BigTv News
February 18, 2026
Breaking News
ಬೆಂಗಳೂರು: ಇಲ್ಲಿನ ಸುಬ್ರಹಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಸದ ಗುಡ್ಡೆಯಲ್ಲಿ ನವಜಾತು ಶಿಶು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿನ್ನೆ ಸಂಜೆ 7.50 ರ ಸುಮಾರಿನಲ್ಲಿ ಉತ್ತರಹಳ್ಳಿ ಪೂರ್ಣಪ್ರಜ್ಞಾ ಲೇಔಟ್ ಅಪಾರ್ಟ್‍ಮೆಂಟ್ ಹಿಂಭಾಗದ ಖಾಲಿ ಜಾಗದ ಮೈದಾನದಲ್ಲಿ ಹುಡುಗರು ಆಟವಾಡುತ್ತಿದ್ದರು. ಆ ಸಂದರ್ಭದಲ್ಲಿ ಮೈದಾನಲ್ಲಿದ್ದ ಕಸದ ಗುಡ್ಡೆ ಬಳಿ ಮಗು ಮೃತಪಟ್ಟಿರುವ ಸ್ಥಿತಿಯನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ ನವಜಾತ …
Read More »
BigTv News
February 18, 2026
Breaking News
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ದೊಡ್ಡ ಪ್ರಮಾಣದ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿಎಫ್ಸಿ ಬ್ಯಾಂಕ್ನ ಐವರು ಉದ್ಯೋಗಿಗಳನ್ನು ಆರ್ಥಿಕ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ವಿಭಾಗದ ಆರ್ಥಿಕ ಅಪರಾಧಗಳ ವಿಭಾಗ ಬುಧವಾರ ಶೋಪಿಯಾನ್ ಮತ್ತು ಬುಡ್ಗಾಮ್ ಜಿಲ್ಲೆಗಳಲ್ಲಿ ಶೋಧ ನಡೆಸಿದೆ. ಲಿಖಿತ ದೂರಿನ ಆಧಾರದಿಂದ ಶಾಖೆಯಲ್ಲಿ ನಡೆದ ಹಣಕಾಸು ವಂಚನೆ ಬೆಳಕಿಗೆ ಬಂದಿತ್ತು. ಈ ಕುರಿತು ಮಾಹಿತಿ ನೀಡಿರುವ ಆರ್ಥಿಕ ಅಪರಾಧಗಳ …
Read More »
BigTv News
February 18, 2026
Breaking News
ಕೊಪ್ಪಳ: ಲಾರಿ ಓವರ್ ಟೇಕ್ ಮಾಡಲು ಹೋಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಕೆಳೆಗೆ ಬಿದ್ದಿದ್ದು, ಲಾರಿ ಚಕ್ರದಡಿ ಸಿಲುಕಿ ಇಬ್ಬರೂ ಮೃತಪಟ್ಟಿದ್ದಾರೆ. ಶ್ರೀನಿವಾಸ್ (26) ಹಾಗೂ ಸಿದ್ದನಗೌಡ್ರ (25) ಮೃತ ದುರ್ದೈವಿಗಳು. ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಲಾರಿಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಅಕ್ಕನ ಮಗಳ ಹುಟ್ಟುಹಬ್ಬಕ್ಕೆಂದು ಹೋಗುತ್ತಿದ್ದಾಗ …
Read More »
BigTv News
February 18, 2026
Breaking News
ರಾಯಬಾಗ: ಬೈಕ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಜೈಸಿಂಗ್‌ಪುರ ಮೂಲದ ಗಿರೇಪ್ಪ ಕುಂದ್ರಾಳಿ (38), ಇವರ ಪತ್ನಿ ಮಂಜುಳಾ (28) ಮತ್ತು 7 ವರ್ಷದ ಪುತ್ರಿ ಆರಾಧ್ಯ ಎಂದು ಗುರುತಿಸಲಾಗಿದೆ. ಕರ್ನಾಟಕ-ಮಹಾರಾಷ್ಟ್ರ ರಾಜ್ಯ ಹೆದ್ದಾರಿಯ ಕುಡಚಿ ಮತ್ತು ಹಾರೂಗೇರಿ ಕ್ರಾಸ್ ಮಧ್ಯೆ ಇರುವ …
Read More »
BigTv News
February 18, 2026
Breaking News
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಮಿಟಗಾನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ಅನುಮಾನ ಹಿನ್ನೆಲೆ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೊಂದಿಗೆ ಮಾವನಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ಅಳಿಯನೇ ಮಾವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.ಮೃತ ವ್ಯಕ್ತಿಯನ್ನು ನಯಾಜ್ ಖಾನ್ (38) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಶಾಹಿದ್ ಖಾನ್ (33) ಎಂದು ಪೊಲೀಸರು ಗುರುತಿಸಿದ್ದಾರೆ. ಶಾಹಿದ್ ಖಾನ್, ಮೃತ ನಯಾಜ್ ಖಾನ್ ಅವರ ಸಹೋದರಿಯ ಪುತ್ರನಾಗಿದ್ದು, …
Read More »
BigTv News
February 18, 2026
Breaking News
ಬೆಂಗಳೂರು: ಗೋಡೆ ಮೇಲೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಸತೀಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ. ಹಲ್ಲೆಗೊಳಗಾಗಿದ್ದ ಶಿವಾಜಿನಗರ ಇನ್ಫೆಂಟ್ರಿ ರಸ್ತೆ ನಿವಾಸಿ ಮತ್ತು ವಕೀಲ ಆದರ್ಶ್ ಗಂಗಲ(50) ನೀಡಿದ ದೂರಿನ ಅನ್ವಯ ತನಿಖೆ …
Read More »
BigTv News
February 18, 2026
Breaking News
ರಾಜಸ್ಥಾನ ಮೂಲದ ಜಿತೇಂದ್ರ ಸಿಂಗ್ ಕಳೆದ ಹಲವು ವರ್ಷಗಳಿಂದ ಕ್ಯಾತನಹಳ್ಳಿಯಲ್ಲಿ ಜ್ಯುವೆಲರಿ ವ್ಯಾಪಾರ ನಡೆಸುತ್ತಿದ್ದ. ದುಷ್ಕರ್ಮಿಗಳು ತನ್ನ ಮೇಲೆ ಆಯಸಿಡ್ ಎರಚಿ ಅಂಗಡಿಯಲ್ಲಿದ್ದ ಸುಮಾರು 170 ಗ್ರಾಂ ಚಿನ್ನ ಮತ್ತು 8 ಕೆಜಿ ಬೆಳ್ಳಿ ದರೋಡೆ ಮಾಡಿ ಪರಾರಿಯಾಗಿದ್ದಾರೆ ಎಂದು ಆತ ಆರೋಪಿಸಿದ್ದ. ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಈತನ ಪ್ರಕರಣವನ್ನು ಪೊಲೀಸರು ಸುಮೋಟೋವಾಗಿ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆದರೆ ವಿಚಾರಣೆ ವೇಳೆ ಜಿತೇಂದ್ರನ ಮುಖಕ್ಕೆ ಮಾತ್ರ ಗಾಯವಾಗಿರುವುದು ಪೊಲೀಸರ …
Read More »
BigTv News
February 18, 2026
Breaking News
ಹಾಸನ: ಜಿಲ್ಲೆಯಲ್ಲಿ ಆಸ್ತಿ ವಿಚಾರವಾಗಿ ಸಾರಿಗೆ ಇಲಾಖೆಯ ನೌಕರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ 10 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಾಸನದ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರಿಗೆ ಇಲಾಖೆಯ ನೌಕರ ವೀರಪ್ಪ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅವರ ಪುತ್ರ ವಿವೇಕ್ ಎಂಬಾತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಮಲ್ಲಮ್ಮ, ಹರೀಶ, …
Read More »
BigTv News
February 18, 2026
Breaking News
ಬೆಂಗಳೂರು: ತಾನು ಸಾವನ್ನಪ್ಪಿದರೇ ಪತ್ನಿಯನ್ನು ನೋಡಿಕೊಳ್ಳಲು ಸಂಬಂಧಿಕರೇ ಇಲ್ಲವೆಂದು, ಉಸಿರುಗಟ್ಟಿಸಿ ವೃದ್ದ ಪತಿಯೊಬ್ಬ ಕೊಂದಿರುವಂತ ಆಘಾತಕಾರಿ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಇಸ್ರೋ ನಿವೃತ್ತ ನೌಕರನಿಂದಲೇ ಉಸಿರುಗಟ್ಟಿಸಿ ಪತ್ನಿಯನ್ನು ಕೊಲೆ ಮಾಡಲಾಗಿದೆ.ಬೆಂಗಳೂರಿನ ಅವಲಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಿರ್ಟುಸೋ ಅಪಾರ್ಮೆಂಟ್ ನಲ್ಲಿ ನೆಲೆಸಿದ್ದಂತ ವೃದ್ಧನೊಬ್ಬ ಈ ಕೃತ್ಯ ಎಸಗಿದ್ದಾನೆ. ಪತ್ನಿ ಸಂಧ್ಯಾ ಎಂಬುವರನ್ನು ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್ ಎಂಬುವರು ಹತ್ಯೆಗೈದಿದ್ದಾರೆ. ನಾನು ಸತ್ತರೆ ಪತ್ನಿಯನ್ನು …
Read More »
BigTv News
February 18, 2026
Breaking News
ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ …
Read More »