Breaking News

Breaking News

ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ.!

ಬೆಂಗಳೂರಿನ ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರು ಹೂಡಿದ್ದ ಸಿವಿಲ್ ಪ್ರಕರಣದಲ್ಲಿ, ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಲಿಸದ ಕಾರಣ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ. 2023ರ ಸೆಪ್ಟೆಂಬರ್ 8ರಂದು …

Read More »

ರಾಜ್ಯದಲ್ಲಿ ಭೀಕರ ಅಪಘಾತ : ಕಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು.!

ತೀರ್ಥಹಳ್ಳಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ಬಳಿ ಈ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕಾರಿನಲ್ಲಿದ್ದ ರಿಹಾನ್(15) , ರಾಹಿಲ್ (9) , ಹಾಗೂ ಫಾತಿಮಾ …

Read More »

ಬೈಕ್‌ಗೆ ಕಾರು ಢಿಕ್ಕಿ

ಮಣಿಪಾಲ: ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲಕ ಕಾರನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದ ಘಟನೆ ಅಲೆವೂರು ಸಮೀಪ ನಡೆದಿದೆ.ಜ.11ರ ಬೆಳಗ್ಗೆ 8.45ರ ಸುಮಾರಿಗೆ ಸಚಿನ್ ಪೂಜಾರಿ ಎಂಬುವರು ಪಡುಅಲೆವೂರು ಬಳಿ ಬೈಕ್‌ನಲ್ಲಿ ಹೋಗುತ್ತಿರುವಾಗ ಅಲೆವೂರು ಕಡೆಯಿಂದ ಮೂಡುಬೆಳ್ಳೆ ಕಡೆಗೆ ಕಾರಿನ ಚಾಲಕನೊಬ್ಬ ತನ್ನ ಕಾರನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸಚೀನ್‌ ಪೂಜಾರಿ ಅವರ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ.ಪರಿಣಾಮ ಬೈಕ್‌ ಸವಾರ ಸಚೀನ ಪೂಜಾರಿ ರಸ್ತೆಗೆ …

Read More »

ಬಾಂಗ್ಲಾದೇಶದಲ್ಲಿ 28 ವರ್ಷದ ಹಿಂದೂ ಆಟೋ ಚಾಲಕ ಹತ್ಯೆ: ರಕ್ತಸಿಕ್ತ ಶವ ಪತ್ತೆ

ಬಾಂಗ್ಲಾದೇಶದ ಚಿತ್ತಗಾಂಗ್ ನಲ್ಲಿ ಭಾನುವಾರ ರಾತ್ರಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, 28 ವರ್ಷದ ಹಿಂದೂ ಆಟೋರಿಕ್ಷಾ ಚಾಲಕ ಸಮೀರ್ ದಾಸ್ ಎಂಬಾತನನ್ನು ಕ್ರೂರವಾಗಿ ಥಳಿಸಿ ಇರಿದು ಕೊಂದ ಘಟನೆ ನಡೆದಿದೆಚಿತ್ತಗಾಂಗ್ ಬಳಿಯ ಫೆನಿ ಜಿಲ್ಲೆಯ ದಗನ್ ಭುಯಿಯಾನ್ ಎಂಬ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ದೇಶಾದ್ಯಂತ ಆಕ್ರೋಶವನ್ನು ಹುಟ್ಟುಹಾಕಿದೆ.ಸ್ಥಳೀಯ ಮಾಧ್ಯಮಗಳ ಪ್ರಕಾರ, ಸಮೀರ್ ದಾಸ್ ಅವರ ಮೇಲೆ ಅಪರಿಚಿತ ದಾಳಿಕೋರರ ಗುಂಪು ಹಲ್ಲೆ ನಡೆಸಿದ್ದು, ನಂತರ ಅವರ ಬ್ಯಾಟರಿ ಚಾಲಿತ …

Read More »

ಚಾಮರಾಜನಗರದಲ್ಲಿ ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ತಿರುವಿನಲ್ಲಿ ಸರ್ಕಾರಿ ಬಸ್ ಗೆ ಬೈಕಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೂರ್ಣಕೆರೆ ಬಳಿ ತಾಳಬೆಟ್ಟದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.ಮೃತರನ್ನು ರಾಮೇಗೌಡನಹಳ್ಳಿಯ ಶಿವಪ್ಪ ಮತ್ತು ಸತೀಶ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಕುರಿತು ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಡಬ – ತಾಯಿ -ಮಗು ನಾಪತ್ತೆ

ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ಎಂಬವರು ಕಾಣೆಯಾಗಿರುವ ಬಗ್ಗೆ ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ 3 ತಿಂಗಳ ಹಿಂದೆ ನೇಹಾರವರು ತನ್ನ ಗಂಡನೊಂದಿಗೆ ಕೆಲಸಕ್ಕೆಂದು ಬೆಂಗಳೂರಿಗೆ ಹೋಗಿರುತ್ತಾರೆ.ಡಿಸೆಂಬರ್ 25 ರಂದು ಗಂಡ ಊರಿಗೆ ಬಂದಿದ್ದು, ನೇಹಾ ತನ್ನ ಮಗುವಿನೊಂದಿಗೆ ಮನೆಗೂ ಬಾರದೇ, ದೂರವಾಣಿ ಕರೆಗೂ ಸಿಗದೇ ಕಾಣೆಯಾಗಿರುತ್ತಾರೆ. ಕಾಣೆಯಾದವರ ಚಹರೆ : ನೇಹಾ: ಎತ್ತರ 152 ಸೆಂ ಮೀ …

Read More »

ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಕಾರ್ಮಿಕ ಮಹಿಳೆ ಸಾವು

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಇಂದು ಮತ್ತೋರ್ವ ಮಹಿಳೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ಕಾಫಿ ತೋಟಕ್ಕೆ ನುಗ್ಗಿದೆ.ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯನ್ನು ತುಳಿದು ಕೊಂದಿದೆ. 40 ವರ್ಷದ ಶೋಭಾ ಆನೆ ದಾಳಿಗೆ ಬಲಿಯಾದ ಮಹಿಳೆ. ಘಟನಾ ಸ್ಥಳಕ್ಕೆ …

Read More »

ಕನಕಗಿರಿ | ಬೈಕ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಸಾವು

ಅಕ್ರಮವಾಗಿ ಮರಳು ತುಂಬಿಕೊಂಡು ಹೊರಟ್ಟಿದ್ದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ಮೃತ ವೈಕ್ತಿಯನ್ನು ನವಲಿ ಗ್ರಾಮದ ರುದ್ರಗೌಡ ದಳಪತಿ(60) ಎಂದು ಗುರುತಿಸಲಾಗಿದೆ. ಡಂಕನಕಲ್ ಗ್ರಾಮದಲ್ಲಿ ಚಿಕಿತ್ಸೆ ಪಡೆದುಕೊಂಡು ಮಗನ‌ ಜತೆಗೆ ಬೈಕ್ ಮೂಲಕ ನವಲಿಗೆ ಬರುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ.ಮರಳು ತುಂಬಿಕೊಂಡಿದ್ದ ಟಿಪ್ಪರ್ ಗಂಗಾವತಿ ಕಡೆಗೆ ಹೊರಟಿತ್ತು ಎನ್ನಲಾಗಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು …

Read More »

ಆಟೋ -ಜೀಪು ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ

ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ (ಒಂಟಿಯಂಗಡಿ) ಬಳಿ ಆಟೋ ರಿಕ್ಷಾ ಹಾಗೂ ಜೀಪು ನಡುವೆ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಸೇರಿದಂತೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಜೀಪ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದ್ದು, ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಅಪಘಾತದ ಮಾಹಿತಿ ಪಡೆದ ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗಾಯಾಳುಗಳನ್ನು ತಕ್ಷಣ ಸಿದ್ದಾಪುರ …

Read More »

ಕಾಪು : ಮಹಿಳೆ ನಾಪತ್ತೆ

ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆಯು ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿಯ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಮರಾಠ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ …

Read More »