ಶ್ರೀನಗರ: ಜಮ್ಮುವಿನ ಬಾಲಾಪರಾಧಿ ಗೃಹವೊಂದರಲ್ಲಿ ಕಾವಲು ಕಾಯುತ್ತಿದ್ದ ಇಬ್ಬರು ಪೊಲೀಸರ ಮೇಲೆ ಗುಂಡು ಹಾರಿಸಿ, ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಮೂವರು ಬಂಧಿತ ಕೈದಿಗಳು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಜಮ್ಮುವಿನ ಆರ್‌ಎಸ್ ಪುರ ಪ್ರದೇಶದಲ್ಲಿರುವ ಬಾಲಾಪರಾಧಿ ವೀಕ್ಷಣಾ ಗೃಹದೊಳಗೆ ಸೋಮವಾರ ಸಂಜೆ 5.05 ರ ಸುಮಾರಿಗೆ ಈ ಘಟನೆ ನಡೆದಿದೆ. ಕೈದಿಗಳು ಇಬ್ಬರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಮೂವರು ಕೈದಿಗಳು ಪರಾರಿಯಾಗಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





