BigTv News
December 22, 2025
Breaking News
ಮಲ್ಪೆ ಬಂದರಿನ ಈಶದುರ್ಗಾ ಹೆಸರಿನ ಪರ್ಸಿನ್ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಒಡಿಶಾ ರಾಜ್ಯದ ಪುರಿ ಜಿಲ್ಲೆಯ ನಿವಾಸಿ ಬಿಸು ಬೆಹೆರಾ (35) ಎಂಬವರು ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಲ್ಪೆ ಹನುಮಾನ್ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಡಿ.5ರಿಂದ ಬೋಟಿನ ಕೆಲಸಕ್ಕೆ ಹೋಗಿರಲಿಲ್ಲ. ಡಿ. 8ರಂದು ತನ್ನ ಬಟ್ಟೆಬರೆ ಜತೆ ಹೋದವರು ವಾಪಸು ಬಂದಿಲ್ಲ. ಅತ್ತ ತನ್ನ ಊರಿಗೂ ಹೋಗದೆ ನಾಪತ್ತೆಯಾಗಿದ್ದಾರೆ ಎಂದು …
Read More »
BigTv News
December 22, 2025
Breaking News
ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಶನಿವಾರ ರೈಲು ಡಿಕ್ಕಿಯಾಗಿ 7 ಆನೆಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ವರದಿ ಕೇಳಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್ ಭಾನುವಾರ ಹೇಳಿದ್ದಾರೆಬಂಗಾಳದ ಸುಂದರ್‌ಬನ್ಸ್‌ನಲ್ಲಿ ಆನೆ ಮತ್ತು ರಾಷ್ಟ್ರೀಯ ಹುಲಿ ಯೋಜನೆಯ ಸಂರಕ್ಷಣಾ ಪ್ರಾಧಿಕಾರದ ಸಭೆ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಹಳಿಗಳಲ್ಲಿ ಆನೆಗಳ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಎಲ್ಲಾ ರಾಜ್ಯಗಳ ರೈಲ್ವೆ ಇಲಾಖೆ ಮತ್ತು ಅರಣ್ಯ ಇಲಾಖೆಗೆ ಕೋರಲಾಗಿದೆ.ಲೋಕೋ ಪೈಲಟ್‌ಗಳು …
Read More »
BigTv News
December 22, 2025
Breaking News
ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ RDX ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆಯಿಂದ ತಾಲೂಕು ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು ಕಂಗಾಲಾಗಿದ್ದಾರೆ.ಸರಗೂರು ತಾಲೂಕು ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.ಮಧ್ಯಾಹ್ನ 1 ಗಂಟೆಗೆ ತಾಲೂಕು ಕಚೇರಿಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ತಾಲೂಕು ಕಚೇರಿಗೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ರಿಯ ದಳ, ಶ್ವಾನ ದಳ ಆಗಮಿಸಿದ್ದು, ಕಚೇರಿಯಲ್ಲಿ ತಪಾಸಣೆ …
Read More »
BigTv News
December 22, 2025
Breaking News
ಮಡಿಕೇರಿ: ಪಿರಿಯಾಪಟ್ಟಣದಿಂದ ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಜಾಲವನ್ನು ವೀರಾಜಪೇಟೆ ನಗರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕೇರಳದ ತಳಿಪರಂಬ ಮೂಲದ ಪಿ.ಪಿ. ಸಾದಿಕ್ (38) ಮತ್ತು ಅಬ್ದುಲ್ ಅಹಮ್ಮದ್ ತಂಙಳ್ (34) ಅವರನ್ನು ಬಂಧಿಸಿದ್ದಾರೆ.ಆರೋಪಿಗಳು ಪಿರಿಯಾಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರಿಂದ ದನ ಕರುಗಳನ್ನು ಖರೀದಿಸಿ ಕೇರಳಕ್ಕೆ ಸಾಗಿಸಲು ಸಂಚು ರೂಪಿಸಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಲಾರಿಯಲ್ಲಿ ಹತ್ತಕ್ಕೂ ಹೆಚ್ಚು ಜಾನುವಾರುಗಳನ್ನು ತುಂಬಿಸಿ, ಅವುಗಳ ಮೇಲೆ ಆಲೂಗಡ್ಡೆ …
Read More »
BigTv News
December 22, 2025
Breaking News
ಬೆಂಗಳೂರು: ಅನುಮಾಸ್ಪದವಾಗಿ ಆಯುರ್ವೇದಿಕ್ ವೈದ್ಯೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಾಜರಹಳ್ಳಿ ನಿವಾಸಿ ಶೂಲಿ ಮಂಡೋಲಿ (32) ಸಾವನ್ನಪ್ಪಿದ ವೈದ್ಯೆಯಾಗಿದ್ದು,ಡಿಸೆಂಬರ್ 19ರಂದು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ ಮೃತಳು ಚಿಕಿತ್ಸೆ ಪಡೆದು ಮನೆಗೆ ವಾಪಸ್ ಬಂದಿದ್ಲು. ಆದ್ರೆ ಮರುದಿನ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.ಇನ್ನೂ ಈ ಸಾವಿಗೆ ಪತಿ ಅನೀರ್ ಬನ್ ವಿರುದ್ಧ ಮೃತಳ ಕುಟುಂಬಸ್ಥರಿಂದ ದೂರು ನೀಡಲಾಗಿದೆ.. ವರದಕ್ಷಿಣೆ ಕಿರುಕುಳ …
Read More »
BigTv News
December 22, 2025
Breaking News
ಹೂವಿನಹಡಗಲಿ: ತಾಲ್ಲೂಕಿನ ಹರವಿ, ಲಿಂಗನಾಯಕನಹಳ್ಳಿ, ಕುರುವತ್ತಿ ಬಳಿಯ ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಶನಿವಾರ ದಾಳಿ ನಡೆಸಿದ ಅಧಿಕಾರಿಗಳು, 116 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಜನರ ವಿರುದ್ಧ ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನದಿಯಲ್ಲಿನ ಮರಳನ್ನು ಕಬ್ಬಿಣದ ತೆಪ್ಪಗಳಲ್ಲಿ ತುಂಬಿ ದಡಕ್ಕೆ ಸಾಗಿಸಿ, ಅಲ್ಲಿಂದ ಲಾರಿ, ಟ್ರ್ಯಾಕ್ಟರ್ ಗಳ ಮೂಲಕ ಬೇರೆಡೆಗೆ ಕಳುಹಿಸಲಾಗುತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ …
Read More »
BigTv News
December 22, 2025
Breaking News
ಉಡುಪಿ: ಕೋಟೇಶ್ವರ ಪಂಚಾಯತ್ ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಭಾನುವಾರ ಮುಂಜಾನೆ ಕೋಟೇಶ್ವರದಲ್ಲಿ ಸಂಭವಿಸಿದೆ.ಪಂಚಾಯತ್ ಕೆಳಭಾಗದಲ್ಲಿ ವಾಣಿಜ್ಯ ಕಟ್ಟಡ ಇದ್ದು ಮೇಲ್ಭಾಗದಲ್ಲಿ ತ್ಯಾಜ್ಯ ಒಣ ಘಟಕ ಮಾಡಿದ್ದು ಅಲ್ಲಿ ಶೇಖರಣೆ ಮಾಡಿ ಇಟ್ಟಿದ್ದ ಒಣ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ ತಗಲಿ ಒಣ ತ್ಯಾಜ್ಯಗಳು, ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.ಅಲ್ಲದೆ ವಾಣಿಜ್ಯ ಸಂಕೀರ್ಣದ ಕಟ್ಟಡ ಮಹಡಿಗೆ ಹಾನಿಯಾಗುವ …
Read More »
BigTv News
December 22, 2025
Breaking News
ತುಂಗಾ ನದಿಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ.ಶಿವಮೊಗ್ಗ ನಗರದ ಕಾಮಕ್ಷಿ ಬೀದಿಯ ನಿವಾಸಿ ಪ್ರೇಮ್ ಕುಮಾರ್(17) ಮೃತ ಬಾಲಕ. ಪ್ರೇಮ್ ಕುಮಾರ್ ಸ್ನೇಹಿತರ ಜೊತೆ ದೇವಾಲಯ ತೆರಳಿದ ವೇಳೆ ಈಜಲು ನದಿಗೆ ಇಳಿದ್ದಾಗ ಅವಘಡ ಸಂಭವಿಸಿದೆ.ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಪ್ರೇಮ್ ಕುಮಾರ್ ಸ್ನೇಹಿತ ಜೊತೆ ಪಿಳ್ಳಂಗಿರಿಗೆ ತೆರಳಿದಾಗ ತುಂಗ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತದೇಹ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. …
Read More »
Shaikh BigTv
December 22, 2025
Breaking News, Crime, ಧಾರವಾಡ
ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಪಾಪಿ ತಂದೆ ಹೆತ್ತ ಮಗಳ ಮೇಲೆಯೇ ಪೈಪ್‌ನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 19 ವರ್ಷದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದ ಯುವತಿ ಹಾಗೂ ಯುವಕ ಪೋಷಕರ ವಿರೋಧದ ನಡುವೆಯೇ ಕಳೆದ ಏಳು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಉದ್ವಿಗ್ನತೆ ಉಂಟಾಗಿದ್ದು, ಪೊಲೀಸರು ಸಮ್ಮುಖದಲ್ಲೇ ರಾಜಿ ಪಂಚಾಯಿತಿ …
Read More »
BigTv News
December 22, 2025
Breaking News
ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಪಶು ಆಸ್ಪತ್ರೆ ಮುಂದೇನೆ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಕಳೆದ ರಾತ್ರಿ ಈ ಒಂದು ಘಟನೆ ಸಂಭವಿಸಿದೆ.ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹನುಮಂತ (36) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆಸ್ಪತ್ರೆ ಮುಂದೆ ಮರಕೆ ನೇಣು ಹಾಕಿಕೊಂಡು ಹನುಮಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹನುಮಂತ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಇದೀಗ ತಿಳಿದು …
Read More »