Breaking News

Breaking News

ಮಂಗಳೂರು| ಮಾದಕ ವಸ್ತು ಸೇವನೆ ಪ್ರಕರಣ: 7 ಮಂದಿ ಸೆರೆ

ಮಂಗಳೂರು: ನಗರದ ವಿವಿಧ ಭಾಗಗಳಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ, ಕಾವೂರು, ಪಣಂಬೂರು ಹಾಗೂ ಪಾಂಡೇಶ್ವರ ಠಾಣೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಪ್ಪಿನಮೊಗರು ಕಡೇಕಾರ್ ನೇತ್ರಾವತಿ ಸೇತುವೆ ಕೆಳಭಾಗದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆಯ ವ್ಯಕ್ತಿಯೊಬ್ಬನನ್ನು ಕಾವೂರು ಪೊಲೀಸರು ವಿಚಾರಣೆ …

Read More »

ಉಡುಪಿ| 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಅಭಿಜಿತ್ ಸೆರೆ

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಆರು ವರ್ಷಗಳಿಂದ ಉಡುಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮುಲ್ಕಿಯ ಅಭಿಜಿತ್(34) ಬಂಧಿತ ಆರೋಪಿ. ಈತ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಕಾರ್ಕಳ ಡಿವೈಎಸ್ಪಿ ಮತ್ತು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣಾ ಉಪನಿರೀಕ್ಷಕರಾದ ತೇಜಸ್ವಿ ಮತ್ತು ಶುಭಕರ ನೇತೃತ್ವದಲ್ಲಿ ಸಿಬ್ಬಂದಿ ಮೊಹಮ್ಮದ್ ರಫೀಕ್, ರಾಘು ಅವರು ಮೇ …

Read More »

ಚಾಕು ತೋರಿಸಿ ಅರಣ್ಯಕ್ಕೆ ಕರೆದೊಯ್ದು ದರೋಡೆ

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಚಿನ್ನಾಭರಣ ದೋಚಿ, ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿ ನಗರದ ವಿವೇಕ್‌ (22) ಮತ್ತು ನಿಖೀಲ್‌ (19) ಬಂಧಿತರು. 6 ಲಕ್ಷ ರೂ. ಮೌಲ್ಯದ 47 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬಿ ಚನ್ನಸಂದ್ರ ನಿವಾಸಿ ಅಶೋಕ್‌ ಎಂಬುವವರು ಕೆಲಸದ ನಿಮಿತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ಕೆ.ಆರ್‌.ಪುರ …

Read More »

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 10 ಲಕ್ಷ ರೂ ಮೌಲ್ಯದ 20 ಕೆಜಿ, 640 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಟಾಟಾ ಇಂಡಿಗೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸ್‌ …

Read More »

ದಾಖಲೆ ಇಲ್ಲದೆ ದೇಶ ಪ್ರವೇಶ: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಾಲ್ವರು ಬಾಂಗ್ಲಾದೇಶಿಗರ ಬಂಧನ

ಹುಬ್ಬಳ್ಳಿ: ಕಾನೂನು ಬಾಹಿರವಾಗಿ ಭಾರತ ಪ್ರವೇಶಿಸಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವೇಳೆ ನಡೆಸಿದ ತಪಾಸಣೆಯಲ್ಲಿ ಇವರು ಸಿಕ್ಕಿಬಿದ್ದಿದ್ದಾರೆ. ಬಂಧಿತರು ಯಾವುದೇ ಮಾನ್ಯ ಗುರುತಿನ ದಾಖಲೆಗಳನ್ನು ಹೊಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಖಲೆಗಳಿಲ್ಲದೇ ರೈಲಿನಲ್ಲಿ ಪ್ರಯಾಣಿಸಿ ಹುಬ್ಬಳ್ಳಿವರೆಗೆ ಬಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ಹುಬ್ಬಳ್ಳಿ-ಗದಗ …

Read More »

ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಯಾನೆ ಇಬ್ರಾಹಿಂ ಮತ್ತು ಆರಿಫ್ ಬಂಧಿತ ಆರೋಪಿಗಳು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರಂದು ಬೆಳಿಗ್ಗೆ ಅಕ್ರಮವಾಗಿ ಗೋವು ಸಾಗಿಸುವಾಗ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಬೆಳುವಾಯಿಂದ ಮೂರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಝಾ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಪಿಎಸ್‌ಐ ಕೃಷ್ಣಪ್ಪ …

Read More »

ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ

ಕಡಬ: ನೆರೆಮನೆಯ ಮನೆಗೆ ಟಿವಿ ನೋಡಲು ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಡಬ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಲಂಕಾರು ಗ್ರಾಮದ ಜಗದೀಶ ಕುಂಬಾರ @ ಜಗ್ಗ (43) ಎಂದು ಗುರುತಿಸಲಾಗಿದೆ. 14 ವರ್ಷದ ಬಾಲಕಿ ನೆರೆಹೊರೆಯ ಮನೆಗೆ ಟಿವಿ ವೀಕ್ಷಣೆಗೆ ತೆರಳಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ, ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ …

Read More »

ಕದ್ದ ಬೈಕ್‌ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಬೆಂಗಳೂರು: ಕದ್ದ ಬೈಕ್‌ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಶ್ರೀರಾಂಪುರ ಠಾಣೆ ಪೊಲೀಸರು 10 ದ್ವಿಚಕ್ರವಾಹನ ಜಪ್ತಿ ಮಾಡಿದ್ದಾರೆ. ತಮಿಳುನಾಡು ಮೂಲದ ಸಂಗಂ ಮುತ್ತು ಹಾಗೂ ರಂಜಿತ್‌ ಕುಮಾರ್‌ಬಂಧಿತರು. ಆರೋ ಪಿಗಳಿಂದ 10 ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಬ್ಬರೂ, ನಗರದ ವಿವಿಧೆಡೆ ಸುತ್ತಾಡಿ ದ್ವಿಚಕ್ರವಾಹನಗಳ ಹ್ಯಾಂಡ್‌ ಲಾಕ್‌ ಮುರಿದು ಕದಿಯುತ್ತಿದ್ದರು. ನಂತರ ಕದ್ದ ದ್ವಿಚಕ್ರವಾಹನಗಳನ್ನು ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದರು. ಇನ್ನು ಈ …

Read More »

ಸಾಧು ವೇಷದಲ್ಲಿ ಬಂದು ಸಮ್ಮೋಹನ: ಅಂಗಡಿ ಮಾಲೀಕರಿಂದ ಹಣ, ಚಿನ್ನ ದೋಚಿದ ಖದೀಮರು

ಸಿಂಧನೂರು ನಗರದಲ್ಲಿ ಸಾಧು-ಸಂತರ ವೇಷದಲ್ಲಿ ಬಂದ ಖದೀಮರ ಗ್ಯಾಂಗ್, ಅಂಗಡಿ ಮಾಲೀಕರನ್ನು ಸಮ್ಮೋಹನಗೊಳಿಸಿ ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ನಗರದ ಸಾಯಿ ಮೆಡಿಕಲ್ಸ್ ಅಂಗಡಿಗೆ ಬಂದ ಸಾಧುವೊಬ್ಬನು ಬಿಸಿಲಿನಿಂದ ಬಳಲಿದ್ದೇನೆ ಎಂದು ಹೇಳಿ ನೀರು ಕೇಳಿದ್ದಾನೆ. ಅಂಗಡಿ ಮಾಲೀಕ ವಿಷ್ಣುದತ್ತು ಅವರು ಮಾನವೀಯತೆಯಿಂದ ತಣ್ಣನೆಯ ನೀರು ಕೊಟ್ಟಿದ್ದಾರೆ. ನಂತರ ಸಾಧು ಆಶೀರ್ವಾದ ಮಾಡುವ ನಾಟಕವಾಡಿ, ಎರಡು ಹೂವುಗಳು ಮತ್ತು ಒಂದು ಪೊಟ್ಟಣವನ್ನು ನೀಡಿದ್ದಾರೆ. ಹೂವಿನ ವಾಸನೆ …

Read More »

ಶ್ರೀಮಂತ ಯುವಕರೇ ಇವರ ಟಾರ್ಗೆಟ್: ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅರೆಸ್ಟ್

ದಾವಣಗೆರೆ: ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತ ಯುವಕರನ್ನು ಪರಿಚಯಿಸಿಕೊಂಡು ಅವರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆರೋಪಿ ಯುವತಿಯರು, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದರು. ಪ್ರಕರಣ ಸಂಬಂಧ ಪಂಚಮಿ (34), ಜಗದೀಶ (35), ಗಂಗಾ ಮಲ್ಲೇಶ್ ನಾಯ್ಕ (25) ಹಾಗೂ ವೆಂಕಟೇಶ್ (30) ಎಂಬವವರನ್ನು ಬಂಧಿಸಲಾಗಿದೆ. …

Read More »