BigTv News
February 15, 2026
Breaking News
ಕಲಬುರಗಿ: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿಇನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಕಲಬುರಗಿ ಜಿಲ್ಲೆಯಲ್ಲಿಯೂ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೀರನಳ್ಳಿ ಗ್ರಾಮದ ಬಳಿಯ ಕಾಗಿಣಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಐವರು ಸ್ನೇಹಿತರ ಗುಂಪು ಕಾಗಿಣಾ ನದಿಗೆ ಹೋಗಿದ್ದರು. ಈ ವೇಳೆ ಮೂವರು ತಮಗೆ ಈಜಲು ಬರುವುದಿಲ್ಲ ಎಂದು ದಡದಲ್ಲಿಯೇ …
Read More »
BigTv News
February 15, 2026
Breaking News
ಕಣ್ಣೂರು (ಕೇರಳ): ಸುಮಾರು ನಾಲ್ಕು ದಶಕಗಳಿಂದ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ 62 ವರ್ಷದ ಹಿರಿಯ ರೈತರೊಬ್ಬರು ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚೆರುಪುಳದಲ್ಲಿ ನಡೆದಿದೆ. ಮೃತರನ್ನು ಚೆರುಪುಳದ ಇಡವರಂ ನಿವಾಸಿ ಅಂಬಟ್ಟು ಎಲಿಯಾಸ್ (62) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಎಲಿಯಾಸ್ ಅವರು ತಮ್ಮ ತೋಟದಲ್ಲಿ ಕ್ರಿಮಿನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಜಿಲ್ಲೆಯ ಖಾಸಗಿ …
Read More »
BigTv News
February 15, 2026
Breaking News
ಬೆಳಗಾವಿ: ‘ಒಂದು ಪ್ರಮುಖ ಶಿಕ್ಷಣ ವಂಚನೆ ಪ್ರಕರಣದಲ್ಲಿ, ಯಮನಾಪುರದ ವೈದ್ಯರೊಬ್ಬರು ರಷ್ಯಾದಲ್ಲಿ ಎಂಬಿಬಿಎಸ್ ಪ್ರವೇಶ ಮತ್ತು ಉದ್ಯೋಗದ ಭರವಸೆ ನೀಡಿ 37 ಜನರಿಗೆ ಸುಮಾರು 75 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ, ಖಾಡೆ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನ್ಯೂ ಗಾಂಧಿನಗರದ ನಿವಾಸಿ ಅಜರುದ್ದೀನ್ ಅಬ್ದುಲ್ ಸಮದ್ ರಂಗರಿ (32) ಸಲ್ಲಿಸಿದ ದೂರಿನ ಪ್ರಕಾರ, ಆರೋಪಿ 2024 ರ ನವೆಂಬರ್‌ನಲ್ಲಿ …
Read More »
BigTv News
February 15, 2026
Breaking News
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಸಂಭವಿಸಿದೆ. ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೇ ಛಿದ್ರವಾಗಿರುವ ಘಟನೆ ಬೆಂಗಳುರುನ ಯಲಹಂಕದಲ್ಲಿ ನಡೆದಿದೆ.ಯಲಹಂಕದ ಚೌಡೇಶ್ವರಿ ಲೇಔಟ್ ಮನೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಛಿದ್ರ ಛಿದ್ರಗೊಂಡಿವೆ. ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು ಹಾಗೂ ಕೃಷ್ಣಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
February 15, 2026
Breaking News
ಬೆಂಗಳೂರು: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ವೇಳೆ ಅವಘಡ ನಡೆದಿದೆ. …
Read More »
BigTv News
February 15, 2026
Breaking News
ನಕಲಿ ಆಭರಣ ಮಾರಾಟ ಮಾಡುವ ನೆಪದಲ್ಲಿ ಆರು ಮಹಿಳೆಯರ ತಂಡವು ಯಶವಂತಪುರದ ವಸತಿ ಸಮುಚ್ಚಯದ ನೇಪಾಳದ ಭದ್ರತಾ ಸಿಬ್ಬಂದಿ ಮನೆಯಲ್ಲಿ ₹20 ಸಾವಿರ ನಗದು ಹಾಗೂ ಚಿನ್ನಾಭರಣ ಕಳವು ಮಾಡಿ, ಪರಾರಿಯಾಗಿದೆ. ಭದ್ರತಾ ಸಿಬ್ಬಂದಿಯ ದೂರು ಆಧರಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಶವಂತಪುರ ಪ್ರದೇಶದ ಗೋಲ್ಡನ್ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಉತ್ತರ ಕರ್ನಾಟಕ ಶೈಲಿಯ ಕೃತಕ ಆಭರಣಗಳನ್ನು ಮಾರಾಟದ ನೆಪದಲ್ಲಿ ಮಹಿಳೆಯರು ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಲು ಯತ್ನಿಸಿದ್ದರು. ಆದರೆ, ಭದ್ರತಾ …
Read More »
BigTv News
February 15, 2026
Breaking News
ಯಾದಗಿರಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 3ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮದ ನಿವಾಸಿಗಳಾದ ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಹಾಗೂ ರಾಮರೆಡ್ಡಿಯ ಅತ್ತೆ, ವಿಜಯಪುರ ಜಿಲ್ಲೆ ಮೂಲದ ಮಹಾದೇವಪ್ಪ (65) ಎಂದು ಗುರುತಿಸಲಾಗಿದೆ.
Read More »
BigTv News
February 15, 2026
Breaking News
ಬೆಂಗಳೂರು: ರಾಜ್ಯದಲ್ಲಿ ಮಹಾಶಿವರಾತ್ರಿಯಂದೇ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದ ಜಿಂದಾಲ್ ಸಮೀಪ ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿಯಾಗಿ ಇಂಡಿಕಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಎಂದು ಗುರುತಿಸಲಾಗಿದೆ. ತುಮಕೂರು ಕಡೆಯಿಂದ ಕಾರಿನಲ್ಲಿ ಐವರು ಬರುತ್ತಿದ್ದರು. ನಿಯಂತ್ರಣ ತಪ್ಪಿದ ಕಾರು ಡಿವೈಡರ್ ನಿಂದ …
Read More »
BigTv News
February 15, 2026
Breaking News
ಬೆಂಗಳೂರು ಸಮೀಪದ ನೆಲಮಂಗಲ ನವಯುಗ ಟೋಲ್ ಬಳಿಯ ಫ್ಲೈಓವರ್ ಬಳಿ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 5 ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ರಸ್ತೆಯಿಂದ ನಗರ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 12 ಗಂಟೆ ಸುಮಾರಿಗೆ ಸಂಭವಿಸಿದ ಈ ಅಪಘಾತದ ರಭಸಕ್ಕೆ …
Read More »
BigTv News
February 15, 2026
Breaking News
ಕಡಬ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾಣದ ಕೊಟ್ಯ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕ್ಕೆ ದಾಳಿ ನಡೆಸಿರುವ ಕಡಬ ಪೋಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಣದಕೊಟ್ಯದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದಾಗ ಅಲ್ಲಿ ಕೆಲವು ವ್ಯಕ್ತಿಗಳು ಕೋಳಿಗಳ ಕಾಲಿಗೆ ಬಾಳು ಕಟ್ಟಿ, ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಸುತ್ತಿರುವುದು ಪತ್ತೆಯಾಗಿತ್ತು. ಪೋಲೀಸರನ್ನು ಕಂಡು ಕೋಳಿ ಅಂಕದಲ್ಲಿ ನಿರತರಾಗಿದ್ದ …
Read More »