BigTv News
February 28, 2026
Breaking News
ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ …
Read More »
BigTv News
February 28, 2026
Breaking News
ಲಕ್ಷ್ಮೇಶ್ವರ (ಗದಗ ಜಿಲ್ಲೆ): ತಾಲ್ಲೂಕಿನ ಶಿಗ್ಲಿ ಗ್ರಾಮದ ಯುವಕನ ಕತ್ತು ಕೊಯ್ದು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮಹಮ್ಮದ್ ಫಾರೂಕ್ ಶೇಖ್ ಸನದಿ (25) ಕೊಲೆಯಾದ ಯುವಕ. ಈತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹರ್ಲಾಪುರ ಗ್ರಾಮದವರಾಗಿದ್ದು, ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಿದ್ದರು. ಹಂತಕರು ಯುವಕನನ್ನು ಕೊಲೆ ಮಾಡಿ ಶವವನ್ನು ಹೊಲದಲ್ಲಿ ಬಿಸಾಡಿ ಹೋಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ …
Read More »
BigTv News
February 28, 2026
Breaking News
ಮಂಗಳೂರು: ವಿದೇಶದಲ್ಲಿರುವ ದುಷ್ಕರ್ಮಿಗಳೊಂದಿಗೆ ಕೈಜೋಡಿಸಿ ಆನ್‌ಲೈನ್ ವಂಚನೆ ನಡೆಸುತ್ತಿದ್ದ ಆರು ಮಂದಿಯ ತಂಡವನ್ನು ಮಂಗಳೂರು ಪೊಲೀಸರು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ. ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರಾಗಿದ್ದಾರೆ. ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾಂಕ್ ಖಾತೆ ನೀಡಿದರೆ ಕಮಿಷನ್ ನೀಡುವುದಾಗಿ ಜಾಹಿರಾತು ನೀಡಿ ಜನರನ್ನು ಸೆಳೆಯುತ್ತಿದ್ದರು. ನಂಬಿ ಬಂದವರಿಂದ ಖಾತೆಯ ಭದ್ರತಾ ವಿವರಗಳನ್ನು ಪಡೆದು ವಿದೇಶಕ್ಕೆ ರವಾನಿಸುತ್ತಿದ್ದರು. …
Read More »
BigTv News
February 28, 2026
Breaking News
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬರ‍್ಯ ಗ್ರಾಮದ ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋವುಗಳನ್ನು ಕೊಂದು ಮಾಂಸ ಮಾಡುತ್ತಿರುವುದನ್ನು ಪತ್ತೆ ಮಾಡಿರುವ ಉಪ್ಪಿನಂಗಡಿ ಪೊಲೀಸರು, ಮನೆಯನ್ನು ಜಪ್ತಿ ಮಾಡಿ ದಂಪತಿ ಸಹಿತ ೩ ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ. 26ರಂದು ರಾತ್ರಿ ಹೊಸವಕ್ಲು ನಿವಾಸಿ ಅಬ್ದುಲ್ ರಹಿಮಾನ್ ಮನೆ ಆವರಣದಲ್ಲಿ ಗೋ ಹತ್ಯೆ ಮಾಡಿ ಮಾಂಸವನ್ನು ರಿಕ್ಷಾವೊಂದಕ್ಕೆ ತುಂಬಿಸುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸ್ ಇನ್‌ಸ್ಪೆಕ್ಟರ್ ಸುತೇಶ್ ಮತ್ತು …
Read More »
BigTv News
February 28, 2026
Breaking News
ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸ್ನೇಹಿತರ ಜತೆ ಸೇರಿಕೊಂಡು ₹91.76 ಲಕ್ಷ ನಗದು ಕಳವು ಮಾಡಿದ್ದ ನಾಲ್ವರ ಪೈಕಿ ಇಬ್ಬರು ಆರೋಪಿಗಳನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಂಪನಿಯ ಕ್ಯಾಷಿಯರ್ ಧನಂಜಯ್ (23) ಹಾಗೂ ಆತನ ಸ್ನೇಹಿತ ಪ್ರವೀಣ್ ನಾಯ್ಕ್ ಬಂಧಿತರು. ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಂದ ₹ 81.66 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ …
Read More »
BigTv News
February 28, 2026
Breaking News
ಗದಗ:- ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಕಲಹ ನಡೆದಿದೆ. ಶಂಕರಗೌಡ ದ್ಯಾವನಗೌಡ್ರ (56) ಎಂಬ ತಂದೆಯನ್ನು ಪ್ರಭು ಶಂಕರಗೌಡ್ರ (24) ಎಂಬ ಮಗನ ತಲೆ ಮತ್ತು ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ ಪ್ರಕರಣ ದಾಖಲಾಗಿದೆ. ಘಟನೆ ವೇಳೆ ಇಬ್ಬರೂ ಮದ್ಯಪಾನದಲ್ಲಿದ್ದವರು. ಈ ಭೀಕರ ಘಟನೆಯು 2 ಎಕರೆ ಜಮೀನಿನ ಹಕ್ಕು ಕುರಿತು ಉಂಟಾದ ಕಲಹದಿಂದ ಸಂಭವಿಸಿದೆ. ಸ್ಥಳಕ್ಕೆ ಗದಗ ಎಸ್ಪಿ …
Read More »
BigTv News
February 28, 2026
Breaking News
ಬೆಂಗಳೂರು : ನಗರವನ್ನು ಬೆಚ್ಚಿಬೀಳಿಸಿದ್ದ ರೌಡಿಶೀಟರ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ರೌಡಿಶೀಟರ್ ಆಗಿದ್ದ ಪವನ್ ನನ್ನು ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಮರಜ್ಯೋತಿ ನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ರಂಜಿತ್ ಬಾಗಲೂರಿನ ನಿರ್ಜನ ಪ್ರದೇಶದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಬಂಧಿಸಲು ಮುಂದಾದ ವೇಳೆ ಆರೋಪಿ ಲಾಂಗ್‌ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದನೆಂದು ತಿಳಿದುಬಂದಿದ್ದು, …
Read More »
BigTv News
February 28, 2026
Breaking News
ಕುಕನೂರು : ತಾಲೂಕಿನ ತಳಕಲ ಗ್ರಾಮದ ಬಸವರಾಜ್ ಮೇಟಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದು, ನನ್ನ ತಂದೆ ಹಾಗೂ ಕೆಲವರಿಂದ ಜೀವ ಬೆದರಿಕೆ ಇದೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಚಿನ್ಮಯಿ ವೈದ್ಯ ಎಂಬವರು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸರಿಗೆ ನೀಡಿದ ಮನವಿಯಲ್ಲಿ, ಇದೇ ಜ.14ರಂದು ಹುಬ್ಬಳ್ಳಿಯ ಒಂಟಿ ಆಂಜನೇಯ ದೇವಸ್ಥಾನದಲ್ಲಿ ಸ್ವ ಇಚ್ಛೆಯಿಂದ ವಿವಾಹವಾಗಿದ್ದೇವೆ. ಬಳಿಕ ಫೆ.23ರಂದು ಯಲಬುರ್ಗಾ ಪಟ್ಟಣದ ವಿವಾಹ ನೋಂದಣಿ ಕಚೇರಿಯಲ್ಲಿ ಕಾನೂನುಬದ್ಧವಾಗಿ ನೋಂದಾಯಿಸಿಕೊಂಡಿದ್ದೇವೆ. …
Read More »
BigTv News
February 28, 2026
Breaking News
ಮಂಡ್ಯ : ಸಂಗೊಳ್ಳಿ ರಾಯಣ್ಣ ಟಿಶರ್ಟ್ ಧರಿಸಿದ್ದಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ಮದ್ದೂರಿನಲ್ಲಿ ನಡೆದಿದೆ. ಯುವಕ ಮೋಹನ್ (21) ತೀವ್ರವಾಗಿ ಅಸ್ವಸ್ಥಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮದ್ದೂರು ತಾಲೂಕಿನ ಆಲೂರಿನಲ್ಲಿ ಬೀರೇಶ್ವರ ಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಬೀರೇಶ್ವರ ಗೆಳೆಯರ ಬಳಗ ಎಂಬ ಸಂಘಟನೆಯಿಂದ ಸದಸ್ಯರು ಸಾಮೂಹಿಕವಾಗಿ ಸಂಗೊಳ್ಳಿ ರಾಯಣ್ಣನ ಟಿ ಶರ್ಟ್ ಧರಿಸಿದ್ದರು. ಕೆಎಂ ದೊಡ್ಡಿಯ ಮೋಹನ್ ಕೂಡ …
Read More »
BigTv News
February 28, 2026
Breaking News
ಬೆಂಗಳೂರು ನಗರದ ಬಾಗಲಗುಂಟೆ ಪ್ರದೇಶದ ಎಂಇಐ ಲೇಔಟ್‌ನಲ್ಲಿ 29 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾಜ್ಯೋತಿ ಎಂಬ ಯುವತಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ವರ್ಕ್ ಫ್ರಂ ಹೋಮ್ ಮೂಲಕ ಕೆಲಸ ನಿರ್ವಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಕುಟುಂಬದ ಮೂಲಗಳ ಪ್ರಕಾರ, ಕೆಲ ದಿನಗಳ ಹಿಂದೆ ಜ್ಯೋತಿಷಿಯೊಬ್ಬರು ಆಕೆಗೆ ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮಗಳ ಇಷ್ಟಗಳನ್ನೆಲ್ಲ ನೆರವೇರಿಸಲು ಮುಂದಾಗಿದ್ದರು. ಕೊಡಗು …
Read More »