Breaking News

Breaking News

ಬ್ಯಾಟರಿ ತುಂಬಿದ್ದ ಗೋದಾಮು ಧಗ ಧಗ

ಪಿಣ್ಯ ದಾಸರಹಳ್ಳಿ: ಬೆಂಕಿ ಅವಘಡದಿಂದ ಬ್ಯಾಟರಿಗಳನ್ನು ದಾಸ್ತಾನು ಮಾಡಲಾಗಿದ್ದ ಗೋದಾಮು ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನ ಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪದ್ಮರಾಜು ಎಂಬುವರಿಗೆ ಸೇರಿದ ಗೋದಾಮಿನಲ್ಲಿ ರಿಲಾಯನ್ಸ್‌ ಕಂಪನಿಗೆ ಸೇರಿದ ಬ್ಯಾಟರಿಗಳನ್ನು ದಾಸ್ತಾನು ಮಾಡಲಾಗಿತ್ತು. ರಾತ್ರಿ 10.30ರ ಸುಮಾರಿಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಗೋದಾಮು ಪೂರ್ತಿ ಆವರಿಸಿಕೊಂಡು ಹೊತ್ತಿ ಉರಿದಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಅದೃಷ್ಟವಶಾತ್‌ ಯಾವುದೇ …

Read More »

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಬಳ್ಳಾರಿಯಿಂದ ಬೆಂಗಳೂರಿನತ್ತ ಹೊರಟಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲು, ಗಡಿಭಾಗದ ಹಗರಿ ಗ್ರಾಮದ ಬಳಿ ಸಾಗುತ್ತಿದ್ದ ವೇಳೆ ಏಕಾಏಕಿ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲೇ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಬೆಂಕಿ ನಿಯಂತ್ರಿಸಲಾಯಿತು. ಇದರಿಂದ ಪ್ರಯಾಣಿಕರಲ್ಲಿ ಕೆಲಕಾಲ ಗಾಬರಿ ಉಂಟಾದರೂ, ಬಳಿಕ ಪರಿಸ್ಥಿತಿ …

Read More »

ದಲಿತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಗುಲ್ಬರ್ಗಾ ವಿವಿಯ ಸಿಬ್ಬಂದಿ ವಜಾ

ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಿಪಾಯಿ ಹುದ್ದೆಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ ಕಡಗಂಚಿ ವಜಾಗೊಂಡ ಸಿಬ್ಬಂದಿ ಎಂದು ತಿಳಿದುಬಂದಿದೆ. ಎಂ.ಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ, ಅಶ್ಲೀಲ ಪದಗಳಿಂದ ನಿಂದನೆ ಮಾಡುವುದು, ಜಾತಿಯನ್ನು ಗುರಿಯಾಗಿಸಿ ಹೀಯಾಳಿಸುವುದು …

Read More »

ಕಮಲಾಪುರ | ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ: ಹಿನ್ನೀರಿಗೆ ಹಾರಿ ವ್ಯಕ್ತಿ ಸಾವು

ಕಮಲಾಪುರ: ತಾಲ್ಲೂಕಿನ ನಾಗೂರ ಬಳಿಯ ಸೇತುವೆ ಮೇಲಿಂದ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಹಾರಿ ಶುಕ್ರವಾರ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಳಗಿ ತಾಲ್ಲೂಕಿನ ರುಮ್ಮನಗೂಡ ಗ್ರಾಮದ ನಿವಾಸಿ ಚಂದ್ರಕಾಂತ ಮಾಧವರಾವ ದೇಸಾಯಿ (40) ಮೃತಪಟ್ಟವರು. ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಸಾಲ ಮಾಡಿಕೊಂಡಿದ್ದರು. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಬೆಳಿಗ್ಗೆ ಮನೆಯಿಂದ ಹೊರ ಬಂದಿದ್ದು, ನಾಗೂರ ಸೇತುವೆ ಬಳಿ ಬೈಕ್ ನಿಲ್ಲಿಸಿ, ಮೊಬೈಲ್ ಇಟ್ಟು ನೀರಿಗೆ ಜಿಗಿದಿದ್ದಾರೆ. ಚಂದ್ರಕಾಂತ ನೀರಿಗೆ …

Read More »

ಮೂವರು ಕೊಲೆಪಾತಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಶಿರಸಿ: ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಕೊಲೆ ಮಾಡಿದ್ದ ಮೂವರಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಹಳಿಯಾಳ ತಾಲೂಕಿನ ಬಿದ್ರಳ್ಳಿಯ ಕೇಶವ ಪಾಂಡುರಂಗ ಕಿತ್ತೂರಕರ್ ಆಸ್ತಿಯಲ್ಲಿ ತನ್ನ ಪಾಲನ್ನು ಕೇಳಿದ್ದರು. ಅದನ್ನು ತಪ್ಪಿಸುವ ಉದ್ದೇಶದಿಂದ ಅಕ್ಷಯ ಪಾಂಡುರಂಗ ಕಿತ್ತೂರಕರ್, ಪಾಂಡುರಂಗ ಕೀರಪ್ಪ ಕಿತ್ತೂರಕರ್ ಹಾಹಾಗೂ ಲತಾ ತುಳಸಾಯಿ ಕಿತ್ತೂರಕರ್ ಮತ್ತು ಇನ್ನಿಬ್ಬರು ಸೇರಿ ಕೇಶವ ಎಂಬುವವರನ್ನು 2019 …

Read More »

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ ವಿರುದ್ಧ ಕಳ್ಳತನ ಆರೋಪ ಮಾಡಿದ್ದಾರೆ. ಎಂಎಸ್‌ಐಎಲ್ ಚಿಟ್ ಫಂಡ್ ಚೆಕ್ ಬುಕ್ ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ತಪಾಸನೆ ನೆಪದಲ್ಲಿ ಕೊಠಡಿಗೆ ಕರೆದೋಯ್ದು ಮಹಿಳೆಗೆ ಜಾತಿನಿಂದನೆ ಮಾಡಿದ್ದಾರೆ. ಅಲ್ಲದೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದೆ. …

Read More »

ರಾಜ್ಯದಲ್ಲಿ ಹೀನ ಕೃತ್ಯ : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಿದ ಶಿಕ್ಷಕ.!

ಚಿತ್ರದುರ್ಗ/ಚಳ್ಳಕೆರೆ: ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಕಪ್ಪುಚುಕ್ಕೆ ಹಚ್ಚುವಂತಹ ಘಟನೆಯೊಂದು ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ವಿದ್ಯಾಬುದ್ಧಿ ಕಲಿಸಬೇಕಾದ ಗಣಿತ ಶಿಕ್ಷಕನೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಪಾತ ಮಾಡಿಸಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.16 ವರ್ಷದ ಬಾಲಕಿ ಮೇಲೆ ಶಿಕ್ಷಕ ಈ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ …

Read More »

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಇದೊಂದು ಸುಳ್ಳು ಸುದ್ದಿ ಆಗಿದ್ದು, ಈ ಒಂದು ವಿಡಿಯೋ ವೈರಲ್ ಮಾಡಿದ ಯುವಕನನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾಧ್ಯಮಗಳಲ್ಲಿ ಮಾತನಾಡಿದ ಅವರು ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು ಪಂಜಾಬ್ …

Read More »

ಲಂಚ ಸ್ವೀಕರಿಸುವಾಗ ‘ಲೋಕಾ ದಾಳಿ’: ಫಿಲ್ಮ್ ಸ್ಟೈಲ್ ನಲ್ಲಿ ಕಾರು ಚೇಸ್ ಮಾಡಿ ಅಧಿಕಾರಿಯ ಬಂಧನ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಖ್ಯಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಈ-ಖಾತೆ ಪ್ರಕ್ರಿಯೆ ಪೂರ್ಣಗೊಳಿಸಲು 2 ಲಕ್ಷ ರೂ ಬೇಡಿಕೆ ಇಟ್ಟಿದ್ದ ಅಧಿಕಾರಿ, ಮೊದಲ ಹಂತವಾಗಿ 1 ಲಕ್ಷ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಾಹಿತಿಯ ಪ್ರಕಾರ, ರಾಘವೇಂದ್ರ ರೆಡ್ಡಿ ಎಂಬ ವ್ಯಕ್ತಿಯಿಂದ ಈ-ಖಾತೆ ಮಾಡಿಕೊಡುವ ಹೆಸರಿನಲ್ಲಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ₹2 ಲಕ್ಷ ಲಂಚ ಕೇಳಿದ್ದರೆಂದು …

Read More »

ಚಿಕ್ಕಮಗಳೂರಲ್ಲಿ ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಕಳೆದ ನಾಲ್ಕು ದಿನಗಳಿಂದ ಚಿಕ್ಕಮಂಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾಧಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. 14 ವರ್ಷದ ಶ್ರೀನಂದ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. ಹೌದು ನಾಲ್ಕು ದಿನಗಳಿಂದ ಶ್ರೀನಂದಗಾಗಿ ಬಹಳ ಹುಡುಕಾಟ ನಡೆಸಿದ್ದರು. ಚಿಕ್ಕಮಂಗಳೂರು ತಾಲೂಕಿನ ಶೋಲಾ ಪ್ರದೇಶದಲ್ಲಿ ನಾಪತ್ತೆಯಾಗಿದ್ದಳು. ಈಕೆ ಕೂಡ ಕೇರಳ ಮೂಲದ ಬಾಲಕಿಯಾಗಿದ್ದಳು. ಇದಕ್ಕೂ ಮೊದಲು ಕೇರಳ ಮೂಲದ ಯುವತಿ ಮೂರು ದಿವಸ ನಾಪತ್ತೆಯಾಗಿದ್ದಳು. ಇವಳ ರಂದು ಕೇರಳ ಮೂಲದ ಹೀನದ …

Read More »