BigTv News
April 5, 2026
Breaking News
ಯಾದಗಿರಿ: ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆ ಪೊಲೀಸರು ಶನಿವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಸಪ್ಪ (25) ಮತ್ತು ರಡ್ಡೆಪ್ಪ (30) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಬಯಲು ಬಹಿರ್ದೆಸೆಗೆ ತೆರಳಿ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ಬಸಪ್ಪ ಅಡ್ಡಗಟ್ಟಿ, ತನ್ನ ನಾದಿನಿಯೊಂದಿಗೆ ಪ್ರೀತಿಸುತ್ತಿರುವ ವಿಚಾರವನ್ನು ಕುಟುಂಬದವರಿಗೆ ಏಕೆ ತಿಳಿಸಿದ್ದೆ ಎಂದು ಪ್ರಶ್ನಿಸಿ ಬೆದರಿಕೆ ಹಾಕಿ …
Read More »
BigTv News
April 5, 2026
Breaking News
ಹುಬ್ಬಳ್ಳಿ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾನಗರ ಪೊಲೀಸರು ಜಿಮ್ ಟ್ರೇನರ್ ವಿಜಯನಗರದ ಸಮೀರ್ ಮುಲ್ಲಾ ಎಂಬಾತನನ್ನು ಶನಿವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಸಮೀರ್ ಜಿಮ್ ತರಬೇತಿ ನೆಪದಲ್ಲಿ ಯುವತಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ನಶೆ ಬರುವ ಪದಾರ್ಥ ಸೇರಿಸಿ ಜ್ಯೂಸ್ ಕುಡಿಸಿದ್ದ.ನಂತರ ಖಾಸಗಿ ಫೋಟೋ ಮತ್ತು ವಿಡಿಯೋ ಮಾಡಿ, ಅದನ್ನು ಎಲ್ಲರಿಗೂ ಹರಿಬಿಡುವುದಾಗಿ ಹೆದರಿಸಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು …
Read More »
BigTv News
April 5, 2026
Breaking News
ಚನ್ನಪಟ್ಟಣ: ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಸೀಟು ಹಿಡಿಯಲು ಹೋಗಿ ಆಯತಪ್ಪಿ ಜಾರಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ಕೈ ಸಂಪೂರ್ಣ ಜಜ್ಜಿಹೋಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹೊನ್ನಾಯಕನಹಳ್ಳಿ ಜಯಮ್ಮ (60) ಮೃತರು. ಅವರು ಏ.2ರಂದು ಕಾರ್ಯನಿಮಿತ್ತ ನಗರಕ್ಕೆ ಬಂದು ವಾಪಸ್ ತಮ್ಮ ಗ್ರಾಮಕ್ಕೆ ತೆರಳಲು ಬಸ್ ಹತ್ತಿದ್ದರು. ನಿಧಾನಕ್ಕೆ ಚಲಿಸುತ್ತಿದ್ದ ವೇಳೆಯಲ್ಲಿಯೇ ಸೀಟು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದರು. ತೀವ್ರ ರಕ್ತಸ್ರಾವಗೊಂಡಿದ್ದ …
Read More »
BigTv News
April 5, 2026
Breaking News
ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಮುಫೀಸ್ ಮಿಯಾನ್ನವರ್ ಎಂಬ ಯುವಕನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಯುವತಿಯ ದೂರಿನ ಪ್ರಕಾರ, ಆರೋಪಿ ಪ್ರೀತಿಯ ನೆಪದಲ್ಲಿ ಸಂಪರ್ಕ ಬೆಳೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಇದಲ್ಲದೆ, ಧಾರವಾಡದಲ್ಲಿ ರಿಜಿಸ್ಟರ್ …
Read More »
BigTv News
April 5, 2026
Breaking News
ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪೊಲೀಸರಿಂದ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಮದ್ಯ ಸೇವಿಸಿದ್ದಕ್ಕೆ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ದಂಡ ಹಾಕಿದ್ದರು. ಆನಂತರ ಲಾರಿಯನ್ನು ಪೊಲೀಸರು ಸ್ಟೇಷನ್ ಬಳಿಗೆ ತಂದಿದ್ದಾರೆ ಆದರೆ ಲಾರಿ ಚಾಲಕ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತಂತೆ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೆಸ್ ದಾಖಲಾಗಿದೆ.
Read More »
Shaikh BigTv
April 5, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದಲ್ಲಿ ಈಗಾಗಲೇ ಜಿಮ್ ಟ್ರೇನರ್ ಸಂಬಂಧಿತ ಪ್ರಕರಣ ಚರ್ಚೆಯಲ್ಲಿರುವ ನಡುವೆಯೇ, ಮತ್ತೊಂದು ಗಂಭೀರ ‘ಲವ್ ಜಿಹಾದ್’ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯು ಯುವತಿಯೊಂದಿಗೆ ಸಂಬಂಧ ಬೆಳೆಸಿ, ನಂತರ ಖಾಸಗಿ ವಿಡಿಯೋಗಳನ್ನು ಆಧಾರವಾಗಿ ಬಳಸಿಕೊಂಡು ಬೆದರಿಕೆ ಹಾಕುತ್ತಿದ್ದನೆಂದು ತಿಳಿದುಬಂದಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿಯನ್ನು ಧಾರವಾಡದಲ್ಲಿ ರಿಜಿಸ್ಟರ್ ಮದುವೆಗೆ …
Read More »
BigTv News
April 5, 2026
Breaking News
ಕಲಬುರಗಿ: ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಈಶ್ವರ್ ರಾಥೋಡ್ ಕಾಲಿಗೆ ಫೈರಿಂಗ್ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಟೇಷನ್ ಬಜಾರ್ ಠಾಣೆ ಪೋಲಿಸರು ಕೊಲೆ ಆರೋಪಿ ಈಶ್ವರ್ ರಾಥೋಡ್ ಎರಡು ಕಾಲಿಗೆ ಗುಂಡು ಹಾರಿಸಿದ್ದಾರೆ. ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಉದ್ಯಮಿ ಅನಿಲ್ ರಾಥೋಡ್ ಕೊಲೆ ನಡೆದಿತ್ತು. ಕೊಲೆ ನಡೆದ ಎರಡು ದಿನದಲ್ಲಿ ಆರೋಪಿ ಈಶ್ವರ್ ರಾಥೋಡ್ ಪತ್ತೆ ಹಚ್ಚಿ ಪೊಲೀಸರು …
Read More »
BigTv News
April 5, 2026
Breaking News
ಕುಂದಾಪುರ ತಲ್ಲೂರು ಗ್ರಾಮದ ಕೋಟೆಬಾಗಿಲು ನಿವಾಸಿ ಶಶಿಕಲಾ (20) ಎಂಬ ಯುವತಿ ಶನಿವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮನೆಯ ಸಮೀಪದ ಬಾವಿಯಲ್ಲಿ ಅವರ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಶಶಿಕಲಾ, ಎಪ್ರಿಲ್ 3ರಂದು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಹೋದವರು ವಾಪಸ್ ಬಾರದೇ ಇದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. …
Read More »
BigTv News
April 5, 2026
Breaking News
ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್ ಮುಲ್ಲಾನನ್ನ ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೆ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ.ಹೌದು ಮುಫೀಸ್ ಮಿಯನ್ನವರ ಎಂಬಾತನಿಂದ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸೆಗಿದ್ದಾನೆ ಬಳಿಕ ಧಾರವಾಡದಲ್ಲಿ …
Read More »
BigTv News
April 5, 2026
Breaking News
ಕೊಪ್ಪಳ: ಠಾಣೆ ಜಾಮೀನು ನೀಡಲು ಲಂಚ ಪಡೆದ ಆರೋಪದ ಮೇಲೆ ಇಲ್ಲಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತರು ಶನಿವಾರ ಬಂಧಿಸಿದ್ದಾರೆ. ಅಟ್ರಾಸಿಟಿ ಪ್ರಕರಣವೊಂದಕ್ಕೆ ಜಾಮೀನು ನೀಡಲು ಫೋನ್ ಪೇ ಮೂಲಕ ಪೊಲೀಸ್ ಸಿಬ್ಬಂದಿ ಚಂದಾಲಿಂಗ ₹15 ಸಾವಿರ ಮತ್ತು ಮಾರುತಿ ₹3 ಸಾವಿರ ಲಂಚ ಪಡೆದುಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಇದರನ್ವಯ ದಾಳಿ ನಡೆಸಿ ಪೊಲೀಸರನ್ನು ಬಂಧಿಸಲಾಗಿದೆ. ಲೋಕಾಯುಕ್ತ ಎಸ್.ಪಿ. …
Read More »