BigTv News
April 9, 2026
Breaking News
ಭದ್ರಾವತಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ತೀರ್ಥಹಳ್ಳಿ ನಿವಾಸಿ ಕೃಷ್ಣ (34) ಬಂಧಿತ ಆರೋಪಿ. ಈತನ ವಿರುದ್ಧ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಐದು ವರ್ಷಗಳು ತಲೆ ಮರೆಸಿಕೊಂಡಿದ್ದ. ಬಂಧನಕ್ಕೆ ಭದ್ರಾವತಿಯ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಆರೋಪಿ ಇರುವ ಜಾಗದ …
Read More »
BigTv News
April 9, 2026
Breaking News
ಬೆಂಗಳೂರು- ತುಮಕೂರು ರಸ್ತೆಯ ಅಡಕಮಾರನಹಳ್ಳಿಯ ಆಂಜನೇಯ ದೇವಸ್ಥಾನದ ಬಳಿಯ ಆಹಾರ ಪದಾರ್ಥ ಸಂಗ್ರಹಿಸಿದ್ದ ಗೋದಾಮಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಗೋದಾಮು ಹೊತ್ತಿ ಉರಿದಿದೆ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ನೆಲಮಂಗಲದ ಅಗ್ನಿ ಶಾಮಕದ ಇಲಾಖೆಯ ವಾಹನದಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ರಾತ್ರಿ ಒಂದು ಗಂಟೆಯಾದರೂ ಬೆಂಕಿ ನಿಯಂತ್ರಣ ಸಾಧ್ಯವಾಗಿರಲಿಲ್ಲ. ಅವಘಡಕ್ಕೆ ಕಾರಣ ಗೊತ್ತಾಗಿಲ್ಲ. ಮಾದನಾಯಕನಹಳ್ಳಿ ಠಾಣೆಯ ಪೊಲೀಸರು …
Read More »
BigTv News
April 9, 2026
Breaking News
ತುಮಕೂರು: ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಅಂಗಡಿ ಸಾಮಗ್ರಿ ಹಾಳು ಮಾಡಿದ್ದ ಅಪರಾಧಿ ವಿನಯ್ ಕುಮಾರ್ ಎಂಬಾತನಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ, ₹1 ಸಾವಿರ ದಂಡ ವಿಧಿಸಿದೆ. ತಿಪಟೂರು ನಗರದಲ್ಲಿ ಕೆ.ಎನ್.ಜಯಸಿಂಹ ಎಂಬುವರು ತಳ್ಳುವ ಗಾಡಿಯಲ್ಲಿ ಚಿಲ್ಲರೆ ವ್ಯಾಪಾರ ನಡೆಸಿಕೊಂಡಿದ್ದರು. ತಳ್ಳುವ ಗಾಡಿಗೆ ಮಹರ್ಷಿ ವಾಲ್ಮೀಕಿ, ಕನ್ನಡವೇ ಸತ್ಯ-ಕನ್ನಡವೇ ನಿತ್ಯ, ವಂದೇ ಮಾತರಂ ಎಂದು ಬರೆಸಿದ್ದರು. 2015ರ ಏ. …
Read More »
Shaikh BigTv
April 8, 2026
Breaking News, Crime, ಕರ್ನಾಟಕ, ಚಿತ್ರದುರ್ಗ
ಚಿತ್ರದುರ್ಗ: ಕರ್ತವ್ಯ ನಿರ್ಲಕ್ಷ್ಯದ ನೆಪವೊಡ್ಡಿ ತನ್ನದೇ ಸಹೋದ್ಯೋಗಿಗಳಿಗೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ ಘಟನೆ ರಾಜ್ಯ ಪೊಲೀಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಂಬಂಧಿಸಿದ ಪಿಎಸ್‌ಐ ನೇತ್ರಾವತಿ ವಿರುದ್ಧ ಕೊನೆಗೂ ಶಿಸ್ತು ಕ್ರಮ ಜರುಗಿಸಲಾಗಿದೆ… ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಪಿಎಸ್‌ಐ ನೇತ್ರಾವತಿ ಅವರು ಸಿಬ್ಬಂದಿಗಳ ಮೇಲೆ ದರ್ಪ ತೋರಿದ ಆರೋಪ ಕೇಳಿಬಂದಿತ್ತು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಕಾರಣ ನೀಡಿ,.. …
Read More »
BigTv News
April 8, 2026
Breaking News
ಮಂಗಳೂರು ಸಾರ್ವಜನಿಕರು ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು CEIR (Central Equipment Identity Register) ತಂತ್ರಜ್ಞಾನ ಬಳಸಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯ ಮೂಲಕ ಒಟ್ಟು 150 ಮೊಬೈಲ್‌ಗಳನ್ನು ವಶಪಡಿಸಿಕೊಂಡು ವಾರಸುದಾರರಿಗೆ ಹಿಂತಿರುಗಿಸಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡ ಬಗ್ಗೆ ಸಾರ್ವಜನಿಕರು CEIR ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದರು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ …
Read More »
BigTv News
April 8, 2026
Breaking News
ತುಮಕೂರು: ಇಲ್ಲಿನ ಮಾಯಕಂಡ್ರ ಹೋಬಳಿಯ ಕುಂದುರನಹಳ್ಳಿ ಪಾಳ್ಯದ ಸಮೀಪ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಪೂವಪ್ಪ ರಾಥೋಡ್ ಎಂಬ ಯುವ ಅಧಿಕಾರಿ ಪ್ರಾಣ ಕಳೆದುಕೊಂಡಿದ್ದಾರೆ. ರಾಯಚೂರು ಮೂಲದ 35 ವರ್ಷದ ಇವರು, ತುರುವೇಕೆರೆ ತಾಲ್ಲೂಕಿನಲ್ಲಿ ಗ್ರಾಮ ಆಡಳಿತ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸ ಮುಗಿಸಿ ತಮ್ಮ ನಿವಾಸಕ್ಕೆ ಮರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ಹತೋಟಿ ತಪ್ಪಿದ ವಾಹನ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಈ ಅಪಘಾತದ ತೀವ್ರತೆಗೆ ಪೂವಪ್ಪ ಅವರು ಸ್ಥಳದಲ್ಲೇ …
Read More »
BigTv News
April 8, 2026
Breaking News
ಬಂಟ್ವಾಳ: ರಿಕ್ಷಾದಲ್ಲಿ 2,800 ರೂ. ಮೌಲ್ಯದ 5.4 ಲೀಟರ್ ಮದ್ಯ ಅಕ್ರಮ ಸಾಗಾಟ ಮಾಡುತ್ತಿದ್ದಾಗ ಪೊಲೀಸ್ ಜೀಪು ಬರುವುದನ್ನು ಕಂಡು ರಿಕ್ಷಾವನ್ನು ಮಾರ್ಗ ಮಧ್ಯೆ ಬಿಟ್ಟು ಆರೋಪಿ ಪರಾರಿಯಾದ ಘಟನೆ ಕುಕ್ಕಾಜೆಯಲ್ಲಿ ಸಂಭವಿಸಿದೆ. ಆರೋಪಿ ಪಾಣೆಮಂಗಳೂರಿನ ಬಾಲಕೃಷ್ಣ.ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಕ್ಕಾಜೆಯಿಂದ ಕಂಚಿನಡ್ಕಪದವು ಭಾಗಕ್ಕೆ ಬಾಲಕೃಷ್ಣ ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡಲು ರಿಕ್ಷಾದಲ್ಲಿ ಸಾಗುತ್ತಿರುವ ಬಗ್ಗೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. …
Read More »
BigTv News
April 8, 2026
Breaking News
ಬೆಂಗಳೂರು : ಸಿಲಿಕಾನ್ ಸಿಟಿಯ ಸುಮನಹಳ್ಳಿ ಫ್ಲೈಓವರ್ ಕೆಳಭಾಗದ ಪಾರ್ಕಿಂಗ್ ನಲ್ಲಿ ಆಕಸ್ಮಿಕವಾಗಿ ದ್ವಿಚಕ್ರ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಈ ವೇಳೆ ಅಕ್ಕಪಕ್ಕದ ಕೆಲ ವಾಹಗಳಿಗೂ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಸಂಚಾರ ವ್ಯವಸ್ಥೆ ಕೆಲಕಾಲ ವ್ಯತ್ಯಯಗೊಂಡಿತು. ಆದ್ರೆ ಈ ಘಟನೆಗೆ ನಿಖರ ಕಾರಣಗಳು ಇನ್ನಷ್ಟೇ ತಿಳಿಯಬೇಕಿದೆ. ಈ ಪ್ರದೇಶದಲ್ಲಿ ವಾಹನಗಳ ದಟ್ಟಣೆ ಮತ್ತು ಪಾರ್ಕಿಂಗ್ ಸಮಸ್ಯೆ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. …
Read More »
BigTv News
April 8, 2026
Breaking News
ವಿಜಯಪುರ ಜಿಲ್ಲೆಯ ಕಲಕೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವತ್ತಿನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿ, ಕಳುವಾಗಿದ್ದ ಆಸ್ತಿಯನ್ನು ವಶಪಡಿಸಿಕೊಂಡು ವಾರಸುದಾರರಿಗೆ ಮರಳಿ ನೀಡಿದ್ದಾರೆ. ಕಲಕೇರಿ ಪೊಲೀಸ್ ಠಾಣಾ ಮೊ.ಸಂ.07/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಹಚ್ಚಿ ಬಂಧಿಸಲಾಯಿತು. ಅವರಿಂದ ಸುಮಾರು ₹35,15,000 ಮೌಲ್ಯದ ಜೆಸಿಬಿ ಯಂತ್ರ ಹಾಗೂ ಒಂದು ಮೋಟಾರ್ ಸೈಕಲ್ ಅನ್ನು ಪೊಲೀಸರು ವಶಪಡಿಸಿಕೊಂಡರು. ನಂತರ …
Read More »
BigTv News
April 8, 2026
Breaking News
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಕಾರು ಹಾಗೂ ಅದರ ಚಾಲಕ ಸುಟ್ಟು ಕರಕಲಾಗಿದ್ದಾರೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ವೋಕ್ಸ್ ವ್ಯಾಗನ್ ಕಂಪನಿಯ ಕಾರಿನಲ್ಲಿ ಚಲಿಸುತ್ತಿರುವಾಗ ಈ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಚಾಲಕನ ಗುರುತು ಸಹ ಸಿಗದಂತೆ ದೇಹ ಸುಟ್ಟು ಕರಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ …
Read More »