BigTv News
April 28, 2026
Breaking News
ಕೋಲ್ಕತಾ, : ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಶೇಕ್ ಬ್ಯಾನರ್ಜಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಹೂಗ್ಲಿ ಜಿಲ್ಲೆಯ ಗೋಘಟ್‌ನಲ್ಲಿ ಬಿಜೆಪಿ ಬೆಂಬಲಿಗರು ತನ್ನ ಕಾರನ್ನು ಧ್ವಂಸಗೊಳಿಸಿದ್ದಾರೆ ಎಂದು ಅರಾಮ್ಬಾಗ್ ಕ್ಷೇತ್ರದ ಟಿಎಂಸಿಸಂಸದೆ ಮಿತಾಲಿ ಬಾಗ್ ಸೋಮವಾರ ಆರೋಪಿಸಿದ್ದಾರೆ. ಘಟನೆಯ ಬಗ್ಗೆ ವರದಿ ಕೇಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹೇಳಿದರು. ಆ ಸ್ಥಳದಲ್ಲಿ ಕೇಂದ್ರೀಯ ಪಡೆಗಳನ್ನು ನಿಯೋಜಿಸಲಾಗಿದೆ ಎಂಬುದಾಗಿಯೂ ಅವರು ತಿಳಿಸಿದರು. ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಚುನಾವಣಾ …
Read More »
BigTv News
April 28, 2026
Breaking News
ನವದೆಹಲಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ , ಅಂತರಾಷ್ಟ್ರೀಯ ಮತ್ತು ಭಾರತೀಯ ಗುಪ್ತಚರ ಸಂಸ್ಥೆಗಳ ನಿಕಟ ಸಮನ್ವಯದಲ್ಲಿ, ‘ಆಪರೇಷನ್ ಗ್ಲೋಬಲ್-ಹಂಟ್’ ಅಡಿಯಲ್ಲಿ ಟರ್ಕಿಯೆಯಿಂದ ಮೋಸ್ಟ್ ವಾಂಟೆಡ್ ಡ್ರಗ್ ದಂಧೆಕೋರ ಮೊಹಮ್ಮದ್ ಸಲೀಂ ಡೋಲಾನನ್ನು ವಶಕ್ಕೆ ಪಡೆಯಲಾಗಿದೆ. ಇಂದು ಮುಂಜಾನೆ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತನನ್ನು ಬಂಧಿಸಲಾಯಿತು. ಗೃಹ ಸಚಿವಾಲಯದ (MHA) ಪ್ರಕಾರ, “ಮಾರ್ಚ್, 2024 ರಲ್ಲಿ ಭಾರತದ ಕೋರಿಕೆಯ ಮೇರೆಗೆ ಇಂಟರ್‌ಪೋಲ್ ರೆಡ್ ನೋಟಿಸ್‌ಗೆ ಒಳಪಟ್ಟಿರುವ ಸಲೀಂ ಡೋಲಾ …
Read More »
BigTv News
April 28, 2026
Breaking News
ಭಾಗಲ್ಪುರ, ಏಪ್ರಿಲ್ 28: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿರುವ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಇಂದು ಹಗಲು ಹೊತ್ತಿನಲ್ಲಿಯೇ ಮನಬಂದಂತೆ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಭೂಷಣ್ ಕುಮಾರ್ ಸಾವನ್ನಪ್ಪಿದ್ದು, ಅಧ್ಯಕ್ಷ ರಾಜ್‌ಕುಮಾರ್ ಗುಡ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಉಂಟುಮಾಡಿತು. ಬುಲೆಟ್ ಬೈಕ್ಗಳಲ್ಲಿ ಬಂದ ಐವರು ದಾಳಿಕೋರರು ಯಾವುದೇ ಮುನ್ಸೂಚನೆ ನೀಡದೆ ಗುಂಡು (firing) ಹಾರಿಸಿದರು. ಸಿಇಒ ಮತ್ತು ಅಧ್ಯಕ್ಷರ …
Read More »
BigTv News
April 28, 2026
Breaking News
ಕೇಂದ್ರೀಯ ತನಿಖಾ ದಳ (ಸಿಬಿಐ), 2012ರಲ್ಲಿ ಎಫ್‌ಐಆರ್ ದಾಖಲಾದಾಗಿನಿಂದ ತನಿಖೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮನೋಜ್ ಕುಮಾರ್ ಸಿನ್ಹಾ ಅವರನ್ನು ಬಂಧಿಸಿದೆ. ಇವರು 60.86 ಲಕ್ಷ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ಓಡಾಡಿಕೊಂಡಿದ್ದರು. ಪ್ರಕರಣದ ಹಿನ್ನೆಲೆ ಮತ್ತು ತನಿಖೆ ಸಿಬಿಐ ನೀಡಿದ ಮಾಹಿತಿಯಂತೆ, ಏಪ್ರಿಲ್ 16, 2012 ರಂದು ಬಿಎಸ್‌ಎನ್‌ಎಲ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು. ಶಿಲ್ಲಾಂಗ್‌ನ ಎಸ್‌ಬಿಐ ಮುಖ್ಯ …
Read More »
BigTv News
April 28, 2026
Breaking News
ಬೆಂಗಳೂರು : ನಗರದ ಪಾದರಾಯನಪುರದ ಗೋರಿಪಾಳ್ಯ ಬಳಿ ಒಂದೇ ದ್ವಿಚಕ್ರ ವಾಹನದಲ್ಲಿ ಆರು ಮಂದಿ ಮಕ್ಕಳು ಕುಳಿತುಕೊಂಡು ಚಾಲನೆ ಮಾಡುವ ರೀತಿಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಮಾಗಡಿ ರಸ್ತೆ ಸಂಚಾರ ಠಾಣೆಯ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರ ಅಧಿಕೃತ ಎಕ್ಸ್ ಖಾತೆಗೆ ಶ್ರೇಯಸ್ ಶೇಯು ಹೆಸರಿನ ಖಾತೆಯಿಂದ ಫೋಟೋ ಟ್ಯಾಗ್ ಮಾಡಲಾಗಿತ್ತು. ಎಪ್ರಿಲ್ 26ರಂದು ಬೆಳಗ್ಗೆ 10:45ರ …
Read More »
BigTv News
April 28, 2026
Breaking News
ಕೋಲಾರ: ಮುಳಬಾಗಿಲು ನಗರದ ಹೊರವಲಯದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಸುಮಾರು 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಪಟ್ಟಣದ ನಿವಾಸಿ ಆವುಲ ರವಿ (27) ಬಂಧಿತ ಆರೋಪಿ. ಮುಳಬಾಗಿಲು ಡಿವೈಎಸ್ಪಿ ಮನೀಷಾ ಹಾಗೂ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ಚೆನ್ನೈ ರಸ್ತೆಯ ಕಾಲೇಶ ದರ್ಗಾ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ …
Read More »
BigTv News
April 28, 2026
Breaking News
ಬಾಗಲಕೋಟೆ ನಗರದಲ್ಲಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಾಹನ ಸಮೇತ ವಶಕ್ಕೆ ಪಡೆದ ಘಟನೆ ನಡೆದಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಈ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಬಾಗಲಕೋಟೆ ತಹಶೀಲ್ದಾರರ ನಿರ್ದೇಶನದ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಆಹಾರ ಶಿರಸ್ತೆದಾರ ಪ್ರಕಾಶ ಷೇರಖಾನೆ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದು, ಪರಿಶೀಲನೆಯ …
Read More »
BigTv News
April 28, 2026
Breaking News
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಂಭವಿಸಿದ ಕೌಟುಂಬಿಕ ಕಲಹವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪತಿ, ನಂತರ ತನ್ನ ಪುಟ್ಟ ಮಗುವಿನೊಂದಿಗೆ ಬಾವಿಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 23 ವರ್ಷದ ಅಂಜಲಿ (ಪತ್ನಿ) ಮತ್ತು ಆಕೆಯ ಪತಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿ ದಂಪತಿಗಳ …
Read More »
BigTv News
April 28, 2026
Breaking News
ಬೆಂಗಳೂರಿನಲ್ಲಿ ಪ್ರೀತಿ ವಿಚಾರಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ರಾಜೇಶ್ (35) ಎನ್ನುವ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಕುದುರು ರಸ್ತೆಯ ಮಲ್ಲಿಕುಂಟೆಯ ಮನೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಬೆಂಗಳೂರಿನ ಬಾಗಲೂರು ಸಾತನೂರು ನಿವಾಸಿಯಾಗಿರುವ ರಾಜೇಶ್, ಪ್ರೀತಿಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಸಂಬಂಧಿಕರ ಬಳಿ …
Read More »
BigTv News
April 28, 2026
Breaking News
ಹರಿಯಾಣದಲ್ಲಿ ಖಾಸಗಿ ಬಸ್‌ವೊಂದು ಹೊತ್ತಿ ಉರಿದಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ತೆರಳುತ್ತಿದ್ದ ಖಾಸಗಿ ಬಸ್‌ಗೆ ಮಿಲ್ಕ್‌ಪುರ ಗ್ರಾಮದ ಬಳಿ ಏಕಾಏಕಿ ಬೆಂಕಿ ಹೊತ್ತಿದೆ.ಈ ಅಪಘಾತದಲ್ಲಿ ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಭಿವಾನಿಯಿಂದ ಹನ್ಸಿ ಕಡೆಗೆ ಬಸ್ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಯಾವ ಕಾರಣದಿಂದ ಬಸ್‌ಗೆ ಬೆಂಕಿ ಹೊತ್ತಿದೆ ಎಂದು ತಿಳಿದುಬಂದಿಲ್ಲ. ಹೆಚ್ಚಿನ ಪ್ರಯಾಣಿಕರು ಬೆಂಕಿ ಹೊತ್ತಿದ ತಕ್ಷಣವೇ ಕಿಟಕಿ ಹಾಗೂ ಬಾಗಿಲುಗಳಿಂದ …
Read More »