Breaking News

Breaking News

45 ನಿಮಿಷದ ಸತತ ಪ್ರಯತ್ನದಿಂದಲೂ ಜೀವ ಉಳಿಸಲಾಗಲಿಲ್ಲ, ನಾನಾ ಪಾಟೇಕರ್ ಕೊನೆಯ ಕ್ಷಣ ಹೇಗಿತ್ತು?

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ 5.20ರ ಸುಮಾರಿಗೆ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನಡೆಸಿದರೂ ಫಲಕಾರಿಯಾಗಲಿಲ್ಲ. ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿದುಬಂದಿದೆ. ನಾನಾ ಪಾಟೇಕರ್ ಅವರು 2010ರಲ್ಲಿ ಬಿಡುಗಡೆಯಾದ ಕನ್ನಡದ ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು. …

Read More »

ಹೆತ್ತ ತಾಯಿಯನ್ನೇ ಕೊಂದ ಮಗ.. ಕೊಲೆ ಮುಚ್ಚಿಹಾಕಲು ಆಡಿದ ನಾಟಕ ಬಯಲು!

ಬೆಂಗಳೂರು: ತಾಯಿಯ ಸಾವನ್ನು ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದ ಮಗನ ಕೃತ್ಯ ಮರಣೋತ್ತರ ಪರೀಕ್ಷೆಯಿಂದ ಬಯಲಾಗಿದೆ. ಕಾಡುಗೋಡಿಯ ಬೇವಿನಮರ ಕಾಲೋನಿಯಲ್ಲಿ ಸೆ.24ರಂದು 60 ವರ್ಷದ ಭಾಗ್ಯಮ್ಮ ಮೃತಪಟ್ಟಿದ್ದರು. ಮಂಚದಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರೂ, ಪೊಲೀಸರಿಗೆ ಅನುಮಾನ ಮೂಡಿ ಅಂತ್ಯಕ್ರಿಯೆ ತಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ವರದಿಯಲ್ಲಿ ತಲೆಗೆ ಗಂಭೀರ ಗಾಯವಾಗಿದ್ದು, ದೇಹದ 12 ಕಡೆ ಗಾಯಗಳಾಗಿರುವುದು ಪತ್ತೆಯಾಗಿದೆ. ಬಳಿಕ ಅಕ್ಕಪಕ್ಕದವರ ವಿಚಾರಣೆಯಲ್ಲಿ ಘಟನೆಗೂ …

Read More »

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಹಿಳೆಗೆ 2 ಕೋಟಿ ರೂ. ವಂಚನೆ

ಮಂಗಳೂರು: ಸಿಬಿಐ ಹಾಗೂ ಮುಂಬೈ ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಸೈಬರ್ ವಂಚಕರು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ಬೆದರಿಸಿ ₹2 ಕೋಟಿ ವಂಚಿಸಿದ್ದಾರೆ. ಮನಿ ಲಾಂಡರಿಂಗ್ ಸೇರಿದಂತೆ ಗಂಭೀರ ಅಪರಾಧಗಳಲ್ಲಿ ತಮ್ಮ ಹೆಸರು ಕೇಳಿಬಂದಿದೆ ಎಂದು ಸುಳ್ಳು ಹೇಳಿ ಮಹಿಳೆಯನ್ನು ಭಯಪಡಿಸಿದ್ದರು. ಬಳಿಕ ಸಿಬಿಐ ಅಧಿಕಾರಿಯೆಂದು ಹೇಳಿಕೊಂಡ ವಂಚಕ ವಿಡಿಯೋ ಕಾಲ್ ಮಾಡಿ, ಯಾರಿಗೂ ಮಾಹಿತಿ ನೀಡದಂತೆ ಸೂಚಿಸಿದ್ದ. ಬ್ಯಾಂಕ್ ಹಾಗೂ ಆಸ್ತಿ ವಿವರ ಪಡೆದು ಪರಿಶೀಲನೆಗಾಗಿ …

Read More »

ಕಲಬುರಗಿಯಲ್ಲಿ ಪತ್ನಿ, ಪ್ರಿಯಕರ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಲಬುರಗಿ: ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪತ್ನಿ, ಪ್ರಿಯಕರ ಸೇರಿದಂತೆ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹2.39 ಲಕ್ಷ ದಂಡ ವಿಧಿಸಿದೆ. ಸುನೀತಾ ಗೋಟೂರ, ಮಲ್ಲಪ್ಪ ಪೂಜಾರಿ, ಸಾಬಣ್ಣ ಪೂಜಾರಿ ಹಾಗೂ ಬಸಪ್ಪ ಗೋಟೂರ ಶಿಕ್ಷೆಗೆ ಒಳಗಾದವರು. ಚಿಂಚೋಳಿ ತಾಲ್ಲೂಕಿನ ಕುಡ್ಡಳ್ಳಿ ಗ್ರಾಮದಲ್ಲಿ 2022ರ ಆಗಸ್ಟ್‌ 5ರಂದು ರಾಮಪ್ಪ ಗೋಟೂರ ಕೊಲೆಯಾಗಿದ್ದರು. ಪತ್ನಿ ಸುನೀತಾ ಹಾಗೂ ಪ್ರಿಯಕರ ಮಲ್ಲಪ್ಪ ಸೇರಿ ಇತರರ ನೆರವಿನಿಂದ …

Read More »

ಕೆಪಿಎಸ್ಸಿ ಅಕ್ರಮ: ಸಾಹುಕಾರ್‌, ಗೀತಾ 13 ದಿನ ಇ.ಡಿ. ವಶಕ್ಕೆ

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಹಾಗೂ ಸದಸ್ಯೆ ಬಿ.ವಿ.ಗೀತಾ ಅವರನ್ನು ಅ.19ರವರೆಗೆ ಇ.ಡಿ. ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಭ್ಯರ್ಥಿಗಳಿಂದ 10ರಿಂದ 20 ಲಕ್ಷ ರೂ. ಮುಂಗಡ ಪಡೆದು, ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ನೀಡುವ ಮೂಲಕ ಹುದ್ದೆ ಕೊಡಿಸುವ ಅಕ್ರಮದಲ್ಲಿ ಇಬ್ಬರು ಭಾಗಿಯಾಗಿದ್ದಾರೆ ಎಂದು ಇ.ಡಿ. ಆರೋಪಿಸಿದೆ. ಇಬ್ಬರು ಆರೋಪಿಗಳು 6 ಅಭ್ಯರ್ಥಿಗಳಿಂದ ಉತ್ತರ ಸಹಿತ ಪ್ರಶ್ನೆಪತ್ರಿಕೆ ನೀಡಲು …

Read More »

ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ಸರ್ಕಾರದ ಅನುದಾನ ಪಡೆದ ಮಹಿಳೆಗೆ ಜೈಲು ಶಿಕ್ಷೆ, 25,000 ರೂ. ದಂಡ

ಬಳ್ಳಾರಿ: ನಕಲಿ ಜಾತಿ ಪ್ರಮಾಣಪತ್ರ ಸೃಷ್ಟಿಸಿ ಸರ್ಕಾರದ ಅನುದಾನವನ್ನು ಅಕ್ರಮವಾಗಿ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಿಲ್ಲಾ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ಒಟ್ಟು ₹25,000 ದಂಡ ವಿಧಿಸಿದೆ. ಬಿ. ಗೀತಾ ಅಲಿಯಾಸ್ ಗೀತಮ್ಮ ಶಿಕ್ಷೆಗೆ ಗುರಿಯಾದವರು. ಪರಿಶಿಷ್ಟ ಪಂಗಡಕ್ಕೆ ಸೇರದಿದ್ದರೂ ನಕಲಿ ಪ್ರಮಾಣಪತ್ರ ಪಡೆದಿದ್ದ ಆರೋಪದ ಮೇಲೆ ಬ್ರೂಸ್‌ಪೇಟೆ ಠಾಣೆಯಲ್ಲಿ 2020ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಭಾ.ದಂ.ಸಂ. …

Read More »

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ ಆರೋಪ – ಎಸ್‌ಪಿ ಕಚೇರಿ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ದಾವಣಗೆರೆ: ವರದಕ್ಷಿಣೆ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿ, 26 ವರ್ಷದ ವಿನುತಾ ಮೃತಪಟ್ಟ ಪ್ರಕರಣ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಹರಿಹರ ತಾಲೂಕಿನ ಕಡ್ಲೆಗೊಂದಿ ಗ್ರಾಮದ ವಿನುತಾ ಅವರ ಕುಟುಂಬಸ್ಥರು ನ್ಯಾಯಕ್ಕಾಗಿ ಎಸ್‌ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಐದು ವರ್ಷಗಳ ಹಿಂದೆ ಶಿವಶಂಕರ್ ಜೊತೆ ವಿವಾಹವಾಗಿದ್ದ ವಿನುತಾಗೆ ಮಕ್ಕಳಾಗಿರಲಿಲ್ಲ. ಈ ವಿಚಾರವಾಗಿ ಪತಿ ಹಾಗೂ ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ತವರು ಮನೆಯಿಂದ …

Read More »

ಮಕ್ಕಳಾಗಿಲ್ಲ, ತವರಿನಿಂದ ಹಣ ತಂದಿಲ್ಲವೆಂದು ಪತಿಯಿಂದಲೇ ಹೆಂಡತಿಯ ಭೀಕರ ಕೊಲೆ!

ಕಲಬುರಗಿ: ಮಕ್ಕಳಾಗಿಲ್ಲ ಹಾಗೂ ತವರು ಮನೆಯಿಂದ ಹೆಚ್ಚುವರಿ ಹಣ ತರಲಿಲ್ಲ ಎಂಬ ಕಾರಣಕ್ಕೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೊಬ್ಬ, ಜಗಳದ ವೇಳೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವಕೀಲನಾಗಿರುವ ಸೂರ್ಯಕಾಂತ್‌ ಪತ್ನಿಯನ್ನು ಕೊಲೆ ಮಾಡಿದ ಬಳಿಕ, ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪ್ರಿಯಾಂಕಾ ಕುಟುಂಬಸ್ಥರು ಆರೋಪಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …

Read More »

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ ಒಂದು ತಿಂಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ತಲೆಮರೆಸಿಕೊಂಡಿರುವ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದು, ಪೊಲೀಸ್ ತನಿಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಆತನಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಎನ್‌.ಆರ್‌.ಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್ ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಪಿ ಜಿತೇಂದ್ರ ಕುಮಾರ್ …

Read More »

ಬೆಂಗಳೂರಿನ 8ನೇ ಮೈಲಿಯಲ್ಲಿ KSRTC ಬಸ್ ಚಾಲಕರ ಕಳ್ಳಾಟ ಬಯಲು: ಕಾದು ಕಾದು ಸುಸ್ತಾಗಿ ಬಸ್ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆ

ಬೆಂಗಳೂರು: ನಗರದ ಹೊರವಲಯದ 8ನೇ ಮೈಲಿ ಸಿಗ್ನಲ್ ಬಳಿ ಸಂಜೆ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗಳು ಸ್ಥಳೀಯ ಪ್ರಯಾಣಿಕರನ್ನು ಹತ್ತಿಸಿಕೊಳ್ಳದೆ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಮಾತ್ರ ಆದ್ಯತೆ ನೀಡುತ್ತಿವೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು, ಸಿರಾ, ಹಿರಿಯೂರು ಹಾಗೂ ಚಿತ್ರದುರ್ಗಕ್ಕೆ ತೆರಳುವ ಪ್ರಯಾಣಿಕರು ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಸುಮಾರು ಎರಡೂವರೆ ಗಂಟೆ ಕಾಯುತ್ತಿದ್ದ ಮಹಿಳೆಯೊಬ್ಬರು ಬಸ್‌ ನಿಲ್ಲಿಸದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ವೊಂದನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. …

Read More »