Breaking News

Breaking News

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ರಾಣೆಬೆನ್ನೂರ: ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿದ ಘಟನೆ ನಗರದ ಹೊರವಲಯದ ಬೆನಕನಕೊಂಡ ರಸ್ತೆ ಬಳಿ ನಡೆದಿದೆ.ಧಾರವಾಡದ ನವೀನ್ ಸುಭಾಸ ಶಲವಡಿ, ಜುಬೇರ ಬಂಧಿತ ಆರೋಪಿಗಳು. ಇವರು ಬೈಕ್ ಮೇಲೆ ಕುಳಿತು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 236 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮನೆ ಕಟ್ಟಲು ಅನುಮತಿ ನೀಡದ ಪಿಡಿಒ: ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ

ವಿಜಯನಗರ: ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತೊಬ್ಬ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬವರು ಗ್ರಾ.ಪಂ. ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮನೆ ನಿರ್ಮಾಣಕ್ಕಾಗಿ ಇ-ಸೊತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ …

Read More »

ಮದುವೆಯಾಗುವುದಾಗಿ ಮಹಿಳೆಯಿಂದ ವಂಚನೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ !

ಧಾರವಾಡದಲ್ಲಿ ಮದುವೆಯಾಗಿ ಮಗು ಇದ್ರೂ ಯುವಕರೊಂದಿಗೆ ಮಹಿಳೆಯೊಬ್ಬಳು ಡೇಟಿಂಗ್ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹೌದು, ಮಹಿಳೆಯೊಬ್ಬರು ಮೂರು ಮೂರು ಹೆಸರು ಇಟ್ಟುಕೊಂಡು ಯುವಕರೊಂದಿಗೆ ಚಾಟಿಂಗ್ ಮಾಡಿ ಲಕ್ಷಾಂತರ ರೂ. ವಂಚಿಸಿರುವ ಆರೋಪ ಕೇಳಿಬಂದಿದೆ. ಐಶ್ವರ್ಯಾ, ರೇಣುಕಾ, ಆರೋಹಿ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ. ಮದುವೆ ಆಗೋದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ್ದಾರೆ. ಧಾರವಾಡದಲ್ಲಿ ಗುರು ಎಂಬಾತನಿಂದ 7 ಲಕ್ಷ ರೂ. ಪಡೆದಿದ್ದು. ಮದುವೆ ಆಗದೇ ಐಶ್ವರ್ಯ ಕಳ್ಳಾಟ ಆಡುತ್ತಿದ್ದು, …

Read More »

ಪೊಲೀಸರ ವೀಲ್ ಲಾಕ್ ಕಳವು ಮಾಡಿದ ಆರೋಪ: ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲು

ಮಣಿಪಾಲ: ಪೊಲೀಸರು ಕಾರಿನ ಚಕ್ರಗಳಿಗೆ ಹಾಕಲಾದ ವೀಲ್ ಲಾಕ್‌ಗಳನ್ನು ಚಾಲಕ ಕಳವು ಮಾಡಿದ್ದಾನೆ ಎನ್ನಲಾದ ಘಟನೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಫೆ.16ರಂದು ನಸುಕಿನ ವೇಳೆ ನಡೆದಿದೆ. ಪೊಲೀಸರು ಕಾರೊಂದನ್ನು ತಡೆದು ತಪಾಸಣೆ ಮಾಡಿದಾಗ ಚಾಲಕ ಕಾಸರಗೋಡು ಉಪ್ಪಳದ ಮೊಹಮ್ಮದ್ ರಿಫಾಝ್ ಮದ್ಯ ಸೇವಿಸಿರುವುದು ಕಂಡುಬಂದಿದೆ. ಈ ಬಗ್ಗೆ ಆತನಲ್ಲಿ ವಾಹನವನ್ನು ಠಾಣೆಗೆ ತಂದು ಇರಿಸುವಂತೆ, ನ್ಯಾಯಾಲಯದಲ್ಲಿ ದಂಡ ಪಾವತಿಸಿದ ಬಳಿಕ ವಾಹನವನ್ನು ತೆಗೆದುಕೊಂಡು ಹೋಗುವಂತೆ ಪೊಲೀಸರು ತಿಳಿಸಿದರು. ಆದರೆ …

Read More »

ತೆಕ್ಕಟ್ಟೆ | ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್‌ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಕುಂದಾಪುರ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ-66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಅಂಗಡಿ ಮಾಲೀಕ ಫಣಿರಾಜ್ ಹತ್ವಾರ್ ಕೊರವಡಿ ಅವರು ನಿತ್ಯದಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ. ಅಗ್ನಿ ಅವಘಡದಲ್ಲಿ ಕಂಪ್ಯೂಟರ್‌ಗಳು, ಪ್ರಿಂಟರ್‌ಗಳು, ಸ್ಟೇಷನರಿ ಸಾಮಗ್ರಿಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, …

Read More »

ಹಾಸನ: ಮನೆ ಬೀಗ ಮುರಿದು ₹4.90 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಮನೆಯ ಬೀಗ ಮುರಿದು ₹1.50 ಲಕ್ಷ ನಗದು, ₹2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಗ್ರಾಮದ ಧನಂಜ ಅವರು ಫೆ.15 ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ ಮನೆದೇವರಿಗೆ ಹೋಗಿದ್ದರು. ಪೂಜೆ ಮುಗಿಸಿಕೊಂಡು ಮಧ್ಯಾಹ್ನ ವಾಪಸ್ ಮನೆಗೆ ಬಂದಾಗ, ಮನೆಯ ರೂಂನ ಬೀರುವಿನಲ್ಲಿ ಇಟ್ಟಿದ್ದ ₹1.50 ಲಕ್ಷ ನಗದು, ₹2 ಲಕ್ಷ ಮೌಲ್ಯದ 28 ಗ್ರಾಂ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ.ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ …

Read More »

ಹುಬ್ಬಳ್ಳಿ: ಮಹಿಳೆಗೆ ಆಸಭ್ಯವಾಗಿ ಕೈಸನ್ನೆ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಇಲ್ಲಿಯ ಅಕ್ಷಯ ಪಾರ್ಕ್ ಬಳಿ ಮಹಿಳೆಗೆ ಆಸಭ್ಯವಾಗಿ ಕೈಸನ್ನೆ ಮಾಡಿದ ಇಬ್ಬರ ವಿರುದ್ಧ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರದ ಸುರೇಶ ಎ. ಮತ್ತು ಸಂದೇಶ ಅವರ ವಿರುದ್ಧ, ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಅಸಭ್ಯವಾಗಿ ಕೈ ಸನ್ನೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Read More »

ಬಂಗಾರಪೇಟೆ | ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮಹಿಳೆ ರಕ್ಷಣೆ, ಮೂವರ ಬಂಧನ

ಇಲ್ಲಿನ ವಿಜಯನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಒಬ್ಬ ಮಹಿಳೆಯನ್ನು ರಕ್ಷಿಸಿದ್ದಾರೆ.ಮೇರಿ (40), ಗೀತಾ (48 ) ಮಂಜುಳ (34) ಬಂಧಿತ ಆರೋಪಿಗಳು. ಇವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಮಹಿಳೆಯರು ವಿಜಯನಗರದ 2ನೇ ಕ್ರಾಸ್‌ನಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು, ಯಾರಿಗೂ ಅನುಮಾನ ಬಾರದಂತೆ ಹಲವು ದಿನಗಳಿಂದ ಈ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ …

Read More »

ಹೊಳಲ್ಕೆರೆ | ಕಾರು ಢಿಕ್ಕಿಯಿಂದ 13 ವಾಹನಗಳು ಜಖಂ

ಹೊಸದುರ್ಗದ ಕಡೆಯಿಂದ ವೇಗವಾಗಿ ಬಂದ ಕಾರು ಎನ್.ಜಿ. ಹಳ್ಳಿ ಗೇಟ್‌ನ ಹುಣಸೆ ಮರದ ಕೆಳಗೆ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10 ಬೈಕ್‌ಗಳು, 2 ಕಾರುಗಳು ಹಾಗೂ ಒಂದು ಆಟೊರಿಕ್ಷಾ ಜಖಂಗೊಂಡಿವೆ. ಕಾರು ಚಾಲಕ ಯಶಪಾಲ್ ಸಿಂಗ್ ಹಾಗೂ ಲಕ್ಷ್ಮಿಕುಮಾರ್ ಎಂಬುವರಿಗೆ ಗಾಯಗಳಾಗಿದ್ದು, ಹೊಸದುರ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುತ್ತಿಕಟ್ಟೆಯ ಪೈಪ್ ಕಾರ್ಖಾನೆಯ ಮಾಲೀಕ ಯಶಪಾಲ್ ಸಿಂಗ್ ಹುಂಡೈ ಕ್ರೆಟಾ ಕಾರಿನಲ್ಲಿ ಹೊಸದುರ್ಗದ ಕಡೆಯಿಂದ ವೇಗವಾಗಿ ಬರುತ್ತಿದ್ದರು. ಇದೇ ವೇಳೆ …

Read More »

ದಾವಣಗೆರೆ | 4 ಕಾರುಗಳು ಬೆಂಕಿಗೆ ಆಹುತಿ

ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ.ಬೆಳಿಗ್ಗೆ 7ಕ್ಕೆ ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಉರಿಯತೊಡಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ‘ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಭಾಗದಲ್ಲಿ ನಿಲುಗಡೆ ಮಾಡಲಾಗಿತ್ತು. ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಸುಟ್ಟು ಹೋಗಿವೆ’ ಎಂದು …

Read More »