Breaking News

Breaking News

*ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ*

ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ಇಲ್ಲಿನ ಅಮೋಘಸಿದ್ದ ದೇವಸ್ಥಾನದ ಅರ್ಚಕ ಅಮಸಿದ್ದ ಬಿರಾದಾರ್ (35) ಹತ್ಯೆಯಾದ ಅರ್ಚಕರು. ಹಲವು ವರ್ಷಗಳಿಂದ ಅಮಸಿದ್ದ, ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು.ಇದೀಗ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More »

ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್‌ಗೆ ಗಂಭೀರ ಗಾಯ

ದೇವದುರ್ಗ: ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲ್ಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಭಾನುವಾರ (ನ.9) ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪಿಎಸ್‌ಐ ಅರುಣ ಕುಮಾರ ರಾಥೋಡ್‌ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ.ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ಕಾರು ಚಾಲಕನಿಗೆ ಗಾಯಗಳಾಗಿವೆ. ತಡರಾತ್ರಿ ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ …

Read More »

ಚಿನ್ನ ಮಾರಿ ಹಣ ಕೊಡುವುದಾಗಿ ಹೇಳಿ ವಂಚನೆ : 1.60 ಕೋಟಿ ಮೌಲ್ಯದ ಚಿನ್ನ ಜಪ್ತಿ, ಇಬ್ಬರು ಅರೆಸ್ಟ್

ಚಿನ್ನ ಮಾರಾಟ ಮಾಡಿ ಹಣ ಕೊಡಿಸುವುದಾಗಿ ಹೇಳಿ ವಂಚನೆ ಎಸೆಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಜಿರನ್ ಸಾಕಾರಿಯ ಮತ್ತು ರಾಜೇಂದ್ರ ಸಾಕಾರಿಯ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ 1.60ಕೋಟಿ ರೂಪಾಯಿ ಮೌಲ್ಯದ 1300 ಗ್ರಾಂ ಚಿನ್ನದ ಗಟ್ಟಿ ವರ್ಷಕ್ಕೆ ಪಡೆದುಕೊಂಡಿದ್ದು ಬಿ ಹರ್ಷಿತ್ ಎಂಬುವವರಿಗೆ ಆರೋಪಿಗಳು ವಂಚನೆ ಎಸಗಿದ್ದರು.ಜಿರನ್ ರಾಜೇಂದ್ರ ಮತ್ತು ಹರ್ಷಿತ್ ಒಟ್ಟಿಗೆ ವ್ಯವಹಾರ ಮಾಡಿಕೊಂಡಿದ್ದರು ಹರ್ಷಿತ್ ಬಳಿಯಿಂದ ಆರೋಪಿಗಳು ಚಿನ್ನದ …

Read More »

ದೆಹಲಿ ಕಾರು ಸ್ಪೋಟ ಕೇಸ್ : ಹರಿಯಾಣದಲ್ಲಿ ಇಬ್ಬರು ವೈದ್ಯರು ಸೇರಿ 8 ಜನರು ಅರೆಸ್ಟ್.!

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದಾರೆ.ಜೈಶ್ ಎ ಮೊಹ್ಮಮದ್ ಉಗ್ರ ಸಂಘಟನೆ ಸಂಪರ್ಕದ ಶಂಕೆ ಹಿನ್ನೆಲೆಯಲ್ಲಿ ಹರಿಯಾಣದ ಫರಿದಾಬಾದ್ ನಲ್ಲಿ ಮುಜಾಮ್ಮಿಲ್, ಇಬ್ಬರು ವೈದ್ಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ.ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ IB, NIA, NSG & ಸ್ಥಳೀಯರ ತಂಡವನ್ನು ರಚನೆ ಮಾಡಲಾಗಿದೆ. 500 ಕ್ಕೂ ಹೆಚ್ಚು …

Read More »

ಬೆಂಗಳೂರಿನ ಫ್ಲಾಟ್‌ನಲ್ಲಿ ವ್ಯಕ್ತಿ ಶವವಾಗಿ ಪತ್ತೆ; ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲು

ಇಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿನ ಬಾಡಿಗೆ ಫ್ಲಾಟ್‌ನಲ್ಲಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಮೃತರನ್ನು ಕೇರಳದ ತಿರುವನಂತಪುರದ ವಿಷ್ಣು ಸಿಪಿ (39) ಎಂದು ಗುರುತಿಸಲಾಗಿದೆ. ವಿಷ್ಣು ನಾಲ್ಕು ವರ್ಷಗಳಿಂದ ಇಲ್ಲಿನ ವೈದ್ಯಕೀಯ ಟ್ರಾನ್ಸ್‌ಸ್ಕ್ರಿಪ್ಶನ್ ಸಂಸ್ಥೆಯಲ್ಲಿ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದರು. ನವೆಂಬರ್ 7 ರಂದು ಅವರು ಫ್ಲಾಟ್‌ನಲ್ಲಿನ ಸ್ನಾನಗೃಹದೊಳಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. …

Read More »

ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ: ವ್ಯಕ್ತಿಗೆ ಚಾಕು ಇರಿತ

ಸಾಮಾಜಿಕ ಜಾಲತಾಣದಲ್ಲಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ರೌಡಿಶೀಟರ್‌ವೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದಾನೆ.ನಗರದ ಟಿ.ಅಸ್ಗರ್ ಚಾಕು ಇರಿತದಿಂದ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿಶೀಟರ್ ಖಾಲೀದ್ ಫೈಲ್ವಾನ್ ಚಾಕುವಿನಿಂದ ಇರಿದ ಆರೋಪಿ.ಟಿ.ಅಸ್ಗರ್ ಜೆಡಿಎಸ್ ಜೊತೆ ಒಡನಾಟ ಇಟ್ಟುಕೊಂಡಿದ್ದು, ಖಾಲೀದ್ ಪೈಲ್ವಾನ್ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವೆ ಆಗಾಗ ವಾಗ್ವಾದ ನಡೆಯುತ್ತಿತ್ತು. ಈ ಕುರಿತು ಅಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು-ಪ್ರತಿದೂರು ದಾಖಲಾಗಿದ್ದವು. ಬಾಷಾ ನಗರದ …

Read More »

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಐವರು ಆರೋಪಿಗಳ ವಿರುದ್ಧ ಪೊಕ್ಸೊ ಪ್ರಕರಣ ದಾಖಲು

ರಾಯಚೂರು: ಪ್ರೀತಿಯ ಹೆಸರಿನಲ್ಲಿ ಬಾಲಕಿಯನ್ನು ಫುಸಲಾಯಿಸಿದ್ದಲ್ಲದೆ ಆಕೆಯನ್ನು ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.ಮೌನೇಶ್‌ (23), ಮೌನೇಶ್‌(40), ಬೀರಪ್ಪ(42), ಮಲ್ಲಿ ಅಲಿಯಾಸ್ ಮಲ್ಲೇಶ್(45) ಹಾಗೂ ವೀರೇಶ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಆರೋಪಿಗಳು ಪ್ರೀತಿಯ ಹೆಸರಿನಲ್ಲಿ ಬಾಲಕಿಯನ್ನು ಪುಸಲಾಯಿಸಿದ್ದಲ್ಲದೆ …

Read More »

ಬಿಕ್ಲು ಶಿವ ಮರ್ಡರ್ ಕೇಸ್ – ಮತ್ತೊಬ್ಬ ಆರೋಪಿ ಅಜಿತ್ ಅರೆಸ್ಟ್!

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ರೌಡಿಶೀಟರ್ ಬಿಕ್ಲು ಶಿವು ಕೊಲೆ ಕೇಸ್ ತನಿಖೆ ಮುಂದುವರಿದಿ ದ್ದು, ಮೇಜರ್ ಅಪ್ಡೇಟ್ ಲಭ್ಯವಾಗಿದೆ.ಮರ್ಡರ್ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ಅಜಿತ್ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಅನೇಕ ತಿಂಗಳಿಂದ ತಲೆಮರೆಸಿಕೊಂಡಿದ್ದ ಅಜಿತ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡ್ತಿದ್ದನು. ಅಜಿತ್ ನಿನ್ನೆ ಸೋಮವಾರ ಬೆಳಿಗ್ಗೆ ರಾಮಮೂರ್ತಿನಗರದಲ್ಲಿ ಸ್ನೇಹಿತರ ಜತೆ ಇರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ತೆರಳಿದ ತನಿಖಾ ತಂಡವು ಆರೋಪಿಯನ್ನು ಬಂಧಿಸಿದೆ …

Read More »

ಹುಂಡೈ ಐ20 ಕಾರಿನಲ್ಲಿ ಸ್ಫೋಟ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಪೋಟದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು 24 ಜನರು ಗಾಯಗೊಂಡಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಬೆಳಿಗ್ಗೆ 6.52 ಕ್ಕೆ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಜನನಿಬಿಡ ಪ್ರದೇಶದಲ್ಲಿ ಛಿದ್ರಗೊಂಡ ದೇಹಗಳು ಮತ್ತು ಛಿದ್ರಗೊಂಡ ಕಾರುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಕೆಂಪು ಕೋಟೆ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ವಾಹನದಲ್ಲಿ ಸ್ಫೋಟ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರಿದ್ದರು. ಸ್ಫೋಟದಿಂದ ಹತ್ತಿರದ …

Read More »

ಕೆಂಪು ಕೋಟೆ ಬಳಿ ಭೀಕರ ಬ್ಲ್ಯಾಸ್ಟ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ

ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್‌ ಮಾಡಲಾಗಿತ್ತು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ. ಇದರ ಬೆನ್ನಲ್ಲೇ ದೆಹಲಿ ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ.ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು …

Read More »