Breaking News

Breaking News

ಕಳವಿಗೆ ಯತ್ನ: ಬಾಲಕ ಸಹಿತ ಇಬ್ಬರ ಬಂಧನ

ಕುಂದಾಪುರ, ತ್ರಾಸಿಯ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ಹಾಲ್‌ನಲ್ಲಿ ಅಳವಡಿಸಲಾದ ಸೆಂಟ್ರಲ್ ಎಸಿಯ ತಾಮ್ರದ ಪೈಪ್ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸ್ರೂರು ಗ್ರಾಮದ ಮಹಮ್ಮದ್ ಹನೀಫ್ (18) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತರು.ಇವರು ಎ.16ರಂದು ಹಾಲ್‌ನ ಮೆಟ್ಟಿಲಿನ ಬಳಿ ಅಳವಡಿಸಲಾದ ಎಸಿಯ ತ್ರಾಮದ ಪೈಪ್ ಕಳವಿಗೆ ಯತ್ನಿಸಿರುವ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ಲಾಕಪ್ ಡೆತ್‌, ಪೊಲೀಸ್ ದೌರ್ಜನ್ಯಕ್ಕೆ ಬ್ರೇಕ್.. ಡಿಜಿಪಿಯ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿ: ಸಾಕ್ಷ್ಯ ನಾಶ ಮಾಡಿದ ಅಧಿಕಾರಿಗಳಿಗೂ ಕಠಿಣ ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಲಾಕಪ್ ಡೆತ್ (ಪೊಲೀಸ್ ಕಸ್ಟಡಿ ಸಾವು) ಹಾಗೂ ಪೊಲೀಸ್ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯ ಪೊಲೀಸ್ ಇಲಾಖೆ ಮಹತ್ವದ ಮತ್ತು ಕಠಿಣ ಕ್ರಮ ಕೈಗೊಂಡಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ ಅವರು ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಾಯ್ದೆಯಡಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಪೊಲೀಸ್ ಕಸ್ಟಡಿಯಲ್ಲಿ ಯಾವುದೇ ದೌರ್ಜನ್ಯ …

Read More »

8 ತಿಂಗಳ ಹೆಣ್ಣು ಮಗುವಿಗೆ ಆಯಸಿಡ್ ಕುಡಿಸಿದ ಪಾಪಿ ತಾಯಿ; ಅಮ್ಮನ ಕ್ರೌರ್ಯಕ್ಕೆ ಬೆಚ್ಚಿಬಿದ್ದ ದೇಶ

ರಾಜಸ್ಥಾನದ ಖೈರ್ತಾಲ್-ಭಿವಾಡಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ತಾಯಿಯೇ ತನ್ನ 8 ತಿಂಗಳ ಮಗುವಿಗೆ ಆಸಿಡ್ ಕುಡಿಸಿದ ಆರೋಪ ಕೇಳಿಬಂದಿದೆ. ಗಂಭೀರ ಸ್ಥಿತಿಯಲ್ಲಿರುವ ಮಗು ಕಾವ್ಯಗೆ ಅಲ್ವಾರ್ ಮಕ್ಕಳ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಮಗು ತಾಯಿಯೊಂದಿಗೆ ಮನೆಯಲ್ಲಿ ಒಬ್ಬಂಟಿಯಾಗಿತ್ತು ಎಂದು ತಿಳಿದುಬಂದಿದೆ. ಮಗುವಿನ ತಂದೆ ಮೋಹಿತ್, ಪೊಲೀಸರಿಗೆ ಮಾಹಿತಿ ನೀಡುವುದಾಗಿ ಹೇಳಿದ ಬಳಿಕ ಪತ್ನಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ …

Read More »

ಮನೆಯ ದಾರಿಗಾಗಿ ಶುರುವಾದ ವಾಗ್ವಾದ ಕೊಲೆಯಲ್ಲಿ ಅಂತ್ಯ..!

ಧಾರವಾಡ ಜಿಲ್ಲೆಯ ಕರಡಿಗುಡ್ಡ ಗ್ರಾಮದಲ್ಲಿ ಮನೆಯ ದಾರಿ ವಿಚಾರಕ್ಕೆ ಸಹೋದರರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಲ್ಲಯ್ಯ ಚಿಕ್ಕಮಠ ಮೃತಪಟ್ಟವರಾಗಿದ್ದು, ತಮ್ಮ ಶ್ರೀಕಾಂತ ಚಿಕ್ಕಮಠ ಅಣ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾನೆ. ಮೇ 18ರ ರಾತ್ರಿ ದಾರಿ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಶುರುವಾಗಿ ಗಲಾಟೆ ತಾರಕಕ್ಕೇರಿತ್ತು. ಈ ವೇಳೆ ನಡೆದ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಲ್ಲಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು 6 ವರ್ಷದ ಮಗಳನ್ನೇ ಮುಗಿಸಿದ ತಾಯಿ!

ಹೈದರಾಬಾದ್‌ನ ಅಲ್ವಾಲ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕೊಲೆ ಮಾಡಿದ ಆರೋಪದಲ್ಲಿ ಪೊಲೀಸರ ವಶಕ್ಕೆ ಹೋಗಿದ್ದಾಳೆ. ಆರೋಪಿಯನ್ನು ರೇಖಾ ಎಂದು ಗುರುತಿಸಲಾಗಿದ್ದು, ವಿವಾಹೇತರ ಸಂಬಂಧಕ್ಕೆ ಮಗಳು ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ರೇಖಾ ತನ್ನ ಮಗಳು ತನ್ವಿಕಾಳನ್ನು ಮನೆಯ ನೀರಿನ ಟ್ಯಾಂಕ್‌ನಲ್ಲಿ ಹಾಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ನಾಟಕವಾಡಿ ಕುಟುಂಬದವರನ್ನು …

Read More »

ಅಕ್ರಮ ಚಟುವಟಿಕೆ: ಐವರ ಗಡಿಪಾರು

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳಿಗೆ ತಡೆ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಕೊಲೆ, ಹಲ್ಲೆ, ಗಾಂಜಾ ಮಾರಾಟ ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ 5 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ದವನಪ್ಪ, ದಾವಲಸಾಬ್, ಮುಸ್ತಾಕ್, ಅಭಿಷೇಕ್ ಹಾಗೂ ಸಾಹಿಲ್ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸುತ್ತಿದ್ದ ಹಿನ್ನೆಲೆಯಲ್ಲಿ ಹಾಗೂ ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆಯಲ್ಲಿ ಬದಲಾವಣೆ …

Read More »

ಕಾಸರಗೋಡು : ಬ್ಯಾಂಕ್ ಕಾವಲುಗಾರನ ಕೊಲೆ ಪ್ರಕರಣ; ಆರೋಪಿಗಳ ಬಂಧನ

ಕಾಸರಗೋಡು : ಬದಿಯಡ್ಕ ಮಾರ್ಪನಡ್ಕದಲ್ಲಿ ಬ್ಯಾಂಕ್ ಕಾವಲುಗಾರ ಸುರೇಶ್ ( 42) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಂಬ್ಡಾಜೆಯ ಕಿರಣ್ ( 30) ಮತ್ತು ಕರುವತ್ತಡ್ಕದ ಅಖಿಲೇಶ್ ( 25) ಬಂಧಿತ ಆರೋಪಿಗಳು. ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಪಟ್ಟಂತೆ ಉಂಟಾದ ಮಾತಿನ ಚಕಮಕಿ ಕೊಲೆಯಲ್ಲಿ ಕೊನೆಗೊಂಡಿತ್ತು ಎನ್ನಲಾಗಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಕಾವಲುಗಾರರಾಗಿದ್ದ ಮಾರ್ಪನಡ್ಕ ಬೆದ್ರಕೂಡ್ಲುವಿನ ಸುರೇಶ್ ರವರನ್ನು ಬ್ಯಾಂಕ್ ಪರಿಸರದಲ್ಲಿಯೇ …

Read More »

ಪತ್ನಿಯ ಮನೆಯ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪತಿ!

ನವದೆಹಲಿ: ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಪತ್ನಿಯ ಮನೆಯ ಮುಂದೆ ವ್ಯಕ್ತಿಯೊಬ್ಬ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ದೀಪಾಂಶ ಚೌಧರಿ (30) ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ದೀಪಾಂಶ ಮತ್ತು ಪತ್ನಿಯ ನಡುವೆ ಕಳೆದ ಕೆಲವು ತಿಂಗಳಿನಿಂದ ವೈವಾಹಿಕ ಕಲಹ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಪತ್ನಿ ತವರಿನ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯನ್ನು ಮನವೊಲಿಸಲು ಹಲವು ಬಾರಿ …

Read More »

ಅಂಗವಿಕಲರ ಬಸ್ ಪಾಸ್ ದುರ್ಬಳಕೆ – ಟೀಚರಮ್ಮನಿಗೆ ಒಂದು ವರ್ಷ ಜೈಲು!

ಮಂಡ್ಯ: ಅಂಗವಿಕಲರಿಗೆ ಸರ್ಕಾರ ನೀಡುವ ಉಚಿತ ಬಸ್ ಪಾಸ್ ಸೌಲಭ್ಯವನ್ನು ಅಕ್ರಮವಾಗಿ ದುರುಪಯೋಗಪಡಿಸಿಕೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕಿಗೆ ನ್ಯಾಯಾಲಯ 1 ವರ್ಷದ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ. ಮದ್ದೂರು ತಾಲೂಕಿನ ಎರಗನಹಳ್ಳಿ ಗ್ರಾಮದ ಎ. ಶ್ರುತಿ ಎಂಬ ಶಿಕ್ಷಕಿ, ಅಂಗವೈಕಲ್ಯ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಅಂಗವಿಕಲರ ಉಚಿತ ಬಸ್ ಪಾಸ್ ಪಡೆದು ಹಲವು ದಿನಗಳಿಂದ ಉಚಿತ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು …

Read More »

310 ಗ್ರಾಂ ಚಿನ್ನ, 26 ಕೆಜಿ ಬೆಳ್ಳಿ ಆಭರಣ ಜಪ್ತಿ, ಇಬ್ಬರ ಬಂಧನ

ಧಾರವಾಡ ಹಾಗೂ ಹಾವೇರಿ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮನೆ ಹಾಗೂ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 310 ಗ್ರಾಂ ಚಿನ್ನ, 26 ಕೆಜಿ ಬೆಳ್ಳಿ ಆಭರಣ, ಕಳವು ಮಾಡಿದ್ದ ಬೊಲೆರೋ ವಾಹನ ಸೇರಿದಂತೆ ಒಟ್ಟು 1.15 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯ ಕಿರೇಸೂರ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಹಾಗೂ ಹಾನಗಲ್ …

Read More »