BigTv News
May 27, 2026
Breaking News
ಮಾಗಡಿ: ಉಡುಗುಂಟೆ ವೀರಾಪುರದ ಚನ್ನಿಗಪ್ಪನ ಪಾಳ್ಯದ ಸರ್ಕಾರಿ ಓಣಿ ಒತ್ತುವರಿ ತೆರವು ಕಾರ್ಯಕ್ಕೆ ತೆರಳಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತುವರಿದಾರರು ಮಂಗಳವಾರ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರಾಮ ಆಡಳಿತ ಅಧಿಕಾರಿ ಹಡಗಲಿ ಹೊನ್ನಪ್ಪ ಹಾಗೂ ಗ್ರಾಮ ಸಹಾಯಕ ಭರತ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರಿ ಜಾಗದ ಸರ್ವೇ ವೇಳೆ ಆರೋಪಿಗಳಾದ ಚಂದ್ರಶೇಖರ್ ಮತ್ತು ಮೋಹನ್ ಕುಮಾರ್ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಕುದೂರು ಠಾಣೆಯಲ್ಲಿ …
Read More »
BigTv News
May 27, 2026
Breaking News
ತುಮಕೂರಿನ ರಾಜೀವ್ ಗಾಂಧಿ ನಗರದಲ್ಲಿ ಬಕ್ರೀದ್ ಹಬ್ಬಕ್ಕಾಗಿ ಅಕ್ರಮವಾಗಿ ಕಟ್ಟಿಹಾಕಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಗೋವುಗಳನ್ನು ಪೊಲೀಸರು ದಿಢೀರ್ ದಾಳಿ ನಡೆಸಿ ರಕ್ಷಿಸಿದ್ದಾರೆ. ಮಹಮ್ಮದ್ ಇಕ್ಬಾಲ್ ಅನ್ಸಾರಿ ಎಂಬವರ ಖಾಸಗಿ ಜಾಗದಲ್ಲಿ ಗೋವುಗಳನ್ನು ಇರಿಸಲಾಗಿತ್ತು ಎನ್ನಲಾಗಿದ್ದು, ಅವುಗಳನ್ನು ಗುಬ್ಬಿ ತಾಲೂಕಿನ ಗೋಶಾಲೆಗೆ ರವಾನಿಸಲಾಗಿದೆ. ಸುಮಾರು 20 ಲಕ್ಷ ರೂ. ಮೌಲ್ಯದ ಗೋವುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ತಿಲಕ್ ಪಾರ್ಕ್ ಠಾಣೆ ಪೊಲೀಸರ ನೇತೃತ್ವದಲ್ಲಿ ನಡೆದ ಈ …
Read More »
BigTv News
May 27, 2026
Breaking News
ಬೆಂಗಳೂರು ಸಮೀಪದ ರಾಮಸಂದ್ರದಲ್ಲಿ ಹಣಕಾಸಿನ ವಿಚಾರಕ್ಕೆ ಆಟೋ ಚಾಲಕ ರಕ್ಷಿತ್ (25) ಅವರನ್ನು ಸ್ನೇಹಿತರೆ ಬರ್ಬರವಾಗಿ ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಹೂತು ಹಾಕಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮೋಹಿನ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ. 8 ಸಾವಿರ ರೂ. ಸಾಲದ ವಿಚಾರವಾಗಿ ನಡೆದ ಗಲಾಟೆ ವೇಳೆ ಆರೋಪಿಗಳು ಕಲ್ಲು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ರಕ್ಷಿತ್‌ನನ್ನು ಕೊಲೆ ಮಾಡಿದ್ದರು. …
Read More »
Shaikh BigTv
May 27, 2026
Breaking News, Crime, ಹುಬ್ಬಳ್ಳಿ-ಧಾರವಾಡ
ಧಾರವಾಡದ ತರಸಿನಕೊಪ್ಪ ಪ್ರದೇಶದಲ್ಲಿ ಜಮೀನು ವಿವಾದದ ಹಿನ್ನೆಲೆ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದು ಗುಂಡಿನ ದಾಳಿ ಸಂಭವಿಸಿದೆ. ಘಟನೆಯಲ್ಲಿ ವಿಟ್ಟಲ್ ಎಂಬ ಯುವಕನ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಪ್ರವೀಣ್ ಸುತ್ತಾರ್, ಸುಂದರ್ ಪೌಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸ್ಥಳದಿಂದ ಒಂದು …
Read More »
BigTv News
May 27, 2026
Breaking News
ಬೆಂಗಳೂರಿನ ವಿ.ವಿ.ಪುರಂನಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ವಾಹನಗಳನ್ನು ಜಖಂಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಅಭಿಷೇಕ್ ಅಲಿಯಾಸ್ ಪಾಂಡು, ಉಮೇಶ್ ಹಾಗೂ ಪುನೀತ್ ಅಲಿಯಾಸ್ ಟೋನಿ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 20ರ ಬೆಳಗಿನ ಜಾವ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದ್ದು, ಬಳಿಕ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆ ರಬಿಯಾಳನ್ನು ಹೆದರಿಸಲು ಬಂದಿದ್ದ ಆರೋಪಿಗಳು ಸಾರ್ವಜನಿಕರ ಮೇಲೂ ಹಲ್ಲೆ …
Read More »
BigTv News
May 27, 2026
Breaking News
ದಾವಣಗೆರೆಯಲ್ಲಿ ನಕಲಿ ಕ್ರಿಪ್ಟೋ ಕರೆನ್ಸಿ ಆ್ಯಪ್ ಮೂಲಕ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನ ಚೆಲ್ಲಪಂಡಿ ಸುಬ್ರಹ್ಮಣಿ (42) ಎಂಬ ಪ್ರಮುಖ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ನಾವಾಬಿಟ್. ಇನ್ ಎಂಬ ನಕಲಿ ಆ್ಯಪ್ ಮೂಲಕ 10 ಸಾವಿರ ರೂ. ಹೂಡಿಕೆ ಮಾಡಿದರೆ ದಿನಕ್ಕೆ 300-400 ರೂ. ಲಾಭ ಸಿಗುತ್ತದೆ ಎಂದು ನಂಬಿಸಿ ಜನರನ್ನು ಮೋಸಗೊಳಿಸಲಾಗಿತ್ತು. ಆರಂಭದಲ್ಲಿ ಹಣ ನೀಡಿ ವಿಶ್ವಾಸ ಗಳಿಸಿದ್ದ ಖದೀಮರು …
Read More »
BigTv News
May 27, 2026
Breaking News
ವಿಜಯಪುರ ಜಿಲ್ಲೆಯ ಕೊಲ್ಲಹಾರ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಚಿಂಚೋಳಿ ಪಟ್ಟಣದ ಸುನಿಲ್ ಕುಮಾರ್ ಶಾಂತಕುಮಾರ್ ಮನ್ನಳ್ಳಿ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾಂಡೇಲಿ ಹಾಗೂ ಬಂಟ್ವಾಳ ಪ್ರವಾಸ ಮುಗಿಸಿ ಸ್ನೇಹಿತರೊಂದಿಗೆ ಮರಳುವ ವೇಳೆ ಕಾರು ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಸ್ನೇಹಿತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುನಿಲ್ ನಿಧನಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಂಸದ ಸಾಗರ್ ಖಂಡ್ರೆ ಸೇರಿದಂತೆ ಅನೇಕ ಗಣ್ಯರು …
Read More »
Shaikh BigTv
May 27, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡದಲ್ಲಿ ‘ಬಿಹಾರ ಮಾದರಿ’ ಗುಂಡಿನ ಸದ್ದು..? ಕಾನೂನು ಸುವ್ಯವಸ್ಥೆ ಕೈಮೀರಿದೆಯಾ ಎಂಬ ಭೀತಿ..! ತ್ರಿಪಲ್ ಐಟಿ ಬಳಿ ನಡೆದ ಫೈರಿಂಗ್ ಪ್ರಕರಣ: ಕಾನೂನು ಭಯವೇ ಮಾಯವಾಗಿದೆಯಾ..? ಪೊಲೀಸರ ಕಾರ್ಯವೈಖರಿ ಮೇಲೆ ಪ್ರಶ್ನೆಗಳ ಮಳೆ..! ಧಾರವಾಡ–ಹುಬ್ಬಳ್ಳಿ ಜೋಡಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕದ ಚರ್ಚೆಗಳು ಜೋರಾಗಿವೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಬೆದರಿಕೆ, ದೌರ್ಜನ್ಯ, ಆಸ್ತಿ ವಿವಾದ.. ಇದೀಗ ಗುಂಡಿನ ಸದ್ದು ಪ್ರಕರಣ—ಇವೆಲ್ಲ ಒಂದೊಂದಾಗಿ ಹೊರಬರುತ್ತಿರುವುದು …
Read More »
BigTv News
May 27, 2026
Breaking News
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಸ್ಪತ್ರೆಗೆ ಭಾರೀ ಬೆಂಕಿ ತಗುಲಿದ ಘಟನೆ ಬೆಂಗಳೂರಿನ ಯಲಹಂಕದ ಎಂಎಸ್ ಪಾಳ್ಯ ಸಮೀಪದ ಅವೇಕ್ಷಾ ಆಸ್ಪತ್ರೆಯಲ್ಲಿ ನಡೆದಿದೆ. 20ಕ್ಕೂ ಹೆಚ್ಚು ರೋಗಿಗಳು ಇದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ 3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದ್ದು, ಕೂಡಲೇ ಕೆಲವು ಒಳ ರೋಗಿಗಳು ಆಸ್ಪತ್ರೆಯಿಂದ ಓಡಿ ಹೋಗಿದ್ದಾರೆ. ಉಳಿದ ರೋಗಿಗಳನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ …
Read More »
BigTv News
May 27, 2026
Breaking News
ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತ್ಯೇಕವಾಗಿ 23 ಜನರನ್ನು ಬಂಧಿಸಲಾಗಿದ್ದು, 15 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸಕ್ತ ಐಪಿಎಲ್ ಪಂದ್ಯಾವಳಿ ನಡೆಯುವ ವೇಳೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಸಿಸಿಬಿ ಡಿಸಿಪಿ ಬಿ.ಎಲ್. ಹರಿಬಾಬು ನೇತೃತ್ವದಲ್ಲಿ ಅಧಿಕಾರಿಗಳು ಐಪಿಎಲ್ ಪಂದ್ಯಾವಳಿ …
Read More »