BigTv News
April 2, 2026
Breaking News
ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಾಜೆ ಬಳಿಯ ಹಳ್ಳದಿಂದ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಚಿಕಟ್ಟೆಯಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸಜೀಪಮೂಡ ನಿವಾಸಿ ಪಿಕ್ ಅಪ್ ವಾಹನ ಚಾಲಕ ಅಬ್ದುಲ್ ರಝಾಕ್ ಪ್ರಕರಣದ ಆರೋಪಿಯಾಗಿದ್ದು, ಗ್ರಾಮಾಂತರ ಠಾಣಾ ಪಿಎಸ್‌ಐ ರನ್ನಗೌಡ ಪಾಟೀಲ್ ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಂಚಿಕಟ್ಟೆಗೆ ತೆರಳಿ ಪಿಕ್ ಅಪ್ ವಾಹನವನ್ನು ತಡೆದು ಚಾಲಕನನ್ನು ವಿಚಾರಿಸಿದಾಗ ಪರವಾನಿಗೆ ಪಡೆಯದೆ …
Read More »
BigTv News
April 2, 2026
Breaking News
ಬೆಳಗಾವಿ: ಹಳೇ ವೈಷಮ್ಯ ಹಿನ್ನೆಲೆ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸಂಗನಗೌಡ ಬಸನಗೌಡ ಪಾಟೀಲ (50) ಸೋಮ ವಾರ ರಾತ್ರಿ ಕೊಲೆಗೀಡಾಗಿದ್ದಾರೆ. ಗ್ರಾಮದ ಸಿದ್ಧೇಶ್ವರ ಜಾತ್ರೆ ಮೆರವಣಿಗೆ ಸಂದರ್ಭದಲ್ಲಿ ಸಂಗನಗೌಡ ಮೇಲೆ ಮಾರಕಾಸಗಳಿಂದ ಹಲ್ಲೆ ನಡೆದಿದ್ದು, ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ಕುರಿತು 16 ಜನರ ವಿರುದ್ಧ ನೇಸರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐವರನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ …
Read More »
BigTv News
April 2, 2026
Breaking News
ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಬೇಡಗಂ ಪೊಲೀಸರು ಫೋಕ್ಸೋ ಕೇಸು ದಾಖಲಿಸಿದ್ದಾರೆ. ಬಾಲಕಿ ನೀಡಿದ ದೂರಿನಂತೆ ಕುತ್ತಿಕ್ಕೋಲ್ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸಂಬಂಧಿಕನ ವಿರುದ್ಧ ಫೋಕ್ಸೋ ಕೇಸು ದಾಖಲಿಸಿದ್ದು. ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. 8ನೇ ತರಗತಿಯ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ತಂದೆಯ ವಿರುದ್ಧ ಮೇಲ್ಪರಂಬ ಪೊಲೀಸರು ಫೋಕ್ಸೋ ಕೇಸು ದಾಖಲಿಸಿದ್ದಾರೆ. ಬಾಲಕಿಗೆ ಕಿರುಕುಳ ನೀಡಿದ ಬಗ್ಗೆ ತಾಯಿಗೆ …
Read More »
BigTv News
April 2, 2026
Breaking News
ಬೆಳ್ತಂಗಡಿ: ಕಾಪಿನಡ್ಕ ಸೇತುವೆಯ ಬಳಿ ಬುಧವಾರ ಕಾರು ಮತ್ತು ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗುರುವಾಯನಕೆರೆ ಕಡೆಯಿಂದ ಸಂಚರಿಸುತ್ತಿದ್ದ ಕಾರು ಹಾಗೂ ಕಾಪಿನಡ್ಕ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದೆ, ರಿಕ್ಷಾ ಮತ್ತು ಕಾರಿನಲ್ಲಿದ್ದವರಿಗೆ ಗಾಯಗಳಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 1, 2026
Breaking News
ಕಲಬುರಗಿ ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, …
Read More »
BigTv News
April 1, 2026
Breaking News
ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ. ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ, ಮಗು ಮತ್ತು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಅವಘಡಕ್ಕೆ ಕಾರಣರಾದ ಚಾಲಕ ಮತ್ತು …
Read More »
BigTv News
April 1, 2026
Breaking News
ಮುಂಬೈ: ಅಪ್ಪನ ಮೇಲಿನ ವೈಮನಸ್ಸಿಗೆ 4 ವರ್ಷದ ಬಾಲಕನ ಮೇಲೆ ಅಮಾನವೀಯ ದಾಳಿ ನಡೆಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಸಂದೀಪ್ ಪವಾರ್ ಎಂಬ ಆರೋಪಿ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿಯ ಪ್ರಕಾರ, ಆರೋಪಿ ಬಾಲಕನ ತಂದೆಯೊಂದಿಗೆ ಜಗಳವಾಡುತ್ತಿದ್ದನು. ಈ ವೇಳೆ ಬಾಲಕ ಇತರ ಮಕ್ಕಳೊಂದಿಗೆ ಆಟವಾಡುತ್ತಾ ಆಟೋದಲ್ಲಿ ಕುಳಿತಿದ್ದ. ತಂದೆಯ ಮೇಲಿನ ಸಿಟ್ಟಿನಿಂದ ಆರೋಪಿ ಆಟೋ ಬಳಿ ಹೋಗಿ ಮಗುವಿನ …
Read More »
BigTv News
April 1, 2026
Breaking News
ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ …
Read More »
BigTv News
April 1, 2026
Breaking News
ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ ಅಣ್ಣನ ಬರುವಿಕೆಗೆ ಕುಟುಂಬದೊಂದಿಗೆ ಆರ್ಯನ್ ಕೂಡ ಕಾಯುತ್ತಿದ್ದ. ಈ …
Read More »
Shaikh BigTv
April 1, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೈಪಾಸ್ ಮಧ್ಯೆ ನಿತ್ರಾಣಗೊಂಡ ವೃದ್ಧನಿಗೆ 112 ಖಾಕಿಯ ನೆರವು! ಸಾವಿರ ವಾಹನಗಳ ನಡುವೆ ಜೀವ ಉಳಿಸಿದ ಹಳೆ ಹುಬ್ಬಳ್ಳಿ ಪೊಲೀಸರು! ಹುಬ್ಬಳ್ಳಿ: ಕಾರವಾರ ಬೈಪಾಸ್‌ನಲ್ಲಿ ಇಂದು ಮಾನವೀಯತೆ ಮೆರೆಯಿಸಿದ ಘಟನೆ ನಡೆದಿದೆ. ಹೆದ್ದಾರಿ ಮಧ್ಯೆ ನಿತ್ರಾಣಗೊಂಡು ಬಿದ್ದಿದ್ದ ವೃದ್ಧನು ಸಾವಿರಾರು ವಾಹನಗಳ ನಡುವೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ.. ಈ ವೇಳೆ ತಕ್ಷಣ ಸ್ಪಂದಿಸಿದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಹೋಯ್ಸಳ 112 ತಂಡ ಸ್ಥಳಕ್ಕೆ ಧಾವಿಸಿ, ವೃದ್ಧನಿಗೆ ಆರೈಕೆ …
Read More »