BigTv News
November 17, 2025
Breaking News
ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಯಲಬುರ್ಗಾ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಪರಿಚಯದವರಿಂದ ಹಣ ಪಡೆಯಲು ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆಯನ್ನು ಸಂಜೆ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಮದ್ಯ ಕುಡಿಸಿ ರೇಪ್ ಮಾಡಿರುವುದಾಗಿ ಆರೋಪಿಸಲಾಗಿದ್ದು, ಮಹಿಳೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
November 17, 2025
Breaking News
ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು. ಇದರಿಂದ ಬೇಸರಗೊಂಡ ಪತಿ ಕೊನೆಗೆ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ಸೋಮವಾರಪೇಟೆಯ ಕಿಬ್ಬೆಟ್ಟ ಗ್ರಾಮದ ನಿವಾಸಿ ಕೀರ್ತನ್ ಆತ್ಮಹತ್ಯೆಗೆ ಶರಣಾದ ದುರ್ದೈವಿ. ನವೆಂಬರ್ 15ರ ಸಂಜೆ ಈ ಘಟನೆ ನಡೆದಿದ್ದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …
Read More »
BigTv News
November 17, 2025
Breaking News
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್‌ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಅಂಕ ಹೆಚ್ಚು ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಪೀಡಿಸಿದ್ದಾರೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಫೇಲ್ ವಾಡುತ್ತೇನೆ ಎಂದು ಬೆದರಿಸಿದ್ದಾರೆ. ಯುವತಿಯು ಮಹಿಳಾ ಉಪನ್ಯಾಸಕರ ಬಳಿ ಈ ವಿಷಯವನ್ನು ಹೇಳಿಕೊಂಡಿದ್ದಾರೆ. …
Read More »
BigTv News
November 17, 2025
Breaking News
ಕೆಲವು ತಿಂಗಳುಗಳ ಹಿಂದೆ ತಾಯಿ ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಮಗ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ತಾಲೂಕು ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ.ಹನೂರು ತಾಲೂಕು ಬಂಡಹಳ್ಳಿ ಗ್ರಾಮದ ನವೀನ್‌ಕುಮಾರ್ (25) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ.ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಬಂಡಳ್ಳಿ ಗ್ರಾಮದ ಬಳಿ ಇರುವ ಶಾಗ್ಯ ಗ್ರಾಮದ ವಾಸಿ ಪರಶಿವಮೂರ್ತಿ ಎಂಬುವರ ಮಗನಾದ ನವೀನ್‌ಕುಮಾರ್ ಬೆಂಗಳೂರಿನಲ್ಲಿ ಜೀವನೋ ಪಯೋಗಕ್ಕಾಗಿ ಕೆಲಸ …
Read More »
BigTv News
November 17, 2025
Breaking News
ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ. ಪ್ರತಿಭಟನೆ ವೇಳೆ ಉದ್ರಿಕ್ತ ಪ್ರತಿಭಟನಾಕರರು ಸಂಗಾನಟ್ಟಿ ಬಳಿ ಎರಡು ಟ್ರೇಲರ್ನ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದರು.ನಂತರ ಗೋದಾವರಿ ಕಾರ್ಖಾನೆ ಆವರಣದಲ್ಲಿನ 20ಕ್ಕೂ ಅಧಿಕ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ …
Read More »
BigTv News
November 17, 2025
Breaking News
ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಅಂತ ಹೇಳಲಾಗುತ್ತಿತ್ತು. ಆದರೆ ಇದೀಗ ಪುರುಷರಿಗೂ ಕೂಡ ಕಳ್ಳರ ಕಾಟ ತಪ್ಪಿಲ್ಲ. ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ನಡೆಸಲಾಗಿದೆ.ಹೌದು ಬೆಂಗಳೂರಿನಲ್ಲಿ ತಡರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ದರೋಡೆಕೋರರು ಅಡ್ಡಗಟ್ಟಿ ದರೋಡೆ ನಡೆಸಿದ್ದಾರೆ.ಬೆಂಗಳೂರಿನ ಶಾಂತಿನಗರದ ಚರ್ಚ್ ರಸ್ತೆಯಲ್ಲಿ ಮೂವರಿಂದ ಈ ಒಂದು ಕೃತ್ಯ ಎಸಗಲಾಗಿದೆ. ನಿನ್ನೆ ದರೋಡೆ ಮಾಡಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರತಿರೋಧ ಒಡ್ಡಿದ ವ್ಯಕ್ತಿಯ ಮೇಲೆ ಮನ …
Read More »
BigTv News
November 17, 2025
Breaking News
ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ದುರಂತ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ನಡೆದಿದೆ.ಮೋಹನ್ ದಂಪತಿಯ ಒಂದೂವರೆ ವರ್ಷದ ನೂತನ್ ಕಾರು ಚಕ್ರದಡಿಗೆ ಸಿಲುಕಿ ಮೃತಪಟ್ಟ ಮಗುವಾಗಿದೆ.ಮೋಹನ್ ಅಕ್ಕ ದೇವಿಕಾ ಹಾಗೂ ಭಾವ ಮುನೇಶ್ ಶನಿವಾರ ಬೆಳಗ್ಗೆ ಮೋಹನ್ ಅವರ ಮನೆಗೆ ಬಂದಿದ್ದರು. ಮನೆಯಿಂದ ಹೊರಟು ಕಾರನ್ನು ರಿವರ್ಸ್ ತೆಗೆಯುವ ವೇಳೆ ದುರ್ಘಟನೆ ಸಂಭವಿಸಿದೆ. ಮಗವನ್ನು ಗಮನಿಸದೇ ಕಾರು ಚಲಾಯಿಸಿದ …
Read More »
BigTv News
November 17, 2025
Breaking News
ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದ್ದು, ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಪಕಾರ್ ಲೇಔಟ್‌ನಲ್ಲಿ ಅಂತಹುದೇ ಘಟನೆಯೊಂದು ನಡೆದಿದೆ. ನಾಯಿಯನ್ನು ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಬ್ಯಾಡ್ ಟಚ್ ಮಾಡಿದ ಅಪರಿಚಿತ ಯುವಕನ ವರ್ತನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.ಯುವತಿ ತನ್ನ ನಾಯಿಯನ್ನು ವಾಕಿಂಗ್ ಮಾಡಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅವಳ ಬಳಿ ಬಂದ ಅಪರಿಚಿತ ಯುವಕ, “ನಿಮ್ಮ ನಾಯಿ ತುಂಬಾ ಕ್ಯೂಟ್ ಇದೆ, ಒಂದು …
Read More »
BigTv News
November 17, 2025
Breaking News
ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಮುಂಜಾನೆ 1.30 ರ ಸುಮಾರಿಗೆ ಈ ಘಟನೆ ನಡೆದಿದೆ.ಮೂಲಗಳ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರು ಹೈದರಾಬಾದ್ ಮೂಲದವರು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು ಎಂದು …
Read More »
BigTv News
November 17, 2025
Breaking News
ಮಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು …
Read More »