Shaikh BigTv
November 24, 2025
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದೆ. ನಗರದ ಚನ್ನಮ್ಮ ವೃತ್ತದ ಬಳಿಯ ನೀಲಿಜಿನ್ ರಸ್ತೆಯಲ್ಲಿ ಘಟನೆ ನಡೆದಿದೆ.ವ್ಯಾಪಾರಿ ಸುದೀನ್ ಎಂ.ಆರ್ …
Read More »
BigTv News
November 24, 2025
Breaking News
ಗೋಣಿ ಚೀಲದಲ್ಲಿಟ್ಟ ಅಡಿಕೆ ಕಳವಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಂತಿಗೋಡು ಗ್ರಾಮದ ವೀರಮಂಗಲ ಅಚ್ಯುತ ಗೌಡ ಅವರ ಮನೆಯ ಕೊಟ್ಟಿಗೆಯಿಂದ 16 ಗೋಣಿ ಚೀಲ ಅಡಿಕೆ ಕಳವಾಗಿದೆ.ಅವರು ಒಟ್ಟು 36 ಗೋಣಿ ಚೀಲಗಳಲ್ಲಿ ಒಣಗಿಸಿದ ಅಡಿಕೆಯನ್ನು ಕೊಟ್ಟಿಗೆಯ ಅಟ್ಟದಲ್ಲಿ ಇರಿಸಿದ್ದರು. ಬಳಿಕದ ದಿನದಲ್ಲಿ ಅವರ ಮಗಳ ಮದುವೆ ನಡೆದಿದ್ದು, ಸಮಾರಂಭವೆಲ್ಲ ಮುಗಿದು ನೋಡಿದಾಗ 16 ಗೋಣಿ ಅಡಿಕೆ ಕಳವಾಗಿರುವುದು …
Read More »
BigTv News
November 24, 2025
Breaking News
ನಾಗಪುರ – ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದರಿಂದ ಕು. ದಿವ್ಯಾ ಕೊಠಾರೆ (ವಯಸ್ಸು ೧೩) ಎಂಬ ವಿದ್ಯಾರ್ಥಿನಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಣಕಾಪುರದಲ್ಲಿರುವ ಜಯ ಭೋಲೆ ನಗರ ಪ್ರದೇಶದಲ್ಲಿ ನಡೆದಿದೆ. ಕು.ದಿವ್ಯಾ ೮ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳು ನಿಯಮಿತವಾಗಿ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮಗಳನ್ನು ಅತಿಯಾಗಿ ಬಳಸುತ್ತಿದ್ದ ಕಾರಣ ಪಾಠಗಳನ್ನು ನಿರ್ಲಕ್ಷಿಸುತ್ತಿದ್ದಳು. ಈ ಕಾರಣದಿಂದಾಗಿ ಆಕೆಯ ಕುಟುಂಬದವರು ‘ಮೊಬೈಲ್ ಬಳಕೆ ಕಡಿಮೆ ಮಾಡಿ ಅಧ್ಯಯನಕ್ಕೆ …
Read More »
BigTv News
November 24, 2025
Breaking News
ಸಿಕ್ಕಿಂನ ರಾಷ್ಟ್ರೀಯ ಹೆದ್ದಾರಿ 10 ರಲ್ಲಿ ಟ್ಯಾಕ್ಸಿಯೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನವೆಂಬರ್ 22 ಮತ್ತು 23 ರ ಮಧ್ಯರಾತ್ರಿ ಸಿಕ್ಕಿಂ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ಪಕ್ಕದ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.11 ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಉಳಿದವರು ಗಂಭೀರವಾಗಿ ಗಾಯಗೊಂಡು …
Read More »
BigTv News
November 24, 2025
Breaking News
ಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ ಟ್ರೇಡಿಂಗ್ ಆಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂ. ವಂಚಿಸಿದ್ದಾರೆ.ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಎಂಬವರು ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ, ‘MarketAxess’ ಎಂಬ ಆಯಪ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ವಾಟ್ಸ್ಆಯಪ್ ಮೂಲಕ ಸಂಪರ್ಕಿಸಿ, ಮೇ 28, 2025 ರಿಂದ ಜುಲೈ 23, 2025 ರ ಅವಧಿಯಲ್ಲಿ ಹಂತ, ಹಂತವಾಗಿ ಒಟ್ಟು …
Read More »
BigTv News
November 24, 2025
Breaking News
ಪತ್ನಿಯ ಶೀಲದ ಬಗ್ಗೆ ಶಂಕೆ ಪಟ್ಟು, ಪತಿ ತಾನೇ ಪತ್ನಿಯನ್ನು ಹತ್ಯೆ ಮಾಡಿದ ಹೃದಯ ಕಲುಕುವ ಘಟನೆ ಕೋಲಾರ ತಾಲ್ಲೂಕಿನ ಜನ್ನಘಟ್ಟ ಗ್ರಾಮದಲ್ಲಿ ನಡೆದಿದೆ.ದಂಪತಿಗೆ ಆರು ವರ್ಷದ ಒಂದು ಹೆಣ್ಣು ಮಗು ಸಹ ಇದೆ. ಕುಟುಂಬದಲ್ಲಿ ಆಗಾಗ ಜಗಳಗಳು ನಡೆಯುತ್ತಿದ್ದು, ಪತ್ನಿಯ ನಡತೆಯ ಮೇಲೆ ಶಂಕೆ ಹೊಂದಿದ್ದ ಶಿವರಾಜ್, ಆಕ್ರೋಶದಿಂದಲೇ ಕಾವ್ಯಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ನಾಟಕವಾಡಿದ ಶಿವರಾಜ್, ಕೊನೆಗೂ ಪೊಲೀಸರ …
Read More »
BigTv News
November 24, 2025
Breaking News
ಬೈಕ್ ಸವಾರನ ಅಡ್ಡಗಟ್ಟಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ನ.15 ರಂದು ಮುಂಜಾನೆ ಶಾಂತಿನಗರದ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ದರೋಡೆ ಯತ್ನಿಸಿದ್ದರು. ಅದಕ್ಕೆ ಬೈಕ್ ಸವಾರ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು …
Read More »
BigTv News
November 24, 2025
Breaking News
ಪಾಕಿಸ್ತಾನದ ಪೇಶಾವರದಲ್ಲಿರುವ ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಸೋಮವಾರ ಬೆಳಿಗ್ಗೆ ಬಂದೂಕುಧಾರಿಗಳು ಮತ್ತು ಶಂಕಿತ ಆತ್ಮಹತ್ಯಾ ಬಾಂಬರ್‌ಗಳು ನಡೆಸಿದ ದಾಳಿಯಲ್ಲಿ ಮೂವರು ಕಮಾಂಡೋಗಳು ಮತ್ತು ಮೂವರು ದಾಳಿಕೋರರು ಸೇರಿದಂತೆ ಆರು ಜನರು ಸಾವನ್ನಪ್ಪಿದರು.ಈ ದಾಳಿಯು ವ್ಯಾಪಕ ಭದ್ರತಾ ಕಾರ್ಯಾಚರಣೆಗೆ ನಾಂದಿ ಹಾಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರೆಸೈನಿಕ ಕಟ್ಟಡದ ಮುಖ್ಯ ದ್ವಾರದಲ್ಲಿ ಎರಡು ಸ್ಫೋಟಗಳೊಂದಿಗೆ ದಾಳಿ ಪ್ರಾರಂಭವಾಯಿತು, ನಂತರ ಶಸ್ತ್ರಸಜ್ಜಿತ ವ್ಯಕ್ತಿಗಳು ಆವರಣಕ್ಕೆ ನುಗ್ಗಿ ಭದ್ರತಾ ಸಿಬ್ಬಂದಿಯೊಂದಿಗೆ ಗುಂಡಿನ …
Read More »
BigTv News
November 24, 2025
Breaking News
ಸಾಲಬಾಧೆಯಿಂದ ವೃದ್ಧ ರೈತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಬಶಿರಾಪೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.ಭೀಮಣ್ಣ(92) ಆತ್ಮಹತ್ಯೆ ಮಾಡಿಕೊಂಡ ರೈತ. ಈ ಬಾರಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಸಾಲ ತೀರಿಸುವ ಚಿಂತೆಯಿಂದ ಭೀಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ನಿರ್ಣಾ ಪಿಕೆಪಿಎಸ್ ಬ್ಯಾಂಕ್ ನಲ್ಲಿ 1.30 ಲಕ್ಷ ರೂ., ಬೀದರ್ ಸೆಂಟ್ರಲ್ ಬ್ಯಾಂಕ್ ನಲ್ಲಿ 6.76 ಲಕ್ಷ ರೂ., ಎಸ್.ಬಿ.ಐ.ನಲ್ಲಿ 10,000 ರೂ. ಸೇರಿ ಇತರೆಡೆ …
Read More »
BigTv News
November 24, 2025
Breaking News
ಬೆಂಗಳೂರಿನ ಹೋಟೆಲ್ ಒಂದರಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಾರ್ಟರ್ಡ್ ವಿಮಾನದ ಪೈಲಟ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎನ್‌ಎಸ್‌ನ ಸಂಬಂಧಿತ ವಿಭಾಗದ ಅಡಿಯಲ್ಲಿ ಶೂನ್ಯ ಎಫ್‌ಐಆರ್ (ಅಪರಾಧ ನಡೆದ ಸ್ಥಳವನ್ನು ಲೆಕ್ಕಿಸದೆ ಎಫ್‌ಐಆರ್ ದಾಖಲಿಸುವುದು) ದಾಖಲಿಸಲಾಗಿದ್ದು, ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಬೇಗಂಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
Read More »