BigTv News
January 25, 2026
Breaking News
ಚಾಮರಾಜನಗರ: ಸಂಚಾರ ಠಾಣೆಯಲ್ಲಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಸವಾರನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್‌ಸ್ಟೆಬಲ್ ಮಲ್ಲು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂಚಾರ ಠಾಣೆಯಲ್ಲಿ ಇರಿಸಿಕೊಳ್ಳಲಾಗಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಮಾಲೀಕರಿಗೆ ₹ 3,000ಕ್ಕೆ ಬೇಡಿಕೆ ಇರಿಸಲಾಗಿತ್ತು.ಈ ಸಂಬಂಧ ದೂರುದಾರ ಹರದನಹಳ್ಳಿಯ ಪ್ರತಾಪ್ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಸಂಜೆ ದೂರುದಾರ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ಹೆಡ್ ಕಾನ್‌ಸ್ಟೆಬಲ್‌ನನ್ನು ವಶಕ್ಕೆ ಪಡೆದಿದ್ದಾರೆ …
Read More »
BigTv News
January 25, 2026
Breaking News
ರಾಮನಗರ: ಈಜುಕೊಳದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಪ್ರತಿಭಾ ಮೃತ ಮಹಿಳೆ. ಪ್ರತಿಭಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು. ಪತ್ರಿಭಾ ಬಾಬುಗೆ ಎರಡನೇ ಹೆಂಡತಿ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಪತಿ-ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಪತಿ ಬಾಬು ಹತ್ಯೆ ಮಡಿದ್ದಾನೆ ಎಂದು …
Read More »
BigTv News
January 25, 2026
Breaking News
ಹೈದರಾಬಾದ್: ಇಲ್ಲಿನ ನಾಂಪಲ್ಲಿಯಲ್ಲಿರುವ ನಾಲ್ಕು ಅಂತಸ್ತಿನ ಪೀಠೋಪಕರಣ ಅಂಗಡಿ ಕಟ್ಟಡದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಕಟ್ಟಡದಲ್ಲಿ ಶನಿವಾರ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ನಂತರ ನೆಲಮಾಳಿಗೆಯಲ್ಲಿ ಸಿಲುಕಿದ್ದ ಐದು ಮಂದಿಯನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮಹಿಳೆ ಸೇರಿದಂತೆ ಐವರ ಶವಗಳನ್ನು ಭಾನುವಾರ ಕಟ್ಟಡದಿಂದ ಹೊರತೆಗೆಯಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಪೊಲೀಸ್, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಮತ್ತು …
Read More »
BigTv News
January 25, 2026
Breaking News
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿಕೊಂಡು ಇಂಗ್ಲೆಂಡ್‌ಗೆ ಪ್ರಯಾಣಿಸಲು ಯತ್ನಿಸಿದ ಘಟನೆ ಪತ್ತೆಯಾಗಿದೆ. ಈ ಸಂಬಂಧ ಶ್ರೀಲಂಕಾ ಪ್ರಜೆ ಕಾಂದ್ಯ ರಾಜಗೋಪಾಲ್ ಅವರನ್ನು ವಿಮಾನ ನಿಲ್ದಾಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ರಾಜಗೋಪಾಲ್ ತನ್ನ ಪಾಸ್‌ಪೋರ್ಟ್ ಮತ್ತು ವೀಸಾವನ್ನು ತನ್ನ ಸ್ನೇಹಿತ ಶಾರುಷನ್ ಕುನಸೇಕರನ್ ಅವರಿಗೆ ನೀಡಿ ಅವರನ್ನು ಮೊದಲು ಇಂಗ್ಲೆಂಡ್‌ಗೆ ಕಳುಹಿಸಿದ್ದಾರೆ. ನಂತರ ತನ್ನ ಪಾಸ್‌ಪೋರ್ಟ್ ಕಳೆದು ಹೋಯಿತೆಂದು …
Read More »
BigTv News
January 25, 2026
Breaking News
ಕೋರ್ಬಾ: ವಾಹನ, ಆಭರಣ ಕಳ್ಳತನ ಸಾಮಾನ್ಯ. ಆದರೆ ಛತ್ತೀಸ್‌ಗಢದಲ್ಲಿ ಕಳ್ಳರು ಒಂದು ಹೆಜ್ಜೆ ಮುಂದಕ್ಕೆ ಹೋಗಿ 40 ವರ್ಷ ಹಳೆಯ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದಿದ್ದಾರೆ.40 ವರ್ಷಗಳ ಹಿಂದೆ ಜನರು ಸುಲಲಿತವಾಗಿ ಕಾಲುವೆ ದಾಟುವ ಸಲುವಾಗಿ ಸ್ಥಳೀಯಾಡಳಿತವು 20-30 ಟನ್ ತೂಗುವ ಗಟ್ಟಿಮುಟ್ಟಾದ ಕಬ್ಬಿಣದ ಸೇತುವೆಯನ್ನು ಕಟ್ಟಿಸಿತ್ತು. ಶುಕ್ರವಾರ ರಾತ್ರಿವರೆಗೂ ಜನರು ಇದರ ಮೇಲೆ ಓಡಾಡಿದ್ದಾರೆ. ಮುಂಜಾನೆ ನೋಡಿದರೆ, ಸೇತುವೆಯೇ ಇಲ್ಲ. ಇದರೊಂದಿಗೆ ನೀರಿನ ಪೈಪ್‌ಲೈನ್‌ಗೆ ಬಳಸಿದ್ದ ಕಬ್ಬಿಣವೂ ಕಾಣೆ. ತಕ್ಷಣ …
Read More »
BigTv News
January 25, 2026
Breaking News
ಢಾಕಾ ಸಮೀಪದ ನರಸಿಂಗ್ಡಿ ಜಿಲ್ಲೆಯಲ್ಲಿ ಹಿಂದು ಸಮುದಾಯದ ಯುವಕನೊಬ್ಬನನ್ನು ಗ್ಯಾರೇಜ್ ಒಳಗೇ ಸುಟ್ಟುಹಾಕಿರುವ ಘಟನೆ ನಡೆದಿದೆ. 23 ವರ್ಷದ ಚಂಚಲ್ ಚಂದ್ರ ಭೌಮಿಕ್ ಈ ದಾರುಣ ಕೃತ್ಯಕ್ಕೆ ಬಲಿಯಾಗಿದ್ದು, ಇದು ಆಕಸ್ಮಿಕವಲ್ಲ, ಪೂರ್ವನಿಯೋಜಿತ ದಾಳಿ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಇರುವ ಗ್ಯಾರೇಜ್‌ನಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಕೆಲಸದ ನಿಮಿತ್ತ ನರಸಿಂಗ್ಡಿಯಲ್ಲಿ ವಾಸವಾಗಿದ್ದ ಚಂಚಲ್, ಗ್ಯಾರೇಜ್ ಒಳಗೇ ಮಲಗಿದ್ದ ವೇಳೆ ಕಿಡಿಗೇಡಿಗಳು ದಾಳಿ …
Read More »
BigTv News
January 25, 2026
Breaking News
ಬೆಳಕವಾಡಿ: ಸಮೀಪದ ಮಳವಳ್ಳಿ- ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ 209 ರಸ್ತೆಯ ಗಗನಚುಕ್ಕಿ ಟೋಲ್ ಬಳಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರುಗಳು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಬೆಂಗಳೂರಿನ ಮೂಲದವರು ಎಂದು ತಿಳಿದು ಬಂದಿದೆ. ಅದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಸ್ಥಳೀಯರ ನೆರವಿನಿಂದ ಕಾರು …
Read More »
BigTv News
January 25, 2026
Breaking News
ಮುಂಡಗೋಡ: ಉಪವಲಯ ಅರಣ್ಯಾಧಿಕಾರಿ ಯಲ್ಲಾನಾಯಕ ಹಮಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಾಲ್ಲೂಕಿನ ಅಜ್ಜಳ್ಳಿ ಗ್ರಾಮದ ಚಂದ್ರಶೇಖರ ಹರಿಜನ ಅವರಿಗೆ ಮೂರು ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ, ಜೆಎಂಎಫ್‌ಸಿ ನ್ಯಾಯಾಧೀಶೆ ಅಕ್ಷತಾ ಸಿ.ಆರ್.ಶನಿವಾರ ಆದೇಶ ನೀಡಿದ್ದಾರೆ. ತನ್ನ ಅಣ್ಣನ ಮೇಲೆ ಅರಣ್ಯ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆಂದು ಕುಪಿತಗೊಂಡ ಚಂದ್ರಶೇಖರ ಅವರು ಯಲ್ಲಾನಾಯಕ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು 2019ರಲ್ಲಿ ಪ್ರಕರಣ ದಾಖಲಾಗಿತ್ತು. …
Read More »
BigTv News
January 25, 2026
Breaking News
ಕಡಬ: ಬಾಲಕನೊಬ್ಬ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡಿರುವುದಾಗಿ …
Read More »
BigTv News
January 25, 2026
Breaking News
ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂಪಾಯಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ ಗಳನ್ನು ಹೈಜಾಕ್ ಮಾಡಿರುವ ದೇಶದ ಅತಿ ದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಇತಿಹಾಸದಲ್ಲಿ ಬೆಚ್ಚಿಬೀಳಿಸುವ ಅತಿ ದೊಡ್ಡ ದರೋಡೆ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪೊಲೀಸ್ ಸಿಬ್ಬಂದಿ ತನಿಖೆ ಕೈಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ 400 ಕೋಟಿ ರೂ. ನಗದು ತುಂಬಿದ್ದ …
Read More »