Breaking News

Breaking News

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 ವರ್ಷ ಕಠಿಣ ಶಿಕ್ಷೆ, ₹25 ಸಾವಿರ ದಂಡ..! ಹುಬ್ಬಳ್ಳಿ: ಹೌದು ವೀಕ್ಷಕರೇ, ತಪ್ಪು ಮಾಡಿದವರು ಎಷ್ಟೇ ಚಾಲಾಕಿಗಳಾಗಿದ್ದರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ..! ಗಾಂಜಾ ಸಾಗಾಟ ಮತ್ತು ಅಕ್ರಮ ಮಾರಾಟ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ …

Read More »

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಶೇಖರ್ ಅಲಿಯಾಸ್ ಸೇಸಪ್ಪ (30) ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ …

Read More »

ಬೆಂಗಳೂರಿನ ಸ್ಪಾ, ಸಲೂನ್‌ಗಳಲ್ಲಿ ನೈತಿಕ ಪೊಲೀಸ್‌ಗಿರಿ, ಬ್ಲಾಕ್‌ಮೇಲ್; ನಕಲಿ ವರದಿಗಾರರು ಸೇರಿ 6 ಮಂದಿ ಪೊಲೀಸರ ಬಲೆಗೆ!

ಬೆಂಗಳೂರು: ಸ್ಪಾ ಮತ್ತು ಸಲೂನ್‌ಗಳಿಗೆ ನುಗ್ಗಿ ನಕಲಿ ಮಾಧ್ಯಮ ಐಡಿ ಕಾರ್ಡ್ ತೋರಿಸಿ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಲಕ್ಷ್ಮಿ, ಮಮತಾ, ಪ್ರಿಯಾ, ಸಗಾಯ್ ಮೇರಿ, ಯೋಗಬಾಲು ಹಾಗೂ ಆಸೀಫ್ ಎಂದು ಗುರುತಿಸಲಾಗಿದೆ. ಸ್ಪಾ ಮಾಲೀಕರೊಬ್ಬರಿಗೆ ಬೆದರಿಕೆ ಹಾಕಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಮಾಲೀಕರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ …

Read More »

ಸತ್ತ ಜಾನುವಾರುಗಳ ಪರಿಹಾರದ ಹಣ ನುಂಗಿದ ಪಾಪಿಗಳು : ರಾಬಕೋವಿ ಹಾಲು ಒಕ್ಕೂಟದ ಮತ್ತಷ್ಟು ಅಕ್ರಮ ಬಯಲು!

ಬಳ್ಳಾರಿ: ರಾಬಕೋವಿ ಹಾಲು ಒಕ್ಕೂಟದಲ್ಲಿ ಮೃತಪಟ್ಟ ಜಾನುವಾರುಗಳ ವಿಮಾ ಪರಿಹಾರದ ಹಣ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಒಕ್ಕೂಟದ ಅಕೌಂಟೆಂಟ್ ಉಮಾಮಹೇಶ್ವರಿ ಹಾಗೂ ನಿವೃತ್ತ ಮ್ಯಾನೇಜರ್ ವೆಂಕಟೇಶ್ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ರೈತರಿಗೆ ಸಲ್ಲಬೇಕಾದ ವಿಮಾ ಹಣವನ್ನು ಅಕ್ರಮವಾಗಿ ವರ್ಗಾಯಿಸಿರುವ ಆರೋಪ ಕೇಳಿಬಂದಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಧನಂಜಯ್ ಹಾಮಲ್ ಅವರು …

Read More »

ಬೆಂಗಳೂರಿನಲ್ಲಿ ರೋಡ್ ರೇಜ್ ಅಟ್ಟಹಾಸ – ಹಾರ್ನ್ ಮಾಡಿದ್ದಕ್ಕೆ ಕಾರು ಚೇಸ್ ಮಾಡಿ ಆಟೋ ಚಾಲಕನ ಭೀಕರ ದರ್ಪ!

ಬೆಂಗಳೂರು: ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಹಾರ್ನ್ ಮಾಡಿದ ಕಾರಣಕ್ಕೆ ಕೋಪಗೊಂಡ ಆಟೋ ಚಾಲಕನೊಬ್ಬ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿದ ಘಟನೆ ನಡೆದಿದೆ. ಆಟೋ ಚಾಲಕನ ಪುಂಡಾಟಿಕೆ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ. ರಾಂಗ್ ಟರ್ನ್ ತೆಗೆದುಕೊಂಡ ಆಟೋಗೆ ಅಪಘಾತ ತಪ್ಪಿಸಲು ಕಾರು ಚಾಲಕ ಹಾರ್ನ್ ಮಾಡಿದ್ದಾರೆ. ಇದರಿಂದ ಕೋಪಗೊಂಡ ಆಟೋ ಚಾಲಕ ಕಾರನ್ನು ಬೆನ್ನಟ್ಟಿ ತಡೆದು, ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, …

Read More »

ಪೋಕ್ಸೋ ಪ್ರಕರಣದಲ್ಲಿ KIMS ಟ್ವಿಸ್ಟ್..! ಇಬ್ಬರು ಆರೋಪಿಗಳಿಗೆ ವೈದ್ಯಕೀಯ ಕಸ್ಟಡಿ ಯಾಕೆ..? ಹಣದ ಡೀಲ್ ಆರೋಪದ ಅಸಲಿ ಸತ್ಯವೇನು..?

ಪೋಕ್ಸೋ ಕೇಸ್‌ನಲ್ಲಿ 9 ಮಂದಿ ಠಾಣೆಗೆ..! ಒಬ್ಬನಿಗಷ್ಟೇ ಕೇಸ್ ಯಾಕೆ..? ಉಳಿದ 8 ಮಂದಿಯ ವಿಚಾರವೇನು — ಇನ್ಸ್‌ಪೆಕ್ಟರ್ ಪಾತ್ರದ ಬಗ್ಗೆ ಪ್ರಶ್ನೆ..! KIMSನಲ್ಲಿ ಇಬ್ಬರು ಆರೋಪಿಗಳು..! ವೈದ್ಯಕೀಯ ಕಸ್ಟಡಿಯಾ, ‘ಕಾಂಚನ’ದ ಆಟವಾ..? ಹಣದ ಡೀಲ್ ಎಷ್ಟು..? ಯಾರ ಜೇಬಿಗೆ ಎಷ್ಟು ಹಣ..? ಇನ್ಸ್‌ಪೆಕ್ಟರ್ ಪಾತ್ರವೇನು..? ಹುಬ್ಬಳ್ಳಿ: ಹುಬ್ಬಳ್ಳಿಯ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳ ವಿಚಾರ ಇದೀಗ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಒಬ್ಬ ಆರೋಪಿ ಜೈಲಿನಲ್ಲಿದ್ದರೆ, ಇನ್ನಿಬ್ಬರು ಆರೋಪಿಗಳನ್ನು …

Read More »

ರಾಜ್ಯದಲ್ಲಿ ಹೀನ ಕೃತ್ಯ : ಅಪ್ರಾಪ್ತೆಗೆ ಬೆದರಿಸಿ ನಿರಂತರ ಅತ್ಯಾಚಾರ, ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು!

ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪಕ್ಕದ ಮನೆಯ ವಿವಾಹಿತ ವ್ಯಕ್ತಿಯೇ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪ್ರೀತಿಸುವ ನೆಪದಲ್ಲಿ ಬಾಲಕಿಯನ್ನು ಶಾಲೆಗೆ ಹೋಗದಂತೆ ತಡೆದು ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದ ಬಾಲಕಿಯ ತಾಯಿ ಸಂತೆಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Read More »

8 ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲು

ಯಾದಗಿರಿ:ವೈದ್ಯಕೀಯ ಪದವಿ ಮತ್ತು ಅಗತ್ಯ ನೋಂದಣಿ ಇಲ್ಲದೆ ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಎಂಟು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಬಂದ್ ಮಾಡಿ, ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಿ ಎಂಟು ಅನಧಿಕೃತ ಕ್ಲಿನಿಕ್‌ಗಳನ್ನು ಮುಚ್ಚಿಸಿದೆ. ಶೇಕ್ ಮಸ್ತಾನ್ ವಾರಿ, ಸತೀಶ್, ಕೃಷ್ಣ, ಸಂಜೀವ ಬೋಸೆ, ಶರಣಬಸವ ಜಾಂಬವ, ಮಹಾದೇವಪ್ಪ, ಭೀಮಣ್ಣ …

Read More »

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಭಿಕ್ಷಾಟನೆ : ಪೊಲೀಸರಿಂದ ಇಬ್ಬರು ಹೈಟೆಕ್ ಭಿಕ್ಷುಕರು ಅರೆಸ್ಟ್!

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಟರ್ಮಿನಲ್-2ರ ನಿರ್ಗಮನ ದ್ವಾರದ ಬಳಿ ವೆಂಕಟೇಶ್ ಕುಮಾರ್ ಮತ್ತು ಪ್ರತೀಕ್ ಬಾಟಿಯಾ ಎಂಬವರನ್ನು ಬಂಧಿಸಲಾಗಿದೆ. ಮಾಲಾ ವೇಷಧಾರಿಗಳಾಗಿ ಬಂದು ಭಿಕ್ಷಾಟನೆ ಮಾಡುತ್ತಿದ್ದ ಆರೋಪ ಇವರ ಮೇಲಿದೆ. ಕಳೆದ ಎರಡು ದಿನಗಳಿಂದ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಇವರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೂ ಮತ್ತೆ ಬಂದು ಭಿಕ್ಷಾಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ …

Read More »

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಕೊಲೆ: ಆರೋಪಿಗಳ ಸೆರೆ

ಮೂಡಿಗೆರೆ: ಇಬ್ಬರು ಯುವಕರು ವ್ಯಕ್ತಿಯೊಬ್ಬರನ್ನು ಹಿಡಿದು ಜೋರಾಗಿ ತಳ್ಳಿದ ಪರಿಣಾಮ ಕೆಳಗೆ ಬಿದ್ದು ಮೃತಪಟ್ಟ ಘಟನೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಕುಂದೂರು ಗ್ರಾಮದ ಕಾರ್ಲಗದ್ದೆ ನಿವಾಸಿ ರವಿ (50) ಮೃತಪಟ್ಟವರು. ಮೃತರ ಪತ್ನಿ ನಳಿನಿ ನೀಡಿದ ದೂರಿನ ಪ್ರಕಾರ, ರವಿ ಮದ್ಯಪಾನ ಮಾಡಿ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಕುಟುಂಬದವರು ಆತಂಕಗೊಂಡಿದ್ದರು. ರಾತ್ರಿ ಪೊಲೀಸರು ಕರೆ ಮಾಡಿ ರವಿ ಬಸ್ ನಿಲ್ದಾಣದಲ್ಲಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದರು. ಆಸ್ಪತ್ರೆಗೆ ತೆರಳಿದಾಗ …

Read More »