BigTv News
December 26, 2025
Breaking News
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ಈ ಒಂದು ಕೊಲೆ ನಡೆದಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಡಿಸೆಂಬರ್ 24ರಂದು ರಾತ್ರಿ ಸ್ಟಾಫ್ ನರ್ಸ್ ಮಮತಾ ಕೊಲೆ ನಡೆದಿದೆ. ಆದರೆ ಡಿಸೆಂಬರ್ 25 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಯಾಗಿರುವ ಮಮತಾಗಿ ಮದುವೆ ಆಗಿರಲಿಲ್ಲ. ಜಯದೇವ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಮಮತಾ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯ …
Read More »
BigTv News
December 26, 2025
Breaking News
ಉಡುಪಿಯ ಕೊಂಕಣ ರೈಲು ನಿಲ್ದಾಣದಲ್ಲಿ ಚಲಿಸುತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ಮುಗ್ಗರಿಸಿ ಬಿದ್ದ ಪ್ರಯಾಣಿ ಕರೊಬ್ಬರನ್ನು ತಕ್ಷಣವೇ ಸ್ಪಂಧಿಸಿದ ರೈಲ್ವೆ ಪೊಲೀಸ್ ಪಡೆಯ ಸಿಬ್ಬಂದಿಯೊಬ್ಬರು ರಕ್ಷಿಸಿದ ಘಟನೆ ಗುರುವಾರ ರಾತ್ರಿ 10:20ರ ಸುಮಾರಿಗೆ ನಡೆದಿದೆ.ತಿರುವನಂತಪುರದಿಂದ ಹೊಸದಿಲ್ಲಿಗೆ ತೆರಳುತಿದ್ದ ಅಮೃತಸರ ಎಕ್ಸ್‌ಪ್ರೆಸ್ ರೈಲು ಉಡುಪಿ ನಿಲ್ದಾಣ ಪ್ರವೇಶಿಸುತಿ ದ್ದಂತೆ ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರು ಚಲಿಸುತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ಮುಗ್ಗರಿಸಿ ಬಿದ್ದಿದ್ದರು. ಅಲ್ಲೇ ಸಮೀಪದಲ್ಲಿ ಕರ್ತವ್ಯದಲ್ಲಿದ್ದ ರೈಲ್ವೆ ಪೊಲೀಸ್ ಎಎಸ್‌ಐ ಸಾಜು …
Read More »
BigTv News
December 26, 2025
Breaking News
ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ಜಿಲ್ಲೆಯ ವೇಮಗಲ್ ತಾಲೂಕಿನ ಕುರುಗಲ್ ಗೇಟ್ ಬಳಿ ನಡೆದಿದೆ.ಓಡಿಶಾ ಮೂಲದ ಯುವಕ ಸಂದೀಪ್ ಸಿಂಗ್ ಕೊಲೆಯಾದ ಯುವಕ. ಬೆಂಗಳೂರು ಮೂಲದ ಮನೋಜ್ ಹಾಗೂ ಬಳ್ಳಾರಿ ಮೂಲದ ರಾಜಾರೆಡ್ಡಿ ಎಂಬುವವರು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.ಒಟ್ಟಿಗೆ ಕುಳಿತು ಮದ್ಯ ಸೇವಿಸುತ್ತಿದ್ದಾಗ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಸಂದೀಪ್ ಜೊತೆ ಮನೋಜ್ ಹಾಗೂ ರಾಜಾರೆಡ್ಡಿ …
Read More »
BigTv News
December 26, 2025
Breaking News
ಮುದ್ದರಂಗನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದ ಶಿರಾ- ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡ ಪರಿಣಾಮ ಕಾರೊಂದು ಸಂಪೂರ್ಣವಾಗಿ ಸುಟ್ಟು ಹೋಗಿದೆ.ಕಾರಿನಲ್ಲಿದ್ದ ಹೊನ್ನಾಳಿಯ ಮಂಜುನಾಥ್ (25) ಸಜೀವ ದಹನವಾಗಿದ್ದಾರೆ.ಮೃತ ವ್ಯಕ್ತಿ ಚಾಲಕನ ಸೀಟು ಬಿಟ್ಟು ಹಿಂದಿನ ಸೀಟಿನಲ್ಲಿ ಕುಳಿತಿದ್ದುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾರಿನಲ್ಲಿ ಮತ್ತೊಬ್ಬರು ಪ್ರಯಾಣಿಸುತ್ತಿದ್ದರೆ ಎಂಬ ಅನುಮಾನ ಮೂಡಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶೋಕ್ ಕೆ.ವಿ, ಡಿವೈಎಸ್‌ಪಿ ಶೇಖರ್ ಭೇಟಿ ನೀಡಿ …
Read More »
BigTv News
December 26, 2025
Breaking News
ಹುಬ್ಬಳ್ಳಿ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಬಸ್ ಚಾಲಕ ಹಾಗೂ ಕ್ಲೀನರ್ ಅವರನ್ನು ಚಿಕಿತ್ಸೆಗಾಗಿ ಇಲ್ಲಿನ ಕೆಎಂಸಿ-ಆರ್‌ಐ ಆಸ್ಪತ್ರೆಗೆ ಗುರುವಾರ ದಾಖಲಿಸಲಾಗಿದೆ.ಚಾಲಕ ಮೊಹಮ್ಮದ್ ರಫೀಕ್ ಹುಲಗೂರ (35) ತೀವ್ರವಾಗಿ ಗಾಯಗೊಂಡಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಹುಬ್ಬಳ್ಳಿಯ ಬಿಡ್ನಾಳದ ನಿವಾಸಿ, ಕ್ಲೀನರ್ ಮೊಹಮ್ಮದ್ ಸಾಧಿಕ್ ಧಾರವಾಡ (19) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ‘ಅಪಘಾತದಲ್ಲಿ ಮೊಹಮ್ಮದ್ ರಫೀಕ್ ಕಾಲಿಗೆ ಬಲವಾದ ಪೆಟ್ಟು ಬಿದ್ದಿದ್ದು, ಬಹು ಅಂಗಾಂಗಳಿಗೆ ತೀವ್ರ …
Read More »
BigTv News
December 26, 2025
Breaking News
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಜ್ಜವಾರ ಗ್ರಾಮದ ನರಸಿಂಹಮೂರ್ತಿ.ನಂದೀಶ್, ಅರುಣ್, ಮನೋಜ್ ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ಒಂದೇ …
Read More »
BigTv News
December 26, 2025
Breaking News
ಮೈಸೂರು: ವಿದ್ಯುತ್ ತಂತಿ ಸಂಪರ್ಕವನ್ನು ಒಂದು ಕಂಬದಿಂದ ಮತ್ತೊಂದು ಕಂಬಕ್ಕೆ ಬದಲಿಸುವ ಕೆಲಸ ಮಾಡುತ್ತಿದ್ದ ಯುವಕ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಮೈಸೂರಿನ ಸಿದ್ದಲಿಂಗಪುರದಲ್ಲಿ ನಡೆದಿದೆ.ವಿದ್ಯುತ್ ಸಂಪರ್ಕ ಕಡಿತವಾಗುವ ಮುನ್ನವೇ ಕೆಲಸ ಮಾಡಲು ಹತ್ತಿದ ಯುವಕ ತಂತಿ ಮೇಲೆ ಸುಟ್ಟು ಕರುಕಲಾಗಿದ್ದಾನೆ.ಮಹದೇವಸ್ವಾಮಿ (28) ಮೃತ ದುರ್ದೈವಿ. ಮಹದೇವಸ್ವಾಮಿ ಮೂಲತಃ ನಂಜನಗೂಡು ತಾಲ್ಲೋಕಿನ ಸೂರಹಳ್ಳಿ ಗ್ರಾಮದವ ಎನ್ನಲಾಗಿದೆ.
Read More »
BigTv News
December 26, 2025
Breaking News
ರಾಯಚೂರು ಜಿಲ್ಲೆ ಚಂದ್ರಬಂಡ ಗ್ರಾಮದ ಗೋಪಾಲ ಎಂಬವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚಿಸಿದ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಗಾಂಧಿನಗರದ ಜಯಪ್ರಕಾಶ್ ಡಿ.ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ …
Read More »
BigTv News
December 26, 2025
Breaking News
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಮಹಮ್ಮದ್ ರಫೀಕ್(42) ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿತ್ತು. ಅಪಘಾತದಲ್ಲಿ ಚಾಲಕ ಮಹಮ್ಮದ್ ರಫೀಕ್ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅವರನ್ನು ನಿನ್ನೆ ಮಧ್ಯಾಹ್ನ …
Read More »
BigTv News
December 26, 2025
Breaking News
ಬೆಂಗಳೂರು: ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ, ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ಪತ್ರೆಯಲ್ಲಿ ಲೇಡಿ ನರ್ಸ್ ಗಳು ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಿಸಿ ವಿಕೃತಿ ಮೆರೆಯುತ್ತಿದ್ದ ಬೆಂಗಳೂರಿನ ನಾಗರಭಾವಿ ಖಾಸಗಿ ಆಸ್ಪತ್ರೆಯ ನೌಕರ ಸುವೆಂದು ಮೊಹಂತಿ ಈ ಕೃತ್ಯವೆಸಗುತ್ತಿದ್ದ.ಇದನ್ನು ಗಮನಿಸಿದ ನರ್ಸ್, ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು. ವೈದ್ಯ ಚೇತನ್ ತಕ್ಷಣ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ …
Read More »