Breaking News

Breaking News

ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: 1.86 ಲಕ್ಷ ರೂ. ವಂಚನೆ

ಕುಂದಾಪುರದ ಗುಲ್ವಾಡಿ ಗ್ರಾಮದ ಸೌಕೂರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗದ ಜಾಹೀರಾತು ನಂಬಿದ ಮಹಿಳೆಯೊಬ್ಬರು ಸೈಬರ್ ವಂಚಕರಿಂದ ₹1,86,570 ಕಳೆದುಕೊಂಡಿದ್ದಾರೆ. ರೇಣುಕಾ ಗಣೇಶ ದೇವಾಡಿಗ ಹಣ ಕಳೆದುಕೊಂಡವರು. ಸೆಪ್ಟೆಂಬರ್ 16ರಂದು ಸಾಮಾಜಿಕ ಜಾಲತಾಣದಲ್ಲಿ ಉದ್ಯೋಗದ ಜಾಹೀರಾತು ನೋಡಿ ಕ್ಲಿಕ್ ಮಾಡಿದ ಅವರಿಗೆ ವಂಚಕರು ವಿವಿಧ ಟಾಸ್ಕ್‌ಗಳನ್ನು ನೀಡಿದ್ದಾರೆ. ಆರಂಭದಲ್ಲಿ ₹120 ಹಾಗೂ ₹10,130 ಪಾವತಿಸಿ ವಿಶ್ವಾಸ ಗಳಿಸಿದ್ದಾರೆ. ನಂತರ ಹೆಚ್ಚಿನ ಹಣ ಗಳಿಸುವ ಆಮಿಷವೊಡ್ಡಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದ್ದಾರೆ. …

Read More »

ಇದು ಬೇಲಿಯೇ ಎದ್ದು ಹೊ ಮೇಯ್ದ ಕಥೆ! ಹೊಯ್ಸಳ ವಾಹನದಲ್ಲಿ ಬಂದು ವಸೂಲಿ ಆರೋಪದಲ್ಲಿ ಇಬ್ಬರು ಪೊಲೀಸರ ಬಂಧನ

ಮಂಗಳೂರಿನಲ್ಲಿ ಗಸ್ತಿನ ಹೆಸರಿನಲ್ಲಿ ಯುವಕನಿಂದ ಹಣ ವಸೂಲಿ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಹೊಯ್ಸಳ ವಾಹನದ ಇಬ್ಬರು ಪೊಲೀಸ್ ಸಿಬ್ಬಂದಿ ಶಿವರಾಜ್ ಮತ್ತು ಹಿರಣ್ಣ ಬೆನ್ನಿ ಅವರನ್ನು ಬಂಧಿಸಲಾಗಿದೆ. ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ನೆಹರು ಮೈದಾನದಲ್ಲಿ ವಾಕಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದ ರವಿರಾಜ್ ಅವರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಕವರ್‌ನಲ್ಲಿದ್ದ ₹300 ಹಣ ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ಮರುದಿನ ಮತ್ತೆ ಬೆದರಿಸಿ ಎಟಿಎಂ ಕಾರ್ಡ್‌ಗಳು, ₹1,000 ನಗದು …

Read More »

ಪತಿಯ ಕೊಲೆ ಪ್ರಕರಣ: ಅನುಮಾನಾಸ್ಪದ ಸಾವು ಎಂದು ದೂರು ನೀಡಿದ್ದ ಪತ್ನಿಯೇ ಆರೋಪಿ!; ಇಬ್ಬರ ಬಂಧನ

ಕಲಬುರಗಿ ಜಿಲ್ಲೆಯ ಮಳಖೇಡದಲ್ಲಿ ಕಂಪ್ಯೂಟರ್ ಸೆಂಟರ್ ಮಾಲೀಕ ಸಿದ್ರಾಮ ಬಸಲಿಂಗಪ್ಪ ಮಾಡಗಿ ಪಾಟೀಲ (40) ಅವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕೊಲೆ ಆರೋಪದಡಿ ಮೃತರ ಪತ್ನಿ ಅಂಬಿಕಾ ಹಾಗೂ ಆಕೆಯ ಪ್ರಿಯಕರ ಎನ್ನಲಾದ ಮಾರುತಿ ಭೋವಿ ಅವರನ್ನು ಬಂಧಿಸಿದ್ದಾರೆ. ನ.3ರಂದು ಸಿದ್ರಾಮ ಅವರು ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ತಾಯಿ ಬಸಮ್ಮ ಅವರು ಪೊಲೀಸರಿಗೆ ದೂರು ನೀಡಿದ್ದರು. ತಾಯಿಯ …

Read More »

ಗೋವಾ ಚೀಪ್ ರೇಟ್ ಎಣ್ಣೆ ಸಾಗಿಸಲು ಲಾರಿಯಲ್ಲಿತ್ತು ರಹಸ್ಯ ಕೋಣೆ; 267 ಲೀ. ಮದ್ಯ ಜಪ್ತಿ ಮಾಡಿದ ಅಬಕಾರಿ ಇಲಾಖೆ!

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ₹1.20 ಲಕ್ಷ ಮೌಲ್ಯದ 267 ಲೀಟರ್ ಮದ್ಯ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಬಕಾರಿ ಅಧಿಕಾರಿಗಳ ಕಣ್ಣುತಪ್ಪಿಸಲು ಲಾರಿಯಲ್ಲಿ ರಹಸ್ಯ ಕಂಪಾರ್ಟ್‌ಮೆಂಟ್ ನಿರ್ಮಿಸಿ ಮದ್ಯ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದಾಗ ಅಡಗಿಸಿಟ್ಟಿದ್ದ ಮದ್ಯ ಪತ್ತೆಯಾಗಿದೆ. ತಮಿಳುನಾಡು ನೋಂದಣಿಯ ಲಾರಿಯನ್ನು ಜಪ್ತಿ ಮಾಡಿರುವ ಅಧಿಕಾರಿಗಳು …

Read More »

ನಶೆಯಲ್ಲಿದ್ದ ಯುವತಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಬೆಂಗಳೂರಿನಲ್ಲಿ ಮದ್ಯದ ನಶೆಯಲ್ಲಿದ್ದ 26 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಸಮೀರ್ ಎಂಬಾತನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಯುವತಿ ಪ್ರವಾಸಕ್ಕಾಗಿ ನಗರಕ್ಕೆ ಬಂದಿದ್ದಳು. ಅ.23ರಂದು ಕೋರಮಂಗಲದ ಕ್ಲಬ್‌ನಲ್ಲಿ ಸಮೀರ್ ಪರಿಚಯವಾಗಿದ್ದು, ಬಳಿಕ ಇಬ್ಬರೂ ಸಂಪರ್ಕದಲ್ಲಿದ್ದರು. ಅ.28ರಂದು ಹೋಟೆಲ್‌ಗೆ ಕರೆದೊಯ್ದು ಮದ್ಯ ಸೇವಿಸಿದ ಬಳಿಕ ಯುವತಿ ನಶೆಯಲ್ಲಿದ್ದಾಗ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ತಡರಾತ್ರಿ ಎಚ್ಚರಗೊಂಡ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು …

Read More »

ಒಂದೇ ಕುಟುಂಬದ 7 ಜನರ ಹತ್ಯೆ ಪ್ರಕರಣ: ತಂದೆಯ ಕೃತ್ಯಕ್ಕೆ ಮಗಳೇ ಸಾಥ್: ವಿವಿಧ ಸ್ಥಳಗಳಲ್ಲಿ ಮೃತದೇಹಗಳನ್ನು ಎಸೆದಿರುವ ಆರೋಪಿ

ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕ ಇಂದುಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ. 15ರಿಂದ 20 ದಿನಗಳ ಅವಧಿಯಲ್ಲಿ ಒಬ್ಬೊಬ್ಬರನ್ನೇ ಮನೆಗೆ ಕರೆಸಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಪತ್ನಿ ಸುನೀತಾ ತವರಿಗೆ ಹೋಗುತ್ತಿದ್ದ ವಿಚಾರಕ್ಕೆ ಕುಟುಂಬದೊಂದಿಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ದ್ವೇಷದಿಂದ ಆರೋಪಿ ಮೊದಲು ಪತ್ನಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಲೆ ಮಾಡಿ, ಮೃತದೇಹವನ್ನು ನಂದಿ ಬೆಟ್ಟದಲ್ಲಿ ಎಸೆದಿದ್ದಾನೆ. ಬಳಿಕ …

Read More »

ಹುಣಸೂರಿನಲ್ಲಿ ಕುರಿ ಕಳ್ಳರಿಂದ ಗುಂಡಿನ ದಾಳಿ: ಮೂವರು ಕುರಿಗಾಹಿಗಳಿಗೆ ಗಾಯ

ಹುಣಸೂರು ತಾಲೂಕಿನ ಗುರುಪುರ ವ್ಯಾಪ್ತಿಯಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಮೂವರು ಕುರಿಗಾಹಿಗಳು ಗಾಯಗೊಂಡಿದ್ದಾರೆ. ತುಮಕೂರು ಮೂಲದ ಗೋವಿಂದಪ್ಪ, ಜುಂಜಣ್ಣ ಹಾಗೂ ಭೀಮ ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ರಾತ್ರಿ ಬಾಳೆ ತೋಟದಲ್ಲಿ ಕುರಿಗಳನ್ನು ಮೇಯಲು ಬಿಡಲಾಗಿತ್ತು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಕಳ್ಳರು ಕುರಿಗಳನ್ನು ಕದಿಯಲು ಯತ್ನಿಸಿದ್ದಾರೆ. ಇದನ್ನು ತಡೆಯಲು ಮುಂದಾದ ಕುರಿಗಾಹಿಗಳ ಮೇಲೆ ದುಷ್ಕರ್ಮಿಗಳು ಗುಂಡು …

Read More »

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬೆಂಗಳೂರಿನ ಮೂಲದವರಾಗಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸಹನಾ 8 ವರ್ಷಗಳ ಹಿಂದೆ ವೀರೇಶ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕಳೆದ 2–3 ವರ್ಷಗಳಿಂದ ರಾಹುಲ್ ಜೊತೆ ಆತ್ಮೀಯತೆ ಬೆಳೆಸಿಕೊಂಡಿದ್ದಳು. ಈ ವಿಚಾರವಾಗಿ ಪತಿ ವೀರೇಶ್ ಜೊತೆ ಹಲವು …

Read More »

ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಮೃತ್ಯು

ಕಲಬುರಗಿ: ನಗರದ ರಾಜಾಪುರ ರಸ್ತೆಯ ಬಾಬು ಜಗಜೀವನ ರಾಮ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು 25 ವರ್ಷದ ನರ್ಸಿಂಗ್ ವಿದ್ಯಾರ್ಥಿ ಮುಜಾಹೀದ್ ಪಟೇಲ್ ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ನಿವಾಸಿಯಾಗಿದ್ದ ಅವರು ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ …

Read More »

ಬೆಂಗಳೂರಲ್ಲಿ ಭೀಕರ ಸರಣಿ ಹತ್ಯೆ : ರುಬ್ಬು ಗುಂಡಿನಿಂದ ಚಜ್ಜಿ ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆ!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ತವರು ಮನೆಗೆ ಹೋಗುತ್ತಿದ್ದ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ದ್ವೇಷದಿಂದ ಅತ್ತೆ, ಇಬ್ಬರು ಬಾಮೈದರು, ಇಬ್ಬರು ಸೊಸೆಯಂದಿರು ಹಾಗೂ 7 ವರ್ಷದ ಬಾಲಕನನ್ನು ಒಬ್ಬೊಬ್ಬರನ್ನೇ ಮನೆಗೆ ಕರೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. …

Read More »