BigTv News
May 17, 2026
Breaking News
ಬೆಂಗಳೂರು: ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಅಕ್ರಮ ಜಾನುವಾರು ಸಾಗಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹಾವೇರಿಯಿಂದ ಮಂಗಳೂರು ಮಾರ್ಗವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು, ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ಕಂಟೇನರ್ ಟ್ರಕ್ ಒಂದರಲ್ಲಿ ಬರೋಬ್ಬರಿ 27 ಜಾನುವಾರುಗಳನ್ನು ಅತ್ಯಂತ ಹಿಂಸಾತ್ಮಕವಾಗಿ, ಉಸಿರುಗಟ್ಟುವ ರೀತಿಯಲ್ಲಿ ಕಟ್ಟಿ ಹಾಕಿ …
Read More »
BigTv News
May 17, 2026
Breaking News
ಡ್ರೋನ್ ದಾಳಿಯಿಂದಾಗಿ ಅಬುದಾಭಿಯಲ್ಲಿರುವ ಅಣುಸ್ಥಾವರದ ಸಮೀಪ ಬೆಂಕಿ ಕಾಣಿಸಿಕೊಂಡಿದೆ ಎಂದು ಯುಎಇ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಸೋಸಿಯೇಟ್ ಪ್ರೆಸ್ ವರದಿ ಮಾಡಿದೆ. ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಿಸಿ, ಇರಾನ್‌ಗೆ ಎಚ್ಚರಿಕೆ ನೀಡಿದ ಟ್ರಂಪ್ ಅಲ್ ಧ್ರಫ್ರಾದಲ್ಲಿರುವ ಬರಕ ಅಣುಸ್ಥಾವರದ ಸಮೀಪ ಇರುವ ಹೊರಾಂಗಣ ವಿದ್ಯುತ್ ಜನರೇಟರ್ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಬುಧಾಬಿ ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ವಿಕಿರಣ ಸೋರಿಕೆಯ ಅಪಾಯವಿಲ್ಲ ಎಂದೂ ಅದು …
Read More »
BigTv News
May 17, 2026
Breaking News
ರಾಮನಗರ: ತಾಲೂಕಿನ ಲಕ್ಕೋಜನಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ಮದ್ಯಪಾನ ಮಾಡಿ, ಇಸ್ಪೀಟ್ ಆಡುತ್ತಿದ್ದ ರೌಡಿಶೀಟರ್ ಹಾಗೂ ಆತನ ಮೂವರು ಸಹಚರರನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಲಕ್ಕೋಜನಹಳ್ಳಿ ರೌಡಿಶೀಟರ್ ಹನುಮ ಹಾಗೂ ಸಹಚರರಾದ ಕೌಶಿಕ್, ಭಾನುಪ್ರಕಾಶ್, ಅನುಕುಮಾರ್ ಬಂಧಿತರು. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಶಾಲೆ ಬಂದ್ ಆಗಿದೆ. ಈ ವೇಳೆ ಆರೋಪಿಗಳು ಶಾಲಾ ಆವರಣದಲ್ಲಿನ ತೆರೆದ ರಂಗಮಂದಿರದಲ್ಲಿ ಮದ್ಯ ಸೇವಿಸುತ್ತ ಇಸ್ಪೀಟ್ ಆಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳಿಯರೊಬ್ಬರು …
Read More »
BigTv News
May 17, 2026
Breaking News
ಕಾರವಾರ: ತಾಲ್ಲೂಕಿನ ಅಸ್ನೋಟಿಯಲ್ಲಿ ಕಟ್ಟಡ ಕಾರ್ಮಿಕರೊಬ್ಬರನ್ನು ಶನಿವಾರ ತಡರಾತ್ರಿ ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಕಾರ್ಮಿಕ ದೆವೇಶ ರಾಥೋಡ (28) ಹತ್ಯೆಯಾದವ. ಆತನೊಂದಿಗೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ. ‘ಬಾಗಲಕೋಟೆ ಜಿಲ್ಲೆ ಶಿರೂರು ಹಳ್ಳಿಯ ಶಿವಾನಂದ ನಾಯ್ಕರ (45) ಮತ್ತು ಹಾವೇರಿ ಜಿಲ್ಲೆ ಸವಣೂರಿನ ಮರಿಯಪ್ಪಾ ಹರಿಜನ (43) ಎಂಬುವವರನ್ನು ಬಂಧಿಸಲಾಗಿದೆ. ಮದ್ಯದ …
Read More »
BigTv News
May 17, 2026
Breaking News
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 7.12 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್‌ನಿಂದ ಪ್ರತ್ಯೇಕ ವಿಮಾನಗಳಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರ ನಡವಳಿಕೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅಧಿಕಾರಿಗಳು ತಕ್ಷಣ ಅವರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಆರೋಪಿಗಳ ಬ್ಯಾಗ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅಂತರರಾಷ್ಟ್ರೀಯ ಡ್ರಗ್ಸ್ ಪೆಡ್ಲಿಂಗ್ ಜಾಲ ಬಯಲಾಗಿದೆ. ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ 20.7 …
Read More »
BigTv News
May 17, 2026
Breaking News
ನಿರಾಶ್ರಿತರ ಆಶ್ರಮದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಪ್ರಜೆಗಳು ಪರಾರಿ ಆಗಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ. ನೈಜೀರಿಯಾ ಉಗಾಂಡಾ ಕಿನ್ಯಾ ಬಾಂಗ್ಲಾದ ಅಕ್ರಮ ವಲಸಿಗರು ಎಸ್ಕೇಪ್ ಆಗಿದ್ದಾರೆ. ನಾಲ್ವರು ಮಹಿಳೆಯರು ಪರಾರಿಯಾಗಿದ್ದಾರೆ. ತೊಪಿಷ್ಟ, ನಗವ, ಸಫೀನಾ, ಪಿತಿನ ಎನ್ನುವರು ಪರಾರಿಯಾಗಿದ್ದಾರೆ. ಅಕ್ರಮ ವಲಸಿಗರು ಈ ಕಟ್ಟಡದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ. ಪೊಲೀಸರ ಬಂದೋಬಸ್ತ ನಡುವೆ ಪರಾರಿಯಾಗಿದ್ದಾರೆ. ಅಕ್ರಮ ವಲಸಿಗರನ್ನು FRRO ಜೈಲಿನಲ್ಲಿ ಜಾಗ ಇಲ್ಲದ ಕಾರಣ …
Read More »
BigTv News
May 17, 2026
Breaking News
ತುಮಕೂರು: ಇಲ್ಲಿನ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿಯಲ್ಲಿ ತಂದೆಯೊಬ್ಬ ತನ್ನ 17 ವರ್ಷದ ಮಗಳು ಮೇಘನಾಳನ್ನು ಉಸಿರುಗಟ್ಟಿಸಿ ಕೊಂದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಯಿಯ ಕಡೆಯ ನೆಂಟರ ಹುಡುಗನನ್ನು ಯುವತಿ ಪ್ರೀತಿಸುತ್ತಿದ್ದದ್ದು ತಿಮ್ಮರಾಯಪ್ಪನ (48) ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.ಈ ಪ್ರೇಮ ವಿಚಾರವಾಗಿ ಮನೆಯಲ್ಲಿ ಹಲವು ಬಾರಿ ದೊಡ್ಡ ಜಗಳಗಳಾಗಿದ್ದವು. ಕಳೆದ ಏಪ್ರಿಲ್ 16 ರಂದೇ ಮಗಳನ್ನು ಹತ್ಯೆಗೈದಿದ್ದ ಈತ, ಸಾಕ್ಷಿ ನಾಶಕ್ಕಾಗಿ ಜಮೀನಿನ ಬಳಿಯ ಸರ್ಕಾರಿ ಹಳ್ಳದಲ್ಲಿ ಶವವನ್ನು ಹೂತುಹಾಕಿದ್ದನು. …
Read More »
BigTv News
May 17, 2026
Breaking News
ಕುಂದಾಪುರ: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ಮಧ್ಯೆ ಕೊಲ್ಲೂರು ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಹಲವು ಮಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ. ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ನಾಗೋಡಿ ಕಡೆಯತ್ತ ಸಾಗುತ್ತಿದ್ದ ಟೆಂಪೋ ಮಧ್ಯೆ ಈ ಅಪಘಾತ ನಡೆದಿದೆ. ಮೃತರು ಹಾಗೂ ಗಾಯಾಳುಗಳು ಕೇರಳ ಮೂಲದವರೆಂದು ಸದ್ಯ ತಿಳಿದುಬಂದಿದೆ. ಕೊಲ್ಲೂರು ಠಾಣೆ ಪಿಎಸ್‌ಐಗಳಾದ ವಿನಯ್ …
Read More »
BigTv News
May 17, 2026
Breaking News
ಕೆ.ಆರ್.ಸಾಗರ: ಮೊಗರಹಳ್ಳಿ (ಮಂಟಿ) ಹೊರಹೊಲಯದಲ್ಲಿರುವ ಕೈಗಾರಿಕಾ ಪ್ರದೇಶ ಸಮೀಪ ಅಪಾರ ಪ್ರಮಾಣದಲ್ಲಿ ಕೈಗಾರಿಕಾ ತ್ಯಾಜ್ಯ ಸುರಿಯುವುದರ ಜತೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ರಾತ್ರಿ ವೇಳೆ ತ್ಯಾಜ್ಯಕ್ಕೆ ಬೆಂಕಿ ಹಚ್ಚಲಾಗುತ್ತಿರುವುದರಿಂದ ದಟ್ಟವಾದ ವಿಷಕಾರಿ ಹೊಗೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಪ್ರದೇಶಗಳಿಗೆ ವ್ಯಾಪಿಸುತ್ತಿದೆ. ಪರಿಣಾಮ ಜನರು ಉಸಿರಾಟದ ತೊಂದರೆ, ಕಣ್ಣುರಿ, ಗಂಟಲು ಉರಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಕೈಗಾರಿಕಾ ತ್ಯಾಜ್ಯ ದಹನದಿಂದ …
Read More »
BigTv News
May 17, 2026
Breaking News
ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ತಡೆದು 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಹೊರವಲಯದಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿಯ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ದರೋಡೆ ನಡೆಸಿದೆ. ಮೈಸೂರು ಖಾಸಗಿ ಕಂಪನಿಯ ಉದ್ಯೋಗಿ ಗೋವಿಂದರಾಜು ಐ20 ಕಾರ್ ನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿದ್ದಾರೆ. ಅವರು ತಮ್ಮ ಕಂಪನಿಗೆ ಸೇರಿದ ಹಣವನ್ನು ಮೈಸೂರಿನಿಂದ ಬೆಂಗಳೂರಿಗೆ ತೆಗೆದುಕೊಂಡು ತೆರಳುತ್ತಿದ್ದರು. …
Read More »