Breaking News

Breaking News

ಹಾಸನದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ : ತಪ್ಪಿಸಿಕೊಳ್ಳಲು ಓಡುವಾಗ ಬಿದ್ದು ವ್ಯಕ್ತಿ ಸಾವು!

ಜೂಜಾಟದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ ಈ ವೇಳೆ ಓಡುವಾಗ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಯುಗಾದಿ ಹಿನ್ನೆಲೆ ನಿರ್ಜನ ಪ್ರದೇಶದಲ್ಲಿ ಯುವಕರು ಜೂಜು ಆಡುತ್ತಿದ್ದರು. ಈ ವಿಚಾರ ತಿಳಿದು ಅಡ್ಡಿಯ ಮೇಲೆ ದಾಳಿ ಮಾಡಿದ್ದಾರೆ. ಆಗ ಸ್ಥಳದಿಂದ ತಪ್ಪಿಸಿಕೊಳ್ಳಲು ಯುವಕರು ಕೂಡಿದರೆ ಈ ವೇಳೆ ಆಯತ ಬಿದ್ದು 34 ವರ್ಷದ ಪ್ರವೀಣ್ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಘಟನೆ ಸಂಭಂದ …

Read More »

ವಿಜಯಪುರ: ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಆರೋಪಿಯನ್ನು ವಿಜಯಪುರ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಡಿ.ಜೆ ಹಳ್ಳಿಯ ಆರೀಫ್ ಖಾನ್ (25) ಬಂಧಿತ. ಮಾರ್ಚ್‌ 17ರಂದು ಪದ್ಮಾವತಿ ಎಂಬುವರ ₹5 ಲಕ್ಷ ಬೆಲೆಬಾಳುವ 55 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಬೈಕ್‌ನಲ್ಲಿ ಬಂದ ಆರೋಪಿ ಕದ್ದು ಪರಾರಿಯಾಗಿದ್ದ. ಚಿಕ್ಕಬಳ್ಳಾಪುರ-ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಹೆದ್ದಾರಿ ಸಂಪರ್ಕಿಸುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ …

Read More »

ಕೋಮು ಪ್ರಚೋದನೆ ಪೋಸ್ಟ್: ಯುವತಿ ಬಂಧನ; ಜಾಮೀನು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ್ದ ಬೆಳ್ತಂಗಡಿ ಮೂಲದ ಯುವತಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಮಧ್ಯಾಂತರ ಜಾಮೀನು ನೀಡಿದೆ. ಯುವತಿ 2025ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ’ಟೆರರಿಸಂ ಹೇಸ್ ರಿಲೀಜಿಯನ್ ಆಯಂಡ್ ಸೋ ಕಾಲ್ಡ್ ಟೆರರಿಸ್ಟ್ಸ್ ಟೂ. ಇಟ್ಸ್ ಇಸ್ಲಾಂ’ ಹಾಗೂ ಇದೇ ರೀತಿಯ ಪೋಸ್ಟ್ ಗಳನ್ನು ಆಕೆ …

Read More »

ಕೋರ್ಟ್ ಗೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್

ಧಾರವಾಡ: ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಧಾರವಾದ ಪಾಲಿಕೆ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ ಜಮನಾಳ ಬಂಧಿತ ಆರೋಪಿ. ಧಾರವಾಡ ಉಪನಗರ ಠಾಣೆ ಪೊಲೀಸರು ಶ್ರೀಕಾಂತ್ ನನ್ನು ಬಂಧಿಸಿದ್ದಾರೆ. ಈತ ಸಿಜೆ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯದಿಂದ ಶಿಕ್ಷಕೆಗೆ ಗುರಿಯಾಗಿ ಜಾಮೀನು ಪಡೆದುಕೊಂಡಿದ್ದ. ಬಳಿಕ ಕೋರ್ಟ್ ಗೆ ಹಾಜರಾಗದೇ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈ ಹಿಂದೆ ಜೆಡಿಎಸ್ ನಲ್ಲಿ ಗುರುತಿಸಿಕೊಂಡು ಮಹಾನಗರ …

Read More »

ಆನಂದಪುರ: ಕೊಟ್ಟಿಗೆಯಲ್ಲಿದ್ದ ಎತ್ತು ಕಳವು; ಮೂವರು ಆರೋಪಿಗಳ ಬಂಧನ

ಆನಂದಪುರ: ತಾಲೂಕಿನ ಕರಡಿಮನೆ ಗ್ರಾಮದಲ್ಲಿ ರೈತರೊಬ್ಬರ ಕೊಟ್ಟಿಗೆಯಿಂದ ಎತ್ತು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಆನಂದಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನ ನಡೆದ ಕೇವಲ ಎರಡೇ ದಿನಗಳಲ್ಲಿ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಾರ್ಚ್ 17ರಂದು ಕರಡಿಮನೆ ಗ್ರಾಮದ ಸುರೇಶ್ ಎಂಬುವವರ ತೋಟದ ಮನೆಯ ಕೊಟ್ಟಿಗೆಯಲ್ಲಿ ಸುಮಾರು 15 ಸಾವಿರ ಮೌಲ್ಯದ ಎತ್ತನ್ನು ಕಟ್ಟಿಹಾಕಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿದ ಕಳ್ಳರು ಎತ್ತನ್ನು ಅಪಹರಿಸಿ ಪರಾರಿಯಾಗಿದ್ದರು. ಈ ಬಗ್ಗೆ …

Read More »

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತಿ ಆತ್ಮಹತ್ಯೆಗೆ ಯತ್ನ

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ.ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ. ದಂಪತಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ …

Read More »

ಫಾರ್ಚೂನರ್ ಕಾರಿನಲ್ಲಿ ಅಕ್ರಮ ದನ ಸಾಗಾಟ; ಪೊಲೀಸರನ್ನು ಕಂಡು ಆರೋಪಿಗಳು ಪರಾರಿ

ಮಂಗಳೂರು ಮಾರ್ಚ್ 19: ಐಷಾರಾಮಿ ಫಾರ್ಚೂನರ್ ಕಾರಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ನಾಲ್ಕು ದನಗಳನ್ನು ರಕ್ಷಿಸಿದ್ದಾರೆ. ತೆಂಕ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಬಳಿ ಗುರುವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಮಾರ್ಚ್ 18ರಂದು ಬೆಳಗಿನ ಜಾವ 4:45ರ ಸುಮಾರಿಗೆ ಪೊಲೀಸರು ಗಸ್ತಿನಲ್ಲಿದ್ದಾಗ ಸಾಸ್ತಾವು ದೇವಸ್ಥಾನದ ಬಳಿ ಫಾರ್ಚೂನರ್ ಕಾರಿನಲ್ಲಿ ದನಗಳನ್ನು ಅಕ್ರಮವಾಗಿ ತುಂಬುತ್ತಿದ್ದಾರೆ ಎಂಬ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಸ್ಥಳಕ್ಕೆ …

Read More »

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಲೈಂಗಿಕ ದೌರ್ಜನ್ಯ.!

ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ ನವಲಗುಂದ ತಾಲೂಕಿನಲ್ಲಿ ನಡೆದಿದೆ. ಬುಧವಾರ (ಮಾರ್ಚ್‌ 18ರಂದು) ಸಂಜೆ 4:30 ಸುಮಾರಿಗೆ ಮುಖ್ಯಶಿಕ್ಷಕ ಬಾಲಕಿಯನ್ನು ತನ್ನ ಕಚೇರಿ ಸಮೀಪದ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ ವರ್ತನೆಯಿಂದ ಗಾಬರಿಗೊಂಡ ಬಾಲಕಿ ತನ್ನ ಪೋಷಕರ ಬಳಿ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ. ಈ ಸಂಬಂಧ ಬಾಲಕಿಯ …

Read More »

ಏಕಾಏಕಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್: ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದಿದೆ. ವರ್ನಾ ಕಾರ್ ಚಲಿಸುತ್ತಿದ್ದ ವೇಳೆಯಲ್ಲಿ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದಿದೆ.ಈ ವೇಳೆ ಎಚ್ಚೆತ್ತ ಚಾಲಕ ರಸ್ತೆ ಬದಿ ಕಾರ್ ನಿಲ್ಲಿಸಿ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಹಾಸನ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದ್ದು,‌ ದುಷ್ಟರು ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದು ಸುಟ್ಟು ಹಾಕಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ವರುಣ್.ಕೆ.ಎಂ (22) ಎಂದು ಗುರುತಿಸಲಾಗಿದೆ.ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಬಳಿಕ ವರುಣ್ ಶವದ ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ್ದಾರೆ. ಮಾ.15 ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ವರುಣ್ ಕಾಣೆಯಾದ …

Read More »