BigTv News
January 25, 2026
Breaking News
ಢಾಕಾ ಸಮೀಪದ ನರಸಿಂಗ್ಡಿ ಜಿಲ್ಲೆಯಲ್ಲಿ ಹಿಂದು ಸಮುದಾಯದ ಯುವಕನೊಬ್ಬನನ್ನು ಗ್ಯಾರೇಜ್ ಒಳಗೇ ಸುಟ್ಟುಹಾಕಿರುವ ಘಟನೆ ನಡೆದಿದೆ. 23 ವರ್ಷದ ಚಂಚಲ್ ಚಂದ್ರ ಭೌಮಿಕ್ ಈ ದಾರುಣ ಕೃತ್ಯಕ್ಕೆ ಬಲಿಯಾಗಿದ್ದು, ಇದು ಆಕಸ್ಮಿಕವಲ್ಲ, ಪೂರ್ವನಿಯೋಜಿತ ದಾಳಿ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಇರುವ ಗ್ಯಾರೇಜ್‌ನಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಕೆಲಸದ ನಿಮಿತ್ತ ನರಸಿಂಗ್ಡಿಯಲ್ಲಿ ವಾಸವಾಗಿದ್ದ ಚಂಚಲ್, ಗ್ಯಾರೇಜ್ ಒಳಗೇ ಮಲಗಿದ್ದ ವೇಳೆ ಕಿಡಿಗೇಡಿಗಳು ದಾಳಿ …
Read More »
BigTv News
January 25, 2026
Breaking News
ಬೆಳಕವಾಡಿ: ಸಮೀಪದ ಮಳವಳ್ಳಿ- ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ 209 ರಸ್ತೆಯ ಗಗನಚುಕ್ಕಿ ಟೋಲ್ ಬಳಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರುಗಳು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಬೆಂಗಳೂರಿನ ಮೂಲದವರು ಎಂದು ತಿಳಿದು ಬಂದಿದೆ. ಅದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಸ್ಥಳೀಯರ ನೆರವಿನಿಂದ ಕಾರು …
Read More »
BigTv News
January 25, 2026
Breaking News
ಮುಂಡಗೋಡ: ಉಪವಲಯ ಅರಣ್ಯಾಧಿಕಾರಿ ಯಲ್ಲಾನಾಯಕ ಹಮಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಾಲ್ಲೂಕಿನ ಅಜ್ಜಳ್ಳಿ ಗ್ರಾಮದ ಚಂದ್ರಶೇಖರ ಹರಿಜನ ಅವರಿಗೆ ಮೂರು ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ, ಜೆಎಂಎಫ್‌ಸಿ ನ್ಯಾಯಾಧೀಶೆ ಅಕ್ಷತಾ ಸಿ.ಆರ್.ಶನಿವಾರ ಆದೇಶ ನೀಡಿದ್ದಾರೆ. ತನ್ನ ಅಣ್ಣನ ಮೇಲೆ ಅರಣ್ಯ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆಂದು ಕುಪಿತಗೊಂಡ ಚಂದ್ರಶೇಖರ ಅವರು ಯಲ್ಲಾನಾಯಕ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು 2019ರಲ್ಲಿ ಪ್ರಕರಣ ದಾಖಲಾಗಿತ್ತು. …
Read More »
BigTv News
January 25, 2026
Breaking News
ಕಡಬ: ಬಾಲಕನೊಬ್ಬ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡಿರುವುದಾಗಿ …
Read More »
BigTv News
January 25, 2026
Breaking News
ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂಪಾಯಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ ಗಳನ್ನು ಹೈಜಾಕ್ ಮಾಡಿರುವ ದೇಶದ ಅತಿ ದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಇತಿಹಾಸದಲ್ಲಿ ಬೆಚ್ಚಿಬೀಳಿಸುವ ಅತಿ ದೊಡ್ಡ ದರೋಡೆ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪೊಲೀಸ್ ಸಿಬ್ಬಂದಿ ತನಿಖೆ ಕೈಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ 400 ಕೋಟಿ ರೂ. ನಗದು ತುಂಬಿದ್ದ …
Read More »
BigTv News
January 24, 2026
Breaking News
ಮೈಸೂರು: ಪತ್ನಿ ಕೊಲೆಗೆ ಯತ್ನಿಸಿದ್ದ ಪತಿಗೆ ನಗರದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನಗರದ ನಯಾಜ್ ಅಹಮ್ಮದ್ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಈತ ಸೀಮಾ ಭಾನು ಅವರನ್ನು ವಿವಾಹವಾಗಿದ್ದು, ಅವರ ಮೇಲೆ ಅನುಮಾನದಿಂದ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ. ವಿಚ್ಛೇದನ ನೀಡಬೇಕು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆಗೆ …
Read More »
BigTv News
January 24, 2026
Breaking News
ಕಾರವಾರ: ಸಾಮಾಜಿಕ, ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ್ದಂತ ಕುಟುಂಬಕ್ಕೆ ಸೇರಿದ್ದಂತ ರಾಜೀವ್ ಪಿಕಳೆ ಅವರನ್ನು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ತನ್ನನ್ನು ತೇಜೋವಧೆ ಮಾಡಿದ ಕಾರಣಕ್ಕಾಗಿ ರಾಜೀವ್ ಪಿಕಳೆ ಎನ್ನುವಂತ ವೈದ್ಯರೊಬ್ಬರು ತಮ್ಮ ಡಬ್ಬಲ್ ಬ್ಯಾರಲ್ ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡಿದಂತ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಸುಭಾಷ್, ಹರಿಶ್ಚಂದ್ರ ಎಂಬುದಾಗಿ …
Read More »
BigTv News
January 24, 2026
Breaking News
ಅಂಕೋಲಾ: ಕಾರವಾರದ ಪಿಕಳೆ ಆಸ್ಪತ್ರೆಯಲ್ಲಿ ಔಷಧ ವಿತರಕರಾಗಿ ಕೆಲಸ ಮಾಡುತ್ತಿದ್ದ ರಾಜೀವ ಪಿಕಳೆ (67) ಶುಕ್ರವಾರ ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠಾಕೇರಿಯ ತಮ್ಮ ಮನೆಯ ತುಳಸಿಕಟ್ಟೆಯ ಎದುರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಬಲ್ ಬ್ಯಾರಲ್ ಗನ್‌ನಿಂದ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿಕೊಂಡಿದ್ದಾರೆ. ಬೆಳಗ್ಗೆ ಕೆಲಸಕ್ಕೆ ಬಂದ ಮಹಿಳೆ ತುಳಸಿಕಟ್ಟೆಯ ಬಳಿ ಬಿದ್ದ ರಕ್ತಸಿಕ್ತ ಮೃತದೇಹ ನೋಡಿ ಸುತ್ತಮುತ್ತಲಿನ ಸಾರ್ವಜನಿಕರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಪೋಲಿಸರು ಸ್ಥಳಕ್ಕೆ …
Read More »
BigTv News
January 24, 2026
Breaking News
ಚಿಕ್ಕಮಗಳೂರು: ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಯೊಬ್ಬಳ ಕೈಕಟ್ಟಿ ಹಲ್ಲೆ ನಡೆಸಿದ ಘಟನೆ ಶುಕ್ರವಾರ(ಜ23) ರಾತ್ರಿ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ನಡೆದಿದೆ.ಬಸ್ಸಿನೊಳಗೆ ನಡೆದ ಈ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ಹಲ್ಲೆ ನಡೆಸಿದ ಯುವಕರು ಹಾಗೂ ಹಲ್ಲೆಗೆ ಒಳಗಾದ ಯುವತಿ ಯಾರೆಂಬುದು ಇದುವರೆಗೆ ಪತ್ತೆಯಾಗಿಲ್ಲ. ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಡಿಯೋ ಆಧರಿಸಿ ಆರೋಪಿಗಳು …
Read More »
BigTv News
January 24, 2026
Breaking News
ಬೆಂಗಳೂರು ಗ್ರಾಮಾಂತರ: ಎಣ್ಣೆ ಪಾರ್ಟಿ ನಡೆಸಿ ಸ್ನೇಹಿತನಿಗೆ ಮುಹೂರ್ತ ಇಟ್ಟು ಕ್ರೂರವಾಗಿ ಕೊಲೆ ಮಾಡಿ, ಬಳಿಕ ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿದ್ದೇನಹಳ್ಳಿ ಗ್ರಾಮದ ಅಶೋಕ್ (35) ಕೊಲೆಯಾದ ದುರ್ದೈವಿ. ಆರೋಪಿಗಳು ಮೊದಲು ಕೆರೆಯ ಬಳಿ ಅಶೋಕ್‌ನನ್ನು ಕೊಲೆ ಮಾಡಿ, ನಂತರ ಮೃತದೇಹವನ್ನು ರಸ್ತೆ ಬದಿಗೆ ತಂದು ಹಾಕಿದ್ದಾರೆ ಎನ್ನಲಾಗಿದೆ. ಅಪರಾಧದ ಸಾಕ್ಷ್ಯ ನಾಶ ಮಾಡಲು ಹರಿದಿದ್ದ …
Read More »