Breaking News

Breaking News

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ.!

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ನಿನ್ನೆ ಸಂಜೆ ಅಪಘಾತವಾಗಿದೆ. ನೈಸ್ ರಸ್ತೆ ಬಳಿ ಹುಲ್ಲು ತೆರವು ಮಾಡುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ರಂಗಮ್ಮ ಮತ್ತು ಚೌಡಮ್ಮಗೆ ವಾಹ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು …

Read More »

ಬೆಂಗಳೂರು: ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ತಳಿಯ ಗಿಳಿಯನ್ನು ರಕ್ಷಿಸಲು ಹೋದ ಯುವಕ ಸಾವು

ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ಇಲ್ಲಿನ ಗಿರಿನಗರದ ಖಾಸಗಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಅರುಣ್ ಕುಮಾರ್(32) ಮೃತ ಯುವಕ.ಸುಮಾರು 2 ಲಕ್ಷ ರೂ. ಬೆಲೆ ಬಾಳುವ ವಿದೇಶಿ ಗಿಳಿಯೊಂದು ಖಾಸಗಿ ಅಪಾರ್ಟ್‍ಮೆಂಟ್ ಒಳಭಾಗದಲ್ಲಿರುವ 65 ಸಾವಿರ ಕೆವಿ ಸಾಮರ್ಥ್ಯದ ವಿದ್ಯುತ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಅರುಣ್ ಕುಮಾರ್ ಗಿಳಿ ರಕ್ಷಣೆಗೆ ಮುಂದಾಗಿದ್ದಾರೆ. ಅಪಾರ್ಟ್‍ಮೆಂಟ್ ಕಾಪೌಂಡ್ ಮೇಲೆ ನಿಂತು ಕಬ್ಬಿಣದ …

Read More »

ಏಷ್ಯಾನೆಟ್ ಸುವರ್ಣನ್ಯೂಸ್ ಸಿಬ್ಬಂದಿ ಲಲಿತಮ್ಮ ಸಾವು; ಟ್ರಕ್ ಚಕ್ರ ತಲೆ ಮೇಲೆ ಹರಿದು ಭೀಕರ ಅಂತ್ಯ

ಓಕಳೀಪುರಂ ರೈಲ್ವೇ ಪ್ಯಾರಲೆಲ್ ರಸ್ತೆ ಬಳಿ ಸಂಭವಿಸಿದ ಭೀಕರ ಟ್ರಕ್ ಅಪಘಾತದಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.ವೇಗದಿಂದ ಬಂದ ಟ್ರಕ್ ಒಂದು ರಸ್ತೆ ದಾಟುತ್ತಿದ್ದ ಲಲಿತಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಲಿತಮ್ಮ ಅವರು ಕೆಳಗೆ ಬಿದ್ದಿದ್ದು, ತಕ್ಷಣವೇ ಟ್ರಕ್‌ನ ಚಕ್ರ ಅವರ ತಲೆಯ ಮೇಲೆ ಹರಿದು ಹೋಗಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ …

Read More »

ಆನೆ ದಂತ ಮಾರಾಟ ಮಾಡಲು ಯತ್ನ; ಐವರ ಮೇಲೆ ದೂರು ದಾಖಲು

ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಯಳಂದೂರು ವನ್ಯಜೀವಿ ಉಪವಿಭಾಗ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಆನೆ ದಂತ ಮಾರಾಟ ಮಾಡಲು ಯತ್ನಿಸಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.ಮೂಡುಬಿದಿರೆಯಲ್ಲಿ ಪತ್ತೆ ಹಚ್ಚಿ ಕೊಳ್ಳೇಗಾಲಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ಇವರಿಬ್ಬರೂ ಪ್ರಮುಖ ಆರೋಪಿಗಳೆಂದು ಇವರಿಬ್ಬರನ್ನು ಕೂಡ ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More »

ಖಾಕಿ ತೊಟ್ಟ ಭೂಗಳ್ಳ! 25 ಕೋಟಿ ಮೌಲ್ಯದ ಭೂಮಿ ಲಪಟಾಯಿಸಿದ ಹೆಡ್ ಕಾನ್ಸ್‌ಟೇಬಲ್

ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಿರಿಜೇಶ್ ವಿರುದ್ಧ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಲಪಟಾಯಿಸಿದ ಆರೋಪ ಗಿರಿಜೇಶ್ ಮತ್ತು ಆತನ ಸಹಚರರ ಮೇಲಿದೆ. ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನ ಪ್ರಕರಣ ದಾಖಲಿಸಲಾಗಿದೆ.ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಿರಿಜೇಶ್‌ನನ್ನು ಅಮಾನತು ಮಾಡಲಾಗಿತ್ತು. ಮನೆಯಲ್ಲಿದ್ದರೂ ಬುದ್ಧಿ ಕಲಿಯದ ಈ ಆರೋಪಿ, ಭೂ …

Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಾಲಕಿ ಬೆದರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.40 ವರ್ಷ ಮತ್ತು 24 ವರ್ಷದ ಆರೋಪಿಗಳಿಬ್ಬರು ಒಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಗುರುವಾರ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

Read More »

ನಿರ್ಮಾಣ ಹಂತದ ಸೇತುವೆ ಕುಸಿತ; ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ ನ ವಲ್ಸಾಡ್ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಿರ್ಮಾಣ ಹಂತದ ಸೇತುವೆಯೊಂದು ಕನಿಷ್ಠ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.ಔರಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಈ ಸೇತುವೆಯ ಕಾಮಗಾರಿಯನ್ನು ರಾಜ್ಯ ರಸ್ತೆ ಹಾಗೂ ಕಟ್ಟಡ ನಿರ್ಮಾಣ ಇಲಾಖೆ ವಹಿಸಿತ್ತು.ಸೇತುವೆಯ ಸ್ತಂಭಗಳ ನಿರ್ಮಾಣ ಪೂರ್ಣಗೊಂಡಿದ್ದು, ಕಾಮಗಾರಿ ಕೆಲಸಕ್ಕಾಗಿ ಸ್ಥಾಪಿಲಾಗಿದ್ದ ಅಟ್ಟಳಿಗೆಗಳನ್ನು ತೆರವುಗೊಳಿಸಿದಿದ್ದಾಗ, ಅವು ಕುಸಿದಿವೆ. ಇದರಿಂದಾಗಿ ಸೇತುವೆಯ ಎರಡು ಸ್ತಂಭಗಳ ನಡುವಿನ ಪ್ರದೇಶಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು …

Read More »

ಬೆಳಗಾವಿ ಅಧಿವೇಶನಕ್ಕೆ ಬಿಡುವು: ಇಂದು ಡಿಕೆ ಶಿವಕುಮಾರ್, ನಾಳೆ ಸಿದ್ದರಾಮಯ್ಯ ದೆಹಲಿಗೆ!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 8ರ ಸೋಮವಾರದಿಂದ 19ರ ತನಕ ಚಳಿಗಾಲದ ಅಧಿವೇಶನ ನಡೆಯಲಿದೆ. ಆದರೆ ಶನಿವಾರ ಮತ್ತು ಭಾನುವಾರದ ಕಾರಣ ಇಂದು, ನಾಳೆ ಅಧಿವೇಶನ ಇರುವುದಿಲ್ಲ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.ವೋಟ್ ಚೋರಿ ವಿರುದ್ದ ಕರ್ನಾಟಕ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನ ನಡೆಸಿತ್ತು. 1.12 ಕೋಟಿ ಜನರು ಸಹಿ ಹಾಕಿದ್ದರು. ದೆಹಲಿಯಲ್ಲಿ ಭಾನುವಾರ ಈ ವೋಟ್ …

Read More »

ಮೈಸೂರು ಅರಮನೆ ಮತ್ತೊಂದು ಅವಘಡ: ಜಯರಾಮ ದ್ವಾರ ಗೋಡೆ ಬಿರುಕು, ಕುಸಿತದ ಆತಂಕ

ದರ್ಬಾರ್ ಹಾಲ್ ಸೋರಿಕೆ ಹಾಗೂ ವರಹಾ ದ್ವಾರದ ಮೇಲ್ಛಾವಣಿ ಕುಸಿತದ ಘಟನೆಗಳ ಬಳಿಕ ಇದೀಗ ಜಯರಾಮ-ಬಲರಾಮ ದ್ವಾರದ ಗೋಡೆಯಲ್ಲಿ ಭಾರಿ ಬಿರುಕು ಕಾಣಿಸಿಕೊಂಡಿದೆ. ಇದೇ ವೇಳೆ ಜಯರಾಮ ದ್ವಾರಕ್ಕೆ ಹೊಂದಿಕೊಂಡಿರುವ ಒಂಟೆರಾಮಾಚಾರ್ಯ ಆಂಜನೇಯ ದೇವಸ್ಥಾನದ ಕಟ್ಟಡದಲ್ಲೂ ಬಿರುಕು ಬಿಟ್ಟಿದ್ದು, ಸುಮಾರು 20ಕ್ಕೂ ಹೆಚ್ಚು ಇಟ್ಟಿಗೆಗಳು ಕೆಳಗೆ ಬಿದ್ದಿವೆ.ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕವನ್ನು ಶಿಥಿಲಾವಸ್ಥೆಯ ಹಿನ್ನೆಲೆ ಸ್ಥಳಾಂತರ ಮಾಡಲಾಗಿದೆ. ಪ್ರತಿದಿನ ಸಾವಿರಾರು ಪ್ರವಾಸಿಗರು ಅರಮನೆಗೆ

Read More »

ಕದಂಬ ನೌಕಾನೆಲೆಗೆ ಸೇರಿದ ಸಶಸ್ತ್ರ ಸಂಗ್ರಹಾಲಯದಲ್ಲಿ ಭಾರೀ ಸ್ಫೋಟ! ಮನೆಗಳಲ್ಲಿ ಬಿರುಕು

ಹಟ್ಟಿಕೇರಿ ವಜ್ರಕೋಶದ ಕದಂಬ ನೌಕಾನೆಲೆಗೆ ಸೇರಿದ ಸಶಸ್ತ್ರ ಸಂಗ್ರಹಾಲಯದಲ್ಲಿ ಭಾರೀ ಸ್ಫೋಟ ಕಾಣಿಸಿಕೊಂಡಿದೆ. ಇದರಿಂದಾಗಿ ಇದರ ಪಕ್ಕದ ಪಕ್ಕದಲ್ಲೇ ಅಲಗೇರಿ ಗ್ರಾಮದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.ಈ ಭಾಗದಲ್ಲಿ ಕಾಮಗಾರಿ ಕೂಡ ನಡೆಯುತ್ತಿದ್ದು, ಸ್ಥಳದಲ್ಲಿ ಸ್ಫೋಟ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಇದಲ್ಲದೆ ಮದ್ದು ಗುಂಡು ಸಂಗ್ರಹಾಲಯದಲ್ಲಿ ಅವಧಿ ಮೀರಿದ ಮದ್ದುಗುಂಡುಗಳು ನಿಷ್ಕ್ರಿಯ ಮಾಡಲು ಸ್ಫೋಟ ನಡೆಸಲಾಗುತ್ತದೆ ಎಂದು ತಿಳಿದಿದ್ದು, ಇದಾವುದರ ಬಗ್ಗೆಯು ಇಲ್ಲಿಯ ಅಧಿಕಾರಿಗಳು ನಿಖರ ಮಾಹಿತಿ ನೀಡಲು ನಿರಾಕರಿಸಿದ್ದಾರೆ …

Read More »