಸಿದ್ದಾರೆ. ಪ್ರವೀಣ ಅವರ ವಾಟ್ಸ್‌ಆಯಪ್ ಸಂಖ್ಯೆಯನ್ನು ‘ಇನ್ವೆಸ್ಟ್‌ಮೆಂಟ್ ಕ್ಲಬ್ ವಾಟ್ಸ್‌ಆಪ್ ಗ್ರೂಪ್’ಗೆ ಸೇರಿಸಿರುವ ವಂಚಕರು, ಬಳಿಕ ಲಿಂಕ್‌ವೊಂದನ್ನು ಅವರಿಗೆ ಕಳುಹಿಸಿ ಮೊಬೈಲ್ ಆಯಪ್ ಡೌನ್‌ಲೋಡ್ ಮಾಡಿಸಿದ್ದಾರೆ. ನಂತರ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. …
Read More »
BigTv News
May 29, 2026
Breaking News
ಗುಜರಾತ್ ರಾಜ್ಯದ ಸಾಬರಕಾಂಠಾ ಜಿಲ್ಲೆಯ ವಿಜಯನಗರ ತಾಲೂಕಿನ ಗಾಡಿವಕ್ಡಾ ಗ್ರಾಮದಲ್ಲಿ ಮೂಢನಂಬಿಕೆಯಿಂದ ನಡೆದ ಭೀಕರ ಹಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. ಗ್ರಾಮದ ಕಮಲಾಬೇನ್ ಎಂಬ ಮಹಿಳೆಯನ್ನು ‘ಡಾಕಣ್’ ಎಂದು ಸುಳ್ಳು ವದಂತಿ ಹಬ್ಬಿಸಿ, ಗ್ರಾಮ ತೊರೆಯುವಂತೆ ಒತ್ತಾಯಿಸಲಾಗಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಾಗ ಗ್ರಾಮಸ್ಥರ ಗುಂಪು ಕಮಲಾಬೇನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಹಲ್ಲೆಗೆ ಮುಂದಾಯಿತು. ಪತ್ನಿಯನ್ನು ರಕ್ಷಿಸಲು ಹೋದ ಪತಿ ಮನುಭಾಯಿ ರಾಮ್‌ಜೀಭಾಯಿ ದಾಮೋರ್ ಮೇಲೆ ತೀಕ್ಷ್ಣ ಆಯುಧಗಳಿಂದ …
Read More »
BigTv News
May 29, 2026
Breaking News
ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಟೈರ್ ಸ್ಪೋಟಗೊಂಡು ನಿಯಂತ್ರಣ ತಪ್ಪಿದ ಕಾರ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ಪ್ರಮೋದ್, ರುದ್ರೇಶ್, ಸೋಮು, ಮಲ್ಲಿಕಾರ್ಜುನ ಮೃತಪಟ್ಟವರು ಎಂದು …
Read More »
BigTv News
May 28, 2026
Breaking News
ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಸಮೀಪ ಗುರುವಾರ ಸಂಜೆ ನಡೆದಿದೆ. ಮೃತನನ್ನು ಅಬ್ನಾನ್ (23) ಎಂದು ಗುರುತಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಪಲ್ಸರ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಬಸ್ಸಿನ ಮುಂಭಾಗಕ್ಕೆ ಸಿಲುಕಿಕೊಂಡು ಬೆಂಕಿಗಾಹುತಿಯಾಗಿದೆ. ಬೈಕಿನಲ್ಲಿದ್ದವರ …
Read More »
BigTv News
May 28, 2026
Breaking News
ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳ ಮೇಲೆ ಕಲ್ಲು ಎಸೆದು ಜಖಂಗೊಳಿಸಿದ್ದ ಮೂವರನ್ನು ವಿ.ವಿ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿ.ವಿ.ಪುರ ಠಾಣಾ ವ್ಯಾಪ್ತಿಯ ವೆಂಕಟಪ್ಪ ಗಲ್ಲಿಯಲ್ಲಿ ಮೇ 20ರ ಬೆಳಗಿನ ಜಾವ ಆರೋಪಿಗಳಾದ ಅಭಿಷೇಕ್, ಪುನೀತ್ ಹಾಗೂ ಉಮೇಶ್ ಎಂಬವರು ದ್ವಿಚಕ್ರವಾಹನಗಳಿಗೆ ದೊಣ್ಣೆಯಿಂದ ಹೊಡೆದು ಹಾನಿಗೊಳಿಸಿದ್ದರು. ಈ ವೇಳೆ ಬೈಕ್ ಸವಾರ ವಿಘ್ನೇಶ್ ಎಂಬಾತನನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದರು. ಘಟನೆಯ ದೃಶ್ಯ ಸಿ.ಸಿ.ಟಿ.ವಿ …
Read More »
BigTv News
May 28, 2026
Breaking News
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದ ಕಂಚಗಾರ ಬೀದಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ ದಿನವೇ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತ ಮಹಿಳೆಯನ್ನು ಗುಲ್‌ಶರ್ ಬಾನು ಎಂದು ಗುರುತಿಸಲಾಗಿದ್ದು, ಪತಿ ಸೈಫ್ ಉಲ್ಲಾ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಕುಟುಂಬದವರ ಮಾಹಿತಿ ಪ್ರಕಾರ, ಸೈಫ್ ಉಲ್ಲಾ ಮೊದಲಿನಿಂದಲೂ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಹಣಕ್ಕಾಗಿ ಪತ್ನಿಯ ಮನೆಯವರನ್ನು ನಿರಂತರವಾಗಿ …
Read More »
BigTv News
May 28, 2026
Breaking News
ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದ್ದ ಸಂದರ್ಭದಲ್ಲಿ ಅಧಿಕಾರಿಗಳ ವಾಹನಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ವಾಹನಗಳ ಮೇಲೆ ನಡೆದ ದಾಳಿ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ 8 ಮಂದಿಯನ್ನು ಬಂಧಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ಇನ್ನಷ್ಟು ಜನರನ್ನು ಗುರುತಿಸಲಾಗಿದೆ ಎಂದು ಹೇಳಿದರು. ಇಡಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯ …
Read More »
BigTv News
May 28, 2026
Breaking News
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕರಿಕೆ ಗ್ರಾಮದ ಮೇಲೆಡ್ಕ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕರಿಕೆ ವಲಯ ಅರಣ್ಯಾಧಿಕಾರಿಗಳು ಅರಣ್ಯದಲ್ಲಿ ಬೀಟ್ ತೆರಳುತ್ತಿದ್ದ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಘಟನಾ ಸ್ಥಳಕ್ಕೆ ಕರಿಕೆ ಉಪ ಠಾಣಾ ಪೊಲೀಸ್ ಸಿಬ್ಬಂದಿಗಳು, ಭಾಗಮಂಡಲ ಪೊಲೀಸ್ ಠಾಣಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರಿಕೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ನೇಣು ಬಿಗಿದ …
Read More »