Breaking News

Breaking News

ಕೌಟುಂಬಿಕ ಕಲಹ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು …

Read More »

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಗದಗ ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ವಾಯುವಿಹಾರಕ್ಕೆ ಬಂದ ಜನರ ಕಣ್ಣಿಗೆ ಕಳ್ಳ ಬಿದ್ದಿದ್ದು, ತಕ್ಷಣ ರೈತರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಧಾವಿಸಿದ ರೈತರು ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ರೈತರ …

Read More »

ಹುಬ್ಬಳ್ಳಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ – ಸಿಐಡಿಗೆ..

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅನುಮತಿ ಪಡೆದ ನಂತರ ಸಿಐಡಿಗೆ ತನಿಖೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಗಳನ್ನು ಸಿಐಡಿ ಸಂಪೂರ್ಣವಾಗಿ ತನಿಖೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆ ವರದಿ ಆಧರಿಸಿ ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂಬುದನ್ನು …

Read More »

ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಮತ್ತೊಂದು ಕರಾಳ ಮುಖ ಬಯಲು: ಹನಿಟ್ರ್ಯಾಪ್ ಮಾಡಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಪ್ರಕರಣವೊಂದರಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನು ಪೊಲೀಸರು ಬಂಧಿಸಿದ್ದ ವೇಳೆ ತಾನೇ ವಿವಸ್ತ್ರವಾಗಿ ಹೈಡ್ರಾಮಾ ಮಾಡಿ ಪೊಲೀಸರ ವಿರುದ್ಧ ಆರೋಪ ಮಾಡಿದ್ದ ಸುಜಾತಾ ಹಂಡಿಯ ಮತ್ತೊಂದು ಕರಾಳ ಮುಖ ಬಹಿರಂಗವಾಗಿದೆ.ಸುಜಾತಾ ಹಂಡಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಹನಿಟ್ರ್ಯಾಪ್ ಕೇಸ್ ಕೂಡ ಇದೆ. ಅಷ್ಟೇ ಅಲ್ಲ ಹಣಕ್ಕಾಗಿ ವ್ಯಕ್ತಿಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಆತನನ್ನು ಹಿಗ್ಗಾ ಮುಗ್ಗಾ ಥಳಿಸಿರುವ ಹಾಗೂ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಸುಜಾತಾ …

Read More »

ರಾಜ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣ.!

ತುಮಕೂರು : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾದ ಘಟನೆ ತುಮಕೂರು ಬಳಿ ನಡೆದಿದೆ. ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ …

Read More »

ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎತ್ತಂಗಡಿ..

ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ… ವಿವಸ್ತ್ರ ಪ್ರಕರಣಕ್ಕೆ ಎಸಿಪಿ ಮಟ್ಟದ ತನಿಖೆ… ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ, ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ಕಠಿಣ ಕ್ರಮಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಸಂಬಂಧಿಸಿದ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ. ಹಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಆದೇಶದಂತೆ, …

Read More »

ಬಿಜೆಪಿ ಕಾರ್ಯಕರ್ತೆಯ ಮೇಲಿನ ದೌರ್ಜನ್ಯ ಪ್ರಕರಣದ ನಡುವೆಯೇ ಶಾಸಕಿ ಭಾಗೀರಥಿ ಮುರುಳ್ಯರ ನಕಲಿ ಶ್ರದ್ಧಾಂಜಲಿ ಪೋಸ್ಟ್ ವೈರಲ್ – ಆರೋಪಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರ ನಕಲಿ ಶ್ರದ್ಧಾಂಜಲಿ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಬಿಲ್ಲವ ಸಂದೇಶ್’ ಎಂಬ ಫೇಸ್‌ಬುಕ್ ಖಾತೆಯಿಂದ ಈ ಅವಹೇಳನಕಾರಿ ಶ್ರದ್ಧಾಂಜಲಿ ಪೋಸ್ಟ್ ಹಾಕಲಾಗಿದ್ದು, ಅದರಲ್ಲಿ ದಲಿತ ಸಮುದಾಯ ಮತ್ತು ಶಾಸಕಿ ಭಾಗೀರಥಿ ಮುರುಳ್ಯರ ಬಗ್ಗೆ ತಪ್ಪು ಹಾಗೂ …

Read More »

ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಪೊಲೀಸ್ ಇಲಾಖೆ ಸಂಕಟದಲ್ಲಿ – ನಾಳೆ ಬಿಜೆಪಿ ಹತ್ತು ಗಂಟೆ ಗಡುವು, ಸಸ್ಪೆಂಡ್ ಆಗ್ತಾರಾ ಪೊಲೀಸರು?

ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ವಿವಸ್ತ್ರ ಪ್ರಕರಣ ದಿನೇದಿನೇ ತಾರಕಕ್ಕೇರಿದ್ದು, ಇದೀಗ ಪೊಲೀಸ್ ಇಲಾಖೆ ತೀವ್ರ ಸಂಕಟದ ಪರಿಸ್ಥಿತಿಗೆ ಸಿಲುಕಿದಂತಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ, ನಾಳೆ ರಾಜ್ಯಾದ್ಯಂತ ಮಹಿಳೆಯರ ಪರವಾಗಿ ಹೋರಾಟಕ್ಕೆ ಇಳಿಯಲು ನಿರ್ಧರಿಸಿದೆ. ಇದರ ಜೊತೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ನಾಳೆ ಹತ್ತು ಗಂಟೆಗಳೊಳಗೆ ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು ಎಂದು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಗಡುವು ನೀಡಿದ್ದಾರೆ. …

Read More »

ನಾಳೆ ಖಚಿತವಾಗಿ ಪೊಲೀಸರ ಸಸ್ಪೆಂಡ್…?

ಹುಬ್ಬಳ್ಳಿ:- ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ವಿವಸ್ತ್ರ ಪ್ರಕರಣ ಈಗ ತಾರಕಕ್ಕೇರಿದೆ.ಆ ಹಿನ್ನೆಲೆಯಲ್ಲಿ ಪೋಲೀಸ ಇಲಾಖೆ ಕೂಡಾ ಈಗ ಸಂದಿಗ್ದ ಪರಿಸ್ಥಿತಿಗೆ ಸಿಲುಕಿದಂತಾಗಿದೆ.ನಾಳೆ ಬಿಜೆಪಿ ಕೊಟ್ಟ ಹತ್ತು ಘಂಟೆಯ ಟೈಂ ಬಾಂಡ್ ನೊಳಗಾಗಿ ಪೋಲೀಸರ ತಲೆದಂಡ ಆಗುತ್ತಾ..ಈ ಒಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಮಹಿಳೆಯ ಪರವಾಗಿ ಹೋರಾಟಕ್ಕಿಳಿಯಲಿದೆ ಅಲ್ಲದೇ ವಿರೋಧ ಪಕ್ಷದ ನಾಯಕ ಆರ್.ಅಶೋಕ ನಾಳೆ ಹತ್ತು ಘಂಟೆಯೊಳಗೆ ಪೋಲೀಸರನ್ನ ಸಸ್ಪೆಂಡ್ ಮಾಡಬೇಕು ಎಂದು …

Read More »

ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ

ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ.ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ. …

Read More »