Breaking News

Breaking News

ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ; ಕಾಮುಕ ವೃದ್ಧನ ಬಂಧನ!

ಬೆಂಗಳೂರು: ಆನೇಕಲ್‌ನಲ್ಲಿ ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಪೋಷಕರು ಪ್ರತಿದಿನ ಬೆಳಗ್ಗೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಮಕ್ಕಳನ್ನು ಶಾಲೆಯ ಬಳಿ ಬಿಟ್ಟು ಹೋಗುತ್ತಿದ್ದರು. ಶಾಲೆ ಆರಂಭವಾಗಲು ಇನ್ನು ಸಮಯವಿದೆ ಎಂಬುದನ್ನು ಗಮನಿಸಿದ ವೃದ್ಧ, ಒಂಟಿಯಾಗಿದ್ದ ಬಾಲಕಿಯರನ್ನು ಚಾಕೊಲೇಟ್ ನೀಡುವುದಾಗಿ ನಂಬಿಸಿ ತನ್ನ ವಿಕೃತ ಚಟಕ್ಕೆ ಬಳಸಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಎರಡನೇ ತರಗತಿಯ …

Read More »

ದಲಿತ ದಂಪತಿಗೆ ದೇವಾಲಯ ಪ್ರವೇಶಕ್ಕೆ ತಡೆ; ವ್ಯಕ್ತಿಯ ಬಂಧನ

ತುಮಕೂರು : ಪೂಜೆ ಮಾಡಿಸಲು ಗ್ರಾಮದ ಗುಡಿಗೆ ಹೋದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮೈಮೇಲೆ ದೇವರು ಬಂದಂತೆ ನಟಿಸಿ, ದಲಿತ ಸಮುದಾಯಕ್ಕೆ ಸೇರಿದ ನವ ದಂಪತಿಗಳನ್ನು ಗುಡಿಯಿಂದ ಹೊರಗೆ ಕಳುಹಿಸಿರುವ ಘಟನೆ ತುರುವೇಕೆರೆ ತಾಲ್ಲೂಕಿನ ಗೋಣಿ ತುಮಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೆಪಿಟಿಸಿಎಲ್ ನೌಕರ ಜಗದೀಶ್ ಎಂಬವರು ಇತ್ತೀಚೆಗೆ ವಿವಾಹವಾಗಿದ್ದ ತನ್ನ ತಂಗಿ ಹಾಗೂ ಆಕೆಯ ಪತಿಯನ್ನು ಗ್ರಾಮದ ಆದಿಶಕ್ತಿ ಅರಸಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸಲು ಕರೆದುಕೊಂಡು ಹೋಗಿದ್ದರು. ಈ ವೇಳೆ …

Read More »

ಅಂತಾರಾಜ್ಯ ಮೊಬೈಲ್ ಕಳ್ಳರ ಬಂಧನ

ಕೊರಟಗೆರೆ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜನರನ್ನು ಯಾಮಾರಿಸಿ ಮೊಬೈಲ್ ಕದಿಯುತ್ತಿದ್ದ ಅಂತಾರಾಜ್ಯ ಖದೀಮರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೈ.ಎಸ್.ನಗರದ ಶಿವಶಂಕರ(19), ತಿರುಪತಿ ಜಿಲ್ಲೆ ಗುಂಡಕಲ್ಲು ಪಟ್ಟಣದ ಪರಶುರಾಮ(22), ಮದನಪಲ್ಲಿ ತಾಲೂಕು ರಾಮರಾವ್ ಕಾಲನಿಯ ರಾಮ(19) ಹಾಗೂ ಗೋಕಾಕ್ ತಾಲೂಕು ಘಟಪ್ರಭ ಗ್ರಾಮದ ಪವನ್(20) ಬಂಧಿತರು 6ರಂದು ಕೊರಟಗೆರೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಅಶೋಕ್ ಎಂಬುವವರ ಜೇಬಿನಿಂದ 25 ಸಾವಿರ ರೂ.ಬೆಲೆಬಾಳುವ ಮೊಬೈಲ್ ಕಳ್ಳತನದ …

Read More »

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಗದಗ: ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ …

Read More »

ರಸ್ತೆ ಪಕ್ಕದ ಜೋಳದ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ: ರಾಜ್ಯದಲ್ಲಿ ಸಾಲು ಸಾಲು ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಂಗೊಳ್ಳಿಗೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿಯ ಜೋಳದ ಜಮೀನಿನಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ. ಕಿತ್ತೂರು ಪಟ್ಟಣದಿಂದ ಸಂಗೊಳ್ಳಿಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಐದಾರು ದಿನಗಳ ಹಿಂದೆಯೆ ವ್ಯಕ್ತಿಯನ್ನು ಕೊಲೆಗೈದು ಗೋವಿನ …

Read More »

ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ, ಬೆಚ್ಚಿಬಿದ್ದ ಸ್ಥಳೀಯರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇಂದು (ಫೆಬ್ರವರಿ 20) ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡಗೋಡು ಪೊಲೀಸರು ದೌಡಾಯಿಸಿದ್ದಾರೆ. ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ತನಿಖೆ …

Read More »

ಹಾಸನ :ಡೋರ್‌ನಲ್ಲೇ ನಿಂತಿದ್ದ ಮಹಿಳೆ ಒಳಗೆ ಕಳುಹಿಸಿದ್ದಕ್ಕೆ ಚಾಲಕನಿಗೆ ಥಳಿತ!

ಹಾಸನದಿಂದ ಅರಸೀಕೆರೆಗೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಬಸ್‌ ಸಂಪೂರ್ಣ ಭರ್ತಿಯಾಗಿದ್ದ ಕಾರಣ ದುದ್ದ ಗ್ರಾಮದಲ್ಲಿ ಹತ್ತಿದ ಖಾಸಗಿ ಶಾಲೆಯ ಟೀಚರ್‌ ಮೆಟ್ಟಿಲಿನ ಮೇಲೆಯೇ ನಿಂತು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಿದರಿಂದ ಬಾಗಿಲು ಹಾಕಲು ನಿರ್ವಾಹಕ ಪರದಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಚಾಲಕ ಸೀಟ್‌ನಿಂದ ಇಳಿದು ಬಂದು ಮಹಿಳೆಯನ್ನು ಒಳಕ್ಕೆ ತಳ್ಳಿ ಬಾಗಿಲು ಹಾಕಿದನೆಂಬ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ …

Read More »

ಗಂಡನ ಗೆಳೆಯನಿಂದಲೇ ಮೂರು ಮಕ್ಕಳ ತಾಯಿ ಮೇಲೆ ಅತ್ಯಾಚಾರ; 5 ಲಕ್ಷ ಹಣಕ್ಕೆ ಡಿಮ್ಯಾಂಡ್

ಬಿಹಾರ ಮೂಲದ ಮೂರು ಮಕ್ಕಳ ತಾಯಿ ಮೇಲೆ ಆಕೆಯ ಗಂಡನ ಗೆಳೆಯನಿಂದಲೇ ಆತ್ಯಾಚಾರ ನಡೆದಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಮೊಹಮ್ಮದ್ ಜಹಾಂಗೀರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿ ಜಹಾಂಗೀರ್ ಬೈರನಕುಂಟೆಯ ನಿವಾಸಿಯಾಗಿದ್ದಾನೆ. 20ನೇ ನವೆಂಬರ್ 2023ರಂದು ಮಹಿಳೆ ಒಂಟಿಯಾಗಿದ್ದಾಗ ಬಂದ ಆರೋಪಿ ಜಹಾಂಗೀರ್ ಅತ್ಯಾಚಾರಗೈದು ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾನೆ. ಈ ವಿಷಯ ಯಾರಿಗಾದ್ರೂ ಹೇಳಿದ್ರೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡೋದಾಗಿ …

Read More »

ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಪಿಎ ಪುತ್ರ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಅವರ ಪತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಸಂಜಯನಗರದ ಲೊಟ್ಟೆ ಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ.

Read More »

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 9 ವಿದ್ಯಾರ್ಥಿಗಳ ಮೇಲೆ ‘ಲೈಂಗಿಕ ದೌರ್ಜನ್ಯ’ : ಆರೋಪಿ ಅರೆಸ್ಟ್!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಾಕೊಲೇಟ್ ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ಆನೇಕಲ್ ಪೊಲೀಸ್ ಅಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದೇ 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಸಿದ ಆರೋಪ ಕೇಳಿ ಬಂದಿದೆ. ಹೌದು 9 ವಿದ್ಯಾರ್ಥಿಗಳಿಗೆಗಳ ಜೊತೆಗೆ ಅಸಭ್ಯವಾಗಿ ವರ್ತನೆ ಆರೋಪ ಕೇಳಿ ಬಂದಿದ್ದು, ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ಒಂದು ದುಷ್ಕೃತ್ಯ ನಡೆದಿದೆ. …

Read More »