Breaking News

Breaking News

ಶಿವಮೊಗ್ಗ: ಠಾಣೆಯಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ

ಇಲ್ಲಿನ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಬುಧವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ |ಕೈಗಾರಿಕಾ ವಸಾಹತು, ಮೂಲ ಸೌಕರ್ಯಕ್ಕೆ ಕ್ರಮ: ಜಿಲ್ಲಾಧಿಕಾರಿ ಪ್ರಭುಲಿಂಗ ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ.ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಕರ್ತವ್ಯಕ್ಕೆ ಮರಳಿದ್ದರು. ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು. …

Read More »

ಬೆಂಗಳೂರಲ್ಲಿ ರೌಡಿಯಿಂದ ಮತ್ತೋರ್ವ ರೌಡಿಯ ಕಿಡ್ನ್ಯಾಪ್ : ಬೆರಳು ಕತ್ತರಿಸಿ ರಾತ್ರಿಯಿಡೀ ಚಿತ್ರಹಿಂಸೆ.!

ಬೆಂಗಳೂರಲ್ಲಿ ರೌಡಿಯೋರ್ವ ಮತ್ತೋರ್ವ ರೌಡಿಯ ಕಿಡ್ನ್ಯಾಪ್ ಮಾಡಿ ಬೆರಳು ಕತ್ತರಿಸಿ ರಾತ್ರಿಯಿಡೀ ಚಿತ್ರಹಿಂಸೆ ನೀಡಿದ ಘಟನೆ ಎಲ್ಲರನ್ನ ಬೆಚ್ಚಿ ಬೀಳಿಸಿದೆ. ಹಳೇ ವೈಷಮ್ಯಕ್ಕೆ ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಹೌದು. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಹುಸ್ಕೂರು ಬಳಿ ಈ ಘಟನೆ ನಡೆದಿದೆ.ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಸಲಗನನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಲಾಗಿದೆ. ರೌಡಿಶೀಟರ್ ಗಂಗಾ ಮತ್ತು ಆತನ ಸಹಚರರು ಸಲಗನನ್ನು ಕಿಡ್ನ್ಯಾಪ್ ಮಾಡಿದ್ದಾರೆ . ಕಾರ್ತಿಕ್ ನನ್ನು …

Read More »

ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು!

ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಭಾರೀ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.ಬಾಯ್ಲರ್ ಸ್ಫೋಟದ ಪರಿಣಾಮವಾಗಿ ಇನ್ನೂ ಆರು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅವರಲ್ಲಿ ಕೆಲವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ …

Read More »

ಬೆಂಗಳೂರಲ್ಲಿ ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!

16 ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.ಮಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ್ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನಿಕ್ಷೇಪ್ ಬಂಗೇರಾ ತನ್ನ ತಂದೆ ತಾಯಿ ಜೊತೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದನು. ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿ ವಾಪಸ್ ಆಗಿದ್ದ ನಿಕ್ಷೇಪ್ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನಾರೋಗ್ಯದಿಂದ ನಿಕ್ಷೇಪ್ ಆತ್ಮಹತ್ಯೆ ಮಾಡಿಕೊಂಡಿರುವ …

Read More »

ಕೇಶ್ವಾಪುರ ಬಟ್ಟೆ ಬಿಚ್ಚಿ ಪ್ರಕರಣ : ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆ..

ಹುಬ್ಬಳ್ಳಿ: ನಗರದ ಕೇಶ್ವಾಪುರ ಠಾಣೆಯ ಪೊಲೀಸರು ಅಮಾಯಕ ಮಹಿಳೆಯ ಮೇಲೆ ಥಳಿಸಿರುವುದು ಅಕ್ಷಮ್ಯ ಅಪರಾಧ. ಮಹಿಳೆಯನ್ನು ಅಸಭ್ಯವಾಗಿ ನಡೆಸಿಕೊಂಡ ರೀತಿ ನಾಚಿಕೆಗೇಡು. ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ತಮ್ಮ ದರ್ಪವನ್ನು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಹಾಗೂ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಆರೋಪಿಸಿದ್ದಾರೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹಾಳುಮಾಡಿರುವ ಕಾಂಗ್ರೆಸ್‌ ಸರ್ಕಾರ, ದಬ್ಬಾಳಿಕೆಯನ್ನು ನಡೆಸುತ್ತಿದೆ. …

Read More »

ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ : ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟನೆ

ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಪುರುಷ ಪೊಲೀಸ್ ಸಿಬ್ಬಂದಿ ಮುಂದೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವ ಆರೋಪ ವಿಚಾರವಾಗಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು ಆಕೆಯೇ ನಾಲ್ವರು ಪೊಲೀಸ್ ಬಂದಿಯ ಮೇಲೆ ಹಲ್ಲೆ ಮಾಡಿದ್ದಾಳೆ . …

Read More »

ಕೆಲಸ ಮುಗಿಸಿ ಮನೆಗೆ ಬಂದ ಪತಿಗೆ ಬಿಗ್ ಶಾಕ್: ನೀರಿನ ಸಂಪ್ ನಲ್ಲಿ ಪತ್ನಿ, ಇಬ್ಬರು ಮಕ್ಕಳ ಶವ ಪತ್ತೆ

ನೀರಿನ ಸಂಪ್ ನಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿವೆ. ತುಮಕೂರು ತಾಲೂಕಿನ ಸಿಂಗನಹಳ್ಳಿ ಕಾಲೋನಿಯಲ್ಲಿ ಘಟನೆ ನಡೆದಿದೆ.ನೀರಿನ ಸಂಪ್ ನಲ್ಲಿ 26 ವರ್ಷದ ವಿಜಯಲಕ್ಷ್ಮಿ, ಮಕ್ಕಳಾದ ಚೇತನ್(5), ಚೈತನ್ಯ(5) ಅವರ ಮೃತದೇಹ ಪತ್ತೆಯಾಗಿವೆ. ಫ್ಯಾಕ್ಟರಿಯೊಂದರಲ್ಲಿ ವಿಜಯಲಕ್ಷ್ಮಿ ಅವರ ಪ್ರತಿ ಕೆಲಸ ಮಾಡುತ್ತಿದ್ದಾರೆ.ಕೆಲಸ ಮುಗಿಸಿ ಪತಿ ಮನೆಗೆ ಬಂದಾಗ ಪತ್ನಿ, ಮಕ್ಕಳು ಇರಲಿಲ್ಲ. ಗಾಬರಿಯಾದ ಅವರು ಪತ್ನಿ ಹಾಗೂ ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆಯ ಹೊರಗಡೆಯ ಸಂಪ್ ನಲ್ಲಿ ಶವಗಳು …

Read More »

ಮದುವೆ ವಿಚಾರವಾಗಿ ಗಲಾಟೆ : ಬೆಂಗಳೂರಿನಲ್ಲಿ ಪ್ರಿಯಕರನ ಮನೆಯಲ್ಲಿಯೇ ನೇಣಿಗೆ ಶರಣಾದ ಯುವತಿ

ಮದುವೆ ವಿಚಾರವಾಗಿ ಗಲಾಟೆ : ಬೆಂಗಳೂರಿನಲ್ಲಿ ಪ್ರಿಯಕರನ ಮನೆಯಲ್ಲಿಯೇ ನೇಣಿಗೆ ಶರಣಾದ ಯುವತಿಪ್ರಿಯಕರ ರಾಘವೇಂದ್ರ ವಿರುದ್ಧ ನಿಕಿತಾ ಪೋಷಕರು ಆರೋಪಿಸಿದ್ದು.ಐದರಿಂದ ಆರು ವರ್ಷ ನಿಕಿತಾ ಹಾಗೂ ರಾಘವೇಂದ್ರ ಪ್ರೀತಿಸುತ್ತಿದ್ದರು. ಹೊಸ ವರ್ಷದ ದಿನ ನಿಕಿತಾ ರಾಘವೇಂದ್ರ ಮನೆಗೆ ತೆರಳಿದಾಗ ತಾಳಿ ಕಟ್ಟಿ ಮದುವೆಯಾಗು ಎಂದು ಒತಾಯಿಸಿದ್ದರಂತೆ ಪ್ರಿಯಕರ ಹಾಗೂ ಮನೆಯವರು ಇಲ್ಲದ ವೇಳೆ ನಿಕಿತಾ ನೇಣಿಗೆ ಶರಣಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹುಬ್ಬಳ್ಳಿಯಲ್ಲಿ ಪೊಲೀಸರ ಅಮಾನುಷ ಕೃತ್ಯ ಆರೋಪ! ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರಗೊಳಿಸಿ ಥಳಿಸಿದರಾ?

ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಬಿಜೆಪಿ ಕಾರ್ಯಕರ್ತೆ ಸುಜಾತಾ @ ವಿಜಯಲಕ್ಷ್ಮಿ ಹಂಡಿ ಅವರನ್ನು ಬಂಧನದ ವೇಳೆ ವಿವಸ್ತ್ರಗೊಳಿಸಿ ಥಳಿಸಲಾಗಿದೆ ಎಂಬ ಆರೋಪಗಳು ಪೊಲೀಸರ ವಿರುದ್ಧ ಕೇಳಿಬರುತ್ತಿವೆ. ಈ ಘಟನೆಗೆ ಕಾಂಗ್ರೆಸ್ ಕಾರ್ಪೋರೆಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರೇ ಕಾರಣ ಎನ್ನಲಾಗಿದೆ.ಮತದಾರರ ಪಟ್ಟಿ ಪರಿಷ್ಕರಣೆ – …

Read More »

ಚಾಮರಾಜನಗರ| ಕೆಎಸ್‌ಆರ್‌ಟಿಸಿ ಬಸ್‌ – ಲಾರಿ ಮಧ್ಯೆ ಅಪಘಾತ: ಹಲವರಿಗೆ ಗಾಯ

ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿಯ ಬಳಿ ಮಂಗಳವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮೈಸೂರಿನಿಂದ ಚಾಮರಾಜನಗರದ ಕಡಗೆ ಬರುತ್ತಿದ್ದ ಅಶ್ವಮೇಧ ಬಸ್‌ ಹಾಗೂ ನಗರದಿಂದ ನಂಜನಗೂಡಿನ ಕಡೆಗೆ ತೆರಳುತ್ತಿದ್ದ ಲಾರಿ ಮಧ್ಯೆ ಬೆಂಡರವಾಡಿ ಗ್ರಾಮದ ತಿರುವೊಂದರಲ್ಲಿ ಅಪಘಾತವಾಗಿದೆಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು ಲಾರಿ ಹಾಗೂ ಬಸ್‌ನ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಹೆಚ್ಚಿನವರು ನಗರ …

Read More »