BigTv News
September 20, 2026
Breaking News
ವಿಜಯಪುರ: ಕೊಲ್ಹಾರ ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಪೆಟ್ರೋಲ್ ಬಂಕ್ ಮಾಲೀಕ ಸಂಗಪ್ಪ ಪೂಜಾರಿ (48) ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಸುಖದೇವ್ ಚಲವಾದಿ (30) ಹಾಗೂ ರಾಜು ಚಲವಾದಿ (40) ಬಂಕ್‌ಗೆ ತೆರಳಿದ್ದ ವೇಳೆ ಜಗಳ ನಡೆದಿದೆ ಎನ್ನಲಾಗಿದೆ. ಜಗಳದ ವೇಳೆ ಸಂಗಪ್ಪ ಪರವಾನಗಿ ಹೊಂದಿರುವ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು, ಸುಖದೇವ್ ಅವರ ಹೊಟ್ಟೆ ಹಾಗೂ ಬೆನ್ನಿಗೆ ಎರಡು ಗುಂಡುಗಳು ತಗುಲಿವೆ. ಗಾಯಗೊಂಡ ಅವರನ್ನು ವಿಜಯಪುರ …
Read More »
BigTv News
September 20, 2026
Breaking News
ಬೆಳಗಾವಿ: ಚವಾಟ್‌ಗಲ್ಲಿಯಲ್ಲಿ ಸೆ.16ರಂದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಘಟನೆಗೂ ಮುನ್ನ ಅಪರಿಚಿತ ವ್ಯಕ್ತಿಯೊಬ್ಬ ಬಕೆಟ್ ಹಿಡಿದು ಶೆಡ್ ಬಳಿ ಓಡಾಡಿದ ಸಿಸಿಟಿವಿ ದೃಶ್ಯಗಳು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಆರಂಭದಲ್ಲಿ ಫ್ರಿಡ್ಜ್ ಅಥವಾ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಘಟನೆ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಸಿಸಿಟಿವಿ ದೃಶ್ಯಗಳ ಹಿನ್ನೆಲೆಯಲ್ಲಿ ಬಕೆಟ್‌ನಲ್ಲಿ ಏನಿತ್ತು ಎಂಬುದು ಸೇರಿದಂತೆ ಹಲವು ಅನುಮಾನಗಳು ಮೂಡಿದ್ದು, …
Read More »
BigTv News
September 20, 2026
Breaking News
ರಾಮನಗರ: ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಶಶಿಧರ್ (49) ಅವರು ಭಾನುವಾರ ಬೆಳಗ್ಗೆ ಜಿಲ್ಲಾ ಎಸ್‌ಪಿ ಕಚೇರಿಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಶಾಲೆಯ ಕೆಲ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ರಾಮನಗರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಶಿಧರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಮುನ್ನ ವೈದ್ಯಕೀಯ …
Read More »
BigTv News
September 20, 2026
Breaking News
ಬೆಂಗಳೂರು: ಕೊತ್ತನೂರಿನ ಶಬರಿನಗರದಲ್ಲಿ ಕುಟುಂಬಗಳ ನಡುವಿನ ಗಲಾಟೆಯಲ್ಲಿ 6 ತಿಂಗಳ ಗರ್ಭಿಣಿ ತಾನಿಯಾ ಸಿದ್ದಿಕಿಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಗರ್ಭದಲ್ಲಿದ್ದ ಅವಳಿ ಮಕ್ಕಳು ಮೃತಪಟ್ಟಿದ್ದಾರೆ. ಬೈಕ್ ವಿಚಾರಕ್ಕೆ ಆರಂಭವಾದ ಜಗಳ ಸೆ.6ರಂದು ಮಾರಾಮಾರಿಗೆ ತಿರುಗಿತ್ತು. ಈ ವೇಳೆ ತಾನಿಯಾಗೆ ಪೆಟ್ಟು ಬಿದ್ದ ಪರಿಣಾಮ ಅವಳಿ ಮಕ್ಕಳು ಗರ್ಭದಲ್ಲೇ ಮೃತಪಟ್ಟಿದ್ದು, ನ್ಯಾಯಕ್ಕಾಗಿ ತಾನಿಯಾ ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯವರಿಂದ ಕೌಂಟರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ …
Read More »
BigTv News
September 20, 2026
Breaking News
ರಾಯಚೂರು: ಸಿಂಧನೂರು ತಾಲೂಕಿನ ಆರ್‌ಎಚ್ ಕ್ಯಾಂಪ್ 5ರ ಹೊರವಲಯದ ಜಮೀನಿನಲ್ಲಿ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆರ್‌ಎಚ್ ಕ್ಯಾಂಪ್ 4ರ ನಿವಾಸಿ ಸ್ನೇಹಾ (25) ಮೃತ ಮಹಿಳೆ. ಮಾರಣಾಂತಿಕ ಹಲ್ಲೆ ಬಳಿಕ ಸ್ನೇಹಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಗ 2 ವರ್ಷದ ಮಗುವನ್ನು ಪಕ್ಕದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮಗುವಿಗೂ ಸಣ್ಣಪುಟ್ಟ ಗಾಯಗಳಾಗಿವೆ. …
Read More »
BigTv News
September 20, 2026
Breaking News
ಬೆಂಗಳೂರು: ಅನ್ನಪೂರ್ಣೇಶ್ವರಿ ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರನ್ನು ತಪ್ಪಿಸಲು ಹೋಗಿ ಟಿಟಿ ವಾಹನ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದಿದ್ದು, ಓರ್ವ ಯುವಕ ಮೃತಪಟ್ಟಿದ್ದಾನೆ. ಐವರು ಗಾಯಗೊಂಡಿದ್ದಾರೆ. ಲಗ್ಗೆರೆ ಸಮೀಪದ ಯುವಕರು ಟಿಟಿ ವಾಹನದಲ್ಲಿ ತೆರಳುತ್ತಿದ್ದಾಗ, ಮಹದೇಶ್ವರ ದೇವಾಲಯದ ಬಳಿ ಕೆಲವರು ವ್ಹೀಲಿಂಗ್ ಮಾಡುತ್ತಾ ಏಕಾಏಕಿ ಅಡ್ಡ ಬಂದಿದ್ದಾರೆ. ಅವರನ್ನು ತಪ್ಪಿಸಲು ಚಾಲಕ ರವಿ ಯತ್ನಿಸಿದಾಗ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದು, ಐವರನ್ನು …
Read More »
BigTv News
September 20, 2026
Breaking News
ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮಜೀದ್ ನದಾಫ್ ಎಂಬಾತನಿಗೆ ಸ್ಥಳೀಯ ಮಹಿಳೆಯರು ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಮಕ್ಕಳಿಗೆ ಹಣ ನೀಡಿ ಗುಟ್ಕಾ ತರಿಸಿಕೊಳ್ಳುತ್ತಿದ್ದ ಹಾಗೂ ಮನೆಗೆ ಕರೆಸಿಕೊಂಡು ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸುತ್ತಿದ್ದ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಲು ಯತ್ನಿಸಿದಾಗ ಮಹಿಳೆಯರು ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಳೇ …
Read More »
BigTv News
September 20, 2026
Breaking News
ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಹಣ ಉಳಿಸಲು ಕೆಲ ವಾಹನ ಚಾಲಕರು ನಿಯಮ ಉಲ್ಲಂಘಿಸಿ ರಾಂಗ್ ರೂಟ್‌ನಲ್ಲಿ ಸಂಚರಿಸುತ್ತಿರುವ ಆರೋಪ ಕೇಳಿಬಂದಿದೆ. ಇದರಿಂದ ಸವಾರರ ಜೀವಕ್ಕೆ ಅಪಾಯ ಎದುರಾಗಿದೆ. ಶ್ರೀರಂಗಪಟ್ಟಣ ಟೋಲ್ ತಪ್ಪಿಸಲು ಟ್ರಕ್, ಬಸ್ ಹಾಗೂ ಕಾರುಗಳು ಸರ್ವೀಸ್ ರಸ್ತೆಯಿಂದ ಬಂದು ಎಕ್ಸಿಟ್ ಭಾಗದಲ್ಲೇ ರಿವರ್ಸ್ ಎಂಟ್ರಿ ಪಡೆಯುತ್ತಿವೆ. ಎಂಟ್ರಿಯಲ್ಲಿ ಎಕ್ಸಿಟ್, ಎಕ್ಸಿಟ್‌ನಲ್ಲಿ ಎಂಟ್ರಿ ಪಡೆಯುತ್ತಿರುವುದರಿಂದ ಅಪಘಾತದ ಆತಂಕ ಹೆಚ್ಚಾಗಿದೆ. ಈ ಹಿಂದೆ ಮಂಡ್ಯ ಸಮೀಪ ವೇಗವಾಗಿ ಬಂದ …
Read More »
BigTv News
September 20, 2026
Breaking News
ಹುಬ್ಬಳ್ಳಿ: ಗಬ್ಬೂರು ಕ್ರಾಸ್ ಬಳಿ ನಿರ್ಮಾಣವಾಗಿರುವ ಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಕಾಲೇಜು, ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಉದ್ಘಾಟಿಸಿದರು. ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 751ಕ್ಕೆ ಏರಿಕೆಯಾಗಿದೆ ಎಂದು ಜೋಶಿ ಹೇಳಿದರು. 50 ಎಕರೆ ಪ್ರದೇಶದಲ್ಲಿರುವ ಆಸ್ಪತ್ರೆ 1,200 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಬಡವರಿಗೆ ಉಚಿತ ಚಿಕಿತ್ಸೆ ನೀಡಲು 300 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಆರೋಗ್ಯ …
Read More »
BigTv News
September 19, 2026
Breaking News
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದಿರುವ ದಾರುಣ ಘಟನೆ ನಡೆದಿದೆ. ಫೋನ್ ಕರೆಯಲ್ಲಿ ಪತಿ-ಪತ್ನಿ ನಡುವೆ ನಡೆದ ಜಗಳದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆರ್ನೆ ನಿವಾಸಿ ಸಿನಾನ್ (32) ಹಾಗೂ ನೂರುನ್ನಿಸಾ (28) ದಂಪತಿ. ಜಗಳದ ಬಳಿಕ ಕೋಪಗೊಂಡ ನೂರುನ್ನಿಸಾ, ತನ್ನ ಮಗುವಿನ ಜೊತೆಗೆ ಪತಿಯ ತಂಗಿಯ 3 ವರ್ಷದ ಮಗುವನ್ನೂ …
Read More »