Breaking News

Breaking News

ಪೊಲೀಸ್ ಇಲಾಖೆಯ ಜಾಗ ಕಬಳಿಕೆ ಮಾಡಲು ಯತ್ನ ಮೂವರು ಬಂಧನ.!

ಬೆಂಗಳೂರು: ಪೊಲೀಸ್ ಇಲಾಖೆಯ ಜಾಗ ಕಬಳಿಕೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎ1 ಕೃಷ್ಣಮೂರ್ತಿ, ಎ2 ಶ್ರೀನಾಥ್ ನಗರಗಡ್ಡೆ, ಎ3 ಕೃಷ್ಣ ಅವರನ್ನು ಬಂಧಿಸಲಾಗಿದೆ. ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಬಂಧಿತರು ಸ್ಕೆಚ್ ಹಾಕಿದ್ದರು. ಲೋಕಾಯುಕ್ತ ಪಿಐ ಕುಮಾರ್ ಮನೆಗೆ ವಿದ್ಯುತ್ ಬಿಲ್ ಬಂದಿತ್ತು. ಮಹಾಲಕ್ಷ್ಮಿ ಎಂಬ ಹೆಸರಿನಲ್ಲಿ ಬಂದಿದ್ದು, ವಿದ್ಯುತ್ ಬಿಲ್ಲಿಂದಲೇ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿತ್ತು. ನಗರದ ಹಲವು ಕಡೆ ಸರ್ಕಾರಿ …

Read More »

ಲೈಂಗಿಕ ದೌರ್ಜನ್ಯ ಆರೋಪ: ಹುಬ್ಬಳ್ಳಿ ಜಿಮ್ ಟ್ರೇನರ್ ಸೆರೆ

ಹುಬ್ಬಳ್ಳಿ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾನಗರ ಪೊಲೀಸರು ಜಿಮ್ ಟ್ರೇನರ್ ವಿಜಯನಗರದ ಸಮೀರ್ ಮುಲ್ಲಾ ಎಂಬಾತನನ್ನು ಶನಿವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಸಮೀರ್‌ ಜಿಮ್ ತರಬೇತಿ ನೆಪದಲ್ಲಿ ಯುವತಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ನಶೆ ಬರುವ ಪದಾರ್ಥ ಸೇರಿಸಿ ಜ್ಯೂಸ್ ಕುಡಿಸಿದ್ದ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋ ಮಾಡಿ, ಅದನ್ನು ಎಲ್ಲರಿಗೂ ಹರಿಬಿಡುವುದಾಗಿ ಹೆದರಿಸಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ …

Read More »

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ

ಶಿವಮೊಗ್ಗ: ಭದ್ರಾವತಿಯ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಪೇಪರ್‌ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ರಾಜಣ್ಣ ಅಲಿಯಾಸ್ ಕಾರ್ಪೆಂಟರ್ ರಾಜಣ್ಣ ಬಂಧಿತ ವ್ಯಕ್ತಿ. 2013ರಲ್ಲಿ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಆನಂತರ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ತದನಂತರ ಜಾಮೀನಿನ ಮೇಲೆ …

Read More »

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ

ಶಿವಮೊಗ್ಗ: ಭದ್ರಾವತಿಯ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಪೇಪರ್‌ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ರಾಜಣ್ಣ ಅಲಿಯಾಸ್ ಕಾರ್ಪೆಂಟರ್ ರಾಜಣ್ಣ ಬಂಧಿತ ವ್ಯಕ್ತಿ. 2013ರಲ್ಲಿ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಆನಂತರ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ತದನಂತರ ಜಾಮೀನಿನ ಮೇಲೆ …

Read More »

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 9 ಲಕ್ಷ ನಗದು ವಶಕ್ಕೆ ಪಡೆದು, 19 ಜನರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕು ವಸಂತಪುರ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು, ದ್ವಿ ಚಕ್ರ ವಾಹನಗಳು ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಲಾಗಿದೆ. ಸದ್ಯ ಈ ಘಟನಾ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

ಜಾಮೀನು ಕೊಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ, ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಕೊಡಿಸಲು ಹಣಕ್ಕೆ ಬೇಡಿಕೆ ಇಡುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆಕೊಪ್ಪಳದಲ್ಲಿ ಇಬ್ಬರು ಪೊಲೀಸ್ ಪೇದೆಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅಟ್ರಾಸಿಟಿ ಪ್ರಕರಣ ಒಂದರಲ್ಲಿ ಆರೋಪಿಗಳಿಗೆ ಜಾಮೀನು ಕೊಡಿಸಲು ಇಬ್ಬರು ಪೊಲೀಸ್ ಪೇದೆಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ನಾಗರಿಕ ಹಕ್ಕು ಜಾರಿ …

Read More »

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ರಸ್ತೆ ಪಾಲು!-

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮೈಸೂರಿನಿಂದ ಕಲಬುರಗಿಗೆ ಬಿಯರ್ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಕಾಡೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಲಾರಿ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಗೆ ಮಗುಚಿಬಿದ್ದಿದೆ. ಇದರಿಂದ ಲಾರಿಯಲ್ಲಿದ್ದ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಮದ್ಯ ರಸ್ತೆಪಾಲಾಗಿದೆ. ಬಿಯರ್ ಬಾಟಲಿಗಳು ಪುಡಿಪುಡಿಯಾಗಿ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ …

Read More »

ಜಿಮ್ ತರಬೇತುದಾರನಿಗೆ ಹಲ್ಲೆ ವಿಚಾರ : ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದೇನು ?

ಹುಬ್ಬಳ್ಳಿ : ಯುವತಿಯ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ಕೂಲಂಕುಷ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯುವತಿ ಮತ್ತು ಆಕೆಯ ತಾಯಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದಾರೆ. ಮತ್ತೊಂದೆಡೆ ಸಮೀರ್ ಕುಟುಂಬದವರು ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದರು. ಮೂರು ದೂರುಗಳನ್ನೂ ಸಮಗ್ರವಾಗಿ ಪರಿಶೀಲಿಸಲಾಗುತ್ತಿದ್ದು, …

Read More »

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

ಶಿವಮೊಗ್ಗ: ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ. ಶ್ವೇತಾ (30) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮಹಿಳೆ ಸ್ಟಾಫ್‌ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾರ್ಚ್ 29 ರಂದು ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ್ …

Read More »

ಕೊಡಗಿನಲ್ಲಿ ಭೀಕರ ಅಪಘಾತ: ಕಾರಿನ ಮೇಲೆ ಉರುಳಿದ ಪ್ರವಾಸಿ ಬಸ್, ನಾಲ್ವರು ಪಾರು

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿಗರ ಬಸ್‌ವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಘಟನೆ ನಡೆದಿದೆ. ಅಪಘಾತದ ತೀವ್ರತೆ ನೋಡಿದರೆ ಭಾರೀ ಅನಾಹುತ ಸಂಭವಿಸಬಹುದಾಗಿದ್ದರೂ, ಕಾರಿನಲ್ಲಿದ್ದ ನಾಲ್ವರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ಚಾಲಕ ಸುದೀಪ್ ಅತಿವೇಗದಲ್ಲಿ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ …

Read More »