BigTv News
May 28, 2026
Breaking News
ರಾಣೆಬೆನ್ನೂರು: ಆಸ್ತಿ ವ್ಯಾಜ್ಯದ ಹಿನ್ನೆಲೆಯಲ್ಲಿ ತಮ್ಮನನ್ನು ಅಣ್ಣ&ತಮ್ಮಂದಿರು ಸೇರಿ ಹಲ್ಲೆ ಮಾಡಿ ಕೊಲೆ ಮಾಡಿರುವ ಟನೆ ತಾಲೂಕಿನ ಕಜ್ಜರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಗ್ರಾಮದ ಕರಬಸಪ್ಪ ನಿಂಗಪ್ಪ ಚಿನ್ನದ (35) ಕೊಲೆಯಾದವನು. ಪ್ರಕರಣಕ್ಕೆ ಸಂಬಂಧಿಸಿ ಬಸವರಾಜಪ್ಪ ಹನುಮಂತಪ್ಪ ಚಿನ್ನದ ಸೇರಿ 11 ಜನರ ವಿರುದ್ಧ ದೂರು ದಾಖಲಾಗಿದೆ. ಇವರ ನಡುವೆ ತಮ್ಮ ಜಾಗ ಮಾರಾಟ ಮಾಡುವ ವಿಚಾರದಲ್ಲಿ ಮತ್ತು ರಸ್ತೆ ವಿಚಾರವಾಗಿ ವ್ಯಾಜ್ಯವಿತ್ತು. ಇದರಿಂದ ಮಂಗಳವಾರ ಬೆಳಗ್ಗೆ ಮನೆಯಲ್ಲಿ ಜಗಳ ಶುರುವಾಗಿದೆ. …
Read More »
BigTv News
May 28, 2026
Breaking News
ಬೆಂಗಳೂರು: ಸ್ನೇಹಿತೆಯ ಮನೆಗೆ ಬಂದಿದ್ದ ಗುಜರಿ ವ್ಯಾಪಾರಿಯನ್ನು ಆಕೆಯ ಪತಿ ಹಾಗೂ ಸಂಬಂಧಿಕರು ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಮೊಹಮ್ಮದ್ ಕಾಸಿಫ್ (27) ಮೃತ ದುರ್ದೈವಿ. ಶಾಲಾ ದಿನಗಳಿಂದ ಪರಿಚಯವಿದ್ದ ಸ್ನೇಹಿತೆಯನ್ನು ಭೇಟಿ ಮಾಡಲು ಬಾಪೂಜಿನಗರದ ಮನೆಗೆ ಬಂದಿದ್ದ ವೇಳೆ, ಆಕೆಯ ಪತಿ ಅಕ್ಬರ್ ಹಾಗೂ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕಾಸಿಫ್ ಬಳಿಕ ಆಸ್ಪತ್ರೆಯಲ್ಲಿ …
Read More »
BigTv News
May 27, 2026
Breaking News
ರಾಣೆಬೆನ್ನೂರು: ನವಜಾತ ಗಂಡು ಶಿಶುವನ್ನು ಬಾವಿಯಲ್ಲಿ ಬಿಸಾಡಿ ಹೋದ ಅಮಾನವೀಯ ಘಟನೆ ತಾಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ. ಈ ಕುರಿತು ಆಶಾ ಕಾರ್ಯಕರ್ತೆ ಕರಿಯಮ್ಮ ಸಣ್ಣಹನುಮಗೌಡ್ರ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ಯಾರೋ ದುಷ್ಕಮಿರ್ಗಳು ಗ್ರಾಮದ ಮುದ್ದಪ್ಪನಗರದ ಬಾವಿಯಲ್ಲಿ ನವಜಾತ ಗಂಡು ಶಿಶುವನ್ನು ಬಿಸಾಡಿ ಹೋಗಿದ್ದಾರೆ. ಇವರನ್ನು ಪತ್ತೆ ಮಾಡಿ ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Read More »
BigTv News
May 27, 2026
Breaking News
ಮುಧೋಳ: ನಗರದ ಶಿವಾಜಿ ವೃತ್ತದ ಬಳಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಬಿದರಿ ಗ್ರಾಮದ ದುರ್ಗಾದೇವಿ ದೇವಸ್ಥಾನ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಬಿದರಿ ಗ್ರಾಮದ ವಸಂತ ಮಾದರ (37) ದೇವಸ್ಥಾನದ ಗರ್ಭಗುಡಿಯ ಬೀಗ ಮುರಿದು ಚಿನ್ನ-ಬೆಳ್ಳಿ ಆಭರಣ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ 6.09 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ತಾಮ್ರದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಪಿಐ ಎಂ. ನಾಗರಡ್ಡಿ …
Read More »
BigTv News
May 27, 2026
Breaking News
ಶಿಗ್ಗಾಂವ: ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ 90 ಸಾವಿರ ರೂ. ಮೌಲ್ಯದ ಎರಡು ಹಸುಗಳನ್ನು ಯಾರೋ ಕಳ್ಳತನ ಮಾಡಿಕೊಂಡು ಹೋದ ಘಟನೆ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ. ಶಂಕ್ರಪ್ಪ ಭರಮಪ್ಪ ಮಡಿವಾಳರ (47) ಎಂಬುವರ ಆಕಳು ಕಳ್ಳತನ ಆಗಿರುವುದು. ಇವರು ಮನೆ ಪಕ್ಕದ ದನದ ಕೊಟ್ಟಿಗೆಯಲ್ಲಿ ಹಸುಗಳನ್ನು ಕಟ್ಟಿದ್ದರು.ಯಾರೋ ಖದೀಮರು 2 ಆಕಳುಗಳನ್ನು ಕಳ್ಳತನ ಮಾಡಿದ್ದಾರೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 27, 2026
Breaking News
ಹಾವೇರಿ: ಬಸ್ ಹತ್ತುವ ಸಮಯದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ 3.15 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರವನ್ನು ಯಾರೋ ದೋಚಿದ ಘಟನೆ ನಗರದ ಎನ್ಡಬ್ಲೂ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ತಾಲೂಕಿನ ಕೋಣನತಂಬಗಿ ಗ್ರಾಮದ ನಿರ್ಮಲಾ ಯಲ್ಲಪ್ಪ ಕಳ್ಳಿಮನಿ (41) ಎಂಬುವರ ಚಿನ್ನದ ಸರ ಕಳ್ಳತನ ಮಾಡಿರುವುದು. ಇವರು ನಗರದ ಎನ್ಡಬ್ಲೂಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಹಾವೇರಿ-ಹುಬ್ಬಳ್ಳಿ ಬಸ್ ನಿಲ್ಲುವ ಅಂಕಣದಲ್ಲಿ ಬಸ್ ಹತ್ತುತ್ತಿದ್ದಾಗ ಯಾರೋ ಖದೀಮರು ಚಿನ್ನದ ಮಾಂಗಲ್ಯಸರ ದೋಚಿದ್ದಾರೆ. ಈ …
Read More »
BigTv News
May 27, 2026
Breaking News
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೋಕ್ಸೊ ಕಾಯಿದೆಯಡಿ ಉಡುಪಿ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತೆಕ್ಕಟ್ಟೆಯ ಜಿತೇಂದ್ರ ಹಾಗೂ ಸುಶಾನ್ ಬಂಧಿತ ಆರೋಪಿಗಳು. ಇವರಿಬ್ಬರು 17ವರ್ಷ ವಯಸ್ಸಿನ ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದು, ನಂತರ ಆರೋಪಿಗಳು ಆಕೆಯಿಂದ ಮೋಸ ಮಾಡುವ ಉದ್ದೇಶದಿಂದ ಒಟ್ಟು 71 ಗ್ರಾಂ ಚಿನ್ನಾಭರಣಗಳನ್ನು ಪಡೆದುಕೊಂಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ …
Read More »
BigTv News
May 27, 2026
Breaking News
ರಾಣೆಬೆನ್ನೂರು: ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಅಡ್ಡೆಯ ಮೇಲೆ ದಾಳಿ ನಡೆಸಿದ ಶಹರ ಠಾಣೆ ಪೊಲೀಸರು 50 ಕೆ.ಜಿ. ತೂಕದ ಮಾಂಸ ವಶಪಡಿಸಿಕೊಂಡ ಘಟನೆ ಇಲ್ಲಿಯ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ.ಯಾರೋ ಆರೋಪಿತರು ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು ಮುಂದಾಗಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಾಂಸ, ಕಬ್ಬಿಣದ ಚಾಕು, ಮಾಂಸ ನೇತು ಹಾಕುವ ಹುಕ್ಕುಗಳನ್ನು ವಶಪಡಿಸಿಕೊಂಡಿದ್ದಾರೆ. …
Read More »
BigTv News
May 27, 2026
Breaking News
ಬೆಂಗಳೂರು ನಗರದ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸಿದ್ದ ಯುವತಿಯ ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಾಮನಗರದ ಬೀಡಿ ಕಾಲೋನಿ ನಿವಾಸಿ ಮೊಹಮದ್ ಖಾಸಿಂ(27) ಮೃತ ಯುವಕನಾಗಿದ್ದು, ಪೇಂಟಿಂಗ್ ಹಾಗೂ ಗುಜುರಿ ಕೆಲಸ ಮಾಡಿಕೊಂಡಿದ್ದನು. ಖಾಸಿಂ ಪ್ರೀತಿಸುತ್ತಿದ್ದ ಯುವತಿಗೆ ನಾಲ್ಕು ವರ್ಷಗಳ ಹಿಂದೆ ಬೇರೆ ವ್ಯಕ್ತಿಯೊಂದಿಗೆ ಮದುವೆಯಾಗಿತ್ತು. ಆದರೂ ಆತ ಆಗಾಗ್ಗೆ ಆಕೆಯ ಮನೆಗೆ ಹೋಗಿ ಬರುತ್ತಿದ್ದ ಎನ್ನಲಾಗಿದೆ. ಈ …
Read More »
BigTv News
May 27, 2026
Breaking News
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150Aರಲ್ಲಿ ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಇನ್ನೊಂದೆಡೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ರೈತ ಪ್ರಸನ್ನ(40) ಮೃತಪಟ್ಟಿದ್ದಾರೆ. ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, …
Read More »