Breaking News

Breaking News

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದಲ್ಲಿದ್ದ ಮಹಿಳೆಯನ್ನು ವ್ಯಕ್ತಿಯೊಬ್ಬ ‘ನಿಮ್ಮ ತಾಯಿ ಕರೆಯುತ್ತಿದ್ದಾರೆ’ ಎಂದು ಹೇಳಿ ಕರೆದೊಯ್ದಿದ್ದಾನೆ. ಬಳಿಕ ಶೌಚಾಲಯದ ಹಿಂಭಾಗ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಹಳೇಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ಕೇವಲ ಎರಡು ತೆಂಗಿನ ಸಸಿ ಕಡಿದಿದ್ದಕ್ಕೆ ಅಳಿಯನನ್ನೇ ಕೊಚ್ಚಿ ಕೊಂದ ಮಾವ

ಚಿಕ್ಕಮಗಳೂರು: ಕಡೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ಎರಡು ತೆಂಗಿನ ಸಸಿಗಳನ್ನು ಕಡಿದ ವಿಚಾರಕ್ಕೆ ಮಾವ ರಾಜಾನಾಯ್ಕ, ಅಳಿಯ ದೇವರಾಜ್ ನಾಯ್ಕ (35) ಅವರನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೊಲಕ್ಕೆ ನುಗ್ಗಿದ ದೇವರಾಜ್ ಎರಡು ತೆಂಗಿನ ಸಸಿಗಳನ್ನು ಕಡಿದಿದ್ದು, ಇದರಿಂದ ಕೋಪಗೊಂಡ ರಾಜಾನಾಯ್ಕ ಆತನ ಕೈಯಲ್ಲಿದ್ದ ಮಚ್ಚನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನಾ …

Read More »

ಜೂಜು ಅಡ್ಡೆ ಮೇಲೆ ಪೋಲಿಸರ ದಾಳಿ : ಪತ್ರಕರ್ತ ಸೇರಿ 23 ಜನರ ವಿರುದ್ಧ ಪ್ರಕರಣ

ಕುರುಗೋಡು ಪಟ್ಟಣದ ಸರ್ವೇ ನಂ.675ರ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಪತ್ರಕರ್ತ ಕೆ.ವೀರಭದ್ರಗೌಡ ಸೇರಿದಂತೆ 23 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಶುಕ್ರವಾರ ರಾತ್ರಿ 10.45ಕ್ಕೆ ಇನ್‌ಸ್ಪೆಕ್ಟರ್ ಕರೆಮ್ಮ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ₹1.26 ಲಕ್ಷ ನಗದು ಹಾಗೂ ಇಸ್ಪೀಟ್‌ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Read More »

ಹಾಲು ಉಕ್ಕಿಸುವ ನೆಪದಲ್ಲಿ ಮಹಿಳೆ ಕಟ್ಟಿ ಹಾಕಿ ದರೋಡೆ, ಮೂವರ ಬಂಧನ!

ಬೆಂಗಳೂರು: ನಾಗಸಂದ್ರದಲ್ಲಿ ಬಾಡಿಗೆ ಮನೆಗೆ ಹಾಲು ಉಕ್ಕಿಸುವ ಕಾರ್ಯಕ್ರಮಕ್ಕೆ ಆಹ್ವಾನಿಸಿ ಮಹಿಳೆಯೊಬ್ಬರಿಂದ ₹1 ಲಕ್ಷ ನಗದು ಹಾಗೂ ಚಿನ್ನದ ಮಾಂಗಲ್ಯ ಸರ ದೋಚಿದ ಪ್ರಕರಣವನ್ನು ಪೀಣ್ಯಾ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೋರೆಗೌಡ, ಅಭಿ ಹಾಗೂ ಸತೀಶ್ ಎಂಬ ಮೂವರನ್ನು ಬಂಧಿಸಲಾಗಿದೆ. ನಾಗಮಂಗಲ ಮೂಲದ ಸುಜಾತಗೆ ಕೆಲ ತಿಂಗಳ ಹಿಂದೆ ಬೋರೆಗೌಡ ಪರಿಚಯವಾಗಿದ್ದು, ನಾಗಸಂದ್ರದಲ್ಲಿ ಬಾಡಿಗೆ ಮನೆ ಪಡೆದಿರುವುದಾಗಿ ಹೇಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ. ಆತನ ಮಾತು ನಂಬಿ ಸುಜಾತ ಪತಿಗೆ …

Read More »

ಹಾಸನದಲ್ಲಿ ನವವಿವಾಹಿತೆ ನಿಗೂಢ ನಾಪತ್ತೆ ಕೇಸ್ : 8 ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಮೃತದೇಹ ಪತ್ತೆ!

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಬಳಿ ಹೇಮಾವತಿ ನಾಲೆಯಲ್ಲಿ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ನವವಿವಾಹಿತೆ ಪ್ರಿಯಾಂಕಾ ಅವರ ಮೃತದೇಹ ಪತ್ತೆಯಾಗಿದೆ. ನಾಲೆಯ ನೀರು ಸ್ಥಗಿತಗೊಳಿಸಿದ ಬಳಿಕ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೆ.19ರಂದು ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ಪತಿ ರಾಜಶೇಖರ್ ಕಣ್ಣೆದುರೇ ಪ್ರಿಯಾಂಕಾ ನಾಲೆಗೆ ಹಾರಿದ್ದರು ಎನ್ನಲಾಗಿತ್ತು. ಅಂದಿನಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಎಂಟು ದಿನಗಳ ಕಾಲ ಶೋಧ ಕಾರ್ಯ ನಡೆಸಿದ್ದರು. …

Read More »

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ ಶಿಕ್ಷಕ!

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಪಿಎಂಶ್ರೀ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕ ಬೆಲ್ಟ್‌ನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳ ನಡುವಿನ ಸಣ್ಣ ಗಲಾಟೆಯ ವಿಚಾರವಾಗಿ ಬಾಲಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಶಿಕ್ಷಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ವಿದ್ಯಾರ್ಥಿಯ ಮೈಮೇಲೆ ಗಾಯಗಳಾಗಿದ್ದು, ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲೇ ಶಿಕ್ಷಕ ಅಮಾನುಷವಾಗಿ ವರ್ತಿಸಿರುವುದಕ್ಕೆ ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …

Read More »

ಡಿಪೋ ಆವರಣದಲ್ಲೇ ವಾಯುವ್ಯ ಸಾರಿಗೆ ಬಸ್‌‍ ಚಾಲಕ ಆತ್ಮಹತ್ಯೆ

ಹುಬ್ಬಳ್ಳಿಯಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮಂಜುನಾಥ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಗ್ರಾಮೀಣ ಘಟಕ-1ರ ಡಿಪೋ ಆವರಣದಲ್ಲಿರುವ ಮರಕ್ಕೆ ತಡರಾತ್ರಿ ನೇಣು ಬಿಗಿದುಕೊಂಡಿದ್ದು, ಬೆಳಗಿನ ಜಾವ ಘಟನೆ ಬೆಳಕಿಗೆ ಬಂದಿದೆ. ಮುಂಡರಗಿ ಮೂಲದ ಮಂಜುನಾಥ್‌ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More »

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಬಳಿಕ ಮೂವರು ಆರೋಪಿಗಳು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸುಭಾಷ್ ಹಾಗೂ ಅವರ ತಂದೆ ನಡುವೆ ಕಳೆದ ವರ್ಷ ಗಲಾಟೆ ನಡೆದಿದ್ದು, ತಂದೆಯ ಕೊಲೆಗೆ ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ತಂದೆ-ಮಗನ ನಡುವೆ ರಾಜಿ …

Read More »

ಬಿಡದಿ ಹೋರಾಟಗಾರರ ಬಂಧನ , ಅಸ್ವಸ್ಥಗೊಂಡ ರೈತ ಮಹಿಳೆ – ಪೊಲೀಸರ ಮೇಲೆ ದೌರ್ಜನ್ಯದ ಆರೋಪ!

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಭೈರಮಂಗಲ ಕ್ರಾಸ್‌ನಲ್ಲಿ ನಡೆಯುತ್ತಿದ್ದ ರೈತರ ಉಪವಾಸ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ. ಬಿಡದಿ-ಹಾರೋಹಳ್ಳಿ ರಸ್ತೆ ತಡೆದು ಪ್ರತಿಭಟಿಸುತ್ತಿದ್ದ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಐದು ದಿನಗಳಿಂದ ಉಪವಾಸದಲ್ಲಿದ್ದ ವರಲಕ್ಷ್ಮಮ್ಮ ಎಂಬ ಮಹಿಳೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಕ್ರಮಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ರೈತರ ಹೋರಾಟಕ್ಕೆ …

Read More »

ಅಧಿಕಾರಿಗಳನ್ನು ಮನೆಗೆ ಕರೆಸಿ ಹಲ್ಲೆ ಆರೋಪ: ಹಟ್ಟಿಹೊಳಿ ವಿರುದ್ಧ ಪ್ರತಿಭಟನೆ

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಹೆಸ್ಕಾಂ ಅಧಿಕಾರಿಗಳನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಪಿಎಂಸಿ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಎಇಇ ಡಿ.ದೀಪಕ್ ಹಾಗೂ ಸೆಕ್ಷನ್ ಅಧಿಕಾರಿ ರಾಜು ಚವ್ಹಾಣ ಅವರು ಹಲ್ಲೆ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸುವ ಭರವಸೆ ನೀಡಿದ ಬಳಿಕ ಸಿಬ್ಬಂದಿ ಪ್ರತಿಭಟನೆ ಕೈಬಿಟ್ಟರು. ಆರೋಪ ನಿರಾಕರಿಸಿರುವ ಚನ್ನರಾಜ, ಹಲ್ಲೆ ಮಾಡಿಲ್ಲ, …

Read More »