Breaking News

Breaking News

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಸಜೆ, 2.5 ಲಕ್ಷ ರೂ. ದಂಡ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 2.5 ಲಕ್ಷ ರೂ. ದಂಡ ವಿಧಿಸಲಾಗಿದೆ. 2022ನೇ ಸಾಲಿನಲ್ಲಿ ಭದ್ರಾವತಿಯ ವಾಸಿ 22 ವರ್ಷದ ಯುವಕನು, 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಜೀತೇಂದ್ರಕುಮಾರ್ ದಯಾಮಾ …

Read More »

ಪೊಲೀಸರ ಮೇಲೆ ಹಲ್ಲೆ: ಬಂಧನ

ಪಾವಗಡ: ಚಿಕ್ಕಬಳ್ಳಾಪುರ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ಪಟ್ಟಣದ ಆದರ್ಶ ನಗರದ ಯಶ್ವಂತ್ (21)ನನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಾಗಾರ್ಜುನ ಕಾಲೇಜು ಬಳಿ ದ್ವಿಚಕ್ರ ವಾಹನಕ್ಕೆ ಹೆಚ್ಚು ಶಬ್ಧ ಬರುವ ಸೈಲೆನ್ಸರ್‌ ಅನ್ನು ಅಳವಡಿಸಕೊಂಡು ಶಬ್ಧ ಮಾಡುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು, ಪಿಸಿ ಗಂಗರಾಜು ಅವರ ಮೇಲೆ 13ಕ್ಕೂ ಹೆಚ್ಚು ಮಂದಿ ಯುವಕರ ತಂಡ …

Read More »

ಮೈಸೂರು: 30 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ

ಮೈಸೂರು: ರೌಡಿಗಳ ಚಟುವಟಿಕೆ ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸರು, 30 ರೌಡಿಗಳ ಮನೆ ಮೇಲೆ ಶನಿವಾರ ನಸುಕಿನಲ್ಲಿ ‌ದಾಳಿ‌ ನಡೆಸಿದರು. ಕೊಲೆ, ಕೊಲೆಗೆ ಯತ್ನ, ಸುಲಿಗೆ, ಹಲ್ಲೆ ಹಾಗೂ ಇತರೆ ಪ್ರಕರಣಗಳಲ್ಲಿ ‌ಭಾಗಿಯಾಗಿದ್ದವರು ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗುವುದನ್ನು ತಪ್ಪಿಸಲು ಹಾಗೂ ಎಚ್ಚರಿಕೆ ನೀಡಲು ಕಾರ್ಯಾಚಾರಣೆ ನಡೆಸಿದರು. ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಬೆಳಿಗ್ಗೆ 5ರಿಂದ 8 ಗಂಟೆವರೆಗೆ ಕೃಷ್ಣರಾಜ, ವಿಜಯನಗರ, ನರಸಿಂಹರಾಜ ಮತ್ತು ದೇವರಾಜ ಉಪ …

Read More »

ಮೈಸೂರು: ಗಾಂಜಾ ಸೇವನೆ ಪ್ರಕರಣದ ಆರೋಪಿ ಆತ್ಮಹತ್ಯೆ

ಮೈಸೂರು: ಗಾಂಜಾ ಸೇವನೆ ಪ್ರಕರಣದ ಆರೋಪಿಯಾಗಿದ್ದ ರಾಮಕೃಷ್ಣ ನಗರದ ನಿವಾಸಿ ಎಂ.ಮಧು (22) ಎಂಬುವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಪೋಷಕರು ದೂರು ನೀಡಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶವ ಪರೀಕ್ಷೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕುವೆಂಪುನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಮೇ 6ರ ರಾತ್ರಿ 9 ಗಂಟೆಗೆ ರಾಮಕೃಷ್ಣನಗರದ ಕೆ ಬ್ಲಾಕ್‌ ಆಲದಮರದ …

Read More »

ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

ಹಾವೇರಿ ಮತ್ತು ಕೋಲಾರದಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಮನೆಯಲ್ಲಿ ಮಲಗಿದ್ದವನು ಕೊಲೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ ಬಸವನಬೀದಿಯಲ್ಲಿ ಒಂದು ಘಟನೆ ನಡೆದಿದ್ದು ಮಹಾಲಿಂಗ ಜಯ ಬಸವರಾಜ್ ಮಳವಳ್ಳಿ (41) ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಜಯ ಬಸವರಾಜ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಘಟನೆ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡು ವಿದೇಶದಲ್ಲಿ ನೆಲೆಸಿದ್ದ ಆರೋಪಿ, ಕರಿಯಂಗಳ ನಿವಾಸಿ ದುನಿಯಾ ಶರೀಫ್ ಯಾನೆ ಮಹಮ್ಮದ್ ಶರೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಮೇ 5ರಂದು ವಿದೇಶದಿಂದ ಹಿಂದಿರುಗುತ್ತಿದ್ದ ವೇಳೆ ಆತನನ್ನು ಮುಂಬೈ ಸಹರಾ ಠಾಣಾ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿರುವುದಾಗಿ ತಿಳಿಸಿದ್ದಾರೆ.

Read More »

ಪ್ರಕರಣ ಇತ್ಯರ್ಥಕ್ಕೆ ಲಂಚ: ಗುರಮಠಕಲ್ ಪಿಎಸ್ ಐ ಲೋಕಾಯುಕ್ತ ಅಧಿಕಾರಿಗಳ ಬಲೆಗೆ

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನ ವಿಚಾರಣೆ ನಡೆಸಿದ ರೈಲ್ವೆ ಪೊಲೀಸರಿಗೆ ಶಾಕ್ ಆಗಿದ್ದು, ವಿಚಾರಣೆ ವೇಳೆ ಯುವಕ ಕುಖ್ಯಾತ ದರೋಡೆಕೋರನಾಗಿದ್ದು, ಇದೀಗ ಆತನನ್ನು ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು ₹13.06 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಈತನ ಬ್ಯಾಗ್ ತಪಾಸಣೆ ನಡೆಸಿದಾಗ, ಯಾವುದೇ ದಾಖಲೆಗಳಿಲ್ಲದ 93.5 ಗ್ರಾಂ …

Read More »

ಪ್ರಕರಣ ಇತ್ಯರ್ಥಕ್ಕೆ ಲಂಚ: ಗುರಮಠಕಲ್ ಪಿಎಸ್ ಐ ಲೋಕಾಯುಕ್ತ ಅಧಿಕಾರಿಗಳ ಬಲೆಗೆ

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನ ವಿಚಾರಣೆ ನಡೆಸಿದ ರೈಲ್ವೆ ಪೊಲೀಸರಿಗೆ ಶಾಕ್ ಆಗಿದ್ದು, ವಿಚಾರಣೆ ವೇಳೆ ಯುವಕ ಕುಖ್ಯಾತ ದರೋಡೆಕೋರನಾಗಿದ್ದು, ಇದೀಗ ಆತನನ್ನು ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು ₹13.06 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಈತನ ಬ್ಯಾಗ್ ತಪಾಸಣೆ ನಡೆಸಿದಾಗ, ಯಾವುದೇ ದಾಖಲೆಗಳಿಲ್ಲದ 93.5 ಗ್ರಾಂ …

Read More »

ಬೆಂಗಳೂರು ಹೋಟೆಲ್ ನಲ್ಲಿ ಅಗ್ನಿ ಅವಘಡ: ಓರ್ವ ಸಾವು, ನಾಲ್ವರಿಗೆ ಗಾಯ

ಬೆಂಗಳೂರಿನ ನಾಗರಬಾವಿ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಆವರಿಸಿ ಉಸಿರುಗಟ್ಟಿ ಒಬ್ಬರು ಮೃತಪಟ್ಟಿದ್ದಾರೆ. ಅಗ್ನಿ ಅವಘಡ ಕಾಣಿಸಿಕೊಂಡ ಹೋಟೆಲ್ ನಲ್ಲಿ ಐದು ಜನ ಸಿಲುಕಿದ್ದರು. ಭೀಮ, ಶಿವಾನಂದ, ಸತೀಶ್, ರಾಜಕುಮಾರ್ ಸೇರಿ ಐವರು ಹೊಗೆಯಲ್ಲಿ ಸಿಲುಕಿದ್ದರು. ಐವರನ್ನು ರಕ್ಷಣೆ ಮಾಡಿ ಅಗ್ನಿಶಾಮಕ ದಳ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ 45 ವರ್ಷದ ರಾಜಕುಮಾರ್ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ …

Read More »

ಮೂಡುಬಿದಿರೆ: ಬೆಳುವಾಯಿ ಬಳಿ ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ

ಮೂಡುಬಿದಿರೆ: ಇಲ್ಲಿಗೆ ಸಮೀಪದ ಬೆಳುವಾಯಿ ಬಳಿಯ ಬನ್ನಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಶನಿವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಾಗುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಮಧ್ಯಾಹ್ನ ನಂತರ ಹೆದ್ದಾರಿಯನ್ನು ಏಕಮುಖ ಸಂಚಾರಕ್ಕೆ ಬದಲಾಯಿಸಲಾಗಿತ್ತು. ಪಲ್ಟಿ ಹೊಡೆದ ಬಸ್ ಹತ್ತಿರದಲ್ಲಿದ್ದ ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಿತೇಶ್ ಎಂಬವರಿಗೆ ಗಂಭೀರ ಗಾಯವಾಗಿದೆ. ಇನ್ನು …

Read More »