BigTv News
February 6, 2026
Breaking News
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ …
Read More »
BigTv News
February 5, 2026
Breaking News
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ …
Read More »
BigTv News
February 5, 2026
Breaking News
ಕನಕಗಿರಿ: ತಾಲ್ಲೂಕಿನ ನವಲಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಪಾಯಿಯಾದ (ಸಹಾಯಕ ಹುದ್ದೆ) ಮೆಹಬೂಬಸಾಬ ಪಿಂಜಾರ ಅವರ ಮನೆಯಲ್ಲಿ ಮಂಗಳವಾರ ಕಳ್ಳತನವಾಗಿದೆ. ಗ್ರಾಮದ ವೀರಸಂಗಪ್ಪ ಪಟ್ಟಣಶೆಟ್ಟಿ ಅವರಿಗೆ ಸೇರಿದ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಬಾಡಿಗೆ ಇದ್ದು 15 ವರ್ಷದಿಂದ ಸಂಘದಲ್ಲಿ ಸಿಪಾಯಿ ಕೆಲಸ ಮಾಡುತ್ತಿರುವೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ₹ 1.50 ಲಕ್ಷ ನಗದು ಹಾಗೂ ₹ 7.50 ಲಕ್ಷ ಮೊತ್ತದ ಬಂಗಾರದ ಉಂಗುರ, …
Read More »
BigTv News
February 5, 2026
Breaking News
ಚಾಮರಾಜನಗರ: ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಆಹಾರ ಪದಾರ್ಥಗಳ ದುರ್ಬಳಕೆ, ಬಿಲ್ ಹಾಗೂ ಕಡತಗಳ ನಿರ್ವಹಣೆ ಮಾಡದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ನ್ಯಾಯಬೆಲೆ ಅಂಗಡಿ ವಿತರಕನ ಪರವಾನಗಿ ಅಮಾನತುಗೊಳಿಸಲಾಗಿದೆ.ಬಂಡಿಗೆರೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾರ್ಡನ್‌ಗಳನ್ನು ಒಂದು ತಿಂಗಳು ಕಡ್ಡಾಯ ರಜೆ ಮೇಲೆ ಕಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ …
Read More »
BigTv News
February 5, 2026
Breaking News
ಪುತ್ತೂರು: ಮಾಧ್ಯಮಗಳ ಮುಂದೆ ತನ್ನ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರು ನೀಡಿದ್ದ ದೂರಿನ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ನಗರ ಠಾಣೆ ಪೊಲೀಸರು ನೋಟೀಸ್ ನೀಡಿದ್ದಾರೆ. ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣದಲ್ಲಿ ನಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಮತ್ತು ಸಂದರ್ಶನಗಳಲ್ಲಿ ಮಾನಹಾನಿಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪಿ.ಜಿ.ಜಗನ್ನಿವಾಸ್ ರಾವ್ …
Read More »
BigTv News
February 5, 2026
Breaking News
ಪಾಲಕ್ಕಾಡ್ : ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ, ಜಿಲೆಟಿನ್ ಹಾಗೂ ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಯ ಮೇಲೆ ರಾಶಿ …
Read More »
BigTv News
February 5, 2026
Breaking News
ಹಾರೂಗೇರಿ ಪಟ್ಟಣದ ಅಥಣಿ-ಗೋಕಾಕ ರಸ್ತೆ ಮೇಲೆ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೋಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ಗಜಾನನ ಮಹಾದೇವ ವಡೆಯರ್(22), ಮಾಳಪ್ಪ ಮಲ್ಲಪ್ಪ ಗೋಲಭಾಂವಿ(22) ಮತ್ತು ಮಹಾದೇವ ಮಲ್ಲಪ್ಪ ಗೋಲಭಾಂವಿ (26) ಎಂದು ಗುರುತಿಸಲಾಗಿದೆ. ಮೂವರು ಮುಗಳಖೋಡ್ ನಿಂದ ಹಾರೂಗೇರಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ …
Read More »
BigTv News
February 5, 2026
Breaking News
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಖಾಲಿ ಜಾಗದಲ್ಲಿ ಹಾಕಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಧಗಧಗಿಸಿ ಉರಿದಿದೆ. ಬೆಂಗಳೂರಿನ ಜೆಪಿ ನಗರದ ಶ್ರೀನಿಧಿ ಲೇಔಟ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮರ ಇದ್ದಿದ್ದರಿಂದ ಹೊತ್ತಿ ಬೆಂಕಿ ಉರಿದಿದೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸದ್ಯ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.
Read More »
BigTv News
February 5, 2026
Breaking News
ಲೋಕಾಯುಕ್ತ ಪೊಲೀಸರು ಇಂದು ನಗರದ ಮೂವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ತಲಾಶ್ ನಡೆಸಿದ್ದಾರೆ. ಜ್ಯೂನಿಯರ್ ಎಂಜಿನಿಯರ್ ಕೆ.ಆರ್. ಚಂದ್ರಶೇಖರ್, ಮೈಸೂರು ನಗರ ಪಾಲಿಕೆಯ ಅಲ್ತಾಫ್ ಹುಸೇನ್ ಜಪ್ಪಾರ್ಪಿ, ಡೆಪ್ಯುಟಿ ಎಲೆಕ್ಟ್ರಿಕಲ್ ಇಸ್‌ಪೆಕ್ಟರ್ ದಾಳಿಗೊಳಗಾದವರು. ನಗರದ ವಿಜಯನಗರ ಮೊದಲ ಹಾಗೂ ಎರಡನೇ ಹಂತ ಸೇರಿ ಆರು ಕಡೆ ಹಾಗೂ ತಿ.ನರಸೀಪುರದಲ್ಲಿ ಒಂದು ಕಡೆ ದಾಳಿ ನಡೆಸಿದ್ದಾರೆ. ಅಕ್ರಮ …
Read More »
BigTv News
February 5, 2026
Breaking News
ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಬನ್ನೇರುಘಟ್ಟ ಮುಖ್ಯರಸ್ತೆಯ ಕೊಪ್ಪ ಗೇಟ್ ಬಳಿ ರಾಕೆಟ್ ವೇಗದಲ್ಲಿ ಬಂದ ಕಾರುಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಿಗಣಿ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳು, ಚಾಲಕನ ನಿಯಂತ್ರಣ ತಪ್ಪಿ ಮುಂಬದಿಯ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು …
Read More »