Breaking News

Breaking News

ಹತ್ಯೆ ಮಾಡಿ ಮಗು ಕೂರಿಸಿ ಹೋದ ಹಂತಕರು. ರಕ್ತದ ಮಡುವಿನಲ್ಲಿದ್ದ ತಾಯಿ ಅಪ್ಪಿ ರೋದಿಸಿದ ಕಂದಮ್ಮ: 25 ವರ್ಷದ ಮಹಿಳೆ ಕೊಂದ ಪತಿ ಹಾಗೂ ಪ್ರಿಯತಮ ಬಂಧನ!

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌ಹೆಚ್ ಕ್ಯಾಂಪ್-5ರ ಹೊರವಲಯದಲ್ಲಿ 25 ವರ್ಷದ ಸ್ನೇಹಾ ಎಂಬ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹತ್ಯೆಯ ಬಳಿಕ ಒಂದೂವರೆ ವರ್ಷದ ಹೆಣ್ಣುಮಗುವನ್ನು ತಾಯಿಯ ರಕ್ತಸಿಕ್ತ ಶವದ ಮೇಲೆಯೇ ಕುಳ್ಳಿರಿಸಿ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಅಮಿತ್ ಎಂಬಾತನನ್ನು …

Read More »

ಅನೈತಿಕ ಸಂಬಂಧದ ಶಂಕೆ, ಚಾಕುವಿನಿಂದ ಇರಿದು ಮಹಿಳೆಯ ಕೊಂದ ಪ್ರಿಯಕರ!

ದಾವಣಗೆರೆಯ ಶೇಖರಪ್ಪ ನಗರ ಬಡಾವಣೆಯಲ್ಲಿ ನಾಗರತ್ನ (45) ಎಂಬ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಲವು ವರ್ಷಗಳಿಂದ ನಾಗರಾಜ್ (26) ಜೊತೆ ನಿಕಟ ಸಂಬಂಧ ಹೊಂದಿದ್ದ ನಾಗರತ್ನ ಅವರು ಪತಿಯಿಂದ ದೂರವಾಗಿ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ನಾಗರತ್ನ ಹಾಗೂ ನಾಗರಾಜ್ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಈ ವೇಳೆ ನಾಗರಾಜ್ ಚಾಕುವಿನಿಂದ ನಾಗರತ್ನ …

Read More »

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ; ತಾಯಿಯ ಬರ್ಬರ ಹತ್ಯೆ, ಅಮ್ಮನ ಮಡಿಲು ಬಿಟ್ಟು ಕದಲದ ಕಂದಮ್ಮ!

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌ಎಚ್‌ ಕ್ಯಾಂಪ್‌-5ರ ಹೊರವಲಯದ ಜಮೀನಿನಲ್ಲಿ ಸ್ನೇಹಾ (26) ಎಂಬ ಗೃಹಿಣಿಯನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಆಕೆಯ ಎರಡು ವರ್ಷದ ಮಗುವನ್ನು ಶವದ ಪಕ್ಕದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ತಾಯಿ ಎಚ್ಚರಗೊಳ್ಳದೆ ಮಲಗಿದ್ದಾಳೆ ಎಂದು ಭಾವಿಸಿದ ಕಂದಮ್ಮ ಅಳುತ್ತಾ ಕೊನೆಗೆ ತಾಯಿಯ ಶವದ ಮೇಲೆಯೇ ನಿದ್ರೆಗೆ ಜಾರಿತ್ತು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿ ಅಮಿತ್ ಹಾಗೂ ಪ್ರಿಯಕರ ಶುಭಮ್‌ನನ್ನು ಪೊಲೀಸರು ವಶಕ್ಕೆ …

Read More »

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಕೆಎಲ್ ಇ ಆಸ್ಪತ್ರೆ ಉದ್ಘಾಟನೆ ಸಮಾರಂಭಕ್ಕೆ ಗೈರು

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರದ ಉದ್ಘಾಟನಾ ಸಮಾರಂಭಕ್ಕೆ ಗೈರಾಗಿದ್ದಾರೆ. ಶುಕ್ರವಾರ ರಾತ್ರಿ ಡೆನಿಸನ್ಸ್ ಹೋಟೆಲ್‌ನಲ್ಲಿ ತಂಗಿದ್ದ ಅಮಿತ್ ಶಾ, ಶನಿವಾರ ಬೆಳಗ್ಗೆ ಕೆಎಲ್‌ಇ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಹೋಟೆಲ್‌ನಲ್ಲೇ ಉಳಿದು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ!

ಹುಬ್ಬಳ್ಳಿ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಅಸ್ವಸ್ಥರಾಗಿದ್ದು, ಅವರೊಂದಿಗೆ ಬಂದಿರುವ ವೈದ್ಯರ ವಿಶೇಷ ತಂಡ ಹೋಟೆಲ್‌ನಲ್ಲೇ ಚಿಕಿತ್ಸೆ ನೀಡುತ್ತಿದೆ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭುವನೇಶ ಪಾಟೀಲ್ ಹಾಗೂ ಐಜಿಪಿ ಲಾಬುರಾಮ್ ಹೋಟೆಲ್‌ಗೆ ಭೇಟಿ ನೀಡಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದ್ದಾರೆ. ಭದ್ರತಾ ವ್ಯವಸ್ಥೆಯನ್ನೂ ಪರಿಶೀಲಿಸಲಾಗಿದೆ. ವೈದ್ಯರು …

Read More »

ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಗೆ ಅಸಭ್ಯ ವರ್ತನೆ; ಆರೋಪಿ ಬಿಟ್ಟು ರಕ್ಷಣೆಗೆ ಬಂದ ಯುವಕರ ಬಂಧಿಸಿದ ಪೊಲೀಸರು!

ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳಿಗೆ ರಸ್ತೆಯಲ್ಲೇ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಘಟನೆ ಸೆ.17ರಂದು ನವನಗರದ 51ನೇ ಸೆಕ್ಟರ್‌ನಲ್ಲಿ ನಡೆದಿದೆ. ಸುದೀಪ್ ನಾಡಗೌಡ ಎಂಬಾತ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ವಿದ್ಯಾರ್ಥಿನಿಯ ನೆರವಿಗೆ ಬಂದ ಚೇತನ್ ಕೊಡಬಾಗಿ ಹಾಗೂ ರೋಹನ್ ಹಾದಿಮನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ಸುದೀಪ್‌ನನ್ನು ಬಂಧಿಸದೇ, ಚಿಕಿತ್ಸೆಯ ನೆಪದಲ್ಲಿ ಬಿಟ್ಟಿದ್ದಾರೆ ಎಂದು ವಿದ್ಯಾರ್ಥಿನಿ ಹಾಗೂ ಕುಟುಂಬಸ್ಥರು …

Read More »

ಶಿವಮೊಗ್ಗ | ಜಿಂಕೆಯನ್ನು ಬೇಟೆಯಾಡಿ ಮಾಂಸ ಮಾರಾಟಕ್ಕೆ ಸಿದ್ಧತೆ: ಇಬ್ಬರ ಬಂಧನ

ಶಿವಮೊಗ್ಗ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ, ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಂಬಳೇಬೈಲು ವಲಯದ ಯರಗನಾಳು ಗ್ರಾಮದ ಸೇತು ಹಾಗೂ ದರ್ಶನ್ ಬಂಧಿತರಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಕುಸ್ಕೂರು ಗ್ರಾಮದ ಲೋಕೇಶ್ ನಾಯಕ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಭದ್ರಾವತಿ ವಿಭಾಗದ ಉಪ ಸಂರಕ್ಷಣಾಧಿಕಾರಿ ರವೀಂದ್ರ …

Read More »

ಕೊಪ್ಪಳ:ಡಿಜೆ ಬಂದ್ ಮಾಡಿಸಿದ್ದಕ್ಕೆ ಕಿಡಿ;ಗಣಪತಿ ಮೆರವಣಿಗೆ ‌ನಿಲ್ಲಿಸಿ ಪ್ರತಿಭಟನೆ

ಕೊಪ್ಪಳ: ಗಣೇಶ ಮೂರ್ತಿಗಳ ಐದನೇ ದಿನದ ವಿಸರ್ಜನಾ ಮೆರವಣಿಗೆ ವೇಳೆ ಜವಾಹರ ರಸ್ತೆಯಲ್ಲಿ ಪೊಲೀಸರು ಡಿಜೆ ಬಂದ್ ಮಾಡಿಸಿದ್ದಕ್ಕೆ ಗಣಪತಿ ಪ್ರತಿಷ್ಠಾಪನಾ ಸಂಘದವರು ಹಾಗೂ ಯುವಕರು ಆಕ್ರೋಶ ವ್ಯಕ್ತಪಡಿಸಿದರು. ಗಣಪತಿ ಮೂರ್ತಿಗಳನ್ನು ಮುಂದಕ್ಕೆ ಸಾಗಿಸುವಂತೆ ಪೊಲೀಸರು ಸೂಚಿಸಿದ್ದರಿಂದ ಅಸಮಾಧಾನಗೊಂಡ ಯುವಕರು ಮೂರ್ತಿಗಳೊಂದಿಗೆ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಈ ವೇಳೆ ಘೋಷಣೆಗಳನ್ನು ಕೂಗಿದರು. ನೂಕುನುಗ್ಗಲು ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಯುವಕರನ್ನು ಚದುರಿಸಲು ಬಲಪ್ರಯೋಗ ಮಾಡಿದರು. ಕೆಲಕಾಲ ಪೊಲೀಸರೊಂದಿಗೆ ಮಾತಿನ ಚಕಮಕಿ …

Read More »

ಚಿಕಿತ್ಸೆಗೆ ಬಂದ ಮಹಿಳೆ ಮೇಲೆ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ

ಕೊಪ್ಪಳ: ಚಿಕಿತ್ಸೆ ಪಡೆಯಲು ಖಾಸಗಿ ಕ್ಲಿನಿಕ್‌ಗೆ ಬಂದಿದ್ದ ಮಹಿಳೆ ಮೇಲೆ ಆರ್‌ಎಂ‌ಪಿ ವೈದ್ಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕುಕನೂರು ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಆರ್‌ಎಂ‌ಪಿ ವೈದ್ಯ ಪ್ರಭುರಾಜ್ ಶೆಟ್ಟರ್ ವಿರುದ್ಧ ಮಹಿಳೆ ಆರೋಪ ಮಾಡಿದ್ದು, ಗುರುವಾರ ಚಿಕಿತ್ಸೆಗಾಗಿ ಬಂದಾಗ ಈ ಕೃತ್ಯಕ್ಕೆ ಯತ್ನಿಸಲಾಗಿದೆ ಎಂದು ದೂರಿದ್ದಾರೆ. ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More »

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ರೈಲ್ವೆ ಪೊಲೀಸರು ಸೇರಿ 6 ಜನರ ವಿರುದ್ಧ ಕೇಸ್​​

ಯಾದಗಿರಿ ರೈಲ್ವೆ ಸ್ಟೇಷನ್ ಪ್ರದೇಶದಲ್ಲಿ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮಲ್ಲಿಕಾರ್ಜುನ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಕೆಲವರು ಜೀವ ಬೆದರಿಕೆ ಹಾಕಿ ವಿವಿಧ ಲಾಡ್ಜ್‌ಗಳಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಒಟ್ಟು ಆರು ಜನರ …

Read More »