ಮದ್ದೂರು: ಚನ್ನೇಗೌಡನದೊಡ್ಡಿ ಗ್ರಾಮದ ಬಳಿ ಬುಧವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜರಾಣಿ ಎಕ್ಸ್‌ಪ್ರೆಸ್ ರೈಲಿನ ಚೈನ್‌ಲಿಂಕ್ ಎಳೆದ ಕಿಡಿಗೇಡಿಗಳನ್ನು ಪ್ರಶ್ನಿಸಿದ ಗೇಟ್‌ಮ್ಯಾನ್‌ಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ಸ್ಥಳೀಯರು ದುಷ್ಕರ್ಮಿಗಳನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರದ ಎಚ್‌ಕೆವಿ ನಗರದ ಚನ್ನೇಗೌಡನದೊಡ್ಡಿ ಗ್ರಾಮದ ರೈಲ್ವೆ ಗೇಟ್‌ಮ್ಯಾನ್ ಕುಮಾರ್(36) ಚಾಕು ಇರಿಕ್ಕೊಳಗಾದವರು. ಅವರಿಗೆ ಮದ್ದೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





