Breaking News

Breaking News

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಆರೋಪ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಹಾಸನ: ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಿಯಕರ ಸೂರ್ಯ (26) ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿ ಕೇರಳ ಮೂಲದ ನಿಷ್ಮಾ (26) ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಇಬ್ಬರೂ ಬೆಂಗಳೂರಿನ ವೈಟ್‌ಬರ್ಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿಂದ ಲಿವ್‌-ಇನ್ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 24ರಂದು ಸೂರ್ಯ ಮೊಬೈಲ್ ಫೋನ್ ಬಿಟ್ಟು ನಾಪತ್ತೆಯಾಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ನಿಷ್ಮಾ ಆರೋಪಿಸಿದ್ದು, ಸೂರ್ಯನ ಪೋಷಕರು ಹಾಗೂ ಸ್ನೇಹಿತ …

Read More »

ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದ ಮಂಜುನಾಥ (33) ಎಂಬಾತನಿಗೆ ಚಿತ್ರದುರ್ಗದ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ. 2024ರ ಜನವರಿ 15ರಂದು ಬಾಲಕಿಯನ್ನು ಅಪಹರಿಸಿ ಮಾಳೇನಹಳ್ಳಿ ಗ್ರಾಮದ ಬಳಿ ಅತ್ಯಾಚಾರ ಎಸಗಿದ್ದ ಆರೋಪದಡಿ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ …

Read More »

ಕುಡಿದು ಗಲಾಟೆ, ಪೊಲೀಸ್ ಮೇಲೆ ಹಲ್ಲೆ ಆರೋಪ: ಐಎಎಸ್ ಅಧಿಕಾರಿ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕುಡಿದು ಗಲಾಟೆ ಮಾಡಿದ ಆರೋಪದಡಿ ಐಎಎಸ್ ಅಧಿಕಾರಿ ವಿಕಾಸ್ ಮರ್ಮಠ್ ಸೇರಿದಂತೆ ಐವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಕಾಸ್ ಅವರ ಸ್ನೇಹಿತರಾದ ನಿತೇಶ್, ಅಭಯ್, ಉದಯ್ ಸಿಂಗ್ ಹಾಗೂ ರೋಷನ್ ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ರಾತ್ರಿ 1.30ರ ಸುಮಾರಿಗೆ ಪಬ್ ಪರಿಶೀಲನೆಗೆ ತೆರಳಿದ್ದ ಸಿಸಿಬಿ ಪೊಲೀಸರ ಬಳಿ ಗುರುತಿನ ಚೀಟಿ ಕೇಳಿದಾಗ ವಿಕಾಸ್ ಮರ್ಮಠ್ ಆಕ್ಷೇಪ ವ್ಯಕ್ತಪಡಿಸಿ, ಕರ್ತವ್ಯದಲ್ಲಿದ್ದ ಇನ್ಸ್‌ಪೆಕ್ಟರ್‌ಗೆ ನಿಂದಿಸಿ ಕಪಾಳಕ್ಕೆ …

Read More »

ಮಂಗಳೂರು : ಅನೈತಿಕ ಸಂಬಂಧ ಶಂಕೆ ಹಿನ್ನಲೆ, ಚೂರಿಯಿಂದ ಇರಿದು ಪತ್ನಿಯ ಭೀಕರ ಕೊಲೆ, ಪತಿ ಅರೆಸ್ಟ್!

ಮಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸೋನಾಲಿ (30) ಕೊಲೆಯಾದ ಮಹಿಳೆ. ಆರೋಪಿ ಪತಿ ಶಿವಲಿಂಗಪ್ಪ (40)ನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 12ರಂದು ಬಾಡಿಗೆ ಮನೆಯಲ್ಲಿ ದಂಪತಿ ನಡುವೆ ಅನೈತಿಕ ಸಂಬಂಧದ ಶಂಕೆಯಿಂದ ಜಗಳ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಶಿವಲಿಂಗಪ್ಪ ಪತ್ನಿಯನ್ನು ಚೂರಿಯಿಂದ …

Read More »

ಮೊಬೈಲ್ ಗಲಾಟೆಯಿಂದ ವ್ಯಕ್ತಿ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮೊಬೈಲ್ ವಾಪಸ್ ನೀಡದೆ ಹಾಳು ಮಾಡಿದ್ದ ದ್ವೇಷದಿಂದ ವ್ಯಕ್ತಿಯನ್ನು ಮರದ ಸೊಂಟೆಯಿಂದ ಹೊಡೆದು ಕೊಲೆ ಮಾಡಿದ ಧರ್ಮರಾಜ್ ಸುವರ್ಣ (50) ಎಂಬಾತನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿದೆ. 2024ರ ಸೆಪ್ಟೆಂಬರ್ 21ರಂದು ತೋಟ ಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಭಾಗದ ಸಮುದ್ರ ಕಿನಾರೆ ಬಳಿ ಬಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ …

Read More »

ದೇವಸ್ಥಾನಗಳೇ ಟಾರ್ಗೆಟ್! ವಿಗ್ರಹ ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್

ಬೆಂಗಳೂರು: ದೇವಸ್ಥಾನಗಳಲ್ಲಿನ ದೇವರ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ, ಆಂಜನೇಯ ಹಾಗೂ ಲಕ್ಷ್ಮೀ ನಾಗರ ಸೇರಿದಂತೆ ನಾಲ್ಕು ವಿಗ್ರಹಗಳನ್ನು ಕಳವು ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ ವಿಗ್ರಹಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದೇವಸ್ಥಾನಗಳ ವಿಗ್ರಹಗಳಲ್ಲದೆ, ನಿರ್ಮಾಣ ಹಂತದ ಕಟ್ಟಡಗಳಲ್ಲಿನ ಯಂತ್ರೋಪಕರಣಗಳನ್ನೂ ಆರೋಪಿಗಳು ಕದ್ದಿರುವ ಆರೋಪವಿದೆ. …

Read More »

ಮಂಡ್ಯ: ‘ಮನ್‌ಮುಲ್‌’ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ

ಮಂಡ್ಯ: ಮನ್‌ಮುಲ್‌ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕೇರಳ ಮೂಲದ ಅನಸ್‌, ತೂಬಿನಕೆರೆಯ ವಿಜೇಶ್‌ ಮತ್ತು ಮದ್ದೂರಿನ ಅರ್ಪಿತ್‌ ಬಂಧಿತರು. ವಿಜೇಶ್‌ ಮತ್ತು ಅನಸ್‌ ತೂಬಿನಕೆರೆಯಲ್ಲಿ ಎ.ವಿ. ಟ್ರೇಡರ್ಸ್‌ ಹೆಸರಿನಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸುತ್ತಿದ್ದರು. ಪ್ರಕರಣದ ಪ್ರಮುಖ ಆರೋಪಿ ಪ್ರದೀಪ್‌ಕುಮಾರ್‌ ಜಾಧವ್‌ ಕಡಿಮೆ ದರದಲ್ಲಿ ಹಾಲಿನ ಪುಡಿ ನೀಡುವ ಆಮಿಷವೊಡ್ಡಿದ್ದರಿಂದ, ಕಳೆದ ಎರಡು ವರ್ಷಗಳಿಂದ ಟನ್‌ಗಟ್ಟಲೆ ಹಾಲಿನ …

Read More »

ಕಷ್ಟ ಹೇಳಿಕೊಂಡು ಬಂದ ಮಹಿಳೆ ಜತೆ ಅನುಚಿತ ವರ್ತನೆ, ಅತ್ಯಾಚಾರ: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಅತ್ಯಾಚಾರ ಆರೋಪದಡಿ ನರಸಿಂಹರಾಜಪುರ ತಾಲೂಕಿನ ಮೇಕನಹಡ್ಲು ಗ್ರಾಮದ ಎಸ್. ಸತೀಶ್ ಕುಮಾರ್ ಅಲಿಯಾಸ್ ಸತೀಶ್ ಪಾತ್ರಿ ಎಂಬಾತನನ್ನು ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತನ್ನ ಮೈಮೇಲೆ ಗಣ ಬರುತ್ತದೆ, ಜನರ ಕಷ್ಟಗಳನ್ನು ಪರಿಹರಿಸುತ್ತೇನೆ ಎಂದು ನಂಬಿಸುತ್ತಿದ್ದ ಸತೀಶ್ ಪಾತ್ರಿ, ಕಷ್ಟ ಹೇಳಿಕೊಳ್ಳಲು ಬರುತ್ತಿದ್ದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಈ ಹಿಂದೆ ನರಸಿಂಹರಾಜಪುರ ಠಾಣೆಯಲ್ಲೂ ಈತನ …

Read More »

ಉಡುಪಿ: ದನ ಕಳವು ಮಾಡಿ ಕಸಾಯಿಖಾನೆಗೆ ಸಾಗಿಸಲು ಯತ್ನ: ಇಬ್ಬರ ಬಂಧನ

ಉಡುಪಿ: ಕಾರ್ಕಳ ತಾಲ್ಲೂಕಿನ ಕುಕ್ಕುಜೆ ಸಮೀಪ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಅಬ್ದುಲ್ ಸತ್ತರ್ (54) ಮತ್ತು ಯೋಗೀಶ ನಾಯ್ಕ್ (49) ಎಂಬುವವರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಅ. 9ರಂದು ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಗೂಡ್ಸ್‌ ಟೆಂಪೊವನ್ನು ತಡೆದು ಪರಿಶೀಲಿಸಿದಾಗ ನಾಲ್ಕು ಜಾನುವಾರುಗಳು ಪತ್ತೆಯಾಗಿವೆ. ಇವುಗಳನ್ನು ಕುಕ್ಕುಜೆ ಗ್ರಾಮದ ಕೃಷ್ಣ ಪೂಜಾರಿ ಅವರ ಮನೆಯ ಸಮೀಪದಿಂದ ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು ಎಂದು …

Read More »

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಗಮನ ಬೇರೆಡೆ ಸೆಳೆದು ಚಿನ್ನಾಭರಣ ದೋಚುತ್ತಿದ್ದ ಅಂತಾರಾಜ್ಯ ಕಳ್ಳಿಯರು ಅರೆಸ್ಟ್!

ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಶಾಂತಿ ಮತ್ತು ನೀಲವೇಣಿ ಎಂಬ ಇಬ್ಬರನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ಮೂಲದ ಲಕ್ಷ್ಮಿ ಎಂಬುವವರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬ್ಯಾಗ್‌ನಲ್ಲಿದ್ದ ಚಿನ್ನದ ಸರ ಹಾಗೂ ಕಿವಿಯೋಲೆಗಳನ್ನು ಆರೋಪಿಗಳು ಕಳವು ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಳ್ಳಕೆರೆ ಮತ್ತು …

Read More »