BigTv News
February 25, 2026
Breaking News
ದಾವಣಗೆರೆ ನಗರದಲ್ಲಿ ನಡೆದ ದುರ್ಗಾಂಭಿಕಾ ದೇವಿ ಜಾತ್ರೆಯ ವೇಳೆ ಕಿಡಿಗೇಡಿ ಯುವಕರ ಅಟ್ಟಹಾಸದಿಂದ ಭಕ್ತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ನಡೆದಿದೆ. ಜಾತ್ರೆ ಸಂಭ್ರಮದ ನಡುವೆ ಏಕಾಏಕಿ ಗುಂಪಾಗಿ ಬಂದ ಕೆಲ ಯುವಕರು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ದೇವಿಗೆ ಬಲಿ ಕೊಟ್ಟ ಪ್ರಾಣಿಗಳ ಕಾಲುಗಳನ್ನು ಹಿಡಿದು ಜನರ ಮೇಲೆ ದಾಳಿ ನಡೆಸಿದ್ದಾರೆ. ಈ ಅಘಟನೆಯಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಜನರು ಓಡಾಡುತ್ತಿದ್ದ ದೃಶ್ಯಗಳು ಕಂಡುಬಂದಿವೆ. …
Read More »
BigTv News
February 25, 2026
Breaking News
ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶವಾದ ಚಿಕ್ಕಪೇಟೆಯ ಕುಂಬಾರಪೇಟೆಯಲ್ಲಿ ಬುಧವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡ ದಟ್ಟ ಹೊಗೆಯಿಂದ ಆವೃತವಾಗಿತ್ತು. ಮೂರು ಅಂತಸ್ತಿನ ಕಟ್ಟಡದಲ್ಲಿದ್ದ ಹಾರ್ಡ್ವೇರ್ ಗೋಡೌನ್ ಹಾಗೂ ಅಂಗಡಿ ಮಳಿಗೆಗಳಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಜ್ವಾಲೆ ವ್ಯಾಪಿಸಿದೆ. ಇಂದು ಬೆಳಗ್ಗೆ 7 :30 ರ ಸುಮಾರಿಗೆ ವೇಳೆ ಘಟನೆ ನಡೆದಿದೆ. ಕಟ್ಟಡದಲ್ಲಿದ್ದ ಹಲವು ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದೆ. …
Read More »
BigTv News
February 25, 2026
Breaking News
ಬೆಂಗಳೂರು ಮಾಗಡಿ ರಸ್ತೆಯ ಅಂದ್ರಳ್ಳಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜನಾಂಗಕ್ಕೆ ಸೇರಿದ ರೋಜಾ ಅವರು ತಾಲ್ಲೂಕಿನ ಯಡಿಯೂರು ಹೋಬಳಿ ತಿಗಳರಪಾಳ್ಯ ಗ್ರಾಮದಲ್ಲಿರುವ ತನ್ನ ತಾಯಿ ಮನೆಗೆ ಮಾರಮ್ಮ ದೇವಿ ಹಬ್ಬಕ್ಕೆಂದು ಬಂದಿದ್ದರು. ಸೋಮವಾರ ರಾತ್ರಿ ಗ್ರಾಮದಲ್ಲಿರುವ ವೆಂಕಟರಮಣ ಮೂಡಲಗಿರಿ ದೇವಾಲಯಕ್ಕೆ ತನ್ನ ತಾಯಿ ಮತ್ತು ತಂಗಿಯನ್ನು ಕರೆದುಕೊಂಡು ಹೋಗಿದ್ದಾರೆ. ದೇವಸ್ಥಾನದ ಒಳಗಡೆ ಹೋದಾಗ ಅರ್ಚಕ ಹನುಮಯ್ಯ, ಗ್ರಾಮದ ಮಹಿಳೆ ಜಯಲಕ್ಷ್ಮಮ್ಮ, ಶ್ರೀನಿವಾಸ್ ಹಾಗೂ ಹದಿನಾರು ಮಂದಿ ಸೇರಿಕೊಂಡು, …
Read More »
BigTv News
February 25, 2026
Breaking News
ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಪತನಗೊಂಡ ಪರಿಣಾಮ ವಿಮಾನದಲ್ಲಿದ್ದ ಪೈಲೆಟ್ ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾದ ಘಟನೆಯು ಛತ್ರ ಜಿಲ್ಲೆಯ ಸಿಮಾರಿಯ ಬಳಿಯ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ರಾಡಾರ್ ಸಂಪರ್ಕ ಕಡಿತಗೊಂಡಿತ್ತು ಎನ್ನಲಾಗಿದೆ. ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7:10ರ ಸುಮಾರಿಗೆ ಟೇಕಾಫ್ ಆದ ಆಂಬುಲೆನ್ಸ್ 20 ನಿಮಿಷಗಳ ಬಳಿಕ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈ ವಿಮಾನದಲ್ಲಿ ರೋಗಿ, ವೈದ್ಯರು, ನರ್ಸ್ ಹಾಗೂ …
Read More »
BigTv News
February 25, 2026
Breaking News
ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಶಾಲೆಯಲ್ಲಿ ಓದುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಳೆದ ಫೆಬ್ರವರಿ 19 ರಂದು ವಿದ್ಯಾರ್ಥಿನಿಗೆ ಹಠಾತ್ ರಕ್ತಸ್ರಾವ ಉಂಟಾಗಿತ್ತು. ಆಕೆಯನ್ನು ತಪಾಸಣೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿದೆ. ಘಟನೆ ಸಂಬಂಧ ದೂರು ದಾಖಲಾಗುತ್ತಿದ್ದಂತೆಯೇ ತನಿಖೆ ಚುರುಕುಗೊಳಿಸಿದ …
Read More »
BigTv News
February 25, 2026
Breaking News
ಬೆಂಗಳೂರು: ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ ಆರ್.ಕೆ ಮೇಲೆ ಲಾಂಗ್ ಮತ್ತು ಮಚ್ಚು ಹಿಡಿದು ಹಲ್ಲೆ ಮಾಡಲು ಯತ್ನಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಲ್ವರು ಯುವಕರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಭಾನುವಾರ ಸಂಜೆ ಸುಮಾರು 7:30ರ ವೇಳೆಗೆ ದಿವ್ಯಾ ಅವರು ತಮ್ಮ ಮಗನ ಸ್ನೇಹಿತರನ್ನು ಮನೆಗೆ ಬಿಡಲು ತಲಕಾವೇರಿ ಬಡಾವಣೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ …
Read More »
Shaikh BigTv
February 24, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ… ಕರ್ನಾಟಕದ ಒಟ್ಟು 32 ಇಲಾಖೆಗಳಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ… ಎ ದರ್ಜೆಯ 542 ಹುದ್ದೆಗಳು, ಬಿ ದರ್ಜೆಯ 619 ಹುದ್ದೆಗಳು ಹಾಗೂ ಎಫ್‌ಡಿಸಿ ದರ್ಜೆಯ 23,119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ… ರಾಜ್ಯದ ವಿವಿಧ …
Read More »
Shaikh BigTv
February 24, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ Infosys ಕ್ಯಾಂಪಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹ್ಮದ ನಿಜಾನ್ (26) ಎಂಬ ಯುವಕನಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು Karnataka Institute of Medical Sciences (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ಎಲ್ಲಾ ಪ್ರಯತ್ನಗಳಿಗೂ ಸ್ಪಂದಿಸದೆ ಯುವಕ ಚಿಕಿತ್ಸೆ ವೇಳೆ …
Read More »
BigTv News
February 24, 2026
Breaking News
ಧಾರವಾಡ: ಚುನಾವಣೆ (ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ) ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ಧಾರೆ ಎಂದು ಹು-ಧಾ ಮಹಾನಗರ ಪಾಲಿಕೆ ಬಿಲ್ ಕಲೆಕ್ಟರ್ ಬಸವರಾಜ ನಿಗದಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಎಸ್‌ಡಿಎ ಅನ್ನಪೂರ್ಣ ಎಸ್.ಸವದಿ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸೂಚನೆ ನೀಡಿದರೂ ಮತಗಟ್ಟೆ ಅಧಿಕಾರಿಗಳಾದ ಬಸವರಾಜ ನಿಗದಿ (ಭಾಗ ಸಂಖ್ಯೆ 137) ಮತ್ತು ಅನ್ನಪೂರ್ಣ ಎಸ್. ಸವದಿ (ಭಾಗ ಸಂಖ್ಯೆ 160) ಅವರು …
Read More »
BigTv News
February 24, 2026
Breaking News
ದಾವಣಗೆರೆ : ಎಂಕಾಂ ಪದವಿ ವ್ಯಾಸಂಗ ಮಾಡಿ ಸುಂದರ ಬದುಕು ಕಟ್ಟಿಕೊಳ್ಳಬೇಕಿದ್ದ ಯುವಕನೋರ್ವ ಬೆಟ್ಟಿಂಗ್ನಲ್ಲಿ ಹಣವನ್ನು ಕಳೆದುಕೊಂಡು, ನಂತರ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದಲ್ಲದೇ, ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಬಂಧನಕ್ಕೆ ಒಳಗಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ನಿವಾಸಿ ಅಭಿಷೇಕ್(23) ಕೊಲೆ ಆರೋಪಿ. ಜಿಲ್ಲೆಯ ಹೊನ್ನಾಳಿ ತಾಲೂಕಿನ ನ್ಯಾಮತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಆರುಂಡಿ ಗ್ರಾಮದಲ್ಲಿ ಫೆ. 2 ರಂದು ಒಂಟಿ ಮನೆಯಲ್ಲಿದ್ದ 64 ವರ್ಷದ ಕಮಲಮ್ಮ …
Read More »