Breaking News

Breaking News

ತಂಬಾಕು ಮಾರಾಟ ಅಂಗಡಿ ಮೇಲೆ ದಾಳಿ: 40 ಪ್ರಕರಣ ದಾಖಲು

ಬೆಳಗಾವಿ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್‌ ಇಲಾಖೆಯು ನಗರದಲ್ಲಿ ಸೋಮವಾರ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿದವು. ಕೋಟ್ಪಾ-2003 ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿ 40 ಪ್ರಕರಣ ದಾಖಲಿಸಿ, ತಪ್ಪಿತಸ್ಥರಿಗೆ ದಂಡ ವಿಧಿಸಲಾಯಿತು. ಜತೆಗೆ, ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಅನುಮತಿ ಪಡೆಯದೆ ತಾಲ್ಲೂಕಿನ ಸುಳೇಬಾವಿ ಗ್ರಾಮದ ಹೊಸಕೇರಿ ಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಮದುವೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ಡಾಲ್ಬಿ ಸಿಸ್ಟಮ್‌ …

Read More »

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಹೊತ್ತಿ ಉರಿದ ಕಾರು, ಚಾಲಕ ಅಪಾಯದಿಂದ ಪಾರು

ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ‌ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ. ಉಡುಪಿಯಿಂದ ಸೊರಬಕ್ಕೆ ಡಸ್ಟರ್ ಕಾರು ತೆರಳುತ್ತಿತ್ತು. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಬಳಿ ಬರುತ್ತಿದ್ದಂತೆ ಡಸ್ಟರ್ ಕಾರಿನನ ಇಂಜಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುಡ್ಡಕ್ಕೆ ಢಿಕ್ಕಿ ಹೊಡೆದಿದೆ. ಕಾರು ನೋಡ ನೋಡುತ್ತಿದ್ದಂತೆಯೇ …

Read More »

ಧರ್ಮಸ್ಥಳ| ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರು …

Read More »

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಅತ್ಯಾಚಾರ ಬಳಿಕ ₹70 ಸಾವಿರ ವಸೂಲಿ ಮಾಡಿದ್ದ ಸಮೀರ್

ನಗರದಲ್ಲಿ ದಾಖಲಾಗಿರುವ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಮ್ ಟ್ರೈನರ್‌ ಸಮೀರ್ ವಿರುದ್ಧ ಗಂಭೀರ ಆರೋಪಗಳು ಹೊರಬಂದಿವೆ. ಪೊಲೀಸರ ತನಿಖೆಯಲ್ಲಿ, ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಬೆದರಿಕೆ ಹಾಕಿ ₹70,000ಕ್ಕೂ ಅಧಿಕ ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿದೆ.ವಿವಿಧ ಹಂತಗಳಲ್ಲಿ ₹5,000, ₹20,000, ₹25,000 ಸೇರಿದಂತೆ ಹಲವಾರು ಬಾರಿ ಹಣ ಪಡೆದಿದ್ದಾನೆ ಎನ್ನಲಾಗಿದೆ. ಈ ವ್ಯವಹಾರಗಳಿಗೆ ಸಂಬಂಧಿಸಿದ ಸ್ಕ್ರೀನ್‌ಶಾಟ್‌ಗಳು ಕೂಡ ಪತ್ತೆಯಾಗಿವೆ. ಇದಕ್ಕೂ ಮೊದಲು ಆರೋಪಿಯ ಮೊಬೈಲ್‌ …

Read More »

ಮಹಮದ್ ನಲಪಾಡ್‌ ಈ ಮಾತಿಗೆ ಸುರ್ಜೇವಾಲ ಗರಂ; ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷನಿಗೆ ಬಿಗ್​ ವಾರ್ನಿಂಗ್

ಬೆಂಗಳೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಗೆಲುವಿಗಾಗಿ ಘಟಾನುಘಟಿಗಳನ್ನು ಮೈದಾನಕ್ಕಿಳಿಸಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಪ್ರಚಾರ ಜೋರಾಗಿದ್ದು, ಮುಸ್ಲಿಂ ಸಮುದಾಯದೊಳಗಿನ ಅಸಮಾಧಾನ ತಣ್ಣಗಾಗಿಸಲು ಕಾಂಗ್ರೆಸ್ ಮುಸ್ಲಿಂ ನಾಯಕರು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಈ ನಡುವೆ, ಮುಸ್ಲಿಂ ಪಕ್ಷೇತರ ಅಭ್ಯರ್ಥಿಗಳನ್ನು ಮನವೊಲಿಸಲು ತೆರಳಿದ್ದ ಮಹಮದ್ ನಲಪಾಡ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ. “ಗಡ್ಡ …

Read More »

ನಡುಪದವು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ; ಪ್ರಕರಣ ದಾಖಲು

ಕೊಣಾಜೆ: ನಡುಪದವು ಎಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳ ಗುಂಪು ಕಾಲೇಜಿನ ಹೊರಗಡೆ ಪರಸ್ಪರ ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಸಿದಂತೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಲೇಜಿನ ಗೇಟ್ ನ ಹೊರಭಾಗದಲ್ಲಿ ಎ.1 ರಂದು ಮಧ್ಯಾಹ್ನ ಸುಮಾರು 10-15 ಜನರ ತಂಡ ಅವ್ಯಾಚ್ಯವಾಗಿ ಮಾತನಾಡಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದರು. ಹೊಡೆದಾಡಿಕೊಂಡ ದೃಶ್ಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಬಳಿಕ ಪೊಲೀಸರು ಕಾಲೇಜಿನ ಸಂಬಂಧಪಟ್ಟವರಲ್ಲಿ ವಿಚಾರಿಸಿ ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಹೊಡೆದಾಡಿಕೊಂಡ ಪದವಿ ಹಾಗೂ ಎಂಜಿನಿಯರಿಂಗ್ …

Read More »

ಶಿರಾ ಬಳಿ ಎರಡು ಬಸ್‌ಗಳ ಮಧ್ಯೆ ಅಪಘಾತ: ಇಬ್ಬರು ಸಾವು, 32 ಮಂದಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಭಾನುವಾರ ಎರಡು ಬಸ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ. ಗದಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‌ಗೆ ಹಾವೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಿಂದಿನಿಂದ ಡಿಕ್ಕಿ ಹೊಡೆದಿದೆ.ಖಾಸಗಿ ಬಸ್‌ನಲ್ಲಿದ್ದ ಶಿಗ್ಗಾವಿ ಪಟ್ಟಣದ ಪ್ರವೀಣ್‌ (16), ರೋಣ ತಾಲ್ಲೂಕಿನ ಚವಡಿ ಗ್ರಾಮದ ಸಂಗೀತಾ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ 9 ಮಂದಿಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ತುಮಕೂರಿನಲ್ಲಿ KSRTC-ಖಾಸಗಿ ಬಸ್ ಡಿಕ್ಕಿ: ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಹುಬ್ಬಳ್ಳಿಯಿಂದ ಬರುತ್ತಿದ್ದ ಖಾಸಗಿ ಬಸ್‌ನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್‌ನಲ್ಲಿದ್ದ …

Read More »

ನೇರಳಕಟ್ಟೆ: ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಭಸ್ಮ

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದು ಸುಟ್ಟು ಕರಕಲಾದ ಘಟನೆ ಶನಿವಾರ ತಡರಾತ್ರಿ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಸಂಭವಿಸಿದೆ. ಹಂದಕುಂದ ಅರೆಕಲ್ಲು ಮನೆಯ ಗಣಪು ಶೆಡ್ತಿ ಅವರ ಮನೆ ಹಾನಿಗೊಳಗಾಗಿರುವುದು. ಮನೆಯ ಮಾಡು, ಗೋಡೆಗೂ ಹಾನಿಯಾಗಿದೆ. ಮನೆ ಒಳಗಿದ್ದ ಸ್ವಲ್ಪ ಚಿನ್ನಾಭರಣ, ನಗದು, ಟಿವಿ, ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಬರೆ, ಪಾತ್ರೆಗಳೆಲ್ಲವೂ ಸುಟ್ಟು ಕರಕರಲಾಗಿದೆ. ಗಣಪು ಶೆಡ್ತಿ ಹಾಗೂ ಅವರ ಮೊಮ್ಮಗ ಮಾತ್ರ …

Read More »

ಚಿಕ್ಕಬಳ್ಳಾಪುರ | ಕಾರು ಪಲ್ಟಿ; ಬಾಲಕಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ಕೊತ್ತನೂರು ಗೇಟ್‌ನ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಶನಿವಾರ ಕಾರು ಉರುಳಿ ಬಿದ್ದು ಒಂಬತ್ತು ವರ್ಷ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಕಲಬುರಗಿ ಜಿಲ್ಲೆ ಚಿಂಚೋಳಿಯ ರಾಜೇಂದ್ರ ಹಾಗೂ ಭಾಗ್ಯ ದಂಪತಿ ಪುತ್ರಿ ಅಂಕಿತಾ ಮೃತರು. ದಂಪತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ವಾಸಿಸುತ್ತಿದ್ದು ಚಿಂಚೋಳಿಯಿಂದ ಹೊಸಕೋಟೆ ಬರುವಾಗ ಈ ಅವಘಡ ನಡೆದಿದೆ.ಕೊತ್ತನೂರು ಗೇಟ್ ಬಳಿ ಲಾರಿಯನ್ನು ಹಿಂದಿಕ್ಕುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. …

Read More »