Breaking News

Breaking News

12 ತಾಸಿನ ಒಳಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮತ್ತೆ ಮೂವರ ಸಾವು

ಬಿ.ಸಿ. ರೋಡ್ ಪರಿಸರದಲ್ಲಿ ಇಂದು ಮುಂಜಾನೆ ಇನ್ನೋವಾ ವಾಹನ ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ ಘಟನೆ ಬೆನ್ನಿಗೇ ಮಂಗಳೂರು ನಗರದ ಹೊರವಲಯ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.ಈ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ನಡೆದಿದೆ. ಮೃತ ದುರ್ದೈವಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿದ್ದ ಸಂದರ್ಭ ಟ್ಯಾಂಕರ್ ಬಂದು ಮುಂದಿನ …

Read More »

ಚೆಕ್‌ಪೋಸ್ಟ್ ನಲ್ಲಿ ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆ

ಚೆಕ್‌ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ಬೆಳಕಿಗೆ ಬಂದಿದೆ.ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ಹರಿಯಾಣ ಮೂಲದ ನಾನ್ಕಿದೇವಿ (47) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ರಾತ್ರಿ ಲಿಂಗಾಪುರ …

Read More »

ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!

ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ.ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಬಾಗಲಕೋಟೆಯ ತುಳಸಿಗಿರಿ ಗುಡ್ಡದಲ್ಲಿ ಈ ಒಂದು ಹಲ್ಲೆ ನಡೆದಿದೆ. ಗೂಡ್ಸ್ ವಾಹನದ ಚಾಲಕ ಪ್ರಕಾಶ್ ಮೇಲೆ ಮಾಲೀಕ ಯಂಕಪ್ಪ ಮನಬಂದಂತೆ ಥಳಿಸಿದ್ದಾನೆ. ಯಂಕಪ್ಪ …

Read More »

ತುಮಕೂರಿನಲ್ಲಿ ಮತ್ತೆ ನೆತ್ತರಕೋಡಿ: ರೌಡಿಗಳ ಬೀದಿ ಜಗಳದಲ್ಲಿ ಓರ್ವ ಸಾವು, ಇನ್ನೊಬ್ಬ ಗಂಭೀರ!

ಸಾಮಾನ್ಯವಾಗಿ ಶಾಂತವಾಗಿದ್ದ ತುಮಕೂರು ನಗರದಲ್ಲಿ ಮತ್ತೆ ರೌಡಿಗಳ ಮಚ್ಚು ಮತ್ತು ಲಾಂಗ್‌ಗಳ ಅಬ್ಬರ ಮರುಕಳಿಸಿದ್ದು, ನೆತ್ತರ ಕೋಡಿಯೇ ಹರಿದಿದೆ. ಈ ಮಾರಣಾಂತಿಕ ದಾಳಿಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ನಡೆದಿದ್ದು, ಓರ್ವ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮತ್ತೊಬ್ಬನ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಲಾಗಿದೆ.ದಾಳಿಗೊಳಗಾದವರಲ್ಲಿ 28 ವರ್ಷದ ಅಭಿ ಅಲಿಯಾಸ್ ‘ಟಿಬೆಟ್’ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಗಾಯಗೊಂಡ ಮತ್ತೊಬ್ಬ ವ್ಯಕ್ತಿ, 32 ವರ್ಷದ ಮನೋಜ್ ಅಲಿಯಾಸ್ ‘ಪ್ಯಾಚ್’ …

Read More »

ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ

ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ …

Read More »

ಮಂಗಳೂರಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ : ಆಟೋ ಚಾಲಕ ಸೇರಿ ಮೂವರು ಸ್ಥಳದಲ್ಲಿ ಸಾವು

ದಕ್ಷಿಣಕನ್ನಡ : ಇಂದು ಬೆಳಿಗ್ಗೆ ತಾನೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಆಟೋರಿಕ್ಷ ಚಾಲಕ ಹಾಗೂ ಇಬ್ಬರು …

Read More »

ನೇಜಾರು ಹತ್ಯೆ ಪ್ರಕರಣ | ಹಸೀನಾರ ಸಹೋದರರಿಂದ ಸಾಕ್ಷ್ಯ: ವಿಚಾರಣೆ, ಪಾಟಿಸವಾಲು

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಮತ್ತೆ ಇಬ್ಬರು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಇಂದು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಡೆಯಿತು. ಮೃತ ಹಸಿನಾರ ಅಣ್ಣ, ದೂರುದಾರೆ ಐಫಾ, ಕೊಲೆ ನಡೆದಾಗ ಮೊದಲು ಕರೆ ಮಾಡಿದ ತಿಳಿಸಿದ ನೇಜಾರಿನ ಅಶ್ಫಾಕ್ ಹಾಗೂ ಮೃತರ ಮನೆಯ ಸಮೀಪದಲ್ಲೇ ಇರುವ ದೂರುದಾರೆ ಐಫಾ ಅವರ ತಂದೆ, ಮೃತರ ಹಿರಿಯ ಸಹೋದರ ಆಯುಬ್ …

Read More »

ಜಮ್ಮು- ಕಾಶ್ಮೀರದ ಪೊಲೀಸ್ ಠಾಣೆಯಲ್ಲಿ ತಡರಾತ್ರಿ ಬಾಂಬ್ ಸ್ಪೋಟಗೊಂಡು 7 ಮಂದಿ ಸಾವು

ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.ಪ್ರತ್ಯಕ್ಷದರ್ಶಿಗಳು ಮತ್ತು ಪ್ರದೇಶದಿಂದ ಬಂದ ಸಿಸಿಟಿವಿ ತುಣುಕುಗಳು ಸ್ಫೋಟವು ಕಟ್ಟಡವನ್ನು ಹರಿದು ಹೋಗುವುದನ್ನು ತೋರಿಸುತ್ತವೆ, ಬೆಂಕಿ ಮತ್ತು ದಟ್ಟ ಹೊಗೆಯನ್ನು ಗಾಳಿಯಲ್ಲಿ ಕಳುಹಿಸುತ್ತವೆ. ಅಧಿಕಾರಿಗಳ ಪ್ರಕಾರ, ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಫರಿದಾಬಾದ್ನಿಂದ ತಂದ ಸ್ಫೋಟಕ ವಸ್ತುಗಳನ್ನು …

Read More »

ಮಂಗಳೂರಲ್ಲೊಂದು ಭೀಕರ ರಸ್ತೆ ಅಪಘಾತ ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರು ಸಾವು

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ರಮ್ಯ(23), ರವಿ‌(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ …

Read More »

ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿದ್ದ ನಗರಸಭೆ ಮಾಜಿ ಅಧ್ಯಕ್ಷೆ ಚಿಕಿತ್ಸೆ ಫಲಿಸದೆ ಮೃತ್ಯು

ಯಾದಗಿರಿ: ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿದ್ದ ನಗರಸಭೆ ಮಾಜಿ ಅಧ್ಯಕ್ಷೆ ಅಂಜಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನವೆಂಬರ್ 12ರಂದು ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಗರಸಭೆ ಮಾಜಿ ಅಧ್ಯಕ್ಷೆ ಮತ್ತು ಸಮಾಜ‌ ಕಲ್ಯಾಣ ಇಲಾಖೆ ದ್ವೀತಿಯ ದರ್ಜೆ ಸಹಾಯಕಿ ಅಂಜಲಿ ಅವರ ಕಾರನ್ನು ಹಿಮ್ಮೆಟ್ಟಿಸಿಕೊಂಡು ಬಂದ ದುಷ್ಕರ್ಮಿಗಳು ಗ್ರಿನ್ ಸಿಟಿ ಬಳಿ ತಡೆದು ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಿದ್ದರು.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜಲಿ ಅವರನ್ನು ಗುಲ್ಬರ್ಗ ಖಾಸಗಿ ಆಸ್ಪತ್ರೆಗೆ …

Read More »