BigTv News
December 5, 2025
Breaking News
ಕುಂದಾಪುರ: ಗಂಗೊಳ್ಳಿ ಬಂದರು ರಸ್ತೆ ದೊಡ್ಡಹಿತ್ಲು ಪದ್ಮಾವತಿ (67) ಅವರು ಬಸ್‌ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ಮೀನು ವ್ಯಾಪಾರ ಮಾಡಿಕೊಂಡಿರುವ ಅವರು 10 ವರ್ಷಗಳ ಹಿಂದೆ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಗಂಗೊಳ್ಳಿಯಿಂದ ಮೀನು ತೆಗೆದುಕೊಂಡು ಖಾಸಗಿ ಬಸ್ಸಿನಲ್ಲಿ ಕುಂದಾಪುರದಲ್ಲಿ ಮೀನು ವ್ಯಾಪಾರ ಮಾಡಲು ಬರುತ್ತಿದ್ದಾಗ ಶಾಸ್ತ್ರಿ ಪಾರ್ಕ್‌ನಿಂದ ಸ್ವಲ್ಪ ಮುಂದೆ ಬಸ್ಸಿನಲ್ಲಿ ಕುಸಿದು ಬಿದ್ದರು.ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು …
Read More »
BigTv News
December 5, 2025
Breaking News
ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕ ಮತ್ತು ಯುವತಿ ಜೇವರ್ಗಿ ಪಟ್ಟಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಎನ್‌ಇಕೆಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ …
Read More »
BigTv News
December 5, 2025
Breaking News
ಗದಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನ ನಡೆದ 6 ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ನ ಹುಸೇನ್ ಸಿದ್ದಿಕಿ ಬಂಧಿತ ಆರೋಪಿ.ಗದಗ ಎಸ್ಪಿ ರೋಹನ್ ಜಗದೀಶ್ ಚಾಣಾಕ್ಷತನದಿಂದ ಕಳ್ಳನನ್ನು ಬಂಧಿಸಲಾಗಿದ್ದು, ಚಿನ್ನ, ಬೆಳ್ಳಿ ಆಭರಣ, ನಗದು ಸೇರಿ 80 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಕಳ್ಳನ ಚಲನವನಲದ ದೃಶ್ಯ ಸೆರೆಯಾಗಿತ್ತು.
Read More »
BigTv News
December 5, 2025
Breaking News
ಪೊಲೀಸ್ ಹೆಡ್ ಕಾನ್ಸ್ ಟೆಬಲ್ ಓರ್ವ ಆರೋಪಿ ಬಳಿ ಇದ್ದ ಹಣ ಕದ್ದು ಪತ್ನಿಗೆ ಒಡವೆ ಕೊಡಿಸಿ, ಉಳಿದ ಹಣವನ್ನು ಮನೆಯಲ್ಲಿ ಮಂಚದಡಿಗೆ ಬಚ್ಚಿಟ್ಟಿರುವ ಆರೋಪ ಕೇಳಿಬಂದಿದೆ.ಹಣ ಕದ್ದು ತನಗೇನೂ ಗೊತ್ತಿಲ್ಲದಂತೆ ಕಾನ್ಸ್ ಟೇಬಲ್ ಜಬಿವುಲ್ಲಾ ನಾಟಕವಾಡಿದ್ದಾನೆ. ಜೈಲು ಸೇರಿದ್ದ ಆರೋಪಿ ಸೈಬರ್ ಕಳ್ಳ ಜಾಮೀನು ಪಡೆದು ಹೊರಬಂದಿದ್ದಾನೆ. ಕಾರಿನಲ್ಲಿದ್ದ ಹಣದ ಬ್ಯಾಗ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಆರೋಪಿ ಸೈಬರ್ ಪೊಲೀಸರ ಬಳಿ ಪ್ರಶ್ನಿಸಿದ್ದಾನೆ. ಆರೋಪಿ ಪ್ರಶ್ನೆಗೆ …
Read More »
BigTv News
December 5, 2025
Breaking News
ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಕೊಲೆಗೈದು ದುಷ್ಕರ್ಮಿಗಳು ಪರಾಗಿದ್ದಾರೆ.ಕೊಲೆಯಾದ ದೀಪಕ್ ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
December 5, 2025
Breaking News
ಹುಬ್ಬಳ್ಳಿ :ಇಂಡಿಗೋ ವಿಮಾನಗಳ ಹರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ 500 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗೀತಗೊಳಿಸಲಾಗಿದೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಇಂಡಿಗೋ ವಿಮಾನ ಹಾರಾಟ ಸ್ಥಗೀತಾಗೊಂಡ ಹಿನ್ನೆಲೆಯಲ್ಲಿ ಆನ್ಲೈನಲ್ಲಿ ಆರತಕ್ಷತೆ ಆಗಿರೋದು ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಮೇಘ ಹಾಗೂ ಭುವನೇಶ್ವರದ ಸಂಗಮದಾಸ್ ಅವರ ಮದುವೆಯಾಗಿತ್ತು. ಹುಬ್ಬಳ್ಳಿಯಲ್ಲಿ ರಿಸೆಪ್ಶನ್ ಹಮ್ಮಿಕೊಂಡಿದ್ದರು ಆದರೆ ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬರುವುದಕ್ಕೆ ಆಗಲಿಲ್ಲ ಹೀಗಾಗಿ ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಹುಡುಗ ಹುಡುಗಿ ಇಲ್ಲದೇನೇ …
Read More »
BigTv News
December 5, 2025
Breaking News
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಪ್ರಸಿದ್ಧ ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ (75) ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ‘ದಾಸೋಹ ಚಕ್ರವರ್ತಿ ಅನ್ನದಾನೇಶ್ವರ’ ಎಂದೇ ಶ್ರೀಗಳು ಹೆಸರುವಾಸಿಯಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿ, ಲಿವರ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್‌ಇ (KLE) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ನಾಳೆ (ಶನಿವಾರ) ಸಂಜೆ …
Read More »
BigTv News
December 5, 2025
Breaking News
ಮಗಳ ಮೇಲಿನ ಕೋಪಕ್ಕೆ ಬಾಡಿಗೆದಾರ ಮಹಿಳೆ ಮನೆ ಮಾಲೀಕರ ಹೆಬ್ಬೆರಳು ಕಚ್ಚಿ ತುಂಡರಿಸಿರುವ ಘಟನೆ ಹೌರಾದ ಶಿಬ್ಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಕುಟುಂಬದ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆ ಮಾಲೀಕರ ಮಗಳು ತನ್ನ ಮೇಲೆ ದೌರ್ಜನ್ಯವೆಸಗಿದ್ದಾಳೆ ಎಂದು ಆರೋಪುಸಲು ಬಂದಿದ್ದ ಆಕೆ ಮಾಲೀಕರ ಹೆಬ್ಬೆರಳನ್ನೇ ಕಚ್ಚಿ ಬಳಿಕ ಅಲ್ಲಿಂದ ಪರಾರಿಯಾಗಿದ್ದಾಳೆ.ಆರೋಪಿಯು ಆಕೆಯ ಹೆಬ್ಬೆರಳಿಗೆ ಹಲ್ಲು ಚುಚ್ಚಿ ಸುಮಾರು ಎರಡು ನಿಮಿಷಗಳ ಕಾಲ ಹಾಗೆಯೇ ಹಿಡಿದಿದ್ದಳು. ಆಕೆ ಕೈನತ್ ಬಿಟ್ಟು …
Read More »
BigTv News
December 5, 2025
Breaking News
ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಯ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ. ಇದರಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಳಗ್ಗೆ 8.15ರ ಸುಮಾರಿಗೆ ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿ ರೈಲು ನಿಲ್ದಾಣದಲ್ಲಿ ವ್ಯಕ್ತಿ ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ.ಮೈಸೂರು ರಸ್ತೆ ಮತ್ತು ಚಾಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಪ್ರಯಾಣಿಕರಿಗೆ …
Read More »
BigTv News
December 5, 2025
Breaking News
ಕಾಂತಾರ: ಚಾಪ್ಟರ್ 1′ ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದ್ದು, ರಿಷಬ್ ಖುಷಿಯಾಗಿದ್ದಾರೆ. ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ ಪಂಜುರ್ಲಿ ಮಮಕಾರ ತೋರಿದೆ. ಮಂಗಳೂರಿನ ಬಾರೆಬೈಲ್ ವಾರಾಯಿ ಪಂಜುರ್ಲಿ, …
Read More »