Breaking News

Breaking News

ಹೊಲಕ್ಕೆ ಹೋಗಿ ಕಾಣೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ(25) ಮೃತ ವ್ಯಕ್ತಿ. ಕಡಲೆ ಬೆಳೆ ಕಾಯಲು ಹೊಲಕ್ಕೆ ಹೋಗಿದ್ದು, ಮನೆಗೆ ಮರಳಿರಲಿಲ್ಲ. ಇದರಿಂದ ಸಂಶಯಗೊಂಡು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಯುವಕ ಕಣ್ಮರೆಯಾದ ಕುರಿತು ದೂರು ದಾಖಲಾಗಿತ್ತು ಎಂದು ಎಸ್‌ಐ ಗಂಗಮ್ಮ ಜಿನಿಕೇರಿ ತಿಳಿಸಿದರು. ಬೆನ್ನಲ್ಲಿಯೇ ದೋಟಿಕೊಳ ಗ್ರಾಮದ ಸಣ್ಣ ನೀರಾವರಿ ಕೆರೆಯಲ್ಲಿ ಶವವಾಗಿ …

Read More »

ಅತ್ಯಾಚಾರ ಆರೋಪ: ಆಸ್ಪತ್ರೆ ನಿರ್ದೇಶಕನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಜಯನಗರದಲ್ಲಿ ಇರುವ ಆಸ್ಪತ್ರೆಯೊಂದರ ಕಾರ್ಯಕಾರಿ ನಿರ್ದೇಶಕರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತ್ರಿವಿಕ್ರಂ ರಾವ್‌ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ. ‘ಮೂರು ದಿನಗಳ ಹಿಂದೆ ಸಂತ್ರಸ್ತೆ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ದೂರು ನೀಡಿದ …

Read More »

ಮಾಜಿ ಪ್ರೇಯಸಿಯ ಹೆಸರಿಲ್ಲಿ ಲಕ್ಷಾಂತರ ರೂ. ವಂಚನೆ: ದೂರು

ಸಿದ್ದಾಪುರ: ಮಾಜಿ ಪ್ರೇಯಸಿ ಹೆಸರಿನಲ್ಲಿ ವಾಟ್ಸ್‌ಆಯಪ್‌ ಮತ್ತು ಇನ್‌ಸ್ಟಾಗ್ರಾಂ ಮೂಲಕ ಚಾಟ್‌ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೊಸಂಗಡಿ ಗ್ರಾಮದ ದಿವ್ಯ ನಾಯ್ಕ ವಂಚಿಸಿದ ಮಹಿಳೆ. ದಿವ್ಯ ಅವರ ಮಾವನ ಮಗಳಾದ ಅನುಷಾ ಹಾಗೂ ರವೀಂದ್ರ ಅವರ ನಡುವೆ ಪ್ರೀತಿ ಬೆಳೆದಿತ್ತು. ಮನೆಯವರಿಗೆ ಈ ವಿಚಾರ ತಿಳಿದ ಅನಂತರ ಇಬ್ಬರು ದೂರವಾಗಿದ್ದರು. ಬಳಿಕ ಅನುಷಾ ಬಳಸುತ್ತಿದ್ದ ಮೊಬೈಲ್ ನಂಬರನ್ನು ದಿವ್ಯ …

Read More »

ಕಾರ್ಕಳ | ಹಿಂಸಾತ್ಮಕವಾಗಿ ದನ ಸಾಗಾಟ: ಪ್ರಕರಣ ದಾಖಲು

ಕಾರ್ಕಳ: ತಾಲ್ಲೂಕಿನ ಕುಕ್ಕಂದೂರು ಗ್ರಾಮದಲ್ಲಿ ಜಾನುವಾರುಗಳನ್ನು ಕಳವು ಮಾಡಿ ಕಸಾಯಿಖಾನೆಗೆ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದವವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ಜೆಡ್ಡು ಶ್ರೀದೇವಿ ಕೃಪಾ ಹಾಲ್‌ನ ಎದುರುಗಡೆ ರಸ್ತೆ ಬದಿ ನಿಂತ ಗೂಡ್ಸ್ ವಾಹನವೊಂದರ ಹಿಂದುಗಡೆಯಿಂದ ನೀರು ಇಳಿಯುತ್ತಿತತ್ತು. ಇದನ್ನು ನೋಡಿ ಅನುಮಾನಗೊಂಡ ನಗರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಲೋಕೇಶ್ ಅವರು ವಾಹನವನ್ನು ಪರಿಶೀಲಿಸಿದಾಗ ಅದರೊಳಗೆ 2 ದನಗಳನ್ನು ಹಗ್ಗದಿಂದ ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು.

Read More »

ಗಾಂಜಾ ಸಾಗಾಣೆ ಮಾಡುತ್ತಿದ್ದವನ ಬಂಧನ

ಕೊಳ್ಳೇಗಾಲ:ಪಟ್ಟಣದ ಕೃಷಿ ಮಾರುಕಟ್ಟೆ ಮುಂಭಾಗದ ರಸ್ತೆಯಲ್ಲಿ ಸೋಮವಾರ ಸಂಜೆ ಪ್ಲಾಸ್ಟಿಕ್ ಕವರ್‌ನಲ್ಲಿ 320 ಗ್ರಾಂ ತೂಕದ ಒಣಗಾಂಜಾ ಸಾಗಾಣೆ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿಗಿರಿರಂಗನ ಬೆಟ್ಟದ ಹೊಸ ಪೋಡಿನ ನಿವಾಸಿ ಜಡೆಯ ಅಲಿಯಾಸ್ ಕೆಂಪಿ(25) ಬಂಧಿತ ಆರೋಪಿ. ಇವನು ಕೆಂಪನಪಾಳ್ಯ ಮುಖ್ಯ ರಸ್ತೆ ಸಿಗುವ ಕೃಷಿ ಮಾರುಕಟ್ಟೆ ಎದರು ರಸ್ತೆಯಲ್ಲಿ ಒಣ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಬಿ.ವಿ ವರ್ಷಾ ಹಾಗೂ ಉಪವಿಭಾಗ …

Read More »

ಬೆಳಗಾವಿ: ನ್ಯಾಯಾಲಯಕ್ಕೆ ಹುಸಿ ಬಾಂಬ್‌ ಬೆದರಿಕೆ

ಬೆಳಗಾವಿ: ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಬಾಂಬ್‌ ಇಡಲಾಗಿದೆ ಎಂದು ಇ- ಮೇಲ್ ಮೂಲಕ ಹುಸಿ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಧ್ಯಾಹ್ನದ ಎಲ್ಲ ಕಲಾಪಗಳನ್ನು ತಕ್ಷಣ ಸ್ಥಗಿತಗೊಳಿಸಲಾಯಿತು.ನ್ಯಾಯಾಲಯದ ಮೇಲ್‌ಗೆ ಇ-ಮೇಲ್ ಸಂದೇಶ ಬರುತ್ತದ್ದಂತೆಯೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಎಲ್ಲ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದ …

Read More »

ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!

ಪುತ್ತೂರು: ಬಸ್ ನಲ್ಲಿ ಯುವತಿ ಜತೆ ಅನುಚಿತ ವರ್ತನೆ ಆರೋಪದ ಹಿನ್ನೆಲೆ ಯುವಕನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಂಗಳವಾರ (ಮಾ.03) ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಅವರನ್ನು ವಶಕ್ಕೆ ಪಡೆದಿದ್ದಾರೆ, ಬಳಿಕ ಮಹಿಳಾ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಯುವಕ ಯುವತಿ ಇಬ್ಬರೂ ಸುಳ್ಯ ತಾಲೂಕಿನವರು ಎಂದು …

Read More »

ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​

ಚಿಕ್ಕಮಗಳೂರು, ಮಾ.3: ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಬಳಿ ಇಂದು (ಮಾ.3) ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್​​​​​​ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಬಸ್ ಇಂದು ಮಧ್ಯಾಹ್ನ ಜಿಲ್ಲಾ ಕೇಂದ್ರದಿಂದ ಹಾಸನಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ …

Read More »

ಕೋಲಾರದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್‌, ಡಿಟೋನೇಟರ್ ವಶಕ್ಕೆ

ಕೋಲಾರ: ತಾಲ್ಲೂಕಿನ ತಲಗುಂದ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್‌ ಕಡ್ಡಿಗಳು ಹಾಗೂ ಡಿಟೋನೇಟರ್‌ ಪತ್ತೆಯಾಗಿವೆ. ವೇಮಗಲ್‌ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಗ್ರಾಮದ ಮೆಹಬೂಬ್ ಪಾಷಾ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಜಮೀನಿನಲ್ಲಿನ ಬಂಡೆ ಸ್ಫೋಟಕ್ಕೆ ಬಳಸಲು ತಂದಿದ್ದಾಗಿ ಆತ ಹೇಳಿದ್ದು, ಜಿಲೆಟಿನ್‌ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಶ್ವಾನದಳ, ಸೋಕೊ ತಂಡ ಪರಿಶೀಲನೆ ನಡೆಸಿದ್ದು, ಎಲ್ಲಿಂದ ತರಲಾಗಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಕನ್ನಂಪಲ್ಲಿ ದೊಡ್ಡ ಕೆರೆಯಲ್ಲಿ ವೃದ್ಧೆ ಶವ ಪತ್ತೆ

ಚಿಂತಾಮಣಿ: ಕನ್ನಂಪಲ್ಲಿಯ ನಿವಾಸಿ ಹಾದಿಗೆರೆ ಮುನಿಲಕ್ಷಮ್ಮ ಎಂಬುವವರ ಶವ ಕಲ್ಲಹಳ್ಳಿ ಗ್ರಾಮದ ದೊಡ್ಡಕೆರೆಯಲ್ಲಿ ಪತ್ತೆಯಾಗಿದೆ. ಕನ್ನಂಪಲ್ಲಿಯ ನಿವಾಸಿ ಹಾದಿಗೆರೆ ಆಂಜಪ್ಪ ಪತ್ನಿ ಮುನಿಲಕ್ಷಮ್ಮ ಅವರು 5 ದಿನಗಳಿಂದ ನಾಪತ್ತೆಯಾಗಿದ್ದರು. ಕುಟುಂಬದವರು ಹುಡುಕಾಟ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಸೋಮವಾರ ಬೆಳಗ್ಗೆ ದೊಡ್ಡಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿಂತಾಮಣಿ ಉಪವಿಭಾಗದ ಡಿವೈಎಸ್​ಪಿ ಮುರಳೀಧರ್​ ಮತ್ತು ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರ ಸಮ್ಮುಖದಲ್ಲಿ ಶವ ಹೊರೆತೆಗದಾಗ ಮೃತರ …

Read More »