Breaking News

Breaking News

ಉದ್ಯಮಿಗೆ ನೋಟಿಸ್‌ ನೀಡಲು ಹೋಗಿದ್ದ ಪೊಲೀಸರಿಂದಲೇ ದರೋಡೆ – ಸಿಸಿಟಿವಿಯಲ್ಲಿ ಕೃತ್ಯ ಸೆರೆ!

ಇಂದೋರ್: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿ ಮಾಡಲು ಉದ್ಯಮಿ ಗೌರವ್ ಜೈನ್ ಅವರ ಮನೆಗೆ ತೆರಳಿದ್ದ ಐವರು ಪೊಲೀಸರು, ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿ ಸುಮಾರು 20 ತೋಲ ಚಿನ್ನವನ್ನು ದೋಚಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಈ ದೂರಿನ ಹಿನ್ನೆಲೆಯಲ್ಲಿ ಇಂದೋರ್ ಪೊಲೀಸ್ ಇಲಾಖೆಯು ಆರೋಪಿ ಐವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಪೊಲೀಸರು ಕಳ್ಳರಂತೆ ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ ಎಂದು …

Read More »

ಮಗನಿಂದ ತಂದೆಯ ಕೊಲೆಗೆ ಯತ್ನ, ಆರೋಪಿ ಬಂಧನ

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ‌ತಾಲೂಕಿನ‌ ಉಜಿರೆಯಲ್ಲಿ ಎ.21ರ ಮಂಗಳವಾರ ನಡೆದಿದೆಗಾಯಗೊಂಡ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ, ಮಗ ಭರತ್ (25) ನ್ನು ಪೊಲೀಸರು ಬಂಧಿಸಿದ್ದಾರೆ.ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುತ್ತಿರುವ ನಾರಾಯಣ (52) ಹಾಗೂ ಟಿಂಬರ್ ಕೆಲಸ ಮಾಡುತ್ತಿದ್ದ ಮಗ ಭರತ್ ನಡುವೆ ಮನೆಯಲ್ಲಿ ಗಲಾಟೆ ನಡೆದಿದೆ. ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ …

Read More »

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಕೂಡಗು, ಏಪ್ರಿಲ್ 22: ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ …

Read More »

ಕಾರ್‌ಗಳ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

ಶಿವಮೊಗ್ಗ: ಸಮೀಪದ ಆಯನೂರು ಬಳಿ ಕ್ರೆಟಾ ಕಾರ್ ಮತ್ತು ಒಮ್ನಿ ವಾಹನದ ನಡುವೆ ಮಂಗಳವಾರ ನಡೆದ ಮುಖಾಮುಖಿ ಡಿಕ್ಕಿಯಿಂದ ಒಮ್ನಿ ಚಾಲಕನ ಕಾಲು ತುಂಡಾಗಿದೆ. ಕ್ರೆಟಾ ಕಾರ್‌ಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ತೆರಳಿ ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಕರೆದೊಯ್ದು ಆಯನೂರು ಆಸ್ಪತ್ರೆಗೆ ದಾಖಲಿಸಿದರು. ಅಪಘಾತದಿಂದಾಗಿ ಸಾಗರ ರಸ್ತೆಯಲ್ಲಿ ಕೆಲ ಸಮಯ ವಾಹನ ದಟ್ಟಣೆ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಸಂಚಾರ ದಟ್ಟಣೆ …

Read More »

ಕೊಡಗಿನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್.!

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ್ದರು. ಅವರು ಕುಟ್ಟ ಗ್ರಾಮದಲ್ಲಿರುವ ‘ದೇವಿ ವಿಲ್ಲಾ ಹೋಮ್ ಸ್ಟೇ’ ನಲ್ಲಿ ತಂಗಿದ್ದರು. ವರದಿಗಳ ಪ್ರಕಾರ, ಕಳೆದ ಏಪ್ರಿಲ್ 19 ರಂದು ಈ ಘಟನೆ ನಡೆದಿದೆ. ದೌರ್ಜನ್ಯಕ್ಕೆ …

Read More »

ಸ್ಕೂಟಿ ಹಿಂಬದಿಗೆ ಬಸ್‌ ಢಿಕ್ಕಿ: ಬಾಲಕಿ ಸಾವು

ಕಾಪು: ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್‌ ಸ್ಟೇಶನ್‌ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ. ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ. ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಇಂದು ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ …

Read More »

ಪಶು ವೈದ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ

ಬೆಂಗಳೂರು: ಪಶು ವೈದ್ಯಾಧಿಕಾರಿಯೊಬ್ಬರ ಶೈಕ್ಷಣಿಕ ಪ್ರಮಾಣ ಪತ್ರಗಳ ಪರಿಶೀಲನಾ ವರದಿ ನೀಡಲು 10,000 ರೂ.ಗೆ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಬ್ಬಾಳದ ಪಶು ವೈದ್ಯಕೀಯ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ದ್ವಿತೀಯ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಅಹಮದ್ ಬಂಧಿತ ಆರೋಪಿ. ವಿಜಯಪುರದ ಪಶು ನಿರೀಕ್ಷಕ ಮಲ್ಲಿಕಾರ್ಜುನ್ ಶಂಕರ ನಿಡೋಣಿಯವರು ಶೈಕ್ಷಣಿಕ ಪ್ರಮಾಣ ಪತ್ರಗಳ ಪರಿಶೀಲನಾ ವರದಿಗಾಗಿ ಅರ್ಜಿ ಸಲ್ಲಿಸಿದ್ದು, ಅಂತಿಮ ವರದಿ …

Read More »

ಹಾಡಹಗಲೇ ಮನೆ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ!

ದೊಡ್ಡಬಳ್ಳಾಪುರ: ತಾಲೂಕಿನ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕಳ್ಳರು ಕೈಚಳಕ ತೋರಿಸಿದ್ದು (Stolen), ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ (Gold) ಹಾಗೂ ನಗದು ದೋಚಿರುವ ಘಟನೆ ವರದಿಯಾಗಿದೆ.ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ಖದೀಮರು, ಮನೆಯ ಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ.ಮನೆಯಲ್ಲಿದ್ದ ಸುಮಾರು 10 ಗ್ರಾಂ ತೂಕದ ಚಿನ್ನದ ಚೈನ್, ತಲಾ 15 ಗ್ರಾಂ ತೂಕದ ಎರಡು ಬ್ರೇಸ್ಲೆಟ್‌ಗಳು ಮತ್ತು ನೆಕ್ಲೇಸ್ ಅನ್ನು ದೋಚಿದ್ದಾರೆ. …

Read More »

ಚಿಕನ್ ಪಾರ್ಟಿ ನೆಪದಲ್ಲಿ ಅಳಿಯನ ಬರ್ಬರ ಹತ್ಯೆ!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಂಡೀಪುರ ಗ್ರಾಮದಲ್ಲಿ ಅತ್ತೆಯೇ ಮಗಳ ಪ್ರಿಯಕರನ ಜೊತೆಗೂಡಿ ಅಳಿಯನ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಸುಜಾತಾಳನ್ನು ಮದುವೆಯಾಗಿದ್ದನು. ಬಳಿಕ ಸುಜಾತಾ ಗಾರ್ಮೆಂಟ್ಸ್ ಕೆಲಸದ ವೇಳೆ ಅಮರ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆದಿತ್ತು ಎನ್ನುವ ಮಾಹಿತಿ ಇದೆ.ಈ ಸಂಬಂಧವೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸುಜಾತಾ ಅನಾರೋಗ್ಯದಿಂದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರೂ, ಅಮರ್ ಮನೆ ಸಂಪರ್ಕ …

Read More »

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅತೀ ವೇಗದ ಚಾಲನೆಯಿಂದ ಕಾರೊಂದು (Car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ …

Read More »