ಇಲ್ಲಿಯ ಬೇಲೆಹಿತ್ತಲಿನ ಯುವತಿಯೊಬ್ಬರಿಗೆ ಪ್ರೀತಿಸು ಎಂದು ಪೀಡಿಸಿದ ಯುವಕನೊಬ್ಬ, ಯುವತಿ ನಿರಾಕರಿಸಿದಾಗ ಸಿಟ್ಟಿಗೆದ್ದು ಯುವತಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ತಾನೂ ಕೈ ಕುಯ್ದುಕೊಂಡು ಗಾಯ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.ಚಿತ್ರದುರ್ಗದ ನಿವಾಸಿ, ಹಾಲಿ ಡ್ರೈಫ್ರುಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರ ಎಂ. (28) ಕೈ ಕುಯ್ದುಕೊಂಡ ಯುವಕ. ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದ ಯುವತಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಯುವತಿ ಕೆಲಸಕ್ಕೆ ಹೋಗುವದನ್ನೇ …
Read More »ಪೊಲೀಸ್‌ನೇ ಕಳ್ಳತನದ ಮಾಸ್ಟರ್ ಮೈಂಡ್!
ಪೊಲೀಸಪ್ಪನೇ ಕಳ್ಳರ ಗ್ಯಾಂಗ್ ಲೀಡರ್! ಗೌಡರ ಮನೆ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್ – ಖಾಕಿ ತೊಟ್ಟ ಖದೀಮನ ಬಂಧನ… ರಕ್ಷಕರೇ ಭಕ್ಷಕರಾದರು! ಹಾವೇರಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ನೇ ಕಳ್ಳತನದ ಮಾಸ್ಟರ್ ಮೈಂಡ್… ಖಾಕಿ ಮುಖವಾಡದ ಹಿಂದೆ ಕಳ್ಳ!ತೋಟದ ಮನೆ ಕಳ್ಳತನ – ಪೊಲೀಸ್ ಕಾನ್ಸ್‌ಟೇಬಲ್ ಕೈವಾಡ ಬಹಿರಂಗ…ತನ್ನದೇ ಸ್ಟೇಷನ್ ಕಂಬಿ ಹಿಂದೆ ಕಾನ್ಸ್‌ಟೇಬಲ್! ಹಾವೇರಿ. ಕಳ್ಳತನ ಪ್ರಕರಣದಲ್ಲಿ ಪೊಲೀಸ್‌ನ ಕರಾಳ ಮುಖ…. ಹಾವೇರಿ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್ಪೊಲೀಸ್ ಕಾನ್ಸ್‌ಟೇಬಲ್‌ನೇ …
Read More »ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಥಾಯ್ಲೆಂಡ್‍ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‍ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‍ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ …
Read More »ಫ್ಲೈಓವರ್ ಮೇಲೆ ನಿಂತಿದ್ದ ಕಾರಿನಲ್ಲಿ ಮೂರು ಶವ ಪತ್ತೆ
ನವದೆಹಲಿ: ಫ್ಲೈ ಓವರ್ ಮೇಲೆ ನಿಂತಿದ್ದ ಕಾರಿನಲ್ಲಿ ಮೂರು ಶವ ಪತ್ತೆಯಾಗಿರುವ ಘಟನೆ ದೆಹಲಿಯ ಪೀರಗಢಿಯಲ್ಲಿ ನಡೆದಿದೆ. ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂರು ಶವಗಳು ಪತ್ತೆಯಾಗಿವೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್(60) ಲಕ್ಷ್ಮೀ ದೇವಿ (40) ಹಾಗೂ ಶಿವ ನರೇಶ್ ಸಿಂಗ್ (47) ಮೃತ ದುರ್ದೈವಿಗಳು. ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. …
Read More »ಎಸ್‌ಡಿಪಿಐ ರಾಜ್ಯಾಧ್ಯಕ್ಷರ ಕಾರು ಅಗ್ನಿಗಾಹುತಿ
ಮಡಿಕೇರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಕಾರು ಅಗ್ನಿಗಾಹುತಿಯಾದ ಘಟನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತತ್‌ಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಶಾಲನಗರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಕಾರು ಸಂಪೂರ್ಣ ಹಾನಿಗೀಡಾಗಿದ್ದು, ಅಗ್ನಿ ಅನಾಹುತಕ್ಕೆ ಕಾರಣ …
Read More »KSRTC ಬಸ್‌ನಲ್ಲಿ ಆಕಸ್ಮಿಕ ಬೆಂಕಿ; ಚಾಲಕನ ಸಮಯ ಪ್ರಜ್ಞೆ, ತಪ್ಪಿದ ಭಾರೀ ದುರಂತ
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತಾಂತ್ರಿಕ ತೊಂದರೆಯಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.ಬಸ್ ಚಲಿಸುತ್ತಿದ್ದ ವೇಳೆ ಎಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿ ಕೊಂಡಿದ್ದು, ಚಾಲಕ ಸಮಯ ಪ್ರಜ್ಞೆ ಪ್ರದರ್ಶಿಸಿ ಬಸ್ ಅನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಸುರಕ್ಷಿತವಾಗಿ ಇಳಿಯಲು ಅವಕಾಶ ಮಾಡಿಕೊಟ್ಟರು. ಚಾಲಕನ ಬಾಗಿಲು ಮೂಲಕ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ತಕ್ಷಣದ …
Read More »500 ಕೋಟಿ ರೂ. ವಂಚನೆ ಪ್ರಕರಣ: 32ನೇ ಅವೆನ್ಯೂ ಸಿಇಓ ಅರೆಸ್ಟ್
ಚಂಡೀಗಢ : 500 ಕೋಟಿ ರೂ. ವಂಚನೆ ಪ್ರಕರಣದಲ್ಲಿ 32ನೇ ಅವೆನ್ಯೂ ವಾಣಿಜ್ಯ ರಿಯಲ್ ಎಸ್ಟೇಟ್ ಯೋಜನೆಯ ಸ್ಥಾಪಕ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಧ್ರುವ್ ದತ್ ಶರ್ಮಾನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಒಂದು ಫ್ಲೋರ್ ಅನ್ನು 25 ಕ್ಕೂ ಹೆಚ್ಚು ಜನರಿಗೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.ಈ ವೇಳೆ ಈತ ಸುಮಾರು 500 ಕೋಟಿ ರೂ. ವಂಚನೆ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಫೆ. 6ರಂದು ಬಂಧಿಸಲಾಗಿತ್ತು. ನಂತರ …
Read More »ಬೆಂಗಳೂರು: ಬ್ರೇಕ್ ವೈಫಲ್ಯ; ಮರ, ಹೋಟೆಲ್‌ಗೆ ಬಸ್ ಡಿಕ್ಕಿ
ಮಹಾಲಕ್ಷ್ಮಿ ಲೇಔಟ್‌ನ ಕಮಲಾನಗರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ವೊಂದು ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಮರ ಹಾಗೂ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.ಇದೇ ವೇಳೆ ಬ್ರೇಕ್ ವೈಫಲ್ಯದಿಂದ ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಬೈಕ್ ಹಾಗೂ ಕಾರು ಡಿಕ್ಕಿ ಹೊಡೆದ ಘಟನೆ ಸಹ ನಡೆದಿದೆ. ಯಾವುದೇ ಗಂಭೀರ ಅನಾಹುತ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಅವರು …
Read More »ವಿವಾಹಿತನಿಂದ ಕಿರುಕುಳ: ತಾಯಿ, ಮಗಳು ಆತ್ಮಹತ್ಯೆ
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ತಾಯಿ ಮತ್ತು ಮಗಳು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.ಎಂ. ಮಹೇಶ್ ಅವರ ಪತ್ನಿ ಶಕುಂತಲಾ(37), ಅವರ ಪುತ್ರಿ ಪ್ರಿಯಾ(18) ಮೃತಪಟ್ಟವರು. ಪಕ್ಕದ ಮನೆಯ 35 ವರ್ಷದ ವಿವಾಹಿತ ಪುತ್ರಿಯನ್ನು ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿದ್ದ. ಆತನಿಗೆ ಮಹೇಶ್ ಬುದ್ಧಿವಾದ ಹೇಳಿ ಕಳುಹಿಸಿದ್ದರು. ಪುತ್ರಿಗೆ ಬೇರೊಬ್ಬನ ಜೊತೆ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವುದನ್ನು ತಿಳಿದ ಆತ ಬೇರೆಯವರೊಂದಿಗೆ ಮದುವೆ ಮಾಡಿದರೆ …
Read More »ಗಾಂಜಾ ಮಾರಲು ಯತ್ನಿಸುತ್ತಿದ್ದ ಇಬ್ಬರ ಬಂಧನ
ಬೇಲೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಬೇಲೂರು ಪೊಲೀಸರು, ಬಂಧಿತರಿಂದ 50,000 ರೂ ಬೆಲೆ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಸಮೀಪದ ಬಂಟೇನಹಳ್ಳಿಯಲ್ಲಿರುವ ಅರಣ್ಯ ಇಲಾಖೆ ಸಮೀಪ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಇನ್‌ಸ್ಪೆಕ್ಟರ್ ರೇವಣ್ಣ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಸ್ಕೂಟಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಂಟೇನಹಳ್ಳಿ ನಿವಾಸಿ ಶಶಾಂಕ್, ಹೊಸ ನಗರ ನಿವಾಸಿ ದಿಲೀಪ್‌ನನ್ನು ವಶಕ್ಕೆ ಪಡೆದು 220 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





